Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು 4 ವರ್ಷದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷ ಪ್ರಾಯದ ಮಗು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಸಂಭವಿಸಿದೆ.ಮೃತ ಬಾಲಕಿಯನ್ನು ನಿಶಿಕಾ (4) ಮೃತ ಬಾಲಕಿ. ರಾಜೇಂದ್ರ-ಲಾವಣ್ಯ ದಂಪತಿಯ ಮೊದಲ ಮಗಳಾಗಿದ್ದಳು. ಯುಗಾದಿ ಹಬ್ಬದ ಬಳಿಕ ತಾಯಿ ತನ್ನ ಮಕ್ಕಳೊಂದಿಗೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ, ತಾಯಿ ಕಂಕುಳಲ್ಲಿ ಕಿರಿಯ ಮಗುವನ್ನು ಹೊತ್ತುಕೊಂಡು, ದೊಡ್ಡ ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರು ಬರುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಬಾಲಕಿಯ ಮೇಲೆ ಹರಿದಿದೆ. ಅಪಘಾತದ ತೀವ್ರತೆಯಿಂದ ಬಾಲಕಿ ಸ್ಥಳದಲ್ಲೇ ಹೆತ್ತ ತಾಯಿಯ ಎದುರೇ ಪ್ರಾಣ ಕಳೆದುಕೊಂಡಿದ್ದಾಳೆ. ಸ್ಥಳೀಯರು ತಕ್ಷಣ ಸಹಾಯಕ್ಕೆ ಧಾವಿಸಿದರೂ, ಬಾಲಕಿಯನ್ನು ರಕ್ಷಿಸಲಾಗಲಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬ ವಿಷಯದ ಮೇಲೆ ತನಿಖೆ ಮುಂದುವರೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತದಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಓಲ್ಡ್ ಮದ್ರಾಸ್ ರಸ್ತೆಯ ಮೇಳಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಲಾರಿಗೆ ಹಿಂದಿನಿಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋದಲ್ಲಿ ಇದ್ದಂತಹ ಮೂವರ ಸ್ಥಿತಿ ಇದೀಗ ಗಂಭೀರವಾಗಿದೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಉಂಟಾದ ಗೊಂದಲ ಇಂದು ಮತ್ತಷ್ಟು ತೀವ್ರಗೊಂಡಿದ್ದು, ಸಭೆಯಲ್ಲೇ ರಾಜೀನಾಮೆ ಬೆದರಿಕೆ ವ್ಯಕ್ತವಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹೌದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಚಿವ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿ ಅಚ್ಚರಿ ಮೂಡಿಸಿದರು.t ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದ ಚರ್ಚೆಯ ವೇಳೆ, ಆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದರು. ಕ್ಷೇತ್ರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವುದರಿಂದ ಸಮುದಾಯದ ಬೇಡಿಕೆಗೆ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುರ್ಜೆವಾಲಾ, ಕಾಂಗ್ರೆಸ್ ಪಕ್ಷವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿ, ಯೋಗ್ಯ ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು. ಈ ಮೂಲಕ ಜಮೀರ್ ಅವರ ರಾಜೀನಾಮೆ ಬೆದರಿಕೆಯನ್ನು ತಳ್ಳಿಹಾಕಿದಂತಾಯಿತು.ಇದೇ…
ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ದಾವಣಗೆರೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಸಹಿತ ಪ್ರಮುಖ ಅಲ್ಪಸಂಖ್ಯಾತ ನಾಯಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.
ನವದೆಹಲಿ : ದೇಶದಲ್ಲಿ ಆಹಾರೋದ್ಯಮಕ್ಕೆ ದೊಡ್ಡಮಟ್ಟದ ಪೆಟ್ಟು ನೀಡಿರುವುದಲ್ಲದೆ, ಜನಸಾಮಾನ್ಯರ ಅಡುಗೆ ಮನೆವರೆಗೂ ವ್ಯಾಪಿಸಿರುವ ಮಧ್ಯಪ್ರಾಚ್ಯ ಯುದ್ಧದ ಅಡ್ಡಪರಿಣಾಮ ಸ್ವಲ್ಪ ಮಟ್ಟಿಗೆ ನಿವಾರಣೆಯಾಗುವ ಲಕ್ಷಣಗಳು ಗೋಚರಿಸಿವೆ. ಇಂಧನ ಪೂರೈಕೆಯಲ್ಲಿ ಉಂಟಾಗಿದ್ದ ವ್ಯತ್ಯಯದಿಂದ ಕಂಗಾಲಾಗಿರುವ ಕಮರ್ಷಿಯಲ್ ಎಲ್‌ಪಿಜಿ ಬಳಕೆದಾರರಿಗೆ ಕೇಂದ್ರ ಸರ್ಕಾರ ಶನಿವಾರ ತುಸು ನಿರಾಳತೆ ನೀಡಿದೆ. ದೇಶೀಯ ಉತ್ಪಾದನೆ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಬಳಕೆಯ ಹಂಚಿಕೆಯನ್ನು ಕೇಂದ್ರ ಸರ್ಕಾರ ಶೇ. 20ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಒಟ್ಟು ಹಂಚಿಕೆ ಪ್ರಮಾಣ ಇದೀಗ ಶೇ. 50ಕ್ಕೆ ತಲುಪಿದೆ. ಹೀಗಾಗಿ ಈಗಾಗಲೇ ಬಂದ್ ಆಗಿರುವ ಹೋಟೆಲ್‌ಗಳು, ಕೈಗಾರಿಕೆ ಘಟಕಗಳಿಗೆ ತುಸು ನಿರಾಳತೆ ಸಿಗಲಿದ್ದು, ಹಂತ ಹಂತವಾಗಿ ಇವು ಪುನರಾರಂಭಗೊಳ್ಳುವ ನಿರೀಕ್ಷೆ ಇದೆ. ಇರಾನ್ ವಿರುದ್ಧದ ಅಮೆರಿಕ- ಇಸ್ರೇಲ್ ಯುದ್ಧ ಕೊಲ್ಲಿ ರಾಷ್ಟ್ರಗಳಿಗೂ ವ್ಯಾಪಿಸಿದ್ದರಿಂದ ಭಾರತಕ್ಕೆ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾಗಿತ್ತು. ಹೀಗಾಗಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಗೆ ಮೊದಲ ಆದ್ಯತೆ ನೀಡುವ ಸಲುವಾಗಿ ಹೋಟೆಲ್ ಗಳಂತಹ ವಾಣಿಜ್ಯ…
ಬೆಂಗಳೂರು : ರಾಜ್ಯದ ಎಲ್ಲಾ ಶಿಕ್ಷಕರನ್ನು ಜನಗಣತಿಗೆ ನಿಯೋಜಿ ಸಲಾಗುತ್ತದೆ. ಯಾರಿಗೂ ವಿನಾಯ್ತಿ ನೀಡಿಲ್ಲ ಎಂದು ಜಿಬಿಎ ಸೇರಿ ರಾಜ್ಯದ ಎಲ್ಲಾ ಪಾಲಿಕೆ ಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಇಲಾಖೆ ತಿಳಿಸಿದೆ. ಕಂದಾಯ ಮುಂದಿನ ತಿಂಗಳಿನಿಂದ ಆರಂಭವಾಗಲಿ ರುವ ಜನಗಣತಿ ಕಾರ್ಯಕ್ಕೆ 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯ್ತಿ ನೀಡಲಾಗುತ್ತಿದೆ ಎಂದು ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳಿಗೆ ಸ್ಪಷ್ಟನೆ ನೀಡಲಾಗಿದೆ. ಭಾರತ ಚುನಾವಣಾ ಆಯೋಗ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಮತ್ತು ಜನಗಣತಿ ಕಾರ್ಯಕ್ಕೆ 50 ವರ್ಷ ದಾಟಿದ ಮಹಿಳಾ ಶಾಲಾ ಶಿಕ್ಷಕರನ್ನು ಒಳಗೊಂಡಂತೆ ಎಲ್ಲಾಶಿಕ್ಷಕ ರನ್ನು ಅಗತ್ಯಕ್ಕೆ ಅನುಗುಣವಾಗಿ ನಿಯೋ ಜಿಸಿಕೊಳ್ಳಬೇಕು ಎಂದು ಸೂಚಿಸಿದೆ. ಜಿಬಿಎ, ಜಿಲ್ಲೆಗಳ ವ್ಯಾಪ್ತಿ ಯಲ್ಲಿ ಜನಗಣತಿ ಕಾರ್ಯಕ್ಕೆ ಹಾಜರಾ ಗುವಂತೆ ಈಗಾ ಗಲೇ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸಂದೇಶ ಗಳನ್ನು ರವಾನಿಸಲಾಗಿದೆ. ಬೆಂಗಳೂರಿನಲ್ಲಿ ಮಾಸ್ಟರ್‌ಟೈನರ್‌ಗಳಿಗೆ ತರಬೇತಿ ಕೂಡ ಆರಂಭಿಸಲಾಗಿದೆ.
ಬೆಂಗಳೂರು : ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಬೆಳಗಿನಜಾವ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಅಪಾಯಕಾರಿ ಚಾಲನೆ ಮಾಡಿದ್ದು, ಈ ಸಂಬಂಧ ಅಪರಿಚಿತ ಕಾರು ಚಾಲಕನ ವಿರುದ್ಧ ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗಿನಜಾವ 2 ಗಂಟೆ ಸುಮಾರಿಗೆ ಲಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದಿತ್ತು. ಈ ವೇಳೆ ಕಾರು ಡ್ರಿಫ್ಟಿಂಗ್ ಮಾಡಿದೆ. ಇದನ್ನು ಕಂಡು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮಾಹಿತಿ ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಪರಿಶೀಲನೆ ವೇಳೆ KA-05 NR 0009 ನಂಬರ್ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. https://twitter.com/sirajnoorani/status/2035277053017350633?t=D54v3iU_Uzp3UFpX8vLPlA&s=19
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ತೋರಿದ ಬೆನ್ನಲ್ಲೇ ಆರ್ಸಿಬಿ ಫ್ರಾಂಚೈಸಿ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ. ಮಾ.28ರಂದು ಆರ್ಸಿಬಿ ಹಾಗೂ ಎಸ್ಆರ್ಹೆಚ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಇದೇ ವೇಳೆ ಕ್ರೀಡಾಂಗಣದ ಗರಿಷ್ಠ ಆಸನದ ಸಾಮರ್ಥ್ಯ 35 ಸಾವಿರವಿದ್ದರೂ 28 ಸಾವಿರ ಟಿಕೆಟ್ಗಳನ್ನು ಮಾತ್ರ ಮಾರಾಟಕ್ಕೆ ಸೀಮಿತಗೊಳಿಸಲಾಗಿದೆ. ಟಿಕೆಟ್ಗಳು ಪಂದ್ಯದ ಮೂರು ದಿನಗಳ ಮುಂಚೆ ಮಾತ್ರ ಲಭ್ಯವಿ ಇರಲಿವೆ. ಜನದಟ್ಟಣೆ ನಿಯಂತ್ರಿಸಲು ಮೊದಲ ಬಾರಿಗೆ ಕೃತಕ ಬುದ್ದಿ ಮತ್ತೆ (AI) ಹಾಗೂ ಡಿಜಿಟಲ್ ಕ್ಯಾಮರಾಗಳು ಬಳಕೆಯಾಗುತ್ತಿವೆ. ಕ್ರೀಡಾಂಗಣಕ್ಕೆ ಆಗಮಿಸುವ ಕ್ರೀಡಾಭಿಮಾನಿಗಳ ನೂಕುನುಗ್ಗಲು ನಿಯಂತ್ರಿಸಲು ಎಐ ಬಳಸಲಾಗುತ್ತಿದೆ. ಸ್ಟೇಡಿಯಂನ ಯಾವುದೇ ಪ್ರವೇಶದ್ವಾರಗಳಲ್ಲಿ ಜನದಟ್ಟಣೆ ಕಂಡುಬಂದರೆ ಹೋಲ್ಡಿಂಗ್ ಪ್ರದೇಶಗಳನ್ನು ತಕ್ಷಣ ಮುಚ್ಚಿ ಜನರನ್ನು ಸುರಕ್ಷಿತವಾಗಿ ಆಸನಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಆರ್ಸಿಬಿ ಪಂದ್ಯಕ್ಕೆ ಟಿಕೆಟ್ ಖರೀದಿ ಕುರಿತಂತೆ ಶೀಘ್ರದಲ್ಲಿ ಮಾರಾಟ ದಿನಾಂಕ ಘೋಷಿಸಲಿದೆ. ಕಾಲ್ತುಳಿತದ ಬಳಿಕ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಅಭಿಮಾನಿಗಳ…
ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಜಟಾಪಟಿ ನಡೆಯುತ್ತಿದ್ದು, ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಇಂದು ಸಂಜೆ ಅಥವಾ ನಾಳೆ ಟಿಕೆಟ್ ಘೋಷಣೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆಯೊಳಗೆ ಟಿಕೆಟ್ ಘೋಷಣೆ ಆಗಲಿದೆ. ಈ ಕುರಿತಾಗಿ ಪ್ರಮುಖರ ಸಭೆಯಲ್ಲಿ ವ್ಯಾಪಕವಾಗಿ ಚರ್ಚೆ ಮಾಡಲಾಗಿದೆ. ಯಾವುದೇ ಒಬ್ಬ ಕಾರ್ಯಕರ್ತರ ಅಪಸ್ವರ ಇದ್ರೂ ಕೂಡ ಪರಿಗಣನೆಗೆ ತೆಗೆದುಕೊಂಡಿದ್ದೇವೆ ಎರಡು ಕ್ಷೇತ್ರಗಳ ಬಗ್ಗೆ ಶುಕ್ರವಾರ ತಡ ತಡರಾತ್ರಿಯವರೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬಹುತೇಕ ಟಿಕೆಟ್ ಘೋಷಣೆ ಸಂಜೆ ಅಥವಾ ಭಾನುವಾರ ಬೆಳಗ್ಗೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಇನ್ನೂ ಭಿಫಾರಂ ನೀಡಲಾಗಿಲ್ಲ. ಪಕ್ಷದಿಂದ ಟಿಕೆಟ್ ಘೋಷಣೆಗೂ ಮುನ್ನವೇ…
ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ವಿರೋಧಿಸಿ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿನ ಅತ್ತಿಬೆಲೆಯಲ್ಲಿ ಕೇಂದ್ರ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಹೆದ್ದಾರಿ ತಡೆ ಮಾಡಿದ್ದು ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದೆ. ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂಧಗೆ ಕರೆ ನೀಡುವ ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.














