Author: kannadanewsnow05

ಬೆಂಗಳೂರು : ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ರ್‍ಯಾಲಿ ಮೂಲಕ MES ಹಾಗೂ ಮಹಾರಾಷ್ಟ್ರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಒಂದು ಬಂದ್ ಬಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿದೆ. ವಿಮಾನ ನಿಲ್ದಾಣಕ್ಕೆ ಕಡಿಮೆ ಸಂಖ್ಯೆಯಲ್ಲಿ ಟ್ಯಾಕ್ಸಿಗಳು ಏರ್ ಪೋರ್ಟ್ ಗೆ ಸಂಚರಿಸುತ್ತಿವೆ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನತ್ತ ಹೆಚ್ಚಿನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರಿಲ್ಲದೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೂರ್ತಿ ಖಾಲಿ ಖಾಲಿ ಆಗಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇನ್ನು ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಮೆಟ್ರೋ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರಿಗೆ ತಡೆ ನೀಡಲಾಯಿತು. ರಾಜಾಜಿನಗರ ಮತ್ತು ಬಸವೇಶ್ವರ ನಗರದಲ್ಲಿ ಮೆಟ್ರೋ ಮುತ್ತಿಗೆ ಹಾಕಾಲು ಸಂಘಟನೆ ಯತ್ನಿಸಿತ್ತು. ಈ ವೇಳೆ ಪೊಲೀಸರು ಅವರನ್ನು ತಡೆದರು. ಪೋಲೀಸರ ತಡೆಗೆ ಹೋರಾಟಗಾರರು ರೋಷಾವೇಶ ತಾಳಿದ್ದಾರೆ. ಈ ವೇಳೆ ಹೋರಾಟಗಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ ತಕ್ಷಣ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಚಿಕ್ಕಮಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಕೆಎಸ್ಆರ್ಟಿಸಿ ನೌಕರರು ಬೆಂಬಲ ನೀಡದ ಹಿನ್ನೆಲೆಯಲ್ಲಿ ಚಾಲಕರನ್ನು ಹೋರಾಟಗಾರರು ಶಾಲು ಹೊಂದಿಸಿ ಸನ್ಮಾನಿಸಿದ ಘಟನೆ ನಡೆಯಿತು. ಕರ್ನಾಟಕ ಬಂದ್ ಗೆ ಕೆಎಸ್ಆರ್ಟಿಸಿ…

Read More

ದಾವಣಗೆರೆ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನೆಯ ಬಿಸಿ ಕಾವೇರಿದೆ. ಬೆಂಗಳೂರು, ಮೈಸೂರು, ಚಿಕ್ಕಮಂಗಳೂರು, ಮಂಡ್ಯ ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ ಇನ್ನು ದಾವಣಗೆರೆಯಲ್ಲಿ ನಡು ರಸ್ತೆಯಲ್ಲಿಯೇ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಯಲ್ಲಮ್ಮ ನಗರ ಬಳಿ ಟೈರ್​ಗೆ ಬೆಂಕಿ ಇಟ್ಟಿದ್ದಾರೆ. ಪೊಲೀಸರು ಎಷ್ಟೇ ಕಟ್ಟೆಚ್ಚರ ವಹಿಸಿದರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಬಲವಂತದ ಬಂಧಗೆ ಯಾವುದೇ ಮೊಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಎಸ್ ಪಿ ಉಮಾ ಪ್ರಶಾಂತ್ ಅವರು ತಿಳಿಸಿದರು.03-04 ಸಂಘಟನೆಗಳು ಈ ಬಂದ್​ಗೆ ದಾವಣಗೆರೆಯಲ್ಲಿ ಬೆಂಬಲ ಸೂಚಿಸಿವೆ. ದಾವಣಗೆರೆ ನಗರ ತಾಲೂಕು ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಲಾಗಿದೆ.ಬೆಳಗ್ಗೆ ಐದು ಗಂಟೆಯಿಂದಲೇ ನಮ್ಮ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದ್ದು ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಕೇರಳ ಮೂಲದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಈ ವೇಳೆ ಕಾಲೇಜಿನ 4ನೇ ಮಹಡಿಯಿಂದ ಬಿದ್ದು ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕೂಡ ಲಕ್ಷ್ಮಿ ಬದುಕುಳಿಯಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ರಮೇಶ್ ಜಾರಕಿಹೊಳಿ, ಪ್ರಜ್ಬಲ್ ಹೇಗೆ ಟಾರ್ಗೆಟ್ ಮಾಡಿದ್ದಾರೋ ಹಾಗೆ ನನ್ನನ್ನ ಟಾರ್ಗೆಟ್‌ ಮಾಡಿದ್ದಾರೆ. ಇದರ ಹಿಂದೆ ಯಾರಿದ್ದಾರೋ ಗೊತ್ತಿಲ್ಲ ಎಂದರಲ್ಲದೇ ನಾನು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಹಾಗಾಗಿ ನನಗೆ ಕೆಟ್ಟದಾಗಲ್ಲ. ಹಾಗಂತ ಸಾರ್ವಜನಿಕ ಜೀವನದಲ್ಲಿ ತೇಜೋವಾಧೆ ಮಾಡೋದು ಸರಿಯಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಹನಿಟ್ರ್ಯಾಪ್ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿದ ಅವರು, ಹನಿ ಟ್ರಾಪ್ ವಿಚಾರದಲ್ಲಿ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಇವತ್ತು ಸಿಎಂ ಭೇಟಿ ಮಾಡೋದಿಲ್ಲ. ನಾಲ್ಕೈದು ದಿನದ ನಂತರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇನೆ. ಗೃಹ ಸಚಿವರಿಗೆ ದೂರು ಕೊಡುತ್ತೇನೆ. ದೇವರು ನಿನಗೆ ಹೇಗೆ ಬುದ್ದಿ ಕೊಡುತ್ತೆ ಹಾಗೋ ಮಾಡು ಎಂದು ಸಿಎಂ ಹೇಳಿದ್ದಾರೆ. ಹನಿ ಟ್ರಾಪ್ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದ್ದು ನಿಜ. ಯಾರು ಯಾಕೆ ನನ್ನ ಟಾರ್ಗೆಟ್ ಮಾಡಿದ್ರು ಅಂತಾ ಗೊತ್ತಿಲ್ಲ ಎಂದರು. ಹನಿ ಟ್ರಾಪ್ ವಿಚಾರದಲ್ಲಿ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಹನಿ ಟ್ರ್ಯಾಪ್‌ ಮಾಡಲು ಬಂದವರಿಗೆ ಕಪಾಳಕ್ಕೆ…

Read More

ಬೆಂಗಳೂರು : FIR ದಾಖಲಿಸುವ ಮುನ್ನವೇ ದಾಖಲೆಗಳನ್ನು ಸಂಗ್ರಹ ಮಾಡುವುದು ಕಾಯ್ದೆಯ ಉಲ್ಲಂಘನೆ ಆಗುತ್ತದೆ. ಎಫ್ಐಆರ್ ದಾಖಲಿಸದೆ ಮತ್ತು ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ನಡೆಸಿರುವ ಎಲ್ಲಾ ಕಾರ್ಯಗಳೂ ಅನೂರ್ಜಿತ ಎಂದು ಹೈಕೋರ್ಟ್ ತಿಳಿಸಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿ ಕಚೇರಿಯ 2015-16ನೇ ಸಾಲಿನಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್.ಲಕ್ಷ್ಮೀ ಸೇರಿದಂತೆ ಇತರೆ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಪೊಲೀಸರು ದಾಖಲೆಗಳ ಸಂಗ್ರಹಣೆ ಮಾಡುವುದು ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತನಿಖಾಧಿಕಾರಿ ವಿಚಾರಣೆ/ ತನಿಖೆ ನಡೆಸುವುದನ್ನು ಕಾಯ್ದೆ ಸೆಕ್ಷನ್ 17(ಎ) ನ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ತಿಳಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1983ರ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ಅನಾಮಧೇಯ ದೂರು ಆಧರಿಸಿ ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸುವ ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಮುನ್ನ…

Read More

ಚಿಕ್ಕಬಳ್ಳಾಪುರ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ಇನ್ನು ಹಲವು ಜಿಲ್ಲೆಗಳಲ್ಲಿ ನೀರು ಪ್ರತಿಕ್ರಿಯೆ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ. ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೆ ಶಾಲೆ ಮತ್ತು ಕಾಲೇಜಿಗೆ ತೆರಳಿ. ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಮಾಹಿತಿ ನೀಡಿದರು

Read More

ಬೆಂಗಳೂರು : ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಈ ಒಂದು ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಶಿಲ್ಪಾ(35) ಅನುಮಾನಾಸ್ಸಾದವಾಗಿ ಮೃತಪಟ್ಟಿದ್ದಾರೆ.ಪತಿಯ ಮನೆಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ಎಂ ರೇವಣ್ಣ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜು ಅವರನ್ನು ಇದೀಗ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಹಣಕಾಸು ಸೇವೆಗಳ ಕ್ಷೇತ್ರದ ಮುಖ್ಯಸ್ಥರು ಆಗಿರುವಂತ ಟಿ.ಸುರೇಶ್ ಪಕ್ಷದಿಂದ ಅಮಾನತುಗೊಳಿಸಿ ಅದೇಶಿಸಿದ್ದಾರೆ. ಅಲ್ಲದೆ ಹೆಚ್ ಎಂ ರೇವಣ್ಣ ಅವರ ವಿರುದ್ಧ ಆರೋಪ ಮಾಡಿರುವುದರ ಕುರಿತು ಸ್ಪಷ್ಟ ವಿವರ ನೀಡುವವರಿಗೇ ಅಮಾನತು ಮಾಡಲಾಗಿದ್ದು, ಈ ಕುರಿತು ನಂದಿನಿ ನಾಗರಾಜ್ ಅವರಿಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ನೋಟಿಸ್ ನಲ್ಲಿ ಉಲ್ಲೆಖಿಸಿದ್ದಾರೆ. ಕೈ ಕಾರ್ಯಕರ್ತೆಯ ಆರೋಪವೇನು? ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅಧ್ಯಕ್ಷರಾದಂತಹ ರವಿಚಂದ್ರನ್ ಅವರು ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರ್ಚ್ 17 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ನಂದಿನಿ ನಾಗರಾಜ್ ಕೆಕೆ ಗೆಸ್ಟ್ ಹೌಸ್ ನಲ್ಲಿ ಇರುವಾಗ ಈ ಘಟನೆ ಆಗಿದೆ. ಇನ್ನು ಈ ಸಂಬಂಧ…

Read More

ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಚಿಕ್ಕಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಇನ್ನು ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಗಳನ್ನು ತಡೆದು ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಿಕ್ಕಮಕಿ ನಡೆಯಿತು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ನಡೆಯಿತು. ಇನ್ನು ಚಿಕ್ಕಮಗಳೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದರು. ಕನ್ನಡಿಗರ ಮೇಲೆ ಹಲ್ಲೆಯಾದರೂ ಕೂಡ ಈ ಸರ್ಕಾರ ಮೌನವಾಗಿದೆ. ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕು ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಮುಂದೆ ಉತ್ತರ…

Read More