Author: kannadanewsnow05

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಡದಿಯ ಕೇತಗಾನಹಳ್ಳಿ ಬಳಿ 6 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಹಸಿಲ್ದಾರ್ ನೋಟಿಸ್ ಅನ್ನೋ ಪ್ರಶ್ನೆಸಿ ಇದೀಗ ಎಚ್ ಡಿ ಕುಮಾರಸ್ವಾಮಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಸುಮಾರು 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂತಿ ಎನ್.ಎಸ್. ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಶೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. 1985ರಲ್ಲಿಯೇ ಕ್ರಯ ಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ ತಹಶೀಲ್ದಾರ್ ನೋಟಿಸ್​ಗೆ ತಡೆ ನೀಡಬೇಕು ಎಂದು ಕೋರಿದರು.ಇದಕ್ಕೆ ಸರ್ಕಾರದ ಪರ ವಕೀಲರು, ಆಕ್ಷೇಪ ವ್ಯಕ್ತಪಡಿಸಿ 2025ರ ತಿದ್ದುಪಡಿಯನ್ವಯ ತಹಶೀಲ್ದಾರ್​ಗೆ ಅಧಿಕಾರವಿದೆ, ಹಾಗಾಗಿಯೇ…

Read More

ವಿಜಯಪುರ : ಕಾನೂನು ಪ್ರಕಾರ ಆಸ್ತಿ ಘೋಷಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ಮಹಾನಗರ ಪಾಲಿಗೆ 35 ಸದಸ್ಯರನ್ನು ಅಮಾನತು ಮಾಡಿ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರ ಆದೇಶ ಹೊರಡಿಸಿದ್ದಾರೆ. ಹೌದು ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಕಾನೂನು ಪ್ರಕಾರ ಆಸ್ತಿ ಘೋಷಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸದಸ್ಯರ ಸದಸ್ಯತ್ವವನ್ನು ಅನರ್ಹತೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಂದ ಈ ಕುರಿತು ಆದೇಶ ಹೊರಬಿದ್ದಿದೆ.ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರನ್ನು ಅಮಾನತು ಮಾಡಿದ್ದಾರೆ ಬಿಜೆಪಿ 17 ಕಾಂಗ್ರೆಸ್ 10 ಜೆಡಿಎಸ್ 1 ಎಂಐಎಂ 2, ಹಾಗೂ ಪಕ್ಷೇತರರು 5 ಸದಸ್ಯರ ಸದಸ್ಯತ್ವ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಅಂದಹಾಗೇ 2022ರ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವರೆಲ್ಲರೂ ಆಯ್ಕೆಯಾಗಿದ್ದರು. ಜನವರಿ 9, 2024ರಲ್ಲಿ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ ಮೇಯರ್ ಆಗಿದ್ದರೇ, ದಿನೇಶ್ ಹಳ್ಳಿ…

Read More

ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಬಾಲಚಂದ್ರ ಜಾರಕಿಹೊಳಿ ಹಾಗು ಜಿಲ್ಲಾ ಒಕ್ಕೂಟದ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯ ಬಳಿಕ ಮಾತನಾಡಿದ KMF ಅಧ್ಯಕ್ಷ ಭೀಮಾ ನಾಯ್ಕ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಬೇಕೆಂಬುವುದು ನಿರ್ಧಾರವಾಗಿದೆ. ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರಿಸಲಾಗುತ್ತೆ. ಹಾಲಿನ ದರ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಹಾಲಿನ ದರ ಎಷ್ಟು ಹೆಚ್ಚಳ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ ಎಂದು ತಿಳಿಸಿದರು. ಹಾಲು ಒಕ್ಕೂಟಗಳು ಹಾಲು ಉತ್ಪಾದಕರ ಬೇಡಿಕೆ ಮನವರಿಕೆ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವರಿಕೆ ಮಾಡಿದ್ದೇವೆ. ಸದ್ಯ ಹಾಲಿನ ದರ ಎಷ್ಟು ಹೆಚ್ಚಿಸಬೇಕು ಎಂಬ ಕುರಿತು…

Read More

ಕೋಲಾರ : ವಾಯು ವಿಹಾರಕ್ಕೆ ತೆರಳಿದ್ದ ಇಬ್ಬರು ನಿವೃತ್ತ ಉಪನ್ಯಾಸಕರಿಗೆ ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಜೂನಿಯರ್ ಕಾಲೇಜು ಸಮೀಪ ಈ ಘಟನೆ ನಡೆದಿದೆ.‌ ಮೃತ ಉಪನ್ಯಾಸಕರನ್ನು ನಿವೃತ್ತ ಕನ್ನಡ ಉಪನ್ಯಾಸಕ ಕೆ.ಬಿ.ಮೋಹನ್ ( 64), ಮತ್ತೋಬ್ಬ ನಿವೃತ್ತ ರಾಸಾಯನ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀ ನಾರಾಯಣ (62) ಎಂದು ತಿಳಿದುಬಂದಿದೆ. ಪಟ್ಟಣದ ಜೂನಿಯರ್ ಕಾಲೇಜು ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಾಯು ವಿಹಾರ‌ ಮುಗಿಸ ವಾಪಸ್ ಆಗುತ್ತಿದ್ದ ವೇಳೆ ಅತಿವೇಗವಾಗಿ ಹಾಗೂ ಅಜಾಕರಕತೆಯಿಂದ ಬಂದ RX100 ಬೈಕ್ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರಿಗೂ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಯಾಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಲಕ್ಷ್ಮೀ ನಾರಾಯಣ ಅವರನ್ನು ಕೋಲಾರದ ಗೌರವ್ ಆಸ್ಪತ್ರೆಗೆ ಹಾಗೂ ಮೋಹನ್ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ನಿವೃತ್ತ ಉಪನ್ಯಾಸಕರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಬೈಕ್…

Read More

ದಾವಣಗೆರೆ : ಗ್ರಂಥಾಲಯ ಸಿಬ್ಬಂದಿ ಅಮಾನತು ಆದೇಶ ರದ್ದುಪಡಿಸಲು ಆತನಿಂದಲೇ 50,000 ರೂ ಲಂಚ ಸ್ವೀಕರಿಸುತ್ತಿದ್ದಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪಂಚಾಯತಿ ಇಒ ವಾಹನ ಚಾಲಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಶ್ಯಾಮ್ ಕುಮಾರ್ ತಾಲೂಕ ಪಂಚಾಯಿತಿ ಇಒ ಉತ್ತಮ ಅವರ ವಾಹನ ಚಾಲಕನಾಗಿದ್ದು, ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ವಾಹನ ಚಾಲಕ ಬಲೆಗೆ ಬಿದ್ದಿದ್ದಾನೆ. ಗ್ರಂಥಾಲಯ ಇಲಾಖೆ ಸಿಬ್ಬಂದಿ ಶಫಿಉಲ್ಲ ಬಳಿ ಲಂಚ ಸ್ವೀಕರಿಸುತ್ತಿದ್ದ. ಬೆಳ್ಳಿಗನೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯ ಸಿಬ್ಬಂದಿ ಶಫಿಉಲ್ಲಾ ಅಮಾನತು ಆದೇಶ ರದ್ದುಪಡಿಸಲು ಆತನಿಂದ 50,000 ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗಿದೆ.ಶಫಿಉಲ್ಲಾ ಅಮಾನತು ಆದೇಶ ರದ್ದು ಪಡಿಸುವುದಾಗಿ ನಂಬಿಸಿದ್ದ ಶ್ಯಾಮ್ ಶಫೀಉಲ್ಲಾನಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಶಾಮಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚನ್ನಗಿರಿ ತಾಲೂಕು ಪಂಚಾಯತ್ ಇಒ, ಉತ್ತಮ ಕೂಡ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗರ್ಭಿಣಿಯರಿಗೆ ಉಡಿ ತುಂಬಿ ಹರಸಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ವೇದಿಕೆ ಮೇಲೆ ಗರ್ಭಿಣಿಯರನ್ನು ಕೂರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೀರೆ, ಕಂಕಣ ಕೊಟ್ಟು, ಬಳೆ ತೊಡಿಸಿ, ತೆಂಗಿನಕಾಯಿ ಉಡುಗರೆಯಾಗಿ ಕೊಟ್ಟರು. ಬಳಿಕ‌ ಪುಷ್ಪವೃಷ್ಟಿಗೈದು, ಆರತಿ ಬೆಳಗಿದರು. ಇದೇ ವೇಳೆ ಗರ್ಭಿಣಿಯರು ಹೆಬ್ಬಾಳ್ಕರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಬಳಿಕ ಎಲ್ಲರಿಗೂ…

Read More

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಈ ಕುರಿತು ಮಾಹಿತಿ ನೀಡಿದರು. ಈ ವರ್ಷದಲ್ಲೇ ಮೈಸೂರು ಶಿವಮೊಗ್ಗ ದಾವಣಗೆರೆ ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು. ರಾಜ್ಯ ಚುನಾವಣೆ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆ ನೀಡಿದರು. ಸರ್ಕಾರ ಮೀಸಲಾತಿ ಪಟ್ಟಿ ಕೊಡದಿದ್ದರೂ ಚುನಾವಣೆ ನಡೆಸೆ ನಡೆಸುತ್ತೇವೆ. ಹೈಕೋರ್ಟ್ ಗೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೆವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಿದ್ಧವಾಗಿದೆ. ಮೈಸೂರು ಮಹಾನಗರ ಪಾಲಿಕೆ, ಶಿವಮೊಗ್ಗ, ದಾವಣಗೆರೆ, ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ. ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಅಂತ ಅನಿಸುವುದಿಲ್ಲ. ಸರ್ಕಾರಕ್ಕೆ ತನ್ನದೇ ಆದಂತಹ ಜವಾಬ್ದಾರಿ ಇರುತ್ತದೆ.…

Read More

ಕೊಡಗು / ವಿಯಪುರ : ಮಾರ್ಚ್ ಆರಂಭದಲ್ಲೇ ರಾಜ್ಯದಲ್ಲಿ ಸೂರ್ಯನ ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದರು ಆದರೆ ಇತ್ತೀಚಿಗೆ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿರುವುದರಿಂದ ಜನ ಸ್ವಲ್ಪಮಟ್ಟಿಗೆ ಸೂರ್ಯನ ಶಾಖದಿಂದ ದೂರ ಉಳಿದಂತೆ ಆಗಿದೆ. ಇದೀಗ ಕೊಡಗು ಮತ್ತು ವಿಜಯಪುರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಹೌದು ಕೊಡಗು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗಿದ್ದು, ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಮಡಿಕೇರಿ ನಗರ ಸೇರಿದಂತೆ ಹಲವಡೆ ಆಲಿಕಲ್ಲು ಮಳೆಯಾಗಿದೆ. ಉತ್ತಮ ಮಳೆಯಿಂದ ಕಾಫಿ ಬೆಳೆಗಾರರಲ್ಲಿ ಇದೀಗ ಮಂದಹಾಸ ಮೂಡಿದೆ. ಇನ್ನು ಎಚ್ಎಸ್ ಸಂಗಾಪುರ ದಲ್ಲೂ ಕೂಡ ಆಲಿಕಲು ಸಹಿತ ಮಳೆಯಾಗಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರದಲ್ಲಿ ಗುಡುಗು ಮಿಂಚು ಸಹಿತ ಅರ್ಧ ಗಂಟೆವರೆಗೂ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನ ಜಳದಿಂದ ಕಂಗೆಟ್ಟಿದ್ದ ಜನರಿಗೆ ಇದೀಗ ಮಳೆರಾಯ ತಂಪೆರೆದಿದ್ದಾನೆ. ಆಲಿಕಲ್ಲು ಮಳೆಯಿಂದ ತೋಟಗಾರಿಗೆ ಬೆಳೆಗೆ ಹಾನಿ ಹಾಗೂ ಆತಂಕ ಎದುರಾಗಿದೆ. ದ್ರಾಕ್ಷಿ,…

Read More

ಧಾರವಾಡ : ನಮ್ಮ ಭಾರತದ ಹಿಂದೂ ಸಂಪ್ರದಾಯದಲ್ಲಿ ಅತ್ತಿಗೆಗೆ ತಾಯಿಯ ಸ್ಥಾನ ನೀಡಲಾಗಿದೆ. ಆದರೆ ಇತ್ತೀಚಿಗೆ ದಿನಗಳಲ್ಲಿ ಅಂತೂ ಯಾವುದೇ ಸಂಬಂಧಕ್ಕೂ ಕೂಡ ಬೆಲೆ ಇಲ್ಲದಂತಾಗಿದೆ. ಇದೀಗ ವ್ಯಕ್ತಿಯೊಬ್ಬ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಅತ್ತಿಗೆ ಮೇಲೆ ಹಲ್ಲೆ ಮಾಡಿ ಕಚ್ಚಿ ಗಾಯಗೋಳಿಸಿರುವ ಕಾಮುಕನನ್ನು ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಎಂದು ತಿಳಿದುಬಂದಿದೆ. ರಮೇಶನಿಗೆ ಈಗಾಗಲೇ ಮದುವೆಯಾಗಿದೆ.ಮದುವೆಯಾದರೂ ಅಣ್ಣನ ಹೆಂಡತಿ‌ ಮೇಲೆ ಕಣ್ಣು ಹಾಕಿದ್ದ. ಅಣ್ಣನ ಹೆಂಡತಿ ಇದು ಸರಿ ಅಲ್ಲ ಅಂದರೂ ಕೇಳಿರಲಿಲ್ಲ.ನೀನೇ ಬೇಕೇ ಬೇಕು ಎಂದು ಪಟ್ಟು ಹಿಡದಿದ್ದ. ಅತ್ತಿಗೆಯನ್ನ ಮಂಚಕ್ಕೆ ಕರೆದವ ಕಾಮುಕನಂತೆ ವರ್ತಿಸಿದ್ದಾನೆ. ಸ್ವಂತ ಅತ್ತಿಗೆಯನ್ನ ರಮೇಶ್ ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ…

Read More

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆಗೆ ಬುಲಾವ್ ನೀಡಿದ್ದರು. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಶಸ್ತ್ರಸ್ತ್ರ ಕಾಯ್ದೆಯ ಅಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆಯಲ್ಲಿ ಆರ್ಮ್ ಆಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ. ಬಸವೇಶ್ವರನಗರ ಪಿಎಸ್ಐ ಭಾನುಪ್ರಕಾಶ್ ದೂರು ಆಧರಿಸಿ ರೀಲ್ಸ್ ಮಾಡುವಾಗ ಕೈಯಲ್ಲಿ ಲಾಂಗ್ ಹಿಡಿದುಕೊಂಡು ಪೋಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More