Author: kannadanewsnow05

ಹಾವೇರಿ : ವೇಗವಾಗಿ ಬಂದಂತಹ ಕಾರೊಂದು ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ನಗರದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ 48ರ ತೋಟದ ಯಲ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆಟೋ ಹುಬ್ಬಳ್ಳಿಯಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿತ್ತು. ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತರ ಹೆಸರು ಪತ್ತೆಯಾಗಿಲ್ಲ. ಮೃತರು ದಾವಣಗೆರೆ ಮೂಲದವರು ಎನ್ನಲಾಗಿದೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೋಡ್ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ರಭಸಕ್ಕೆ ಆಟೋದಲ್ಲಿ ಸಾಗಿಸುತ್ತಿದ್ದ ಹಣ್ಣುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.ಸ್ಥಳಕ್ಕೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಕಲಬುರ್ಗಿ : ಕೊಲೆ ಪ್ರಕರಣದಲ್ಲಿ ಈ ಹಿಂದೆ ನಟ ದರ್ಶನ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ನಿನ್ನೆ ಕಲ್ಬುರ್ಗಿ ಜೈಲಿನಲ್ಲೂ ಕೂಡ ರಾಜ್ಯಾತಿಥ್ಯ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ 7 ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಜೈಲಿನ ನಿಯಮ ಮೀರಿ ಬಿಡಿ, ಸಿಗರೇಟ್, ಗುಟ್ಕಾ ಸಂಗ್ರಹಿಸಲಾಗಿತ್ತು. ಅಲ್ಲದೆ ಮೊಬೈಲ್ ಬಳಕೆ ಆರೋಪದ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಕಲಬುರ್ಗಿಯ ಫಾರತಾಬಾದ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿಸಲಾಗಿದೆ. ಕೈದಿಗಳಾದ ಸುನಿಲ್, ನಾಗೇಶ್, ವಿಶಾಲ್, ಜುಲ್ಬೀಕರ್, ಜಮೀರ್, ಸಾಗರ್ ಸೇರಿದಂತೆ ಏಳು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿತ್ತು. ಈ ವೇಳೆ ಜೈಲಿನಲ್ಲಿ ಎರಡು ಮೊಬೈಲ್, ಗುಟ್ಕಾ ಹಾಗೂ ಎರಡು ರಾಡ್ಗಳು ಸಿಕ್ಕಿದ್ದವು ಈ ವೇಳೆ ಅವೆಲ್ಲ…

Read More

ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯ ಇಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎನ್ನುವವರು ಲೋಕಾಯುಕ್ತ ಪೊಲೀಸರ ವಿರುದ್ಧವೇ ಗವರ್ನರ್ ಗೆ ಮತ್ತೊಂದು ದೂರು ನೀಡಿದ್ದಾರೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಅವರು ಮುಡಾ ಹಗರಣದ ದಾಖಲೆಗಳನ್ನು ತೆಗೆಸಿದ್ದೇ ಡಿಸಿಎಂ ಡಿಕೆ ಶಿವಕುಮಾರ್ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ. ವರಿಷ್ಠರು ಸಿದ್ದರಾಮಯ್ಯ ಅವರನ್ನು ಇಳಿಸುವ ಪ್ರಯತ್ನ ಮಾಡುವುದಿಲ್ಲ.ಅವರನ್ನು ಇಳಿಸಿದರೆ ಸರ್ಕಾರ ಬೀಳುತ್ತೆ ಅಂತ ಭಯ ಇದೆ ಎಂದು ಬಳ್ಳಾರಿಯಲಿ ಸಿಎಂ ಪರ ಶಾಸಕ ಜನಾರ್ಧನ್ ರೆಡ್ಡಿ ಬ್ಯಾಟಿಂಗ್ ಮಾಡಿದರು. ಮುಂದುವರೆದು ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಯತ್ನ ಮಾಡಿಲ್ಲ. ಕಾಂಗ್ರೆಸಿಗರೇ ಸಿದ್ದರಾಮಯ್ಯರನ್ನು ಇಳಿಸಲು ಯತ್ನಿಸುತ್ತಿದ್ದಾರೆ. ಮುಡಾ ಹಗರಣ ದಾಖಲೆ ಡಿಕೆ ಅವರೇ ತೆಗೆಸಿದ್ದಾರೆ.ಅಧಿಕಾರದಲ್ಲಿ ಇದ್ದವರೇ ಆ ರೀತಿ ದಾಖಲೆ ತೆಗೆಯಲು ಸಾಧ್ಯ ಈ ವಿಚಾರ…

Read More

ಚಿತ್ರದುರ್ಗ : ತನ್ನ ಪತ್ನಿ ಸಾವಿನಿಂದ ನೊಂದ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಅನಾರೋಗ್ಯದಿಂದ ಪತ್ನಿ ಗೌರಮ್ಮ (60) ಮೃತಪಟ್ಟಿದ್ದರು. ಈ ವೇಳೆ ಪತ್ನಿ ಸಾವಿನಿಂದ ನೊಂದು ಪತಿ ಶಿವಣ್ಣ (70) ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತುಮಕೂರು ಜಿಲ್ಲೆಯ ತಿಪಟೂರು ಮೂಲದ ವೃದ್ಧ ದಂಪತಿ ಎಂದು ತಿಳಿದುಬಂದಿದೆ. ವೃದ್ಧ ದಂಪತಿಗಳಿಗೆ ಯಾರು ಕೂಡ ಸಂಬಂಧಿಕರು ಇಲ್ಲ ಎನ್ನಲಾಗುತ್ತಿದೆ. ಕಳೆದ 20 ವರ್ಷಗಳಿಂದ ಮೊಳಕಾಲ್ಮೂರು ಪಟ್ಟಣದಲ್ಲಿ ದಂಪತಿಗಳು ನೆಲೆಸಿದ್ದರು.ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರೇ ವಿರುದ್ಧ ದಂಪತಿಗಳ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

Read More

ಚಿಕ್ಕಬಳ್ಳಾಪುರ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತು. ಬಳಿಕ ಇಂದು ನಟ ದರ್ಶನ್ ಹೈಕೋರ್ಟಿಗೆ ಬೇಲ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಮಧ್ಯ ನಟ ದರ್ಶನ್ ಅವರ ಕುರಿತು ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪದ ಪಾಶ ಉಚ್ಚಿದರೆ ಎಲ್ಲವು ಸರಿಯಾಗುತ್ತೆ. ಈಗ ನಾವು ಪಾಯಸ ಮಾಡುವಾಗ ಬೆಲ್ಲ ಹಾಕಿ ಪಾಯಸ ಮಾಡುತ್ತೇವೆ. ಅದಕ್ಕೆ ಬೆಲ್ಲದಲ್ಲೇ ಕೊಳೆ ಇರುತ್ತದೆ. ಪಾಯಸ ಉಕ್ಕಿದಾಗ ಮೇಲೆ ಕೊಳೆ ಬರುತ್ತೆ. ಕೊಳೆ ತೆಗೆದಾಗ ಪಾಯಸ ಸಿಹಿಯಾಗುತ್ತದೆ. ಹಾಗೆ ಮನುಷ್ಯನ ಪಾಪ ಹೋಗಬೇಕು. ತಾನು ಮಾಡಿದ ಕರ್ಮ ಬಲವಂತವಾದರೆ ಯಾರೇನು ಮಾಡುವರು. ಮನುಷ್ಯ ಪುಣ್ಯ ಮಾಡೋಕೆ ಹೆದರಬಾರದು, ಪಾಪ ಮಾಡೋಕೆ ಹೆದರಬೇಕು. ಆದರೆ ನಾವು ಪಾಪ ಮಾಡೋಕೆ ಹೆದರುವುದಿಲ್ಲ ಪುಣ್ಯ ಮಾಡೋಕೆ ಹೆದರುತ್ತಿದ್ದೇವೆ ಎಂದು ಅವರು ತಿಳಿಸಿದರು.

Read More

ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಳಿಕ ಇನ್ನೊಮ್ಮೆ ಈ ರೀತಿ ಪುನರಾವರ್ತಿತ ಆಗ್ಬಾರ್ದು ಎಂದು ವಾರ್ನಿಂಗ್ ಕೊಟ್ಟು ಕಳುಸಿದ್ದಾರೆ ಎಂದು ತಿಳಿದುಬಂದಿದೆ. ನಟ ಧ್ರುವ ಸರ್ಜಾ ಅವರ ಮಾರ್ಟಿನ್ ಸಿನಿಮಾದ ಕುರಿತಂತೆ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ನಾನು ಜೀವನದಲ್ಲಿ ನೋಡಿದ ಅತ್ಯಂತ ಕೆಟ್ಟ ಸಿನಿಮಾ. ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಎಲ್ಲರೂ ಕೆಜಿಎಫ್ ಸಿನಿಮಾ ಕಾಪಿ ಮಾಡುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮಾದರಿಯಲ್ಲಿಯೇ ಕಳಪೆಯಾಗಿ ಉಪೇಂದ್ರ ಅವರ ‘ಕಬ್ಜ’ ಸಿನಿಮಾ ಮಾಡಲಾಗಿದೆ. ಕಬ್ಜ ಸಿನಿಮಾದ ಮುಂದುವರಿದ ಕಳಪೆ ಭಾಗ ಎನ್ನುವಂ ರೀತಿಯಲ್ಲಿ ಮಾರ್ಟಿನ್ ಸಿನಿಮಾ ಮಾಡಲಾಗಿದೆ ಎಂದು ಹೇಳಿಕೆ ನೀಡಿರುವ ವಿಡಿಯೋ ಅಪ್ಲೋಡ್ ಮಾಡಿದ್ದರು. ಈ ಕುರಿತು ನಟ ಧ್ರುವ ಸರ್ಜಾ…

Read More

ವಿಜಯಪುರ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಪಡೆದ ವಿಚಾರವಾಗಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಇದರಲ್ಲಿ ನನ್ನ ಕೇಸ್ ಕೂಡ ಪಡೆದಿದ್ದಾರೆ ಅಂತ ಹೇಳಿದ್ದಾರೆ. ಹಾಗಾದರೆ ನನ್ನ ಮೇಲೆ ಯಾವ ಕೇಸ್ ಇತ್ತು? ಯಾರು ಅರ್ಜಿ ಹಾಕಿದ್ದರು ಎಂಬುದನ್ನು ಬಹಿರಂಗಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ವಿಜಯಪುರದಲ್ಲಿ ಎಂಎಲ್ಸಿ ಸಿಟಿ ರವಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ನವರು ಸುಳ್ಳು ಬುರುಕರು ಸುಳ್ಳು ಹೇಳಿದ್ದಾರೆ.ನನ್ನ ಮೇಲೆ ಯಾವುದೇ ಒಂದು ಮೊಕದ್ದಮೆ ಇರಲಿಲ್ಲ. ನಾನು ಯಾವುದೇ ಅರ್ಜಿ ಈ ಸರ್ಕಾರಕ್ಕೆ ಕೊಟ್ಟಿಲ್ಲ. ನನ್ನ ಯಾವ ಪ್ರಕರಣ ಇಂಪಾರ್ಟೆಂಟ್ ಇಲ್ಲ. ಜನರ ದಿಕ್ಕು ತಪ್ಪಿಸಲು ನನ್ನ ಕೇಸ್ ಬಗ್ಗೆ ಹೇಳುತ್ತಿದ್ದಾರೆ ಎಂದು ತಿಳಿಸಿದರು. ಸಿಟಿ ರವಿ ಕೇಸ್ ಸಹ ಹಿಂಪಡೆದಿದ್ದೇವೆ ಅಂತ ಹೇಳಿದ್ದಾರೆ. ನಮಗೆ ಇವರ ಕೃಪೆ ಬೇಡ.ನನ್ನ ವಿರುದ್ಧದ ಕೆ ಎಸ್ ಹಿಂಪಡೆದ ಆದೇಶದ ಪ್ರತಿ ಕೊಡಿ ನನ್ನ ಮೇಲೆ…

Read More

ವಿಜಯಪುರ : ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಸನಗೌಡ ಪಾಟೀಲ ವಾಕ್ಸಮರ ತಾರಕಕ್ಕೆ ಏರಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ನಡೆದ ಹಿಂದೂ ಆಸ್ತಿಗಳ ಸಂರಕ್ಷಣೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಅವರ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ. ಹಿಂದೂಸ್ಥಾನದಲ್ಲಿ ಇರುವ ಎಲ್ಲ ಮುಸ್ಲಿಮರು ಔರಂಗಜೇಬ, ಟಿಪ್ಪು ಸುಲ್ತಾನ ಹಾಗೂ ಆದಿಲ್ ಶಹಾನ ಖಡ್ಗಕ್ಕೆ ಹೆದರಿಕೊಂಡು ಮತಾಂತರ ಆದವರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅವರಪ್ಪನ ಆಸ್ತಿಯಲ್ಲ ಎಂದು ಹೇಳಿದ್ದಾರೆ. ನೀನು ನಮ್ಮಪ್ಪನ ಆಸ್ತಿಯಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ.…

Read More

ರಾಯಚೂರು : ದಸರಾ ಹಬ್ಬದ ಅಂಗವಾಗಿ ದುರ್ಗಾದೇವಿ ಜಾತ್ರೆಯಲ್ಲಿ ಮಾಡಿದ ಮಾಂಸದ ಊಟವನ್ನು ಸೇವಿಸಿ ಒಂದೇ ಕುಟುಂಬದ ಮೂವರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ನಡೆದಿದೆ. ದಸರಾ ಹಬ್ಬದ ಅಂಗವಾಗಿ ತಾಂಡಾದಲ್ಲಿರುವ ದುರ್ಗಾದೇವಿ ಜಾತ್ರೆಯ ಅಂಗವಾಗಿ ಮನೆಯಲ್ಲಿ ಮಾಂಸದೂಟ ಮಾಡಿದ್ದರು. ಜಾತ್ರೆಯ ಮರುದಿನ ಸಂಜೆ ಮಾಂಸದ ಅಡುಗೆ ಮಾಡಿದ್ದು, ಊಟ ಸೇವಿಸಿದ್ದರು.ನಂತರ ಇಂದು ಬೆಳಿಗ್ಗೆ ಮೇಲೆ ಏಳೋಕೆ ಆಗದೆ ಅಸ್ವಸ್ಥರಾಗಿದ್ದಾರೆ. ಕೂಡಲೇ ಶಿವು ಸರ್ಕಾರ (40) ಸುಮಿತ್ರಾ (37) ಅಜಯ (14) ಎಂಬುವವರನ್ನು ಗ್ರಾಮಸ್ಥರ ಸಹಕಾರದಿಂದ ಲಿಂಗಸೂಗೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದರು. ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಒಂದು ಅವಘಡ ಸಂಭವಿಸಿದೆ.ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನೆ ಕುರಿತಂತೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More