Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ ಬಿಜೆಪಿಯು ಈ ಸರ್ಕಾರದ ಸಚಿವರು ಭಯೋತ್ಪಾದಕರು ಎಂದು ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ಹಳೆ ಹುಬ್ಬಳ್ಳಿ ಗಲಭೆ ಅಷ್ಟೇ ಅಲ್ಲ ಸಿಟಿ ರವಿ, ವಿ.ಸೋಮಣ್ಣ ಪ್ರಕರಣವನ್ನು ಕೂಡ ಹಿಂಪಡೆದಿದ್ದೇವೆ. ಹಾಗಾದರೆ ಅವರೆಲ್ಲರೂ ಭಯೋತ್ಪಾದಕರ ಎಂದು ಕಿಡಿ ಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 60 ಪ್ರಕರಣದ ಪೈಕಿ 43 ಪ್ರಕರಣವನ್ನು ವಾಪಸ್ ಪಡೆದಿದ್ದೇವೆ. ಎಲ್ಲವೂ ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಮಾಡಿ ವಾಪಸ್ ಪಡೆದಿದ್ದೇವೆ. ಇದರಲ್ಲಿ ತಪ್ಪೇನಿದೆ?. ವಿ.ಸೋಮಣ್ಣ ಅವರದು ನಾಲ್ಕೈದು ಕೇಸ್ ವಾಪಸ್ ಪಡೆದಿದ್ದೇವೆ. ಸಿ.ಟಿ.ರವಿ ಹಾಗೂ ಸುಕುಮಾರ್ ಶೆಟ್ಟಿ, ಮೈಸೂರು ಮಹಿಳಾ ಮೋರ್ಚಾ ಕೇಸ್ ವಾಪಸ್ ಪಡೆದಿದ್ದೇವೆ. ಇವರೆಲ್ಲರೂ ದೇಶದ್ರೋಹಿಗಳಾ?. ಇವರೆಲ್ಲರೂ ಭಯೋತ್ಪಾದನೆ ನಡೆಸುತ್ತಾರಾ?. ಏನಾದರೂ ಲಾಜಿಕ್ ಇರಬೇಕಲ್ವಾ? ಎಂದರು. ಹಿಂದಿನ ಸರ್ಕಾರದಲ್ಲಿ ಯಾರೆಲ್ಲ ಎಷ್ಟು ಕೇಸ್ ವಾಪಸ್ ಪಡೆದಿದ್ದಾರೆ ಪಟ್ಟಿ ಮಾಡಲಿ. ಯಡಿಯೂರಪ್ಪ ಸರ್ಕಾರ 100ಕ್ಕಿಂತ…
ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಯಶಂಕರ್ ಅವರು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಇನ್ನು ಈ ಒಂದು ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪು ಏನು ಕೊಟ್ಟಿದೆಯೊ ಆ ಆದೇಶವನ್ನು ಸ್ವಾಗತ ಮಾಡುತ್ತೇವೆ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿಕೆ ನೀಡಿದರು. ಇನ್ನು ಎಸ್.ಪಿ.ಪಿ ಪ್ರಸನ್ನ ಕುಮಾರ್ ಅವರ ಕುರಿತಾಗಿ, ಮೊದಲಿಂದನೂ ಅವರು ನಮಗೆ ಧೈರ್ಯ ಹೇಳಿದ್ದಾರೆ. ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಅವರ ಬಗ್ಗೆ ಕೂಡ ನಮಗೆ ಗೌರವವಿದೆ ಹಾಗಾಗಿ ಅವರಿಗೆ ಕೂಡ ನಾನು ಧನ್ಯವಾದ ತಿಳಿಸುತ್ತೇನೆ ಎಂದರು. ಇನ್ನು ರೇಣುಕಾ ಸ್ವಾಮಿ ಚಿಕ್ಕಪ್ಪ ಮಾತನಾಡಿ, ನ್ಯಾಯಾಂಗದ ಮೇಲೆ ಹೆಚ್ಚಿನ ಭರವಸೆ ಉಂಟಾಗಿದೆ. ಸಾಮಾನ್ಯ ಜನರಿಗೂ ನ್ಯಾಯ ಸಿಗುತ್ತೇ ಎನ್ನುವ ಭರವಸೆ ಇದೆ. ತಪ್ಪಿತಸ್ಥರು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ನಟ ದರ್ಶನ್ ಹಾಗೂ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್ ಹಾಗೂ ಪವಿತ್ರಗೌಡ ಇಬ್ಬರ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾಗೊಳಿಸಿದೆ. ಜಾಮೀನು ಅರ್ಜಿ ವಜಾ ವಿಷಯ ತಿಳಿದಿದ್ದಂತೆ ಪವಿತ್ರ ಗೌಡ ಜೈಲಿನಲ್ಲಿ ಕಣ್ಣೀರು ಹಾಕಿದ್ದಾಳೆ. ಟಿವಿ ನೋಡಿ ಪವಿತ್ರ ಗೌಡ ಕಣ್ಣೀರು ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನು ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾ ಗೊಳಿಸಿದೆ. ಹಾಗಾಗಿ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಬಳ್ಳಾರಿ ಜೈಲಿನಿಂದ ನಟ ದರ್ಶನ ಅವರು ಹೊರಗಡೆ ಬರುತ್ತಾರೆ…
ಬೆಂಗಳೂರು : ನಟ ದರ್ಶನ್ ತೂಗುದೀಪ ಜಾಮೀನು ಭವಿಷ್ಯ ಸೋಮವಾರ ಕೋರ್ಟ್ ನಿರ್ಧಾರ ಮಾಡಿದೆ. ದರ್ಶನ್ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಾದ – ಪ್ರತಿವಾದ ನಡೆದ ನ್ಯಾಯಾಧೀಶರು ನಟ ದರ್ಶನ್‌ಗೆ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ. ವಿ. ನಾಗೇಶ್ ಹಾಗೂ ಪೋಲೀಸರ ಪರ ವಕೀಲ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ಈ ನಡುವೆ ಜಾಮೀನು ಸಿಗದಿರುವ ಕಾರಣಕ್ಕೆ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಳ್ಳಾರಿ ಕಾರಾಗೃಹದಲ್ಲಿರುವ ದರ್ಶನ್ ಅವರಿಗೆ ಇದರಿಂದ ಬೇಸರವಾಗಿರುವುದು ಸುಳ್ಳಲ್ಲ. ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಆಗಸ್ಟ್ 29 ರಿಂದ ಬಳ್ಳಾರಿ ಕೇಂದ್ರ ಕಾರಾಗೃಹದ ಹೈಸೆಕ್ಯೂರಿಟಿ ಸೆಲ್‌ನಲ್ಲಿ ಬಂಧನದಲ್ಲಿ ಇಡಲಾಗಿದೆ. ನಾಳೆಯೊಳಗೆ ಜಾಮೀನು ಸಂಬಂಧ ಪ್ರಕ್ರಿಯೆಗಳನ್ನು ದರ್ಶನ್ ಪತ್ನಿ ಮಾಡಲಿದ್ದಾರೆ ಎನ್ನಲಾಗಿದೆ. ಅದು ಅಲ್ಲದೆ ವಿಚಾರಣೆಯ ವೇಳೆ ಪ್ರಕರಣದ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಮೂರು ತಿಂಗಳ ಬಳಿಕ ಸಚಿವ ಬಿ ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 82ನೇ ಸಿಟಿ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅಧಿಕಾರಿಗಳು ಇತ್ತೀಚಿಗೆ ಸಚಿವ ಬಿ ನಾಗೇಂದ್ರ ಸೇರಿದಂತೆ ಈ ಒಂದು ಪ್ರಕರಣದಲ್ಲಿ…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಪ್ರಕರಣದ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ಆದೇಶ ಹೊರಡಿಸಿದ್ದು ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾ.ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ನನ್ನ ಮೇಲೆ ಅತ್ಯಾಚಾರ ಎಸಿಗಿದ್ದಾರೆ ಎಂದು ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಮೂಲದ ಮಹಿಳೆ ಒಬ್ಬರು ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಬಳ್ಳಾರಿ : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಅದ್ಯಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಇಂದು ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂದು ಜೈಲಿನ ಬಳಿ ದರ್ಶನ್ ಅಭಿಮಾನಿಗಳು ಸೇರಿದ್ದರು. ಆರೋಪಿ ದರ್ಶನ್ ಫೋಟೋ ಹಿಡಿದುಕೊಂಡು ಅಭಿಮಾನಿಗಳು ಬಳ್ಳಾರಿ ಜೈಲಿನ ಬಳಿ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಜೈಲಿನ ಬಳಿ ಸೇರಿದ್ದ ಅಭಿಮಾನಿಗಳನ್ನು ಚದುರಿಸಿದ್ದಾರೆ. ಈ ವೇಳೆ ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಹಾಗಾಗಿ ಸಂದರ್ಶಕರ ಕೊಠಡಿಗೆ ದರ್ಶನ್ ಅವರು ಆಗಮಿಸುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನು ನೋಡಿ ಕಿರುನಗೆ ಬೀರಿದ್ದಾರೆ. ಹಾಗಾಗಿ ನಟ ದರ್ಶನ್ ಅವರು ಇಂದೇ ನನಗೆ ಜಾಮೀನು ಸಿಗುವ ದೃಢ ವಿಶ್ವಾಸ ಹೊಂದಿದ್ದಾರೆ ಎನ್ನಲಾಗುತ್ತಿದೆ.
ದಾವಣಗೆರೆ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರವನ್ನು ಕೇಂದ್ರ ಹೆಚ್‍ಡಿ ಕುಮಾರಸ್ವಾಮಿ ಬಿಟ್ಟುಕೊಡಲ್ಲ ಅಂದಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಲವು ತೋರಿದ್ದಾರೆ.ಇದರ ಮಧ್ಯ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್ ತೀವ್ರ ಕುತೂಹಲ ಮೂಡಿಸಿದೆ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಏನೇ ಆಗಲಿ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ನಾನೇ ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಇನ್ನೇನು ಕೇವಲ ಒಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು. ಬಳಿಕ ಬಿಜೆಪಿಯ ಮಾಜಿ ಶಾಸಕ ಸಿಪಿ…
ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಲೋಕಾಯುಕ್ತ ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿವೆ. ಯಾವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದರಾಯ್ತೋ ಪತ್ನಿ ಪಾರ್ವತಿ ಮುಡಾಗೆ 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆನೂ ಕೊಡಲ್ಲ ಎಂದು ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡುವುದಿಲ್ಲ. ಬಿಜೆಪಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ 8 ತಿಂಗಳಿನಲ್ಲಿ 5 ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗೆ 56,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದ್ದು, ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕುರಿತಂತೆ ತೀರ್ಪು ಪ್ರಕಟಿಸಲಿದೆ. ಇನ್ನು ಕೊಲೆ ಆರೋಪಿ ನಟ ದರ್ಶನವರು ಬಳ್ಳಾರಿ ಜೈಲಲ್ಲಿ ಇದ್ದು ಅವರು ಇತ್ತೀಚಿಗೆ ತೀವ್ರವಾಗಿ ಬೆನ್ನು ನೋವು ನಿಂದ ಬೀಳುತ್ತಿದ್ದಾರೆ ಅಲ್ಲದೆ ವೈದ್ಯರು ಕೂಡ ತಪಾಸಣೆ ಮಾಡಿದ್ದು, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಆದರೆ ಇಂದು ಅವರ ಜಾಮೀನು ತೀರ್ಪು ಅವರ ಬೀಳುವ ಹಿನ್ನೆಲೆಯಲ್ಲಿ ಟೆನ್ಶನ್ ಅಲ್ಲಿ ಇದ್ದಾರೆ. ಈಗಾಗಲೇ 125 ದಿನಗಳ ಕಾಲ ಜೈಲಲ್ಲಿ ಕಳೆದಿದ್ದಾರೆ. ಇದರ ಮಧ್ಯ ಜಾಮೀನು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿ ಚಡಪಡಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಸಿಗದೇ ನಟ ದರ್ಶನ್ ಅವರು ಟೆನ್ಶನ್ ಅಲ್ಲಿ ಇದ್ದಾರೆ. ಅಲ್ಲದೆ ಊಟ ಕೊಡಲು ಬಂದ ಸಿಬ್ಬಂದಿಯ ಬಳಿಯೂ ಕೂಡ ದರ್ಶನ್ ಅವರು ಜಾಮೀನು ವಿಚಾರವಾಗಿ ಮಾಹಿತಿ ಕೇಳಿದ್ದಾರೆ…














