Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಆಕಸ್ಮಿಕವಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇದರ ಪರಿಣಾಮ ಚಪ್ಪಲಿ ಶೋರೂಮ್ ಒಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರುನಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಾಬಾಜಾನ್ ಎಂಬವರಿಗೆ ಸೇರಿದ ಚಪ್ಪಲಿ ಶೋರೂಂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಲ್ಲದೆ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಪ್ಪಲಿ ಮತ್ತು ಶೂ ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಸಾಮಾನ್ಯವಾಗಿ ಗಂಡು ಅಥವಾ ಹೆಣ್ಣು ತಮಗೆ ಬಾಳ ಸಂಗಾತಿ ಸಿಗದೇ ಇರುವ ಯುವ ಜನತೆಗೆ ಅನುಕೂಲ ಆಗಲೆಂದೆ ಮ್ಯಾಟ್ರಿಮೊನಿ ಎಂಬ ಒಂದು ಆಪ್ ಪರಿಚಯಿಸಲಾಗಿದೆ. ಆದರೆ ಈ ಒಂದು ಆಪ್ ಇದೀಗ ದುರ್ಬಳಕೆ ಆಗುತ್ತಿದ್ದು, ಸರ್ಕಾರಿ ನೌಕರ ಒಬ್ಬ ಮ್ಯಾಟ್ರಿಮೊನಿಯಲ್ಲಿ ಚೆಂದದ ಯುವತಿಯನ್ನು ಬಲೆಗೆ ಬೀಳಿಸಿಕೊಂಡು ಮದುವೆಯಾಗಿ ನಂತರ ಬೀದಿಗೆ ತಳ್ಳುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೌದು ರಾಯಚೂರು ಜಿಲ್ಲೆ ಮಾನ್ವಿ ಜೆಸ್ಕಾಂ ಸಹಾಯಕ ಇಂಜಿನಿಯರ್ ಆಗಿರುವ ಗುರುರಾಜ್ ನಾಯಕ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಅಮೃತಾ ಎಂಬ ಮಹಿಳೆ ಆರೋಪ ಮಾಡಿದವರಾಗಿದ್ದಾರೆ. ಈತನಿಗೆ ಮೊದಲೇ ಮದುವೆಯಾಗಿದ್ದರು ಕೂಡ ಸುಳ್ಳು ಹೇಳಿ ನನ್ನನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಸಂತ್ರಸ್ತ ಮಹಿಳೆ ಅಮೃತಾ ಎರಡು ಬಾರಿ ತನ್ನ ಪತಿ ವಿರುದ್ಧ ಮಾನ್ವಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಮ್ಯಾಟ್ರಿಮೂನಿದಲ್ಲಿ ಅಮೃತಾ ಮತ್ತು ಗುರುರಾಜ್ ನಾಯಕ ಪರಿಚಯವಾಗಿದೆ. ನಾನು…

Read More

ರಾಮನಗರ : ರಾಜ್ಯದ ಮೂರು ಉಪಚುನಾವಣೆಗಳ ದಿನಾಂಕ ನಿನ್ನೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಪ್ರಬಲವಾದ ಕ್ಷೇತ್ರವಾಗಿದೆ. ಏಕೆಂದರೆ Hd ಕುಮಾರಸ್ವಾಮಿ ಹಾಗೂ ಡಿಕೆ ಬ್ರದರ್ಸ್ ಅವರ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಹಾಗಾಗಿ ಒಂದು ಉಪಚುನಾವಣೆ ಬಹಳ ಕುತೂಹಲಕಾರಿ ಆಗಿದೆ. ಅಲ್ಲದೆ ವರಿಷ್ಠ ಮಾಹಿತಿಯ ಪ್ರಕಾರ ಚನ್ನಪಟ್ಟಣ ಟಿಕೆಟ್ ನನಗೆ ಸಿಗುತ್ತದೆ ಎಂದು ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ವರಿಷ್ಟರ ಮಾಹಿತಿ ಪ್ರಕಾರ ನನಗೆ ಚನ್ನಪಟ್ಟಣ ಟಿಕೇಟ್ ಸಿಗುತ್ತದೆ. ಎಂದು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಂಎಲ್ಸಿ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದೆ. ನನ್ನನ್ನು ಜನರು ಪಕ್ಷಾಂತರ ಅಂತ ಕರೆಯುತ್ತಾರೆ. ಆದರೆ ನಾನು ಪಕ್ಷಾಂತರ ಮಾಡಿದ್ದು ತಾಲೂಕಿನ ಅಭಿವೃದ್ಧಿಗಾಗಿ. ರಾಷ್ಟ್ರ ರಾಜಕಾರಣಕ್ಕೆ ನರೇಂದ್ರ ಮೋದಿ ಅವರೇ ಬಂದಿರಲಿಲ್ಲ. ಆಗಲೇ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಸಭಾ ಚುನಾವಣೆಗೆ…

Read More

ಮಂಡ್ಯ : BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು. ಇದೆ ವೇಳೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರು ಜನರಾದ ಜನತೆಗೆ ಮೂರನೇ ಒಂದು ಭಾಗದಷ್ಟು ನೀರು ಕೊಡುವಂತ ಕಾರ್ಯಕ್ರಮ ಇದು. ಸುಮಾರು 4336 ಕೋಟಿ ವೆಚ್ಚದಲ್ಲಿ ಈ ಯೋಜನೆ ಮಾಡಲಾಗಿದ್ದು, ಹಾಗೂ 10 ವರ್ಷಗಳವರೆಗೆ ಬೆಂಗಳೂರಿಗೆ ನೀರಿನ ಸಮಸ್ಯೆ ಇರಲ್ಲ.ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ ಎಂದರು. ಅಲ್ಲದೆ BBMP ವ್ಯಾಪ್ತಿಯ 110 ಹೊಸ ಹಳ್ಳಿಗಳಿಗೆ ಈ ಯೋಜನೆ ಮೂಲಕ ನೀರು ಕೊಡಲಾಗುತ್ತದೆ. ಎಲ್ಲ ನಾಗರಿಕರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ಪೂಜೆ ಮಾಡಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಕ್ಟೋಬರ್ 22ರಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಕ್ಟೋಬರ್ 22ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠ ಈ ಒಂದು ವಿಚಾರಣೆ ನಡೆಸಲಿದೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಹಲವು ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಹಾಗೂ ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿಲ್ಲ ಹಾಗಾಗಿ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು. ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಉಳಿದ 13 ಕೋಟಿ ರೂಪಾಯಿಗಳನ್ನು ಸಹ ಎಸ್ಐಟಿ ವಸೂಲಿ ಮಾಡಿಕೊಡುವುದಾಗಿ ತಿಳಿಸಿದೆ. ಹಾಗಾಗಿ ಈ ಒಂದು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಕೋರ್ಟಿನ ತೀರ್ಪಿನ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

Read More

ರಾಮನಗರ : ಮನೆಯ ಬಳಿ ನಿಂತಿದ್ದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಮನೆಯವರ ಶಬ್ದಕ್ಕೆ ಹೆದರಿ ಚಿರತೆ ಬಾಲಕನನ್ನು ಬಿಟ್ಟು ಪರಾರಿ ಆಗಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮನೆಯ ಎದುರು ಬಾಲಕ ಸಮರ್ಥ್ (10) ನಿಂತಿದ್ದಾಗ ಏಕಾಏಕಿ ಚಿರತೆ ದಾಳಿ ಮಾಡಿದೆ. ಈ ವೇಳೆ ಬಾಲಕನ ಚೀರಾಟವನ್ನು ಕೇಳಿ ಮನೆಯವರು ಮನೆ ಹೊರಗಡೆ ಲೈಟ್ ಹಾಕಿದ್ದಾರೆ. ಮನೆಯವರ ಶಬ್ದಕ್ಕೆ ಹೆದರಿಕೊಂಡು ಚಿರತೆ ಬಾಲಕನನ್ನು ಬಿಟ್ಟು ಹೋಗಿದೆ. ಬಾಲಕನ ತಲೆ, ಕುತ್ತಿಗೆ ಹಾಗೂ ಕೈಕಾಲಿಗೆ ತೀವ್ರ ಗಾಯಗಳಾಗಿದ್ದು ಬೆಂಗಳೂರಿನ ಸೆಂಟ್‌ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬ ಪಿಡಿಒ ಅಧಿಕಾರಿ ಬಳಿ ಇದ್ದಂತಹ ಫೈಲ್ ಅನ್ನು ಕಳ್ಳತನ ಮಾಡಿರುವ  ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಹನುಮಂತಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಪಿಡಿಒ ಗೀತಾಮಣಿ ಬಳಿ ಇದ್ದ ಕಡತ ಎಗರಿಸಿದ ಕಿರಾತಕ, ಅಲ್ಲಿಂದ ಪರಾರಿಯಾಗಿದ್ದಾನೇ. ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಗೀತಾಮಣಿ ಅವರು ಹೆದ್ದಾರಿ ಪಕ್ಕ ನಿಂದು ಮೊಬೈಲ್ನಲ್ಲಿ ಮಾತನಾಡುವಾಗ ಈ ಒಂದು ಘಟನೆ ನಡೆದಿದೆ. ಇನ್ನು ಕಡತ ಕಸಿದುಕೊಂಡು ಪರಾರಿಯಾಗಿರುವ ವ್ಯಕ್ತಿಯನ್ನು ಗುಂಡೇನಹಳ್ಳಿ ಅರುಣ್ ಕುಮಾರ್ ಎಂದು ಹೇಳಲಾಗುತ್ತಿದ್ದು, ಆತನ ವಿರುದ್ಧ ಕಡತ ಕದ್ದಿರುವ ಆರೋಪ ಕೇಳಿ ಬಂದಿದೆ. ಕೋರ್ಟ್ ಅಲ್ಲಿ ಇದ್ದ ಅರುಣ್ ಕುಮಾರ್ ವಿರುದ್ಧ ಭೂಮಿವಾದ ಕೇಸ್ ಇದೆ. ನಾಳೆ ಕೋರ್ಟ್ ನಲ್ಲಿ ಭೂವಿವಾದ ಪ್ರಕರಣ ವಿತರಣೆ ನಡೆಯಲಿದೆ. ಹಾಗಾಗಿ ಸಂಬಂಧ ಪಟ್ಟಂತಹ ಮೂಲ ಕಡತ ಎಗರಿಸಿದ್ದಾನೆ ಎಂದು ಗೀತಾಮಣಿ ಗಂಭೀರವಾದ ಆರೋಪ…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರೆಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚಿಸಿದ್ದೇನೆ. ನಾವು ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 60 ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಅಲ್ಲದೆ ಯಾವುದೇ ಅಗತ್ಯಕ್ಕಾಗಿ ಸ್ಟ್ಯಾಂಡ್‌ನಲ್ಲಿರಲು ಇನ್ನೂ 40 ಜನರನ್ನು ಮರು ನಿಯೋಜಿಸಿದ್ದೇವೆ.ತಕ್ಷಣದ ಪ್ರತಿಕ್ರಿಯೆಗಾಗಿ ನಾವು ಅಗ್ನಿಶಾಮಕ ಮತ್ತು ತುರ್ತು ಸೇವೆಗಳನ್ನು ನಿಲ್ಲಿಸಿದ್ದೇವೆ. ಅಲ್ಲದೆ ಜಿಲ್ಲಾಡಳಿತ ಕೂಡ ಎಲ್ಲ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ ಎಂದು ತಿಳಿಸಿದ್ದಾರೆ. https://twitter.com/krishnabgowda/status/1846159097621524517?t=5wrq14xWGHa35MsPPSTkGg&s=19

Read More

ಹಾವೇರಿ : ವೇಗವಾಗಿ ಬಂದಂತಹ ಕಾರೊಂದು ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ನಗರದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ 48ರ ತೋಟದ ಯಲ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆಟೋ ಹುಬ್ಬಳ್ಳಿಯಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿತ್ತು. ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತರ ಹೆಸರು ಪತ್ತೆಯಾಗಿಲ್ಲ. ಮೃತರು ದಾವಣಗೆರೆ ಮೂಲದವರು ಎನ್ನಲಾಗಿದೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೋಡ್ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ರಭಸಕ್ಕೆ ಆಟೋದಲ್ಲಿ ಸಾಗಿಸುತ್ತಿದ್ದ ಹಣ್ಣುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.ಸ್ಥಳಕ್ಕೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More