Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಅವರು ಟ್ವೀಟ್ ನಲ್ಲಿ ಬೌದ್ಧ ಧರ್ಮ ಸ್ವೀಕಾರದ ಕುರಿತಂತೆ ತಿಳಿಸಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ.ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು…
ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸ ಬಸ್ ನಿಲ್ದಾಣದ ನಿರ್ವಹಣೆ ಮತ್ತು ಸ್ವಚ್ಛತೆಯ ಕುರಿತು ಅಧಿಕಾರಿಗಳು ಫೈಲ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ ಜಮೆಯ ವಿಚಾರವಾಗಿ 2 ಕಂತಿನ ಹಣವನ್ನು ಕ್ಲಿಯರ್ ಮಾಡಿದ್ದೇವೆ. ನಾವು ಕೊಟ್ಟ ಭರವಸೆಯಂತೆ ಎರಡು ತಿಂಗಳ ಹಣವನ್ನು ಹಾಕಿದ್ದೇವೆ. 1.22 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ.ಎರಡು ತಿಂಗಳಿಗೆ 5000 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. 80000 ಫಲಾನುಭವಿಗಳಿಗೆ ತಾಂತ್ರಿಕ ದೋಷ ಅಂತ ಬರುತ್ತಿದೆ. ಜಿಎಸ್ಟಿ ಐಟಿ ಇಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಹಣ ಹಾಕಲು ಆಗುತ್ತಿಲ್ಲ ಎಂದು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ನನ್ನ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.ಯಾವ ಕೇಸ್ ವಾಪಸ್ ಪಡೆಯಿರಿ ಅಂತ ನಾನು ಅರ್ಜಿ ಹಾಕಿದ್ದೇನೆ ಹೇಳಿ? ಸರ್ಕಾರದ ಮುಂದೆ ನಾನು ಭಿಕ್ಷೆ ಬೇಡಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕೋಲಾರ ಚಿಕ್ಕಬಳ್ಳಾಪುರದಲ್ಲಿ ಕೇಸ್ ದಾಖಲಾಗಿರಲಿಲ್ಲ. ನಾನು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರಿಗೆ ಹೊಡೆದಿರಲಿಲ್ಲ. ಪಿಎಫ್ ಐ ಮುಖಂಡರ ಮೇಲಿನ ಕೆಎಸ್ ವಾಪಸ್ ತೆಗೆದುಕೊಂಡರು ಬಳಿಕ ರುದ್ರೇಶ್ ಪ್ರಶಾಂತ್ ಪೂಜಾರಿಯ ಹತ್ಯೆಯಾಯಿತು. ಸರ್ಕಾರ ಈ ಹಂತಕರ ಕೇಸ್ ವಾಪಸ್ ಪಡೆದು ಸುಪಾರಿ ಕೊಟ್ಟಿದೆ. ಇದರ ವಿರುದ್ಧ ನಾವು ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಸಿಟಿ ರವಿ ತಿಳಿಸಿದರು.
ಬೆಂಗಳೂರು : ಮನೆ ಬಾಡಿಗೆಗೆ ಇದ್ದಂತಹ ವ್ಯಕ್ತಿ ಒಬ್ಬ ವೃದ್ಧ ದಂಪತಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಮನೆಯನ್ನೇ ದೋಚಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ರಾಬರಿ ಮಾಡಿದ ಮೂವರು ಆರೋಪಿಗಳ ಬಂಧನವಾಗಿದೆ. ಕಳೆದ ಸೆಪ್ಟೆಂಬರ್ 21 ರಂದು ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಈ ಒಂದು ರಾಬರಿ ನಡೆದಿತ್ತು. ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಆರೋಪಿಗಳು ರಾಬರಿ ಮಾಡಿದ್ದರು. ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಏನೆಂದರೆ ಬಾಡಿಗೆದಾರೆ ರಾಬರಿ ಮಾಡಿದ್ದಾರೆ ಎಂಬುವುದು ತನಿಖೆಯ ವೇಳೆ ಬಯಲಾಗಿದೆ. ಹೌದು ಶಿವಕುಮಾರ್ ಮಣಿಕಂಠ ಮತ್ತು ಪ್ರಶಾಂತ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ವೃದ್ದ ದಂಪತಿ ಮನೆಯಲ್ಲಿ ಬಾಡಿಗೆಗೆ ಇದ್ದ ಶಿವಕುಮಾರ್ ದಂಪತಿಗಳಿಗೆ ಸಹಾಯ ಕೂಡ ಮಾಡುತ್ತಿದ್ದ. ದಂಪತಿಗಳ ಮನೆ ರಾಬರಿಗೆ ಸ್ಕೆಚ್ ಹಾಕಿದ್ದ ಎನ್ನಲಾಗುತ್ತಿದೆ. ಇದಕ್ಕಾಗಿ ಮಣಿಕಂಠ ಮತ್ತು ಪ್ರಶಾಂತ ಜೊತೆ ರಾಬರಿಗೆ ಸ್ಕೆಚ್ ಹಾಕಿದ್ದ. ಶಿವಕುಮಾರ್ ಸೆಪ್ಟೆಂಬರ್ 21ರ ಬೆಳಿಗ್ಗೆ…
ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ ಕುಳಿತು ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ, ಗಾಂಜಾ ಸೇದುತ್ತಿದ್ದಾರೆ ಎನ್ನಲಾದ ದೃಶ್ಯಗಳು ಬಹಿರಂಗವಾಗಿವೆ.ಈ ಮೂವರು ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ಇರುವ ಕೆಲ ಕೈದಿಗಳು ಐಷರಾಮಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಮೂವರು ಕೈದಿಗಳು ಸ್ಮಾರ್ಟ್‌ಫೋನ್ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ಕಳೆದ…
ನೌಕಾನೆಲೆಯ ಸಮರಾಭ್ಯಾಸ ಹಿನ್ನೆಲೆ : 3 ದಿನಗಳ ಕಾಲ ‘ನೇತ್ರಾಣಿ’ ದ್ವೀಪದಲ್ಲಿ, ಮೀನುಗಾರರಿಗೆ, ಪ್ರವಾಸಿಗರಿಗೆ ನಿರ್ಬಂಧ!
ಉತ್ತರಕನ್ನಡ : ನೌಕಾನೆಲೆ ಸಮಾರಾಭ್ಯಾಸ ಹಿನ್ನೆಲೆಯಲ್ಲಿ ನಾಳೆಯಿಂದ ಅಂದರೆ ಅಕ್ಟೋಬರ್ 14 ರಿಂದ 16 ವರೆಗೆ ಮೂರು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.ಅಕ್ಟೋಬರ್ 14 ರಿಂದ 16 ರವರೆಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ನೇತ್ರಾಣಿ ದ್ವೀಪದಿಂದ 10 ನಾಟಿಕಲ್ ಮೈಲಿ ದೂರದಿಂದ ಸಮರಭ್ಯಾಸ ನಡೆಸಲಾಗುತ್ತದೆ. ಆಗಸದಿಂದ ಯುದ್ಧ ಫೈಟರ್ ಮೂಲಕ ನೌಕಾದಳದಿಂದ ಸಮಾರಾಭ್ಯಾಸ ನಡೆಸಲಿದೆ. ಆಗಸದಿಂದ ನೇತ್ರಾಣಿ ದ್ವೀಪದಲ್ಲಿ ಫೈರಿಂಗ್ ನಡೆಯುವುದರಿಂದ ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿದಂತೆ ರೌಡಿ ಶೀಟರ್ ಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇದಾದ ಬಳಿಕವೂ ಜೈಲಿನಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಲ್ಲಿರುವ ಆರೋಪಿ, ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿ ದರ್ಶನ್ಗೆ ಹಾಗೂ ಕೆಲ ರೌಡಿ ಶೀಟರ್ಗಳಿಗೆ ರಾಜಾತಿಥ್ಯ ನೀಡಿರುವ ಪ್ರಕರಣ ಸದ್ದು ಮಾಡಿತ್ತು. ಆದರೂ ಸಹ ಜೈಲಿನಲ್ಲಿ ಇದ್ದುಕೊಂಡೆ ಕೆಲ ರೌಡಿ ಶೀಟರ್ ಗಳು ಬೆದರಿಕೆ ಹಾಕುವ ಘಟನೆಗಳು ನಡೆದಿದ್ದು ಬೆಳಕಿಗೆ ಬಂದಿದೆ. ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ರೌಡಿ ಶೀಟರ್! ದರ್ಶನ್ ಪ್ರಕರಣದ ಬಳಿಕ ಕೂಡ ಜೈಲಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ. ಜೈಲ್ಲಿನಿಂದಲ್ಲೇ ಇನ್ಸ್ಟಾಗ್ರಾಮ್ ಮೂಲಕ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. 2021…
ಧಾರವಾಡ : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಇದರ ಬೆನ್ನಲ್ಲೇ ಕೆಲವು ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯ ಮೇಲೆ ಟವಲ್ ಹಾಕಿದ್ದಾರೆ. ಇದರ ಮಧ್ಯ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ನಾನೊಬ್ಬ ಮುಖ್ಯಮಂತ್ರಿ ಅಂತ ಇಲ್ಲಿ ಬಂದಿಲ್ಲವೆಂದು ಹೇಳುವ ಮೂಲಕ ಬಹಿರಂಗವಾಗಿಯೇ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಧಾರವಾಡದ ರಡ್ಡಿ ಬ್ಯಾಂಕ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡುವ ಭರದಲ್ಲಿ ಅವರು, ನಾನೊಬ್ಬ ಸಿಎಂ ಆಗಿ ಇಲ್ಲಿ ಬಂದಿಲ್ಲ ಎಂದು ಬಾಯಿ ತಪ್ಪಿ ತಾನೇ ಸಿಎಂ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಆ ಮೂಲಕ ಬಹಿರಂಗವಾಗಿ ನೆಕ್ಸ್ಟ್ ಸಿಎಂ ನಾನೇ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಸಮಾರಂಭದಲ್ಲಿ ಮುಂದುವರೆದು ಮಾತನಾಡುತ್ತ, ನಾನು ಕೂಡ ಸಹಕಾರ ಕ್ಷೇತ್ರದವನಾಗಿ ಬಂದಿದ್ದೇನೆ. ನಾನು ಕೂಡ ಸೊಸೈಟಿ ಎಲೆಕ್ಷನ್ ನಿಂದ ರಾಜಕೀಯಕ್ಕೆ ಬಂದವನು. ಹೀಗೆ ಕಾರ್ಯಕ್ರಮದಲ್ಲಿ ತಮ್ಮ ಮೊದಲ ಚುನಾವಣೆ…
ಬೆಳಗಾವಿ : ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರುತ್ತಾರೆ. ದೇಶ ವಿದೇಶಗಳಿಂದಲೂ ಸಹ ಭಕ್ತಾದಿಗಳು ದೇವಸ್ಥಾನಕ್ಕೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ಭಕ್ತರು ನಂಬಿದ್ದಾರೆ.ಆದರೆ ದೇವರು ಕೂಡ ಕೆಟ್ಟದ್ದು ಮಾಡಲಿ ಎಂದು ಬಯಸುವುದಿಲ್ಲ. ದೇವರು ಹಾಗೂ ಧರ್ಮ ಮನುಷ್ಯ ಮನುಷ್ಯನನ್ನ ಪ್ರೀತಿಸಿ ಎನ್ನುತ್ತವೆ ಎಂದು ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದೇವೆ. ಇದುವರೆಗೂ ರಾಜ್ಯದಲ್ಲಿ ಪ್ರಯಾಣದ ಟಿಕೆಟ್ ವೆಚ್ಚ 300 ಕೋಟಿ ಆಗಿದೆ. ಅಷ್ಟು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ.ಈ ರೀತಿ ಯಾವ ಸರ್ಕಾರಗಳು ಕೂಡ ಮಾಡಿರಲಿಲ್ಲ.ಬಿಜೆಪಿಯವರು ಧರ್ಮ ಆಚಾರ ವಿಚಾರ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಮಾತಾಡುತ್ತಾರೆ. ಇಂತಹ ಕೆಲಸ ಅವರು ಮಾಡಿದ್ದಾರಾ? ಎಂದು ಪ್ರಶ್ನಿಸಿದರು. ಸೌದತ್ತಿ ಕ್ಷೇತ್ರಕ್ಕೆ ಒಂದೂವರೆ ಕೋಟಿ ಭಕ್ತರು ಬಂದು ಹೋಗುತ್ತಾರೆ.ಪ್ರವಾಸೋದ್ಯಮ…












