Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ನಡೆದಿದ್ದು, ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ಆಗಬೇಕಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ತಾಯಿ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಮಂಚೇನಹಳ್ಳಿ ತಾಲೂಕಿನ ಸವಿತಾ ಎಂದು ಗುರುತಿಸಲಾಗಿದೆ. ಅಲಕಾಪುರ ಬಳಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.ಅಪಘಾತದಲ್ಲಿ ತಾಯಿ ಸವಿತಾ ಸ್ಥಳದಲ್ಲೇ ಮೃತಪಟ್ಟಿದ್ದು, ಮಗ ಕುಶಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಕುಶಾಲ್​ಗೆ ವಾರದ ಹಿಂದೆಯಷ್ಟೇ ಬಿಶ್ಚಿತಾರ್ಥವಾಗಿದ್ದು, ಡಿಸೆಂಬರ್​ನಲ್ಲಿ ಮದುವೆ ಮಾಡಲು ದಿನ ಫಿಕ್ಸ್​ ಮಾಡಲಾಗಿತ್ತು. ಇವರು ಗೌರಿಬಿದನೂರಿನ ಪಾಂಡುರಂಗ ಜ್ಯುವೆಲರಿ ಅಂಗಡಿ ಮಾಲೀಕರಾಗಿದ್ದು, ಅಂಗಡಿಗೆ ಬೇಕಾಗಿದ್ದ ವಸ್ತುಗಳ ಖರೀದಿಗೆ ಬೆಂಗಳೂರಿಗೆ ಹೋಗಿದ್ದರು. ನಂತರ ವಾಪಸ್ ಬರುವ ವೇಳೆ ಘಟನೆ ನಡೆದಿದೆ.ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದರ್ಶನ್ ವಿರುದ್ಧ ಜೈಲಿನಲ್ಲಿ ದಾಖಲಾದ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವುದರಿಂದ ಇಂದು ದರ್ಶನ್ ಸ್ಥಳಾಂತರಕ್ಕೆ ವಿಳಂಬವಾಗಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ನಾಳೆ ಶಿಫ್ಟ್ ಅಗಲಿದ್ದಾರೆ.ನಾಳೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ ಆಗಲಿದ್ದಾರೆ. ದರ್ಶನ್ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂದು ದೂರುದಾರ ಸೋಮಶೇಖರ್ ವಿಚಾರಣೆ ನಡೆಯಲಿದೆ.ಪರಪ್ಪನ ಅಗ್ರಹಾರ ಜೈಲಿನ ಉಪ ಮಹಾ ನಿರೀಕ್ಷಕ ದರ್ಶನ್ ಕುಳಿತಿದ್ದ ಜಾಗದಲ್ಲಿ ದೂರುದಾರ ಮತ್ತು ಆರೋಪಿ ದರ್ಶನ್ ಸಮಕ್ಷಮ ಮಹಜರು ಪ್ರಕ್ರಿಯೆ ನಡೆಯಲಿದೆ. ಮಹಜರು ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Read More

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ. ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು. ಖರ್ಗೆ ಅವರ ಕುಟುಂಬ ಕೆಐಡಿಬಿಯಿಂದ ಸಿಎ ಸೈಟ್ ಪಡೆದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಇದೀಗ ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್​​ನಲ್ಲಿ ನಡೆದಿದೆ. ಹೌದು ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿಯನ್ನು ರಾಜ್ದುಲಾರಿ ಸಿನ್ಹಾ(76) ಎಂದು ಗುರುತಿಸಲಾಗಿದ್ದು, ವಾಕಿಂಗ್​ ಮಾಡುತ್ತಿದ್ದಾಗ, ರಾಜ್ದುಲಾರಿ ಸಿನ್ಹಾ ಮೇಲೆ ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ಮಾಡಿದ್ದವು. ಇದರಿಂದ ಗಂಭೀರ ಗಾಯಗೊಂಡಿದ್ದ ರಾಜ್ದುಲಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್​​ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರಾಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಬೆಂಗಳೂರಿನ ಸಿಟಿ ಸಿವಿಲ್ ಹಾಗೂ ಸೇಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೇಸ್ ಡೈರಿ ಹಾಗೂ ತನಿಖಾಧಿಕಾರಿಯ ವರದಿಯನ್ನು ನ್ಯಾಯಾಧೀಶರಿಗೆ ಸಲ್ಲಿಸಲಾಗಿದ್ದು, ಮುಚ್ಚಿದ ಲಕೋಟೆಯಲ್ಲಿ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವರದಿ ಸಲ್ಲಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಪವಿತ್ರ ಗೌಡ ಅಕೌಂಟಿಗೆ ಅಶ್ಲೀಲವಾದಂತಹ ಮೆಸೇಜ್ ಬಂದಿದೆ. ಕೆಲ ತಿಂಗಳು ಬಳಿಕ ಪವಿತ್ರ ಗೌಡ ಪವನ್ ನಂಬರನ್ನು ರೇಣುಕಾ ಸ್ವಾಮಿಗೆ ನೀಡಿದ್ದಾಳೆ. ಪವಿತ್ರ ಗೌಡ ಎಂದುಕೊಂಡು ರೇಣುಕಾ ಸ್ವಾಮಿ ಈ ವೇಳೆ ಅವನಿಗೆ ಮೆಸೇಜ್ ಮಾಡಿದ್ದಾನೆ. ಪವನ್ ಮೊಬೈಲ್ ನಲ್ಲಿ ರೇಣುಕಾ ಸ್ವಾಮಿ ಜೊತೆ ಪವಿತ್ರ ಗೌಡ ಮಾತನಾಡಿದ್ದಾಳೆ. ರೇಣುಕಾ ಸ್ವಾಮಿಯಿಂದ…

Read More

ಬೆಂಗಳೂರು : ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ಕೋರಿ ಬಿಜೆಪಿಯ ಸಂಸದ ಬಸವರಾಜ ಬೊಮ್ಮಾಯಿ ಅವರು ಇತ್ತೀಚಿಗೆ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಾಗಿ ಕಾಂಗ್ರೆಸ್ ಬಸವರಾಜ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದು, ಸ್ವೀಟ್ ನಲ್ಲಿ ದಮ್ಮು ತಾಕತ್ತು ಇರುವ ಬಿಜೆಪಿ ನಾಯಕರು ತಂದೆಯಾಜ್ಞೆ ತರುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದೆ. ಈ ಕುರಿತಂತೆ ಕಾಂಗ್ರೆಸ್ ತನ್ನ X ಖಾತೆಯಲ್ಲಿ ಬಸವರಾಜ್ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದು, ದಮ್ಮು ತಾಕತ್ತಿನ @BJP4Karnataka ನಾಯಕರು ಕ್ಯೂ ನಿಂತು ತಡೆಯಾಜ್ಞೆ ತರುತ್ತಿರುವುದೇಕೆ? ಮಾಜಿ ಮುಖ್ಯಮಂತ್ರಿ @BSBommai ಅವರೂ ಕೂಡ ತಮಗೆ ಸಂಬಂಧಿಸಿದ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತರಲು ಕೋರ್ಟ್ ಮೆಟ್ಟಿಲೇರಿದ ಸುದ್ದಿ ಬಂದಿದೆ, ಬೊಮ್ಮಾಯಿಯವರಿಗೆ ಕಾಡುತ್ತಿರುವ ಭೀತಿಯಾದರೂ ಯಾವುದು? ಈ ಭೀತಿಗೆ ಕಾರಣವಾಗುವಂತಹ ಯಾವ ಘನಂದಾರಿ ಕೆಲಸ ಮಾಡಿದ್ದಾರೆ? ಕೆ. ಸುಧಾಕರ್ ಅವರು “ಯಾರೂ ಏಕಪತ್ನಿ ವ್ರತಸ್ಥರಲ್ಲ“ ಎಂದಿದ್ದಕ್ಕೂ ಈ ತಡೆಯಾಜ್ಞೆಗೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿದೆ. https://twitter.com/INCKarnataka/status/1828740123703337006?t=gukm9gltkd11U2V5nWD5CA&s=19

Read More

ದಕ್ಷಿಣಕನ್ನಡ : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಬಂಧಿತ ಆರೋಪಿಗಳನ್ನ ಭರತ್ ಅಲಿಯಾಸ್ ರಕ್ಷಿತ್, ಹಾಗೂ ದಿನೇಶ್ ಕುರ್ತಾ ಎಂದು ಹೇಳಲಾಗುತ್ತಿದೆ. ಸಿಸಿ ಕ್ಯಾಮೆರಾ ದೃಶ್ಯದ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ. ರಾಜ್ಯಪಾಲರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೇಸೆದಿರುವಾಗಿ ಇದೀಗ ತಪ್ಪು ಒಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ಭರತ್ ಮತ್ತು ದಿನೇಶ್ ತಪ್ಪನ್ನು ಒಪ್ಪಿಕೊಂಡಿದ್ದಾರೆ.ಭರತ್ ವಿರುದ್ಧ ಈ ಹಿಂದೆ ಹಲ್ಲೆ ಆರೋಪದ ಅಡಿ ಇದುವರೆಗೂ 3 ಪ್ರಕರಣಗಳು ದಾಖಲಾಗಿವೆ. ಭರತ್ ಬಂಟ್ವಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಪುತ್ರನಾಗಿದ್ದು, ಇನ್ನೂ ದಿನೇಶ್ ಕನ್ಯಾನದಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ಬಂಟ್ವಾಳ ತಾಲೂಕಿನ…

Read More

ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್ಐಟಿ ಅಧಿಕಾರಿಗಳು ಎಚ್ಡಿ ರೇವಣ್ಣ ವಿರುದ್ಧ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಐ ಟಿ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಇತ್ತೀಚಿಗೆ ಯುವ ಜನತೆ ಆನ್ಲೈನ್ ಗೇಮ್ ಎಂಬ ಮಾಯಾ ಲೋಕಕ್ಕೆ ಮರುಳಾಗಿ ಮಾಡಬಾರದ ಕೆಲಸವನ್ನು ಮಾಡಿ, ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಆನ್ಲೈನ್ ಗೇಮಿನ ಹುಚ್ಚಾಟಕ್ಕೆ ಮನೆಯಿಂದ ಒಂದು ಲಕ್ಷ ರೂಪಾಯಿ ತೆಗೆದುಕೊಂಡು ಯುವಕನೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಟಿ.ದಾಸರಹಳ್ಳಿಯಲ್ಲಿ ನಿವಾಸಿಗಳಾದ ಗೌರಮ್ಮ ಮತ್ತು ನಾಗರಾಜ್ ದಂಪತಿಗಳ ಪುತ್ರ ವರುಣ್​ (18) ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದನು. ಈತನಿಗೆ ವಿಪರೀತ ಆನ್ಲೈನ್ ಗೇಮ್ ಆಡುತ್ತಿದ್ದನು. ಒಂದು ತಿಂಗಳ ಹಿಂದೆ ಆನ್ಲೈನ್​ ಗೇಮ್​ನಲ್ಲಿ 20 ಸಾವಿರ ಕಳೆದಿದ್ದಲ್ಲದೆ, ಮನೆಯಲ್ಲಿದ್ದ ಒಂದು ಲಕ್ಷ ರೂಪಾಯಿ ನಗದು ಸಮೇತ ನಾಪತ್ತೆಯಾಗಿದ್ದಾನೆ. ತಿಂಗಳಿಂದ ಮನೆಗೆ ಬಾರದ ಮಗನಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ವರುಣ್ ಬೆಂಗಳೂರಿನ​ ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ. ವರುಣ್ ಆನ್ಲೈನ್ ಗೇಮ್​​ನಲ್ಲಿ 20 ಸಾವಿರ ರೂ. ಕಳೆದು, ಮನೆಯಿಂದ ಪರಾರಿಯಾಗಿದ್ದಾನೆ. ಮಗನನ್ನು ಹುಡುಕಿಕೊಡುವಂತೆ ಪೋಷಕರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಳ್ಳಾರಿ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತರು ಹಾಗೂ ಸಂಬಂಧಿಕರ ಮನೆ ಕಚೇರಿ ಸೇರಿದಂತೆ ವಿವಿದೇಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಆಪ್ತ ನಾಗೇಂದ್ರ ಸಂಬಂಧಿ ನಿವಾಸ ಸೇರಿದಂತೆ, ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಚಾರ್ಜ್​​ ಶೀಟ್ ಸಲ್ಲಿಕೆಗೂ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ…

Read More