Author: kannadanewsnow05

ಮಂಡ್ಯ : 2028 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರಿನ ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣರಾಜ್ ಒಡೆಯರ್ ಭವಿಷ್ಯ ನುಡಿದರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿರುವ ಯದುವೀರ್ ಕೃಷ್ಣರಾಜ ಒಡೆಯರ್, ರಾಜ್ಯದ ಮೂರೂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ನಮ್ಮ ಪರವಾಗಿ ಬಂದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಆಗುತ್ತದೆ. ಅದನ್ನು ಸ್ವೀಕರಿಸಬೇಕಾಗುತ್ತದೆ. ಆಡಳಿತ ಪಕ್ಷದ ಪರ ಉಪಚುನಾವಣೆಯ ಫಲಿತಾಂಶ ಬರುವುದು ಸಹಜ.ಆದರೂ ನಮ್ಮ ಉತ್ಸಾಹ ಕಡಿಮೆಯಾಗಿಲ್ಲ. ಮಹಾರಾಷ್ಟ್ರ ಹರಿಯಾಣದ ರೀತಿ ಕರ್ನಾಟಕದಲ್ಲಿ ಕೂಡ ಕೇಸರಿ ಧ್ವಜ ಹಾರುತ್ತದೆ. 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದು ಲಘುವಾಗಿ ಮಾಡಿದ ತೀರ್ಮಾನ ಅಲ್ಲ. ಮೋದಿ ಆಡಳಿತದ ಸ್ಪೂರ್ತಿಯಿಂದ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರ…

Read More

ಬೆಂಗಳೂರು : ಬೆಂಗಳೂರಿನ ಬಸವನಗುಡಿಯಲ್ಲಿ ಇಂದಿನಿಂದ ಕಡಲೆಕಾಯಿ ಪರೀಷೆ ಆರಂಭವಾಗಿದ್ದು, ಬಸವನಗುಡಿ ಸರ್ಕಲ್ ಇಂದ ಬಿಎಮ್ಎಸ್ ಕಾಲೇಜಿನವರೆಗೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಭಾನುವಾರ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಭಾರಿ ಜನಸ್ತೋಮ ಕಂಡುಬಂದಿದ್ದು, ಇಂದಿನಿಂದ ಒಂದು ವಾರದವರೆಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಹೌದು ಐತಿಹಾಸಿಕ ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಿದ್ಯುತ್‌ ದೀಪಾಲಂಕಾರಗಳಿಂದ ಜಘಮಘಿಸುತ್ತಿದೆ. ಈಗಾಗಲೇ ಪರಿಷೆ ಪ್ರಾರಂಭವಾಗಲಿದೆ. ಆದರೆ ಎರಡು ದಿನಕ್ಕೂ ಮುಂಚಿತವಾಗಿಯೇ ಜಾತ್ರೆ ಜೋರಾಗಿ ನಡೆಯುತ್ತಿದೆ. ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್‌ರಾಕ್‌, ಬುಲ್‌ ಟೆಂಪಲ್‌ ರಸ್ತೆ, ದೊಡ್ಡಗಣಪತಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ರಸ್ತೆಗಳ ಬದಿಗಳಲ್ಲಿ ರಾಶಿರಾಶಿ ಕಡಲೆಕಾಯಿ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ಇತರೆ ಸಾಮಗ್ರಿಗಳ ವ್ಯಾಪಾರ ಜೋರಾಗಿದೆ. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಪರಿಷೆಯ ಸಡಗರ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಒಂದು ಸೇರು ಕಡಲೆಕಾಯಿಗೆ 50 ರೂ.ಗಳಿಂದ 60 ರೂ.ಗೆ ಮಾರಾಟವಾಗುತ್ತಿದೆ. ಮಾಗಡಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹೊಸಕೋಟೆ…

Read More

ತುಮಕೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಿಪಟೂರು ನಗರದ ಹೊರವಲಯದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಈಡೇನಹಳ್ಳಿ ಪಾಳ್ಯ ನಿವಾಸಿ ಎನ್.ಚೇತನ್​​​​ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಾಲ್ಕುರಿಕೆ ರಸ್ತೆಯ ಧನಲಕ್ಷ್ಮಿ ಕೋಕೋ ನೆಟ್ ಫ್ಯಾಕ್ಟರಿ ಬಳಿ ಶವ ಪತ್ತೆಯಾಗಿದೆ. ತಿಪಟೂರು ಈಡೇನಹಳ್ಳಿ ಪಾಳ್ಯ ನಿವಾಸಿ ಚೇತನ್ ತಿಪಟೂರು ನಗರದ ಗುಬ್ಬಿ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಿದ್ದ ಚೇತನ್ ಸ್ವಂತ ಲಾರಿ ಹೊಂದಿದ್ದ ಇವರು, ತಿಪಟೂರಿನ ಕಾರ್ಖಾನೆಗಳಿಂದ ತೆಂಗಿನಕಾಯಿ ಸರಬರಾಜು ​ಮಾಡುತ್ತಿದ್ದರು. ಈ ನಡುವೆ ಆಲೂರು ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ನಿನ್ನೆ ಪಾನಮತ್ತನಾದ ಚೇತನ್, ತಿಪಟೂರು ತಾಲೂಕಿನ ಹಾಲ್ಕುರಿಕೆ ರಸ್ತೆ ಧನಲಕ್ಷ್ಮಿ ಕಾಯಿ ಪ್ಯಾಕ್ಟರಿ ಬಳಿ ಇರುವ ಯುವತಿಯ ತಂದೆ ಲೋಕೇಶಪ್ಪ ಅವರ ಬಳಿ ಹೋಗಿ ನಿಮ್ಮ ಮಗಳನ್ನು ಕೊಡಿ ಮದುವೆಯಾಗುತ್ತೇನೆ ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಅವರು, ನಿನಗೆ ನನ್ನ ಮಗಳನ್ನು ಕೊಡುವುದಿಲ್ಲ ಎಂದಿದ್ದಾರೆ. ಈ ವಿಚಾರವಾಗಿ…

Read More

ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗೆ ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಹಾಗಲ್ಲ ಎಂದು ಟಾಂಗ್ ನೀಡಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕಾಂಗ್ರೆಸ್ ಗಿಂತ ಡಬಲ್ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ. ಸಿಎಂ ಬದಲಾಗುತ್ತಾರೆ ಅಂತ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮುದಾಯ ಆರೋಗ್ಯ ಕೇಂದ್ರದ ವೈದ್ಯನೊಬ್ಬ ಸಾವನಪ್ಪಿದ್ದಾನೆ. ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ನಡೆದಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ತಿಮ್ಮೇಗೌಡ (34) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸು ಆಗಮಿಸುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇಂದು ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಚಲಿಸಿ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ವೈದ್ಯರ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ಕುರಿತಂತೆ  ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಮನಗರ : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿನ್ನೆ ಭರ್ಜರಿ ಗೆಲುವು ದಾಖಲಿಸಿದೆ. ಈ ಒಂದು ಗೆಲುವಿನ ಕುರಿತಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಸ್ಫೋಟಕ ವಾದಂತಹ ಹೇಳಿಕೆ ನೀಡಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪರೋಕ್ಷವಾಗಿ ನಮಗೆ ಸಹಾಯ ಮಾಡಿದ್ದರಿಂದ ಈ ಒಂದು ಗೆಲವು ಸಿಕ್ಕಿದೆ ಎಂದು ತಿಳಿಸಿದರು. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಅವರು, ಜನರು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಮನೆ ಸೈಟ್ ಕೊಡುವುದಾಗಿ ನಾವು ವಾಗ್ದಾನ ನೀಡಿದ್ದೆವು. ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಜೆಡಿಎಸ್ ಮುಕ್ತ ರಾಮನಗರ ಜಿಲ್ಲೆ ಎಂಬ ವಿಚಾರವಾಗಿ ಮಾತನಾಡಿದ ಅವರು, ನಮಗೆ ಅದು ಮುಖ್ಯ ಅಲ್ಲ. ಮೊದಲು 19 ಶಾಸಕರು ಇದ್ದರು ಈಗ 18 ಆಗಿದ್ದಾರಷ್ಟೇ ಎಂದರು. ಇನ್ನು ಚನ್ನಪಟ್ಟಣ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದು, ಬಿಜೆಪಿ ಜೆಡಿಎಸ್ ನಾಯಕರ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಾಯದಿಂದ ನಮಗೆ ಗೆಲವು ಸಿಕ್ಕಿದೆ. ಬಿಜೆಪಿ ಜೆಡಿಎಸ್ ನಾಯಕರು ನಮಗೆ ಸಹಾಯ…

Read More

ಹಾಸನ : ವಾಲ್ಮೀಕಿ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳಿಂದ ಮುಜುಗರಕ್ಕೆ ಈಡಾಗಿತ್ತು. ಈ ಬಾರಿಯ 3 ವಿಧಾನಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಕಷ್ಟ ಅಂತ ಅಂದಾಜಿಸಲಾಗಿತ್ತು. ಆದರೆ ನಿನ್ನೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಡಿಸೆಂಬರ್ 5 ರಂದು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಹೌದು ಸಾಲು ಸಾಲು ಆರೋಪ, ವಿಪಕ್ಷಗಳ ಹೋರಾಟದಿಂದ ಬೆಂಡಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಚುನಾವಣೆ ಫಲಿತಾಂಶ ಹೊಸ ಭರವಸೆ ನೀಡಿದೆ. ಪಕ್ಷಕ್ಕೆ ಹೊಸ ಉತ್ಸಾಹ ದೊರೆತಿರುವ ಈ ಸಂದರ್ಭದಲ್ಲೇ ಸಿದ್ದರಾಮಯ್ಯ ಅಭಿಮಾನಿಗಳ ಹೆಸರಿನಲ್ಲಿ ಅವರ ಬೆಂಬಲಿಗ ಸಚಿವರು ಹಾಸನದಲ್ಲಿ ಬೃಹತ್ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ. ಡಿಸೆಂಬರ್ 5 ರಂದು ಸರ್ಕಾರ ಹೊರತುಪಡಿಸಿ, ಅಭಿಮಾನಿಗಳಿಂದಲೇ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸಾಲು ಸಾಲು ಆರೋಪ ಮಾಡಿ ಜೆಡಿಎಸ್, ಬಿಜೆಪಿ ನಡೆಸಿದ ಹೋರಾಟಕ್ಕೆ ತಮ್ಮ ಬೆಂಬಲಿಗರ ಮೂಲಕ…

Read More

ಮೈಸೂರು : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಶಾಸಕ ಜಿಟಿ ದೇವೇಗೌಡರ ನಡುವೆ ಆಗಾಗ ಮುನಿಸು ವೈಮನಸ್ಸು ಇದ್ದಿದ್ದೆ. ಇದೀಗ ಡಿ ಟಿ ದೇವೇಗೌಡರು ಎಚ್ ಡಿ ಕುಮಾರಸ್ವಾಮಿ ಅವರದೇ ಮತ್ತೆ ಅಸಮಾಧಾನ ಹೊರಹಾಕಿದ್ದು ಎಚ್ ಡಿ ದೇವೇಗೌಡರು ಕಟ್ಟಿಸಿದ್ದ ಜೆಡಿಎಸ್ ಪಕ್ಷವನ್ನು ಕುಮಾರಸ್ವಾಮಿಯವರು ಡೆಮಾಲಿಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕಟ್ಟಿದ ಪಕ್ಷವನ್ನು ಎಚ್ ಡಿ ಕುಮಾರಸ್ವಾಮಿ ಡೆಮಾಲಿಶ್ ಮಾಡುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಈಗ ಬಿಜೆಪಿ ತಬ್ಬಿಕೊಂಡಿದ್ದಾರೆ. ದೇವರು ಮತ್ತು ದೇವೆಗೌಡರ ಶ್ರಮದಿಂದ ಜೆಡಿಎಸ್ ಪಕ್ಷ ಉಳಿಯುತ್ತಿದೆ. ಮುನಿಸು ಇದ್ದಾಗಲೂ ಕೂಡ ಎಚ್ ಡಿ ದೇವೇಗೌಡರು ಮಾತನಾಡುತ್ತಿದ್ದರು. ಸಾರಾ ಮಹೇಶ್ ತೋಟಕ್ಕೆ ಬಂದು ಹೋದರು ಆಗಲು ಮಾತಾಡಲಿಲ್ಲ. ಸಾರಾ ಮಹೇಶ್ ಗೂ ನಾನು ಬೇಕಾಗಿಲ್ಲ ಅನಿಸುತ್ತದೆ. ಕುಮಾರಸ್ವಾಮಿ ಜೊತೆ ಇದ್ದವರೆ ಸಾರಾ ಮಹೇಶ್ ಗೆ ಬೇಕಾಗಿತ್ತು. ನಾನು ಈಗ ಹೇಗಿದ್ದೇನೆ ಅದೇ ರೀತಿ ಇರುತ್ತೇನೆ. ಇನ್ನೂ ಮೂರು ವರ್ಷ ಶಾಸಕನಾಗಿ ಇರುತ್ತೇನೆ.…

Read More

ಮೈಸೂರು : ನನ್ನ ಕುಮಾರಸ್ವಾಮಿ ನಡುವೆ ಮುನಿಸು ಸಾಕಷ್ಟು ಬಾರಿ ಆಗಿದೆ. ನೊಂದಿದ್ದರು ಸಹ ನಾನು ಅವರೊಂದಿಗೆ ಮಾತನಾಡಿದ್ದೇನೆ. ನೀನು ಇದ್ದರೆ 5 ಸ್ಥಾನ ಗೆಲ್ಲುತ್ತಿದ್ವಿ ಅಂತ ಕರೆದುಕೊಂಡವರು ಕೂಡ ಅವರೇ. ಆದರೆ ಅಧಿಕಾರ ಕೊಡುವ ಸಮಯ ಬಂದಾಗ ದೂರ ಮಾಡುತ್ತಾರೆ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಖಿಲ ಸೋಲಿನ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡಲ್ಲ. ನಿಖಿಲ್ ಕುಮಾರ್ ಗೆ ಸೋಲು ಆಗಿರುವ ವಿಚಾರವಾಗಿ ಸೋಲು ಯಾಕಾಗಿದೆ ಅಂತ ಗೊತ್ತಿಲ್ಲ ಎಲ್ಲಾ ಹೆಚ್‍ಡಿ ಕುಮಾರಸ್ವಾಮಿಗೆ ಗೊತ್ತಿದೆ. ಚನ್ನಪಟ್ಟಣ ಪ್ರಚಾರಕ್ಕೆ ನನ್ನನ್ನು ಕರೆಯಲಿಲ್ಲ. ಹಾಗಾಗಿ ನಾನು ಕೂಡ ಹೋಗಿಲ್ಲ. ಮಗ ಹರೀಶ್ ಗೌಡ ಬಂದಿದ್ದಾನೆ ನಾನು ಬೇಡ ಅಂತ ಇರಬಹುದು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿದ್ದೆ. ಚುನಾವಣಾ ಪ್ರಚಾರಕ್ಕೆ ಏಕೆ ಕರೆದಿಲ್ಲ ಅಂತ ಅವರನ್ನೇ ಕೇಳಬೇಕು. ನನ್ನ ಕುಮಾರಸ್ವಾಮಿ ನಡುವೆ ಮುನಿಸು ಸಾಕಷ್ಟು ಬಾರಿ…

Read More

ಮಂಗಳೂರು : ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಸೋಮೇಶ್ವರದ ರುದ್ರಬಂಡೆಯ ಸಮುದ್ರದ ಬಳಿ ಈ ಒಂದು ಉದ್ಘಾಟನೆ ನಡೆದಿದೆ ಕೂಡಲೇ ತಡಿಯಲಿದ್ದ ಮೇಲುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೌದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ ಮಾಡಲಾಗಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯ ಮೀನುಗಾರರಿಂದ ಕಾಲೇಜು ವಿದ್ಯಾರ್ಥಿನಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಕಾಲೇಜು ಒಂದರಲ್ಲಿ ವಿದ್ಯಾರ್ಥಿನಿಯು ಪದವಿ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ. ಘಟನೆಯ ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More