Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲಿನಿಂದ A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಂತಹ ದೀಪಕ್ ಇಂದು ಬಿಡುಗಡೆಯಾಗಿದ್ದರೆ.ಕಳೆದ ಸೋಮವಾರ ದೀಪಕ್ ಗೆ ಜಾಮೀನು ಮಂಜೂರು ಆಗಿತ್ತು. ನಿನ್ನೆ ಬಿಡುಗಡೆ ಆದೇಶದ ಪ್ರತಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳ ಕೈ ಸೇರಿದೆ. ಹೀಗಾಗಿ ಇಂದು A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾನೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಕೋರಿ ಹೈಕೋರ್ಟಿಗೆ ಅವರ ಪರ ವಕೀಲ ಸುನಿಲ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯ ವಿಚಾರಣೆ ಅಕ್ಟೋಬರ್ 22ರಂದು ನಡೆಯಲಿದೆ. ಅದೇ ರೀತಿಯಾಗಿ ಪವಿತ್ರ ಗೌಡ ಕೂಡ ನಿನ್ನೆ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ಹಿಂದೂ ಧರ್ಮದಲ್ಲಿ ಒಂದು ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ. ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ…

Read More

ಶಿವಮೊಗ್ಗ : ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Read More

ಚಿಕ್ಕಮಗಳೂರು : ಕ್ಷುಲ್ಲಕ ಕಾರಣಕ್ಕೆ ಇಬ್ಬರು ವಕೀಲರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಘಟನೆಯ ಕುರಿತಂತೆ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೊಲೆರೋ ವಾಹನದಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.ಈ ವೇಳೆ ಕಾರಿನಲ್ಲಿ ವೇಗವಾಗಿ ಅಡ್ಡ ಬಂದು ಬೊಲೆರೋ ಚಾಲಕನಿಗೆ ವಕೀಲ ಪ್ರಶ್ನೆ ಮಾಡಿದ್ದಾರೆ. ರೋಗಿಯನ್ನು ಬೊಲೆರೋ ವಾಹನ ಚಾಲಕ ಆಸ್ಪತ್ರೆಗೆ ಸಾಗಿಸುತ್ತಿದ್ದ. ಆಸ್ಪತ್ರೆಯ ಮುಂದೆ ರೋಗಿಯನ್ನು ನೋಡಿ ಬೋಲೇರೊ ಚಾಲಕರನ್ನು ಪ್ರಶ್ನೆ ಮಾಡಿದ್ದಕ್ಕೆ ವಕೀಲ ಕ್ಷಮೆ ಕೇಳಿದ್ದಾರೆ. ವಕೀಲರು ಕ್ಷಮೆ ಕೇಳಿದರೂ ಸಹ ಯುವಕರ ಗುಂಪೊಂದು ವಕೀಲರ ಮೇಲೆ ಹಲ್ಲೆ ಮಾಡಿದ್ದಾರೆ. ವಕೀಲರಾದಂತಹ ಪೃಥ್ವಿ ಮತ್ತು ಮಂಜುನಾಥ್ ಎನ್ನುವ ಇಬ್ಬರು ವಕೀಲರ ಮೇಲೆ ನಾಲ್ವರು ಯುವಕರು ಹಲ್ಲೆ ಮಾಡಿದ್ದಾರೆ. ಸದ್ಯ ಇಬ್ಬರು ವಕೀಲರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಯನ್ನು ಖಂಡಿಸಿ ಬಸವನಹಳ್ಳಿ ಠಾಣೆಯ ಮುಂದೆ ಇದೀಗ ವಕೀಲರು ಜಮಾಾವಣೆ ಆಗಿದ್ದಾರೆ. ವಕೀಲರ ಮೇಲೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ವಾಟರ್ ಹೀಟರ್ ಹಿಡಿದಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಹೊಸುರು ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ವಿದ್ಯುತ್ ಪ್ರವಹಿಸಿ ರೇಖಾ, (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವಾಟರ್ ಹೀಟರ್ ಹಿಡಿದು ಕರೆಂಟ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ತಮಿಳುನಾಡು ಮೂಲದ ಯುವಕನೊಬ್ಬ ಪಿಜಿ ಕಟ್ಟಡದಿಂದ ಹಾರಿ ಸಾವನ್ನಪ್ಪಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಯುವಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡು ಮೂಲದ ವಿಷ್ಣು (28) ಎಂಬ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪಿಜಿಯ ನಾಲ್ಕನೇ ಮಹಡಿಯಿಂದ ಜಿಗಿದು ವಿಷ್ಣು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಆತನ ಶವವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕೋನಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಾವಿನ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ.

Read More

ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಮಧ್ಯ, ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸ್ಪೋಟದ ಭವಿಷ್ಯ ನುಡಿದಿದ್ದಾರೆ. ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದು ಅವರ ಪತ್ನಿ ಪಾರ್ವತಿ ರಂಗ ಪ್ರವೇಶ ಮಾಡಿದ್ದಾರೆ. ಈ ಒಂದು ಯುದ್ಧದಲ್ಲಿ ರಾಜನೇ ಗೆಲ್ಲುತ್ತಾನೆ ಆದರೆ ಸದ್ಯಕ್ಕೆ ದೈವಬಲ ಇಲ್ಲ. ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿಹಾಕಿಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಆ ಸಂಕಷ್ಟದಿಂದ ಹೊರಬರಲು ಸಾಕಷ್ಟು ಪ್ರಯತ್ನಗಳು ನಡೆದಿವೆ. ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ ಎಂದು ತಿಳಿಸಿದರು. ಅದೇ ರೀತಿಯಾಗಿ ನಟ ದರ್ಶನ್ ಅವರ ಬೇಲ್ ಕುರಿತು ಕೂಡ ಕೋಡಿಶ್ರೀಗಳು ನಿನ್ನೆ ಭವಿಷ್ಯ ನುಡಿದಿದ್ದರು. ಪಾಪ ಪಾಷಣ ಕಳೆದುಹೋಗಬೇಕು. ಮಾಡಿರುವ ಕರ್ಮವು ಫಲವತ್ತಾದರೆ ಯಾರೇನು ಮಾಡಲು ಸಾಧ್ಯ? ಪಾಪದ ಕೆಲಸ ಮಾಡುವುದಕ್ಕೆ ಹೆದರಿಕೆ ಇರಬೇಕಿತ್ತು.…

Read More

ಮೈಸೂರು : ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ಅಲ್ಲದೆ ಇಡಿ ಅವರಿಗೂ ಕೂಡ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಇಡಿ ಅಧಿಕಾರಿಗಳು ಸಹ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯ ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ನನಗೂ ಲೋಕಾಯುಕ್ತ ಅಧಿಕಾರಿಗಳಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಸ್ನೇಹಮಯಿ ಕೃಷ್ಣ ಅವರ ವಿರುದ್ಧವೇ ಅನೇಕ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ಕೆ ದೂರು ನೀಡಿದ್ದಾಗಿ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಇದೀಗ ಆರೋಪಿಗಳಾದ A3, ಪವನ್, A10 ವಿನಯ್ ಹಾಗೂ A14 ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಮೂವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದರು. ಹೌದು ಈ ಮೂವರು ಆರೋಪಿಗಳು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್ ಅವರು, ಪ್ರಕರಣದ A3 ಆರೋಪಿ ಪವನ್, A10 ಆರೋಪಿ ವಿನಯ್ ಹಾಗೂ A14 ಆರೋಪಿ ಪ್ರದೋಷ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಈ ಮೂವರಿಗು ಕೋರ್ಟ್ ಬಿಗ್ ಶಾಕ್ ನೀಡಿದೆ.

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಜ್ಜನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಏನೋ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಅಕ್ಟೊಬರ್ 22 ರಂದು ದಿನಾಂಕ ನಿಗದಿಯಾಗಿದೆ. ಇದರ ಬೆನ್ನಲ್ಲೇ ದರ್ಶನ್ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಇದೀಗ ಅವರಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ಒದಗಿಸಲಾಗಿದೆ. ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗಾಗಿ ಇದೀಗ ಮೆಡಿಕಲ್ ಬೆಡ್ ಮತ್ತು ದಿಂಬು ಕಳುಹಿಸಿಕೊಡಲಾಗಿದೆ. ಬೆನ್ನು ನೋವಿನ ವರದಿ ಬಂದ ಬಳಿಕ ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್ ಮತ್ತು ದಿಂಬನ್ನು ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿತ್ತು. ಬಳಿಕ ಅವರು ನಿನ್ನೆ ಹೈಕೋರ್ಟಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಕ್ಟೋಬರ್ 22ರಂದು…

Read More