Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತಕಕನ್ನಡ : ಝೆರಾಕ್ಸ್ ಅಂಗಡಿಗೆ ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದ, ಅಕ್ಕಪಕ್ಕದ ಅಂಗಡಿ ಮುಗ್ಗಟ್ಟುಗಳು ಹಾಗೂ ಮನೆಗಳಿಗೂ ಬೆಂಕಿ ಆವರಿಸಿಕೊಂಡು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಉಪನೋಂದಣಿ ಕಚೇರಿ ಬಳಿ ಈ ಅಗ್ನಿ ಅವಘಡ ಸಂಭವಿಸಿದೆ. ಹಳಿಯಾಳ ಪಟ್ಟಣದ ಉಪನೋಂದಣಿ ಕಚೇರಿ ಬಳಿ ಇರುವಂತಹ ರವಿ ಝೆರಾಕ್ಸ್ ಸೆಂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಹಬ್ಬಿ ಅಕ್ಕ ಪಕ್ಕದ ಅಂಗಡಿಗಳು ಹಾಗೂ ಮನೆಗೂ ಹಾನಿ ಬೆಂಕಿ ಹಬ್ಬಿದೆ. ಗದಿಗೆಪ್ಪ ಖಾನಾವಳಿ, ಆರ್‌ಎನ್‌ಎಸ್ ಎಲೆಕ್ಟ್ರಿಕಲ್ಸ್, ಅಪ್ಪು ಜ್ಯುವೆಲ್ಲರಿ ಹಾಗೂ ಮನೆಯೊಂದಕ್ಕೆ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಇಲಾಖೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೇ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಟ್ಟರು.ದುರ್ಘಟನೆಯಿಂದ ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಳಿಯಾಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆ : ಬಿಜೆಪಿ ಪಕ್ಷದ ಕೆಲವು ನಾಯಕರು 1000 ಸಾವಿರ ಕೋಟಿ ಹಣ ಸಂಗ್ರಹಿಸಿಟ್ಟುಕೊಂಡಿದ್ದು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು.ಈ ಹಿನ್ನೆಲೆ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಗಾಂಧಿ ನಗರದಲ್ಲಿ FIR ದಾಖಲಾಗಿದೆ. ಈ ಮೊದಲು ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ವರ್ಗಾವಣೆಗೊಂಡು ಅಕ್ಟೋಬರ್ 14 ಕ್ಕೆ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಿಂದ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಸೆಪ್ಟೆಂಬರ್ 26 ರಂದು ದಾವಣಗೆರೆ ಜಿ ಎಂಐಟಿ ಗೆಸ್ಟ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ಆಧರಿಸಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ದೂರು ನೀಡಿದ್ದಾರೆ. ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1,000 ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ,…
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನ ವಾಪಸ್ ನೀಡದೆ ಮೋಸ ಮಾಡಿದ್ದಾರೆ. ಹಣ ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫುಲ್ ಸಿಂಗ್ ಅವರ ಪತ್ನಿ ಸುನೀತಾ ಚವ್ಹಾಣ್ ಅವರು ಪೊಲೀಸರಿಗೆ…
ಬೆಂಗಳೂರು : ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ. SCS/TSP ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ವಾಲ್ಮೀಕಿ ಗುರುಗಳು ಕಲಿತರು ರಾಮಾಯಣ ಬರೆದರು.ವಾಲ್ಮೀಕಿ ಗುರುಗಳು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು ಎಂದು ತಿಳಿಸಿದರು. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು.…
ಬೆಂಗಳೂರು : ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ರಾಜ್ಯದ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರು ಪದಗ್ರಹಣ ಮಾಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ.ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರು ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಒಂದು ಶಕ್ತಿ ಯೋಜನೆ ಅಡಿಯಲ್ಲಿ ಕೆಲವು ಮಹಿಳೆಯರು ಗ್ರಂಥಾಲಯ ನಿರ್ಮಿಸಿದ್ದಾರೆ.ತಮ್ಮ ಮಗನಿಗೆ ಬೈಕ್ ಕೊಡಿಸಿದ್ದಾರೆ ಕೆಲವರು ಫ್ರಿಜ್, ಟಿವಿ, ಇನ್ನೂ ಅನೇಕ ಅನುಕೂಲಗಳನ್ನು ಪಡೆದಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್,…
ದಾವಣಗೆರೆ : ದಾವಣಗೆರೆಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಅಪಘಾತ ಸಂಭವಿಸಿದೆ. ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕರ ಗುರುತು ಇನ್ನು ಪತ್ತೆಯಾಗಿಲ್ಲ. ಮೃತದೇಹಗಳನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತಂತೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಪಘಾತದ ಘಟನೆ ಕುರಿತಂತೆ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಇಂದು ಹಾವೇರಿಯಲ್ಲಿ ಧಾರಾಕಾರ ಮಳೆಯಾಗಿದ್ದರಿಂದ 12 ವರ್ಷದ ಬಾಲಕ ಚರಂಡಿಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧಪಟ್ಟ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್ ಮುಂಜೋಜಿ ಹಾಗೂ ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಸಸ್ಪೆಂಡ್ ಆಗಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರು ಆದೇಶ ಹೊರಡಿಸಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಅವರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಚರಂಡಿ ಕಾಲುವೆಯ ಮೇಲಿನ ಕಲ್ಲು ಮುಚ್ಚದೆ ನಿರ್ಲಕ್ಷ ವಹಿಸಲಾಗಿದೆ. ತೆರೆದ ಚರಂಡಿ ಮೋರಿಗೆ ಬಿದ್ದು 12 ವರ್ಷದ ಬಾಲಕ ನಿವೇದನ್ ಮೃತಪಟ್ಟಿದ್ದ. ಪ್ರಕರಣ ಹಿನ್ನೆಲೆ? ಇಂದು ಹಾವೇರಿಯಲ್ಲಿ ಘೋರ ದುರಂತವೊಂದು ನಡೆದಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕ ನಿವೇದನ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿತ್ತು. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ…
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ ನಾಗೇಂದ್ರ ಅವರು ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ಬಳಿಕ ನೇರವಾಗಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಬಂಧನದ ಕುರಿತು ಹಾಗೂ ಹಗರಣದ ಕುರಿತಂತೆ ಚರ್ಚಿಸಿದ್ದಾರೆ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿದ್ದಾರೆ.ಬಳಿಕ ಇಂದು ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಅಭಿ ನಾಗೇಂದ್ರ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ಇದೆಲ್ಲ ಸುಳ್ಳು ಆರೋಪ. ಸಣ್ಣ ದೋಷ ಇಲ್ಲದೆ ಹೊರ ಬರುತ್ತೇನೆ. ಪರಪ್ಪನ ಅಗ್ರಹಾರದ ಜೈಲಿನ ಗೋಡೆಯ ಮೇಲೆ ಬರೆದಿದ್ದೇನೆ. ಬಿಜೆಪಿ ನಾಯಕರ ಹೆಸರು ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲಾಗುತ್ತಾರೆ ನೋಡುತ್ತಾ ಇರಿ ನನ್ನ ವಿರುದ್ಧ ಷಡ್ಯಂತರ ಆಗಿದೆ. ಎಂದು ನಾಗೇಂದ್ರ ಕಣ್ಣೀರು ಹಾಕಿದರು. ನಾನು ಅಕ್ರಮ ಮಾಡಿದ್ದೇನೆ ಎಂದು ನಂಬಿದ್ದಾರೆ. ನಾನು ಯಾರನ್ನು ನಂಬಿಸಬೇಕಿಲ್ಲ.…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರು ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದರು. ಇನ್ನು ನಾಗೇಂದ್ರ ಅವರ ಮೇಲೆ 18 ಕೇಸ್ಗಳಿದ್ದು, ಇದರಿಂದ ಹೊರಬರುವ ಬದಲು ಚುನಾವಣಾ ಕಣ ಎನ್ನುವುದೆಲ್ಲ ಸುಳ್ಳು ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು 18 ಅಲ್ಲ 100 ಕೇಸ್ ಹಾಕಿಸಿಕೊಂಡರು ಮುಖ್ಯಮಂತ್ರಿ ಆಗುತ್ತಾರೆ. ಮುಂದೆ ನಮಗೂ ಒಳ್ಳೆ ಭವಿಷ್ಯವಿದೆ. ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಕೆಲಸ ಮಾಡಿಕೊಂಡು ಹೋದರೆ ಮುಖ್ಯಮಂತ್ರಿ ಯಾಕೆ ಆಗಬಾರದು ಎಂದು ಪ್ರಶ್ನಿಸಿದರು. ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ವಿಚಾರಣೆಯ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹೇಳಲು ಮಕ್ಕಳ ಹಾಕಿದ್ದಾರೆ ಎಂಬ ಗಂಭೀರವಾದ ಆರೋಪ…
ಬೆಂಗಳೂರು : ಈಗಾಗಲೇ ಬೆಂಗಳೂರಿನ ಜನರು ಮಳೆಯ ಹೊಡೆತಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಇದೀಗ ಇಂದು ಮಳೆ ನಿಂತಿದ್ದ ಕಾರಣ ಜನರು ಸ್ವಲ್ಪ ಸುಧಾರಿಸಿಕೊಂಡಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯ ಆಗುವ ಮುನ್ಸೂಚನೆ ಕುರಿತು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು,…














