Author: kannadanewsnow05

ಹಾವೇರಿ : ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದರು. ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳಿರುತ್ತಾರೆ. ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಯಾರು ಶತ್ರು ಎಂಬುದು ಹೇಗೆ ಗೊತ್ತಾಗುತ್ತದೆ? ಯಾರು ನಿಜವಾದ ಸ್ನೇಹಿತರೆಂಬುದು ಹೇಗೆ ಗೊತ್ತಾಗುತ್ತದೆ? ಆ ಲೆಕ್ಕದಲ್ಲಿ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಶತ್ರುಗಳು ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಗೊತ್ತಾಗುವುದಿಲ್ಲ ಎನ್ನುವ ಮೂಲಕ ಸ್ವಪಕ್ಷೀಯ ವಿರೋಧಿಗಳಿಗೂ ಜಮೀರ್ ಟಾಂಗ್ ಕೊಟ್ಟರು. ಇನ್ನೂ ದರ್ಶನ್​ ಜೈಲು ಅತಿಥ್ಯ ಪ್ರಕರಣದಲ್ಲಿ ನಿಮ್ಮ ಹೆಸರು ಕೇಳಿಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಟ ದರ್ಶನ್ ವಿಚಾರವಾಗಿ ಮಾಧ್ಯಮದಲ್ಲಿ ನನ್ನ ಹೆಸರು ಸೇರಿಸಲಾಗುತ್ತಿದೆ. ನಾನು ದರ್ಶನ್ ಆತ್ಮೀಯ ಸ್ನೇಹಿತರು. ಆದ್ರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಮಧ್ಯ ರಾತ್ರಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಡಾಬಾ ಬಳಿ ನಿಲ್ಲಿಸಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ.ಈ ವೇಳೆ ಲಾರಿ ಚಾಲಕ ಮತ್ತು ಬೊಲೆರೋ ವಾಹನದಲ್ಲಿದ್ದ ಆರೋಪಿ ನಡುವೆ ಮಾತಿಗೆ ಮಾತು ಬೆಳೆದು ಲಾರಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ನಡೆದಿದೆ. ಹೌದು ನಿನ್ನೆ ಮಧ್ಯ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಇರುವ ಗ್ರೀನ್ ಪಾರ್ಕ್ ಡಾಬಾ ಸಮೀಪ ಈ ಒಂದು ಕೊಲೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಬಲಿಯಾಗಿದ್ದಾನೆ. ಡಾಬಾ ಬಳಿ ನಿಲ್ಲಿಸಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಮತ್ತು ಬೊಲೆರೋ ವಾಹನದಲ್ಲಿದ್ದ ಆರೋಪಿ ಮಹೇಶ್ ನಡುವೆ ಮಾತಿಗೆ ಮಾತು ಬೆಳೆದು ಲಾರಿ ಚಾಲಕರನ್ನು ಹತ್ಯೆ ಮಾಡಿದ್ದಾನೆ.ರಾಡ್ ನಿಂದ ಹೊಡೆದು ಲಾರಿಯಲ್ಲಿದ್ದ ಪ್ರದೀಪ್ ನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು…

Read More

ಬೆಳಗಾವಿ : ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ತಂಟೆಗೆ ಬಂದ್ರೆ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ, ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಹೌದು ಇಂದು ರಾಜು ಕಾಗೆ, ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯೆತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟರು. ಮುಂದುವರೆದು, ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟು ಹಬ್ಬ ಆಚರಿಸಿದವರು ಯಾರು? ಎಂದು ಪ್ರಶ್ನಿಸಿದರು. ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ…

Read More

ಬೆಂಗಳೂರು : ರಾಜ್ಯದಲ್ಲಿ ಮುಡಾ ಹಗರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇತ್ತ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಕೆಐಎಡಿಬಿ ಯಲ್ಲಿ ಖರ್ಗೆ ಕುಟುಂಬ ಅಕ್ರಮ ಜಮೀನು ಪಡೆದುಕೊಂಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಇತ್ತೀಚಿಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಇದೇ ವಿಚಾರವಾಗಿ ಕಾಂಗ್ರೆಸ್ ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಹೌದು ಕೆಐಎಡಿಬಿಯಿಂದ ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ ಆರೋಪ ಕೇಳಿಬಂದಿದೆ. ಸರ್ಕಾರದ ಇಲಾಖೆಗೆ ಜಾಗ ನೀಡಲು ಮೀನಾಮೇಷ ಎಣಿಸಲಾಗುತ್ತಿದ್ದು, ಖಾಸಗಿ ಟ್ರಸ್ಟ್, ಕಂಪೆನಿಗಳಿಗೆ…

Read More

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂ.28ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪ್ರಕರಣದ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಈ ಆದೇಶದಿಂದಾಗಿ ಪ್ರಕರಣದ ಆರೋಪಿಗಳು ಮತ್ತೆ ವಿಚಾರಣೆ ನಡೆಸಬೇಕಾದ ಅಗತ್ಯ ಎದುರಾಗಿದೆ. ಪ್ರಕರಣದ ಹಿನ್ನೆಲೆ? ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂ.15ರಂದು ಯೋಗೇಶ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಾಸಕ ವಿನಯ ಕುಲಕರ್ಣಿ…

Read More

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷö್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ರೈತರಿAದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ರೈತರು ಮೇಲ್ಕಂಡ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ…

Read More

ಕಲಬುರ್ಗಿ : ಕಳೆದ ಕೆಲವು ದಿನಗಳಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇದೀಗ ಜಿಲ್ಲೆಯ ಚಿತಾಪುರ ತಾಲ್ಲೂಕಿನಲ್ಲಿ ಮನೆಯ ಮೇಲೆ ಬೃಹತ್ ಬಂಡೆ ಉರುಳಿದ ಪರಿಣಾಮ ಬಾಲಕ ಸೇರಿ ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ. ಹೌದು ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಗುಡ್ಡದ ಬೃಹತ್ ಕಲ್ಲುಗಳು ಉರುಳಿ ಬಿದ್ದು ಮನೆಗೆ ಹಾನಿಯಾಗಿದೆ.ಗುಡ್ಡದಿಂದ ಬೃಹತ್ ಗಾತ್ರದ ಕಲ್ಲುಬಂಡೆಯೊಂದು ಕುಸಿದು ಬಿದ್ದು, ಮನೆಗೆ ಹಾನಿಯಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ನಡೆದಿದೆ. ಚನ್ನಪ್ಪ ಬೋಳಿ ಎಂಬುವರಿಗೆ ಸೇರಿದ ಮನೆಯ ಮೇಲೆ ಪಕ್ಕದ ಗುಡ್ಡದಲ್ಲಿದ್ದ ದೊಡ್ಡ ಗಾತ್ರದ ಬಂಡೆಕಲ್ಲುಗಳು ಉರುಳಿ ಬಿದ್ದಿವೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅದೃಷ್ಟಕ್ಕೆ ಬಂಡೆ ಬಿದ್ದಿರುವ ಭಾಗದಲ್ಲಿ ಯಾರೂ ಇರದ ಕಾರಣ ಆಗಬಹುದಾದ ಭಾರಿ ಅನಾಹುತ ತಪ್ಪಿದೆ. ಆದರೆ ಮನೆಯ ಇನ್ನೊಂದು ಭಾಗದಲ್ಲಿ ಆರು ಜನರಿದ್ದರು.…

Read More

ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ಸರ್ಕಾರ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ತಕ್ಷಣ ಭರವಸೆ ನೀಡಿದಂತೆ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿತ್ತು. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದರಿಂದ ಬಿಜೆಪಿ ನಾಯಕರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹಾಗಾಗಿ ನನ್ನ ಅಧಿಕಾರದಿಂದ ತೆಗೆಯಬೇಕು ಅಂತಿರೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಚರಕ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ತಾರತಮ್ಯ ಹೋಗಲಾಡಿಸಲು ಗ್ಯಾರಂಟಿ ಯೋಜನೆ ತಂದಿದ್ದೇವೆ. ಬಿಜೆಪಿಯವರಿಗೆ ಇದನ್ನು ತಡೆದುಕೊಳ್ಳುವುದಕ್ಕೆ ಆಗುವುದಿಲ್ಲ. ಬಿಜೆಪಿಗರು ವಿಲಿ ವಿಲಿ ಅಂತ ಒದ್ದಾಡುತ್ತಿದ್ದಾರೆ ಎಂದರು. ಬಿಜೆಪಿಯವರು ಹಿಟ್ಲರ್ ವಂಶದವರು. ನಾವು ಗ್ಯಾರೆಂಟಿಗಳಿಗೆ ಖರ್ಚು ಮಾಡಿದಷ್ಟು ಬಿಜೆಪಿ ಮಾಡಿದೆಯಾ? ಅದಕ್ಕೆ ಹೇಗಾದರೂ ಮಾಡಿ ನನ್ನ ತೆಗೆಯಬೇಕು ಅಂತಿರೋದು ಎಂದು ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹಿಟ್ಲರ್ ಕಾಲದ ಒಬ್ಬ ಮಂತ್ರಿ ಗೋಬೆಲ್ ಅಂತ ಇದ್ದ. ಅವಂದು ಬರೀ ಸುಳ್ಳು…

Read More

ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆರೆಮನೆಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಹೌದು ನೆರೆಮನೆ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಕೇಳಿಬಂದಿದ್ದು, ನೆರೆಮನೆಯ ಫ್ರಿಡ್ಜ್ ನಲ್ಲಿ ಇಟ್ಟಿದ್ದ ಹಾಲು ತರಲು ಹೋಗಿದ್ದಾಗ ಈ ಒಂದು ಕೃತ್ಯ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಅಮಿತ್ ಭಾರದ್ವಾಜ್ ಎಂದು ತಿಳಿದುಬಂದಿದೆ. ಪತಿಯ ಸ್ನೇಹಿತ ಸಾಹಿಲ್ ಎನ್ನುವ ಮನೆಯಲ್ಲಿ ಹಾಲು ಇಟ್ಟಿದ್ದರು. ಸಾಹಿಲ್ ಮನೆಯ ಫ್ರೀಜ್ ನಲ್ಲಿ ಯುವತಿಯ ಪತಿ ಹಾಲಿಟ್ಟಿದ್ದ. ಹಾಲು ತರಲು ಹೋಗಿದ್ದಾಗ ಸಾಹಿಲ್ ಸ್ನೇಹಿತನಿಂದ ಈ ಒಂದು ಕೃತ್ಯ ನಡೆದಿದೆ. ಘಟನೆ ಕುರಿತಂತೆ ಮಾದನಾಯಕನ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 75, 351 (1) ರ ಅಡಿ ಕೇಸ್ ದಾಖಲಾಗಿದೆ.

Read More

ರಾಮನಗರ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.ನಡೆದಿದೆ. ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More