Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಆಗಿರುವಂತಹ ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಇಂತಹ ಒಂದು ಬೆಳವಣಿಗೆ ಜೈಲಿನಲ್ಲಿ ನಡೆಯುತ್ತದೆ ಎಂದು ತಿಳಿದು ಸಹಜವಾಗಿ ನಾನು ಶಾಕ್ ಆದೆ.ಹಾಗಾಗಿ ಈ ಒಂದು ಪ್ರಕರಣ ಹೈಕೋರ್ಟಿನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ಈ ರೀತಿ ನಡಿತಾ ಇರೋದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೋರ್ಟ್ನಲ್ಲಿ ನಮಗೆ ಮನೆ ಊಟ ಬೇಕು, ಹಾಸಿಗೆ ಬೇಕು ಅಂತ ಕೂಡ ದರ್ಶನ್ ಅವರು ಅರ್ಜಿ ಸಲ್ಲಿಸಿದ್ದರು. ಇಲ್ಲ ಕೊಡಕ್ಕಾಗಲ್ಲ ಅಂತ ಜೈಲ ಅಧಿಕಾರಿಗಳು ಕೂಡ ಹೇಳಿಕೆ ಕೊಟ್ಟಿದ್ದರು. ಆದರೆ ಜೈಲಲ್ಲಿ ಸದ್ಯ ಈ ತರ ನಡಿತಾ ಇರೋದು ನೋಡಿ ಬೇಸರವಾಯ್ತು. ಕೋರ್ಟಿಗೆ ಮೋಸ ಮಾಡುತ್ತಿದ್ದಾರೆ. ಜನರಿಗೆ ಮೋಸ ಮಾಡುತ್ತಿದ್ದಾರೆ. ಪೊಲೀಸ್ ನಿಷ್ಠಾವಂತ ಅಧಿಕಾರಿಗಳಿಗೆ ಮೋಸ ಮಾಡುತ್ತಿದ್ದಾರೆ. ನಮಗೆ ಹೈಕೋರ್ಟಿನ ಹಾಲಿ…
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ ಅವರು ಕಾಫಿ ಕುಡಿಯುವ ಹಾಗೂ ಸಿಗರೇಟ್ ಸೇದುತ್ತಾ ಬಿಂದಾಸ್ ಆಗಿರುವ ಫೋಟೋ ವೈರಲ್ ಆಗಿದ್ದು, ಸದ್ಯ ಭಾರಿ ಸಂಚಲನ ಸೃಷ್ಟಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಚೇತನ್ ಅಹಿಂಸ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಟ ಚೇತನ್ ಅಹಿಂಸಾ ಅವರು ತಮ್ಮ ಪೋಸ್ಟ್ ನಲ್ಲಿ,ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ ವಿಶೇಷ ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ಇತ್ತೀಚಿನ ಚಿತ್ರವೊಂದು ತೋರಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ. ನನ್ನ 2 ಬಾರಿ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾನು ನೋಡಿದ 1,000ಕ್ಕೂ ಹೆಚ್ಚು ಕೈದಿಗಳಲ್ಲಿ, ಈ ಫೋಟೋದಲ್ಲಿ ದರ್ಶನ್ ರಂತೆ ಒಬ್ಬರಿಗೂ ಕುರ್ಚಿ, ಟೇಬಲ್, ಮಗ್, ಚಹಾ/ಕಾಫಿ, ಕರವಸ್ತ್ರ ಅಥವಾ ಸಿಗರೇಟ್ ಸಿಗಲಿಲ್ಲ.ಈ ಚಿತ್ರವು ನಿಜವಾಗಿದ್ದರೆ, ಹಣ ಮತ್ತು ಪ್ರಭಾವವು ಅದ್ಭುತಗಳನ್ನು ಮಾಡುತ್ತವೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜ್ಯಾತಿಥ್ಯ ವಿಚಾರವಾಗಿ, ಜಿ.ಪರಮೇಶ್ವರ್ ಅವರು ಜೈಲಾಧಿಕಾರಿ ಸೇರಿದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೆ ನಟ ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಜೈಲಿನಲ್ಲಿ ನಟ ದರ್ಶನ್ ರೌಡಿಶೀಟರ್ ಗಳ ಜೊತೆ ಇರುವ ಫೋಟೋ ಪತ್ತೆಯಾಗಿದೆ.ವಿಷಯ ತಿಳಿದ ಕೂಡಲೇ ಜೈಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನಾ ಜೊತೆಗೆ ದರ್ಶನ್ ಇರುವ ಫೋಟೋ ಪತ್ತೆಯಾಗಿದೆ. ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಎಂದರು. ಪ್ರಕರಣದ ಕುರಿತಂತೆ ಜೈಲಿನ ಹಿರಿಯ ಅಧಿಕಾರಿಗಳ ಕುರಿತು ತನಿಖೆ ನಡೆಯುತ್ತಿದೆ. ನಿರ್ಲಕ್ಷ ಕಂಡು ಬಂದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧವು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಯಾರೇ ತಪ್ಪು ಮಾಡಿದ್ದರು ಕ್ರಮ ಕೈಗೊಳ್ಳುತ್ತೇವೆ. ಡಿಜಿ ಮತ್ತು ಐಜಿಪಿ ಕೂಡ ಜೈಲಿಗೆ ಭೇಟಿ ನೀಡಿ…
ಬೆಂಗಳೂರು : ನಿನ್ನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೌಡಿಶೀಟರ್ ಗಳ ಜೊತೆ ಕುಳಿತುತಿಕೊಂಡು ಕಾಫಿ ಕುಡಿಯುತ್ತಾ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿತ್ತು. ಅದಾದ ಕೆಲವು ಸಮಯದ ಬಳಿಕ ವಿಡಿಯೋ ಕಾಲ್ ನಲ್ಲಿ ಮಾತನಾಡಿರುವ ವಿಡಿಯೋ ಸಹ ವೈರಲ್ ಆಗಿತ್ತು. ಇದೀಗ ಇಂದು ಮತ್ತೊಂದು ಫೋಟೋ ವೈರಲ್ ಆಗಿದ್ದು ದರ್ಶನ್ ಬೆಡ್ ಮೇಲೆ ಕುಳಿತುಕೊಂಡು ಸಿಗರೇಟ್ ಸೇದುತ್ತಿರುವ ಫೋಟೋ ಕೂಡ ವೈರಲಾಗಿದೆ. ಹೌದು ನಿನ್ನೆ ರೌಡಿಗಳ ಜೊತೆಗೆ ಫೋಟೋ ವೈರಲ್ ಆಗಿದ್ದು, ಇಂದು ಬೆಡ್ ಫೋಟೋ ವೈರಲ್ ಆಗಿದೆ. ಸಿಗರೇಟ್ ಹಿಡಿದು ಬೆಡ್ ಮೇಲೆ ಕುಳಿತಿರುವ ದರ್ಶನ್ ಫೋಟೋ ಇದೀಗ ವೈರಲ್ ಆಗಿದೆ. ಹೌದು ನಿನ್ನೆ ರೌಡಿಶೀಟರ್ಗಳಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನವರ ಮ್ಯಾನೇಜರ್ ಆದಂತಹ ನಾಗರಾಜ್ ಹಾಗು ಇನ್ನೊಬ್ಬ ರೌಡಿಶೀಟರ್ ಆದ ಕುಳ್ಳಸೀನ ಜೊತೆಗೆ ಕುಳಿತುಕೊಂಡು ಕಾಫಿ ಕುಡಿಯುತ್ತ ಸಿಗರೇಟ್ ಸೇದುತ್ತಾ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಇದೀಗ ಇಂದು ಕೂಡ ನಟ ದರ್ಶನ ಬೆಡ್…
ಬೆಂಗಳೂರು : ನಟ ದರ್ಶನ್ ಅವರು ಸಿಗರೇಟ್ ಸೇದುತ್ತ ಕುಳಿತಿದ್ದ ಫೋಟೋ ಹಾಗೂ ವಿಡಿಯೋ ಕಾಲ್ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ ಆಂತರಿಕ ವರದಿ ಬಂದ ಮೇಲೆ ಜೈಲಾಧಿಕಾರಿ ಸೇರಿದಂತೆ ಒಟ್ಟು 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ.ಜೈಲರ್ ಗಳಾದ ಶರಣಬಸವ ಅಮಿನಗಡ ಖಂಡೇವಾಲ್, ಸಹಾಯಕ ಜೈಲರ್ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಳವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ಬಸಪ್ಪನನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿಸಿದರು. ಈ ಕುರಿತು ನಿನ್ನೆ ಅಧಿಕಾರಿಗಳು ಜೈಲಿಗೆ ಕಳುಹಿಸದ್ದೆ. ಅವರು ಎಲ್ಲಾ ತನಿಖೆ ಮಾಡಿದ್ದಾರೆ ತನಿಖೆ ಮಾಡಿ ಸುಮಾರು 1 ಗಂಟೆಯವರೆಗೂ ತನಿಖೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.ಅವರಿಗೆ ಆ ರೀತಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ವರದಿ ಬಂದಿದೆ.ಅದರ ಪ್ರಕಾರ ಈಗ 7 ಜನ ಅಮಾನತು ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಆಮೇಲೆ…
ಮಂಡ್ಯ : ಸಂಸದರಾಗಿ ಆಯ್ಕೆಯಾದ ಬಳಿಕ ಕೇಂದ್ರ ಸಚಿವ ರಾಗಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊದಲ ದಿಶಾ ಸಭೆ ನಡೆಯುತ್ತಿದೆ. ಆದರೆ ಈ ಒಂದು ಸೇವೆಗೆ ಜಲ ಉಸ್ತುವಾರಿ ಸಚಿವರು ಆದಂತಹ ಹೆಣ್ಣು ಚಲುವಯ್ಯ ಸ್ವಾಮಿ ಗೈರಾಗಿದ್ದಾರೆ. ಇಂದು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ದಿಶಾ ಸಭೆ ಆರಂಭಗೊಳ್ಳಲಿದೆ. ಒಂದು ಕಡೆ ಕುಮಾರಸ್ವಾಮಿ ಅವರು ಕೇಂದ್ರದ ಯಾವೆಲ್ಲಾ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂಬ ಕುತೂಹಲ ಇದ್ದರೆ, ಇನ್ನೊಂದೆಡೆ ದಿಶಾ ಸಭೆಯ ಮೂಲಕ ಸಚಿವ ಚಲುವರಾಯಸ್ವಾಮಿಗೆ ಹೆಚ್‌ಡಿಕೆ ಹೇಗೆ ತಿರುಗೇಟು ನೀಡುತ್ತಾರೆ ಎಂಬ ಕುತೂಹಲವು ಸಹ ಇದೆ ಎನ್ನಲಾಗಿತ್ತಿದೆ.ಆದರೆ ಸಚಿವ ಚಲುವರಾಯಸ್ವಾಮಿ ವಿದೇಶಕ್ಕೆ ತೆರಳಿದ್ದಾರೆ. ಇಂದು ದಿಶಾ ಸಭೆ ಕರೆಯುವ ಮೂಲಕ ಚಲುವರಾಯಸ್ವಾಮಿಗೆ ಕುಮಾರಸ್ವಾಮಿ ಟಕ್ಕರ್ ನೀಡಿದ್ದಾರೆ. ಇಂದಿನ ದಿಶಾ ಸಭೆಗೆ ಸಚಿವ ಚಲುವರಾಯಸ್ವಾಮಿ ಗೈರು ಖಚಿತವಾಗಿದೆ. ಸದ್ಯ ವಿದೇಶ ಪ್ರವಾಸದಲ್ಲಿರುವುದರಿಂದ ಚಲುವರಾಯಸ್ವಾಮಿ ಸಭೆಗೆ ಗೈರಾಗಲಿದ್ದಾರೆ.…
ಬೆಂಗಳೂರು : ಶಾಸಕರ ಹೆಸರಲ್ಲಿ ನಕಲಿ ಸಹಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಪಡೆದ ಆರೋಪದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಿಂದ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಬಂಧಿತರನ್ನು ರಾಮನಗರದ ಸ್ವಾಮಿ (35) ಅಂಜನ್ ಕುಮಾರ್ (28) ಎಂದು ತಿಳಿದುಬಂದಿದೆ. ಆರೋಪಿ ಸ್ವಾಮಿ ಪತ್ನಿ ವಿನುತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಾಮಿ ಎನ್ನುವ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಕೆಲಸ ತೊರೆದು ರಾಜಕಾರಣಿಗಳ ಒಡನಾಟವನ್ನು ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಸಹಿ ನಕಲಿ ಮಾಡಿ ಲೆಟರ್ ಹೆಡ್ ಒಂದನ್ನು ಸೃಷ್ಟಿಸಿದ್ದ. ಬಳಿಕ ವಿಧಾನಸಭಾ ಸಚಿವಾಲಯಕ್ಕೆ ಪತ್ರ ಬರೆದು ವಿನುತಾಗೆ ಶಾಸಕರ ಪಿಎ ಕೆಲಸ ಕೊಡಿಸಿದ್ದ. ಆರೋಪಿ ಸ್ವಾಮಿ ವಿನುತಾಗೆ ಶಾಸಕ ಶಿವಶಂಕರಪ್ಪ ಆಪ್ತ ಸಹಾಯಕ್ಕಾಗಿ ನೇಮಿಸಲು ಶಿಫಾರಸ್ಸು ಮಾಡಿದ್ದ. ನಕಲಿ ಲೆಟರ್ ಹೆಡ್ ನಂಬಿ ವಿನುತಾಗೆ ಸಚಿವಾಲಯ ಕೆಲಸ ನೀಡಿತ್ತು. 2023ರ ಮೇನಲ್ಲಿ ವಿಧಾನಸಭೆ ಸಚಿವಾಲಯ ಸಿಬ್ಬಂದಿ ಕೆಲಸ ನೀಡಿತ್ತು.ಕೆಲಸಕ್ಕೆ ಬಾರದೆ ಪ್ರತಿ ತಿಂಗಳು 3000 ಸಂಬಳ ಪಡೆಯುತ್ತಿದ್ದ ವಿನುತ, ಗರ್ಭಿಣಿಯಾದ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಇತ್ತೀಚಿಗೆ ಮನೆ ಊಟಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜೈಲಿನ ಒಳಗಡೆ ಇರುವ ವ್ಯವಸ್ಥೆ ಬೆಚ್ಚಿ ಬೀಳಿಸಿದೆ. ಹೌದು ದರ್ಶನ್ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ, ಮತ್ತೊಂದು ಸ್ಫೋಟ ವಾದಂತಹ ಮಾಹಿತಿ ಬಹಿರಂಗವಾಗಿದ್ದು, ಅಲ್ಲಿನ ಜೈಲು ಸಿಬ್ಬಂದಿಗಳೇ ಅವರಿಗೆ ಬೇಕು ಬೇಡವಾದಂತಹ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಹೆಸರಿಗಷ್ಟೇ ನಟ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದರೆ ಜೈಲಾಧಿಕಾರಿಗಳು, ರೌಡಿಗಳಿಂದಲೇ ದರ್ಶನ್ಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಸಿಗರೇಟ್ ಮಾತ್ರವಲ್ಲದೆ ಬೇಕಾದ ಎಲ್ಲಾ ವಸ್ತುಗಳು ಅವರಿಗೆ ಸಿಗುತ್ತಿವೆ. ಯಾವ ವಸ್ತು ಬೇಕು? ಯಾವ ಊಟ ಬೇಕು ಹಾಗೂ ಯಾವ ಹೋಟೆಲ್ನಿಂದ ಬೇಕು ಎನ್ನುವುದರ ಕುರಿತು ಎಲ್ಲವೂ ಅವರಿಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಬನಶಂಕರಿ ಶಿವಾಜಿ ಮಿಲಿಟರಿ ಹೋಟೆಲ್ ನಿಂದಲೇ…
ಹೈದ್ರಾಬಾದ್ : ನಾಂದೇಡ್ ನ ಹಿರಿಯ ಕಾಂಗ್ರೆಸ್ ಸಂಸದ ವಸಂತ್ ರಾವ್ ಚವ್ಹಾಣ ವಿಧಿವಶರಾಗಿದ್ದಾರೆ.ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಾವಿನೊಂದಿಗೆ ಅವರ ಹೋರಾಟ ವಿಫಲವಾಯಿತು. ಆರಂಭದಲ್ಲಿ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ. ಚವಾಣ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಹೈದರಾಬಾದ್‌ಗೆ ಕರೆದೊಯ್ಯಲಾಯಿತು.ಅವರು ಪ್ರತಿ ತಿಂಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು, ನಾಂದೇಡ್‌ನಲ್ಲಿ ನಡೆದ ಕಾಂಗ್ರೆಸ್ ವಿಭಾಗೀಯ ಸಭೆಯಿಂದಾಗಿ ನಿತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರಾಜಾತಿಥ್ಯ, ಹಾಗೂ ಕಾಫಿ ಸಿಗರೇಟ್ ಮತ್ತು ವಿಡಿಯೋ ಕಾಲ್ ವಿಚಾರವಾಗಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಮೋಹನ್ ಅವರು ಭೇಟಿ ಮಾಡಿದ್ದಾರೆ. ಪ್ರಕರಣದ ಕುರಿತು ಗೃಹ ಸಚಿವರಿಗೆ ಪೊಲೀಸ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. A2 ಆರೋಪಿ ನಟ ದರ್ಶನ್ ಗೆ ಸಿಗರೇಟ್ ಸೇವನೆಗೆ ಅವಕಾಶ ನೀಡಿರುವುದು ಹಾಗೂ ವಿಡಿಯೋ ಕಾಲ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದರ ಬಗ್ಗೆ ಪೊಲೀಸ್ ಅಧಿಕಾರಿಗಳು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.ಆದರೆ ರಾತ್ರಿಯೆ ಪರಮೇಶ್ವರ್ ಅವರು ದೂರವಾಣಿ ಮೂಲಕ ಘಟನೆ ಕುರಿತಂತೆ ಮಾಹಿತಿ ಪಡೆದಿದ್ದರು. ನಿನ್ನೆ ರಾತ್ರಿ ಜಿ.ಪರಮೇಶ್ವರ್ ಅವರು ಕಾರಾಗೃಹದ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ದೂರವಾಣಿ ಕರೆಯ ಮೂಲಕ ಘಟನೆ ಕುರಿತು ಚರ್ಚಿಸಿದ್ದಾರೆ ವೇಳೆ ಜೈಲಿನ ಆಂತರಿಕ…