Author: kannadanewsnow05

ಬೆಳಗಾವಿ : ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಕರ್ನಾಟಕದಲ್ಲಿ ಈಗ ಔರಂಗಜೇಬನ ಮಾದರಿ ಆಡಳಿತ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬೆಳಗಾವಿ ತಾಲೂಕಿನಲ್ಲಿ ಏನೆಲ್ಲಾ ಘಟನೆಗಳು ನಡೆದಿವೆ. ಮಣಿಪುರದಲ್ಲೂ ಆಗದಿರುವ ಅಂತಹ ರೀತಿ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿವೆ. ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ. ಎಂಥಾ ಸರ್ಕಾರ ಆಯ್ಕೆ ಮಾಡಿದ್ದೇವೆ ಎಂದು ಯೋಚನೆ ಮಾಡುವಂತಾಗಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದೆ. ಯುವಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೆಎಸ್ ದಾಖಲಾಗಿಲ್ಲ ಏಕೆಂದರೆ ಹಲ್ಲೆ ಮಾಡಿದವರು ಆಫ್ಜಲ್ ಗುರು ಹಾಗೂ ದಾವೂದ್ ಸಂಬಂಧಿಗಳಾಗಿದ್ದಾರೆ.ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.

Read More

ಬೆಂಗಳೂರು : ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನೆಲೆಯಲ್ಲಿ ರಾಜ್ಯದಲ್ಲೂ ಕೂಡ ಕರೋನ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದೀಗ ಗದಗ ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ 48 ವರ್ಷದ ವ್ಯಕ್ತಿ ಒಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ. ಕೊರೊನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಗದಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಕೊರೊನ ಸೋಂಕಿಗೆ ಒಳಗಾಗಿ ಇದೀಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಬೆಂಗಳೂರಿನಲ್ಲಿ 177 ಜನರಿಗೆ ಕೊರೋನ ಸೋಂಕು ದೃಢವಾಗಿದ್ದು, ರಾಜ್ಯದಲ್ಲಿ ಕೊರೊನ ಪಾಸಿಟಿವ್ ರೇಟ್ ಶೇಕಡ 8.61 ಕ್ಕೆ ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ 1081 ಜನರಲ್ಲಿ ಕರೋನ ಸೋಂಕು ಸಕ್ರಿಯವಾಗಿದೆ ರಾಜ್ಯದಲ್ಲಿ ಈವರೆಗೆ 379 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಲ* ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರೋನ ಸೋಂಕು ಪ್ರಕರಣಗಳ ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು: ಸ್ವಪಕ್ಷದ ವಿರುದ್ಧವೆ ಮಾಜಿ ಸಚಿವ ವಿ. ಸೋಮಣ್ಣ ಆಗಾಗ ಅಸಮಾಧಾನ ಹೊರಹಾಕುತ್ತಿದ್ದು, ಇತೀಚಿಗೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಸ್ವಪಕ್ಷೀಯರೇ ಕಾರಣ ಎಂದು ಅಸಮಾಧಾನಗೊಂಡಿರುವ ಅವರು ವರಿಷ್ಠರಿಗೆ ದೂರು ನೀಡುವ ಸಂಬಂಧ ಸೋಮವಾರ ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆ ಚಾಮರಾಜನಗರದಲ್ಲಿ ನನ್ನ ಸೋಲಿಗೆ ಕಾರಣರಾದವರ ಜತೆಗೆ ಅಂಟಿಕೊಂಡು ತೆರೆಮರೆಯಲ್ಲಿ ರಾಜಕಾರಣ ನಡೆಸಲು ಹೋದರೆ ನಾನು ಸಿಡಿದೇಳುತ್ತೇನೆ ಎಂದು ಶನಿವಾರವಷ್ಟೇ ಅವರು ಖಾರವಾಗಿ ಹೇಳಿದ್ದರು. ಮಂಗಳವಾರ ಅಥವಾ ಬುಧವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಮತ್ತಿತರರನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರಮೋದಿ ಅವರನ್ನೂ ಭೇಟಿ ಮಾಡುವ ಉದ್ದೇಶವನ್ನು ಸೋಮಣ್ಣ ಅವರು ಹೊಂದಿದ್ದು, ಭೇಟಿಯ ಲಭ್ಯತೆ ಮೇಲೆ ನಿರ್ಧಾರವಾಗಲಿದೆ. ಸೋಮಣ್ಣ ಅವರ ಈ ದೆಹಲಿ ಭೇಟಿ ಬಳಿಕ ಮುಂದಿನ ರಾಜಕೀಯ ದಾರಿಯೂ…

Read More

ಗದಗ : ಕಳಸಾ-ಬಂಡೂರಿ ನಾಲಾ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರಿಗೆ ಮಾಹಿತಿ ನೀಡಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೊಬರದಮಠ, ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿ.16ರಂದು ಪತ್ರ ಬರೆದಿದ್ದೆ. ಅದಕ್ಕೆ ಪ್ರಧಾನಿಗಳ ಕಾರ್ಯಾಲಯ ಸ್ಪಂದಿಸಿದೆ ಎಂದು ಅವರು ತಿಳಿಸಿದರು. ಅವರು ನನಗೆ ಪತ್ರ ಬರೆದಿದ್ದು, ಈ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ಈ ಪ್ರದೇಶವನ್ನು ವೀಕ್ಷಣೆ ಮಾಡಿ ಸರ್ಕಾರಕ್ಕೆ ವರದಿ ಕೊಡುತ್ತದೆ ಎಂದು ತಿಳಿಸಿದ್ದಾರೆ. ಸಮಿತಿ ಆಗಮಿಸಿದ ಸಂದರ್ಭದಲ್ಲಿ ಕುಡಿಯುವನೀರಿನಯೋಜನೆಗೆ ಅನುಮತಿನೀಡಬೇಕೆಂದು ಮನವಿ ಮಾಡುತ್ತೇನೆ ಎಂದರು.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ ನಿಂದ ಆಯೋಜಿಸಿದ್ದ 21ನೇ ಚಿತ್ರಸಂತೆಯನ್ನ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ ಮೊದಲು ಚಿತ್ರ ಸಂತೆಗೆ 10 ಲಕ್ಷ ನೀಡುವುದಾಗಿ ಹೇಳಿದ್ದೆವು. ಅದನ್ನು ಹೆಚ್ಚಿಸಿ ₹50 ಲಕ್ಷ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಭಾನುವಾರ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್‌ ಹಮ್ಮಿಕೊಂಡಿದ್ದ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಚಿತ್ರಕಲೆ ಬೆಳೆಸಲು ಸರ್ಕಾರ ತೆರೆದ ಮನಸ್ಸಿನಿಂದ ಕೆಲಸ ಮಾಡಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಗ್ಯಾಲರಿ ಸ್ಥಾಪಿಸಲು ನೆರವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ…

Read More

ಬೆಂಗಳೂರು : ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರಾಜ್ಯವು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದು, ಅಲ್ಲದೆ ರೈತರು ಕೂಡ ತುಂಬಾ ಕಷ್ಟವನ್ನು ಎದುರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದಿಂದ 31 ಮಂದಿ ಸಂಸದರ ತಂಡ ಸೋಮವಾರ ರಾಜ್ಯಕ್ಕೆಆಗಮಿಸಲಿದೆ ಎಂದುಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ತಂಡದ ಮುಂದೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲಾಗುವುದು ಎಂದು ತಿಳಿಸಿದರು.ಸಂಸದರ ಅಧ್ಯಯನ ತಂಡಕ್ಕೆ ನಮ್ಮ ನೀರಾವರಿ ಸಮಸ್ಯೆ ಬಗ್ಗೆ ಅರ್ಥ ಮಾಡಿಸಲಾಗುವುದು ಎಂದು ಅವರು ತಿಳಿಸಿದರು. ನದಿ ಜೋಡಣೆ ಎಂಬುದು ಕೇಂದ್ರ ಸರ್ಕಾರದ ಯೋಜನೆ. ಇದೊಂದು ದೊಡ್ಡ ಯೋಜನೆಯಾಗಿದ್ದು, ಕೇಂದ್ರವು ಈಗಾಗಲೇ ಹಲವು ಹಂತದ ಸಭೆಗಳನ್ನು ಮಾಡಿದೆ. ಈ ಬಗ್ಗೆ ಮಾತನಾಡಿ ನಾವು ವಿಷಯಾಂತರ ಮಾಡುವುದು ಬೇಡ. ಸೋಮವಾರ ಹಾಗೂ ಮಂ ಗಳವಾರ ಕೇಂದ್ರದ 31 ಸಂಸದರ ತಂಡ ಕಾವೇರಿ ವೀಕ್ಷಣೆಗೆ ಬರುತ್ತಿದೆ. ಕಾವೇರಿ ವೀಕ್ಷಣೆ ಜತೆ ನಮ್ಮ ಜಲಸಂಪನ್ಮೂಲಗಳ ಬಗ್ಗೆ ಚರ್ಚಿಸಲಿದೆ. ಈ…

Read More

ವಿಜಯಪುರ : ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ .ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್‌ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ. ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ.ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ. ಅನ್ಯಕೋಮಿನವರಿಗೆ ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರಿಗೂ ಹಿಂದೂ ಸಂಘಟನೆಗಳ ಒಕ್ಕೂಟ ​ಮನವಿ ಸಲ್ಲಿಸಿದೆ. ಸದ್ಯ ಇದು ಪರ ವಿರೋಧಕ್ಕೆ ಕಾರಣವಾಗಿದೆ. ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ಜಿಹಾದ್ ಹೆಸರಿನಲ್ಲಿ ದೇಶದ ಅಖಂಡತೆಗೆ ಮಾರಕವಾಗಿರುವ ಕ್ರೂರ ಮತಾಂಧರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೇವಸ್ಥಾನದ ಎದುರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.

Read More

ಬೆಂಗಳೂರು: ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು. ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ನಗರದ ಕೇಂದ್ರ ಭಾಗದಲ್ಲಿ ಈ ಜಾಗ ಇರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರವನ್ನೂ ಸಲ್ಲಿಸಬೇಕು ಎಂದು ತಿಳಿಸಿದರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.…

Read More

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಜನರಲ್ಲಿ ಭಯ ಉಂಟು ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡದ ದಬ್ಬಾಳಿಕೆ ಸರ್ಕಾರವಾಗಿದೆ. ಅನ್ಯಾಯದ ವಿರುದ್ಧ ಧ್ವನಿ‌ ಎತ್ತಿದರೆ ಪ್ರಕರಣ ದಾಖಲಿಸಿ ಹೆದರಿಸುತ್ತಿದೆ. ಜನರ ಧ್ವನಿಯನ್ನು ಹತ್ತಿಕ್ಕಲು ಮುಂದಾಗುತ್ತಿದೆ. ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಡುವ ಹಾಗೂ ದಲಿತ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಮಾತನಾಡದ ಸರ್ಕಾರ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದರು. ರಾಜ್ಯದಲ್ಲಿ ಭಯ ಹುಟ್ಟಿಸುವ ಹಲವಾರು ಘಟನೆಗಳು ಪದೇಪದೇ ನಡೆಯುತ್ತಿವೆ. ಶ್ರೀಕಾಂತ ಪೂಜಾರಿ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಬಂಧಿಸಲಾಗಿತ್ತು. ಗಲಭೆ ಪ್ರಕರಣಕ್ಕೆ ಸಂಬಂಧಿಸಿಯೂ ಅವರ ಮೇಲೆ‌ ಪ್ರಕರಣಗಳಿಲ್ಲ. ಪ್ರಕರಣಗಳಿಲ್ಲದೆ ಬಂಧಿಸಿ ಜೈಲಿಗೆ ಕಳುಹಿಸುವುದು ಎಮರ್ಜೆನ್ಸಿಯಲ್ಲಿ ಮಾತ್ರ ಆಗುತ್ತಿತ್ತು. ಅದೇ ಮಾದರಿ ಈಗ ನಡೆಯುತ್ತಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬಾರದು ಎನ್ನುವ ಕಾಂಗ್ರೆಸ್ ಕನಸು ಭಗ್ನ…

Read More