Author: kannadanewsnow05

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಬೆಳ್ಳಂ ಬೆಳಗ್ಗೆ ಕೊಟ್ಟಿಗೆಗೆ ನುಗ್ಗಿ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳನ್ನು ಚಿರತೆ ಕೊಂದು ತಿಂದಿದೆ. ಗ್ರಾಮದ ಸಿದ್ದೇಗೌಡ ಎಂಬುವವರಿಗೆ ಸೇರಿದ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ತೋಟದಲ್ಲಿಯೇ ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ. ಚಿರತೆ ಉಪಟಳದಿಂದ ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಭಯಭೀತರಾಗಿದ್ದಾರೆ.

Read More

ತುಮಕೂರು : ಶಿಕ್ಷಕರ ನಿರ್ಲಕ್ಷಕ್ಕೆ ವಿದ್ಯಾರ್ಥಿನಿಯ ಬೆರಳು ಕಟ್ ಆಗಿದ್ದು ಒಂದನೇ ತರಗತಿ ವಿದ್ಯಾರ್ಥಿನಿ ಎರಡು ಕೈ ಬೆರಳು ಕಳೆದುಕೊಂಡಿರುವ ಘಟನೆ ತುಮಕೂರು ತಾಲೂಕಿನ ಗೂಳೂರು ಶಾಲೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಶಿಕ್ಷಕರ ನಿರ್ಲಕ್ಷಕ್ಕೆ ಬಾಲಕಿ ಚಿನ್ಮಯಿ ದೇವಿ ಬಲಗೈನ ಎರಡು ಬೆರಳುಗಳು ಕಟ್ ಆಗಿವೆ. ಸರ್ಕಾರಿ ಶಾಲಾ ಶಿಕ್ಷಕರ ಬೇಜವಾಬ್ದಾರಿ ಆರೋಪ ಕೇಳಿ ಬಂದಿದೆ. ಬಿಸಿ ಊಟ ನೀಡುವ ಬೆಳೆ ಕ್ಯೂ ನಲ್ಲಿ ವಿದ್ಯಾರ್ಥಿನಿ ನಿಂತಿದ್ದಾಳೆ. ಬಾಗಿಲಿಗೆ ಕೈಯಿಟ್ಟುಕೊಂಡು ಬಾಲಕಿ ಚಿನ್ಮಯಿ ದೇವಿ ನಿಂತಿದ್ದಾಳೆ. ಈ ವೇಳೆ ಮೂರನೇ ತರಗತಿಯ ಬಾಲಕಿಯಿಂದ ಬಾಗಿಲು ತಳ್ಳಿದ ಆರೋಪ ಕೇಳಿ ಬಂದಿದೆ. ಈ ವೇಳೆ ಚಿನ್ಮಯಿ ದೇವಿ ಬಲಗೈನ ಎರಡು ಬೆರಳುಗಳು ಕಟ್ಟಾಗಿವೆ. ಕಟ್ಟಾಗಿದ್ದ ಬೆರಳುಗಳು ಇದ್ದಿದ್ದರೆ ಅದನ್ನು ಜೋಡಿಸಬಹುದಾಗಿತ್ತು ಎಂದು ವೈದ್ಯರು ಪರಿಶೀಲನೆ ಮಾಡಿದ ಮೇಲೆ ಹೇಳಿದ್ದಾರೆ. ಕಟ್ ಆಗಿ ಬಿದ್ದ ಬೆರಳುಗಳನ್ನು ಗುಡಿಸಿ ಬಿಸಾಕಿದ ಆರೋಪ ಇದೀಗ ಕೇಳಿ ಬರುತ್ತಿದೆ. ಬೆರಳು ಕಟ್ ಆದ ಜಾಗಕ್ಕೆ ನೀರು ಸುರಿದು…

Read More

ಹಾಸನ : ಅಪಘಾತದಲ್ಲಿ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಕ್ಕೆ ಇದೀಗ, ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ. ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್‌ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್‌ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಬಸ್‌ ಸೀಜ್‌ ಮಾಡಲಾಗಿದೆ. ಚಿಕ್ಕಮಂಗಳೂರು ಡಿಪೋಕ ಸೇರಿದ 2 ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ಜಪ್ತಿ ಮಾಡಲಾಗಿದೆ. 2023ರಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಮತ್ತು ರವಿಕಿರಣ್ ಮೃತಪಟ್ಟಿದ್ದರು. 32 ಲಕ್ಷ ರೂಪಾಯಿ ಪರಿಹಾರ ನೀಡಲು ಚನ್ನರಾಯಪಟ್ಟಣ ಕೋರ್ಟ್ ಆದೇಶಿಸಿತ್ತು. ನ್ಯಾಯಾಲಯ ಆದೇಶ ನೀಡಿದರು ಸಹ ಪರಿಹಾರ ನೀಡಲು ವಿಳಂಬ ಮಾಡಿದ್ದ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಸಾವಿರ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಘೋಷಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಗುರುವಾರ ಈ ಕುರಿತಾಗಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಭೂಮಿ ಗ್ಯಾರಂಟಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು. ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಮಾಹಿತಿ ನೀಡಿದರು. ಮುಂದಿನ ಒಂದು ಸಾವಿರ ದಿನ ಹೇಗಿರಲಿದೆ ಎಂದು ಕೇಳಿದಾಗ, “ಬಹಳ ಪ್ರಕಾಶಮಾನವಾಗಿ, ಬಲಿಷ್ಠವಾಗಿರಲಿದೆ ಎಂದು ತಿಳಿಸಿದರು. ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ. ಅಧಿಕಾರ ಹಂಚಿಕೆ ವಿಚಾರವಾಗಿ ನಾವು ಈ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಮದುವೆಗೆ ಹೋಗಿ ಬರುವಾಗ ತ್ರಿಬಲ್ ರೈಡ್ ವೇಳೆ ಕ್ರೂಸರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೆ ಓರ್ವ ಯುವಕ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಘಟನೆ ಕಲಬುರ್ಗಿ ನಗರದ ಹೊರವಲಯದ ಕೇಂದ್ರ ಕಾರಾಗೃಹದ ಬಳಿ ಸಂಭವಿಸಿದೆ. ಮೃತ ಯುವಕನನ್ನ ಪ್ರದೀಪ್ ಶಿಂಧೆ (19) ಎಂದು ಗುರುತಿಸಲಾಗಿದ್ದು, ಇನ್ನು ಬೈಕ್ ಮೇಲೆ ಆತನ ಜೊತೆ ತೆರಳಿದ್ದ ಇಬ್ಬರು ಸ್ನೇಹತರಿಗೆ ಗಂಭೀರವಾದ ಗಾಯಗಳಾಗಿದ್ದು, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಪ್ರಕಾರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಕೊಡಗು : ವಿದ್ಯುತ್ ಅಂತಿ ತುಳಿದು ಕಾಫಿ ಬೆಳೆಗಾರ ಸಾವನಪ್ಪಿರುವ ಘೋರ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲಗುಂದ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟಕ್ಕೆ ನೀರು ಹಾಯಿಸುವಾಗ ಹಾಲುಗುಂದ ಗ್ರಾಮದ ಕೆ ಜಿಮಾಂ(67) ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮುಂಬೈ : ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಹೌದು ಅದೇ ಮಹಾರಾಷ್ಟ್ರದ ಮುಂಬೈನ ಛತ್ರಪತಿ ಸಂಭಾಜಿ ಮಹಾರಾಜ್ ಕರಾವಳಿ ರಸ್ತೆಯಲ್ಲಿ ಭಾರತದ ಮೊದಲ ಸಂಗೀತ ರಸ್ತೆ ಎಂದು ಕರೆಯಲಾಗುತ್ತೆ. ಕರಾವಳಿ ರಸ್ತೆ ಸುರಂಗದಿಂದ ವಾಹನಗಳು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ನಾರಿಮನ್ ಪಾಯಿಂಟ್ ಮತ್ತು ವರ್ಲಿ ನಡುವಿನ ಉತ್ತರ ದಿಕ್ಕಿನ ಕ್ಯಾರೇಜ್‌ವೇಯಲ್ಲಿ 500 ಮೀಟರ್ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ, ಈ ಪ್ರದೇಶದ ಬಗ್ಗೆ ಕೆಲವು ಪ್ರಮುಖ ವಿವರಗಳನ್ನು ನೋಡೋಣ. ಈ ರಸ್ತೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಿದ ರಂಬಲ್ ಪಟ್ಟಿಗಳನ್ನು ಬಳಸಿಕೊಂಡು ವಿನ್ಯಾಸಗೊಳಿಸಲಾಗಿದೆ, ಇದರಲ್ಲಿ ಡಾಂಬರಿನಲ್ಲಿ ಲೆಕ್ಕಹಾಕಿದ ಅಂತರ ಮತ್ತು ಆಳದಲ್ಲಿ ಕೆತ್ತಲಾಗಿದೆ. ವಾಹನಗಳು ಈ ಚಡಿಗಳ ಮೇಲೆ ಸುಮಾರು 60 ರಿಂದ 80 ಕಿ.ಮೀ ವೇಗದಲ್ಲಿ ಚಲಿಸುವಾಗ, ಟೈರ್‌ಗಳು ಮತ್ತು ರಸ್ತೆ ಮೇಲ್ಮೈ ನಡುವಿನ ಪರಸ್ಪರ ಕ್ರಿಯೆಯು ಕಂಪನಗಳನ್ನು ಉಂಟುಮಾಡುತ್ತದೆ. ಈ ಕಂಪನಗಳು ಧ್ವನಿ ತರಂಗಗಳನ್ನು ಉತ್ಪಾದಿಸುತ್ತವೆ, ಇದು ಸ್ಲಮ್‌ಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ಎ.ಆರ್.…

Read More

ನವದೆಹಲಿ : ನಾವು ರಾಜಕಾರಣದಲ್ಲಿದ್ದೇವೆ. ರಾಜಕಾರಣ ಮಾಡಲೇಬೇಕು ನನಗೆ ಸದಾ ಯಶಸ್ಸು ಸಿಗುತ್ತೆ. ಸ್ವಲ್ಪ ಶ್ರಮ ಬೇಕಷ್ಟೆ. ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ಜಾರಿ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ನಮಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ ಗ್ಯಾರಂಟಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ತಿಳಿಸಿದರು. ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಏನನ್ನೂ ಮಾತನಾಡುವುದಿಲ್ಲ. ಶಾಸಕರುಂಟು ಹಾಗೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಹರಿದು ಬೀದಿ ನಾಯಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ನಾಯಿಯ ಮೇಲೆ ಕಾರು ಹರಿಸಿ ಕೊಂದ ಚಾಲಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಸಂಜಯ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ನಿನ್ನೆ ಮಧ್ಯಾಹ್ನ 1:00 ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಜೀವಿಕ ಗೌಡ ಎಂಬವರು ಕಾರು ಚಾಲಕನ ವಿರುದ್ಧ ದೂರು ನೀಡಿದ್ದರು ಅವರ ದೂರಿನ ಆಧಾರದ ಮೇಲೆ ಚಾಲಕನ ವಿರುದ್ಧ FIR ದಾಖಲಾಗಿದೆ.

Read More

ಉತ್ತರಪ್ರದೇಶ : ಕುಡಿದ ಮತ್ತಿನಲ್ಲಿ ಅಡ್ಡಾಡಿದ್ದಿ ಕಾರು ಓಡಿಸಿ 6 ಜನರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಪೊಲೀಸರು ಪ್ರಮುಖ ತಂಬಾಕು ಉದ್ಯಮಿಯ ಪುತ್ರ 26 ವರ್ಷದ ಶಿವಂ ಮಿಶ್ರಾ ಅವರನ್ನು ಬಂಧಿಸಿದ್ದರು. ಇದೀಗ ಕಾನ್ಪುರದ ACMM ಕೋರ್ಟ್ ನಿಂದ ಜಾಮೀನು ಮಂಜೂರು ಸಿಕ್ಕಿದೆ. ಉತ್ತರ ಪ್ರದೇಶದ ಖ್ಯಾತ ತಂಬಾಕು ಉದ್ಯಮಿ ಕೆಕೆ ಮಿಶ್ರಾ ಪುತ್ರ ಶಿವಂ ಮಿಶ್ರಾನನ್ನ ಕಾನ್ಪುರ ಪೋಲಿಸರು ಬೆಳಿಗ್ಗೆಯಷ್ಟೇ ಬಂಧಿಸಿದ್ದರು. ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಕಾರು ಓಡಿಸಿದ್ದ. ಈ ವೇಳೆ ಕಾರು ಡಿಕ್ಕಿಯಾಗಿ ಆರು ಪಾದಚಾರಿಗಳು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಪೊಲೀಸರು FIR ದಾಖಲಿಸಿಕೊಂಡಿದ್ದರು. ಇದೀಗ ಕಾನ್ಪುರ ಕೋರ್ಟ್ ಶಿವು ಮಿಶ್ರಾಗೆ ಜಾಮೀನು ಮಂಜೂರು ಮಾಡಿದೆ.

Read More