Author: kannadanewsnow05

ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಮಧ್ಯ, ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸ್ಪೋಟದ ಭವಿಷ್ಯ ನುಡಿದಿದ್ದಾರೆ. ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದು ಅವರ ಪತ್ನಿ ಪಾರ್ವತಿ ರಂಗ ಪ್ರವೇಶ ಮಾಡಿದ್ದಾರೆ. ಈ ಒಂದು ಯುದ್ಧದಲ್ಲಿ ರಾಜನೇ ಗೆಲ್ಲುತ್ತಾನೆ ಆದರೆ ಸದ್ಯಕ್ಕೆ ದೈವಬಲ ಇಲ್ಲ. ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿಹಾಕಿಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಆ ಸಂಕಷ್ಟದಿಂದ ಹೊರಬರಲು ಸಾಕಷ್ಟು ಪ್ರಯತ್ನಗಳು ನಡೆದಿವೆ. ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ ಎಂದು ತಿಳಿಸಿದರು. ಅದೇ ರೀತಿಯಾಗಿ ನಟ ದರ್ಶನ್ ಅವರ ಬೇಲ್ ಕುರಿತು ಕೂಡ ಕೋಡಿಶ್ರೀಗಳು ನಿನ್ನೆ ಭವಿಷ್ಯ ನುಡಿದಿದ್ದರು. ಪಾಪ ಪಾಷಣ ಕಳೆದುಹೋಗಬೇಕು. ಮಾಡಿರುವ ಕರ್ಮವು ಫಲವತ್ತಾದರೆ ಯಾರೇನು ಮಾಡಲು ಸಾಧ್ಯ? ಪಾಪದ ಕೆಲಸ ಮಾಡುವುದಕ್ಕೆ ಹೆದರಿಕೆ ಇರಬೇಕಿತ್ತು.…

Read More

ಮೈಸೂರು : ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ಅಲ್ಲದೆ ಇಡಿ ಅವರಿಗೂ ಕೂಡ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಇಡಿ ಅಧಿಕಾರಿಗಳು ಸಹ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯ ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ನನಗೂ ಲೋಕಾಯುಕ್ತ ಅಧಿಕಾರಿಗಳಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಸ್ನೇಹಮಯಿ ಕೃಷ್ಣ ಅವರ ವಿರುದ್ಧವೇ ಅನೇಕ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ಕೆ ದೂರು ನೀಡಿದ್ದಾಗಿ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಇದೀಗ ಆರೋಪಿಗಳಾದ A3, ಪವನ್, A10 ವಿನಯ್ ಹಾಗೂ A14 ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಮೂವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದರು. ಹೌದು ಈ ಮೂವರು ಆರೋಪಿಗಳು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್ ಅವರು, ಪ್ರಕರಣದ A3 ಆರೋಪಿ ಪವನ್, A10 ಆರೋಪಿ ವಿನಯ್ ಹಾಗೂ A14 ಆರೋಪಿ ಪ್ರದೋಷ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಈ ಮೂವರಿಗು ಕೋರ್ಟ್ ಬಿಗ್ ಶಾಕ್ ನೀಡಿದೆ.

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಜ್ಜನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಏನೋ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಅಕ್ಟೊಬರ್ 22 ರಂದು ದಿನಾಂಕ ನಿಗದಿಯಾಗಿದೆ. ಇದರ ಬೆನ್ನಲ್ಲೇ ದರ್ಶನ್ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಇದೀಗ ಅವರಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ಒದಗಿಸಲಾಗಿದೆ. ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗಾಗಿ ಇದೀಗ ಮೆಡಿಕಲ್ ಬೆಡ್ ಮತ್ತು ದಿಂಬು ಕಳುಹಿಸಿಕೊಡಲಾಗಿದೆ. ಬೆನ್ನು ನೋವಿನ ವರದಿ ಬಂದ ಬಳಿಕ ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್ ಮತ್ತು ದಿಂಬನ್ನು ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿತ್ತು. ಬಳಿಕ ಅವರು ನಿನ್ನೆ ಹೈಕೋರ್ಟಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಕ್ಟೋಬರ್ 22ರಂದು…

Read More

ದಾವಣಗೆರೆ : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಣೇಶನ ಮೂರ್ತಿಯ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 48 ಜನರಿಗೆ ಇಂದು ಕೋರ್ಟ್ ಜಾಮೀನು ನೀಡಿದೆ. ಸೆಪ್ಟೆಂಬರ್ 19 ರಂದು ದಾವಣಗೆರೆಯ ಅರಳಿಮರ ಸರ್ಕಲ್ ನಲ್ಲಿ ಗಲಾಟೆ ನಡೆದಿತ್ತು. ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ, ಮುಸ್ಲಿಂ ಸೇರಿ 48 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಸೆಪ್ಟೆಂಬರ್ 19 ರಂದು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 30 ಜನರನ್ನು ಬಂಧಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ಆರೋಪಿಗಳ ಮನೆಗೆ ತೆರಳಿ ಬಂಧಿಸಲಾಗಿತ್ತು.

Read More

ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಹ ಸುಧಾಕರ್ ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಟ ಧ್ರುವ ಸರ್ಜಾ ಅವರ ನಟನೆಯ ಮಾರ್ಟಿನ್’ ಸಿನಿಮಾ ಬಗ್ಗೆ ಸುಧಾಕರ್ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ರಿವ್ಯೂ ನೀಡಿದ್ದ.ಮಾರ್ಟಿನ್’ ಸಿನಿಮಾ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಡಿಯೋ ಮಾಡಿ ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸುಧಾಕರ್ ಗೌಡ ಬಂಧನ ಬಗ್ಗೆಯೂ ವದಂತಿ ಹಬ್ಬಿತ್ತು. ಆದರೆ ಇದೆಲ್ಲಾ ಸುಳ್ಳು ಎಂದು ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ನನ್ನ ಬಂಧನವಾಗಿದೆ ಎನ್ನುವುದು ಸುಳ್ಳು. ಒಂದು ವೇಳೆ ನಾನು ಬಂಧನವಾಗಿದ್ದರೆ ನಿಮ್ಮ ಜೊತೆ ಮಾತನಾಡಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ.…

Read More

ಚನ್ನಪಟ್ಟಣ : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅದರಂತೆ ಇಂದು ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದೆ. ಜನರಿಗೆ ಹಂಚಲು ತಯಾರು ಮಾಡಿಟ್ಟಿದ್ದ ಬಿರಿಯಾನಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ರಾಜಕೀಯ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಯೋಗೇಶ್ವರ ಟಿಕೆಟ್ ವಿಚಾರವಾಗಿ ಈ ಒಂದು ಸಭೆ ನಡೆಯುತ್ತಿತ್ತು. ಶಿಶಿರ ಹೋಂ ಸ್ಟೇ ಮೇಲೆ ರಾಮನಗರ ಎಸಿ ದಾಳಿ ಮಾಡಿದ್ದಾರೆ. ರಾಮನಗರ ಚುನಾವಣಾ ಅಧಿಕಾರಿ ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಚನ್ನಪಟ್ಟಣದ ರೆಸಾರ್ಟ್ನಲ್ಲಿ ಕರೆಯಲಾಗಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸಿದ್ಧವಾಗಿದ್ದ ಬಿರಿಯಾನಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ದಾಳಿಮಾಡಿದ ಅಧಿಕಾರಿಗಳು ಬಿರಿಯಾನಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಮಾರು 500 ಜನರಿಗಾಗಿ ರೆಡಿಯಾಗುತ್ತಿದ್ದ ಬಾಡೂಟ ಸಂಪೂರ್ಣವಾಗಿ ಸೀಜ್…

Read More

ಬೆಂಗಳೂರು : ಕಳೆದ ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಜನರು ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದ ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ. ಇದರ ಮಧ್ಯ ಬೀದಿ ನಾಯಿಗಳು ಒಂದು ಹೊತ್ತಿನ ಊಟಕ್ಕೆ ಪರದಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ನ ಸಾಯಿ ಲೇಔಟ್ ನಲ್ಲಿ ಈ ಒಂದು ಮನಕಲಕುವ ದೃಶ್ಯ ಕಂಡು ಬಂದಿದೆ. ರಸ್ತೆ ಬದಿಯಲ್ಲಿ ಅಲ್ಲೋ ಇಲ್ಲೋ ಆಶ್ರಯ ಪಡೆದುಕೊಂಡು ಮಳೆ ನೀರಿನಲ್ಲಿ ವಾಸಿಸುತ್ತವೆ.ಆದರೆ ಭೀಕರ ಮಳೆಗೆ ತತ್ತರಿಸಿದ ನಾಯಿಗಳು ಊಟ ಸಿಗದೇ ಮಣ್ಣು ತಿನ್ನುತ್ತಿರುವ ದೃಶ್ಯ ಮನ ಕಲಕುವಂತಿದೆ.ಸಾಕು ನಾಯಿಯಾಗಿದ್ದರೆ ಮನೆ ಮಾಲೀಕರು ಹೇಗೋ ಮಾಡಿ ಅದನ್ನು ಕಾಪಾಡಿ ಊಟ ನೀಡುತ್ತಿದ್ದರು. ಆದರೆ ಬೀದಿ ನಾಯಿಗಳು ಹಾಗಲ್ಲ ಇದನ್ನ ತಿನ್ನುತ್ತಾ ಕಾಲ ಕಳೆಯುತ್ತವೆ ಆದರೆ ಇದೀಗ ಬೆಂಗಳೂರು ನಗರ ಸಂಪೂರ್ಣ ಜಲಾವೃತ ಆಗಿರುವುದರಿಂದ ಬೀದಿ ನಾಯಿಗಳು ಊಟಕ್ಕೂ ಕೂಡ ಪರದಾಡುವಂತಹ ಪರಿಸ್ಥಿತಿ…

Read More

ಬೆಂಗಳೂರು : ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬೆಂಗಳೂರಿಗೆ ಕಾವೇರಿ 5ನೇ ಹಂತದ ನೀರು ಯೋಜನೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಿದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಯೋಜನೆಯ ಶೇಕಡ 80ರಷ್ಟು ಕೆಲಸ ನಾವೇ ಮಾಡಿದ್ದೇವೆ ಈಗ ಇವರು ಬಂದು ಉದ್ಘಾಟನೆ ಮಾಡಿದ್ದಾರೆ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನೇ ಎಲ್ಲಾ ಮಾಡಿಸಿದ್ದು ಎಂದು ನಿನ್ನೆ ಡಿಸಿಎಂ ಜಂಭ ಕೊಚ್ಚಿ ಕೊಂಡಿದ್ದಾರೆ. ಅವರು ಏನೇ ಹೇಳಿದರೂ ದಾಖಲೆಗಳು ಮಾತಾಡುತ್ತವೆ. ಯೋಜನೆ ಪ್ರಾರಂಭ ಆದಾಗ ಬಿಜೆಪಿ ಸರ್ಕಾರ ಇತ್ತು. ಅದರ 80% ಪ್ರತಿಶತ ಕೆಲಸವನ್ನು ನಾವೇ ಮಾಡಿದ್ದೇವೆ. ಇವರು ಬಂದು ಈಗ ಒಂದು ವರ್ಷ ಆಗಿದೆ. ದೇವರನ್ನು ಕೂರಿಸಿ ಹೋಮ ಹವನ ಮಾಡಿದ್ದು ನಾವು, ಮಂಗಳಾರತಿ ಸಮಯದಲ್ಲಿ ಇವರು ಬಂದು ನಮ್ಮದು ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. ಇನ್ನು ಚನ್ನಪಟ್ಟಣ ಬೈ ಎಲೆಕ್ಷನ್ ಕುರಿತು ಮಾತನಾಡಿದ ಅವರು, ಚನ್ನಪಟ್ಟಣ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಆಕಸ್ಮಿಕವಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇದರ ಪರಿಣಾಮ ಚಪ್ಪಲಿ ಶೋರೂಮ್ ಒಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರುನಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಾಬಾಜಾನ್ ಎಂಬವರಿಗೆ ಸೇರಿದ ಚಪ್ಪಲಿ ಶೋರೂಂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಲ್ಲದೆ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಪ್ಪಲಿ ಮತ್ತು ಶೂ ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More