Author: kannadanewsnow05

ಕೇರಳ : ದೇಶದಲ್ಲಿ ಪ್ರಸ್ತುತ ಪ್ರತಿದಿನ ಮಹಿಳೆಯರು, ಮಕ್ಕಳು ಎನ್ನದೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಎಷ್ಟೇ ಕಠಿಣ ಕ್ರಮ ಜರುಗಿಸಿದರು ಸಹ ಇಂತಹ ಘಟನೆ ನಿಲ್ಲುತ್ತಿಲ್ಲ.ಇದೀಗ ಕೇರಳದಲ್ಲಿ 70 ವರ್ಷದ ವೃದ್ಧೆಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ. ಹೌದು ದರೋಡೆಗೆಂದು ಬಂದಿದ್ದ ವ್ಯಕ್ತಿ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕಾಯಂಕುಲಂನಲ್ಲಿರುವ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ ಎಂಬುದನ್ನು ಅರಿತ ವ್ಯಕ್ತಿಯು ಆಕೆಯನ್ನು ಗುರಿಯಾಗಿಸಿಕೊಂಡಿದ್ದ ಎನ್ನಲಾಗುತ್ತಿದೆ. ಈ ಘಟನೆ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ, ದರೋಡೆಗೆಂದು ಮನೆಗೆ ಬಂದಿದ್ದ ಧನೇಶ್​(29) ಎಂಬಾತ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ಶನಿವಾರ ರಾತ್ರಿ ವೃದ್ಧೆಯ ಮೇಲೆ ಮೆಣಸಿನ ಪುಡಿ ಎರಚಿದ ನಂತರ ಕಾಯಂಕುಲಂನಲ್ಲಿರುವ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಯು ವೃದ್ಧೆಯಿಂದ ಸುಮಾರು ಏಳು ಪವನ್ ಚಿನ್ನವನ್ನು ಕದ್ದಿದ್ದು, ಕದ್ದ ಆಭರಣಗಳನ್ನು ಮಾರಾಟ ಮಾಡಲು…

Read More

ಚಿತ್ರದುರ್ಗ : ನಿಮ್ಮ ಮನಿ ಲ್ಯಾಂಡರಿಂಗ್ ಆಗಿದೆ ಎಂದು ವ್ಯಕ್ತಿಯಿಂದ ಸೈಬರ್ ವಂಚಕರು ಸುಮಾರು 1.27 ಕೋಟಿ ಹಣವನ್ನು ತೆಗೆದುಕೊಂಡು ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೌದು ಚಿತ್ರದುರ್ಗದಲ್ಲಿ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರಿಂದ 1.27 ಕೋಟಿ ವಂಚನೆ ಮಾಡಿರುವ ಘಟನೆ ನಡೆದಿದೆ. TRAI & ಮುಂಬೈ ಪೊಲೀಸ್ ಎಂದು ಕರೆ ಮಾಡಿದ್ದ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡ್ ರಿಂಗ್ ವಂಚನೆ ಆಗಿದೆ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ವಂಚಕರು ನಂಬಿಸಿದ್ದರು. ಈ ವೇಳೆ ಸೈಬರ್ ವಂಚಕರು ವ್ಯಕ್ತಿಯಿಂದ ತಮ್ಮ ಖಾತೆಗೆ 1.27 ಕೋಟಿ ಹಣ ವರ್ಗಾಯಿಸಿಕೊಂಡು ವಂಚಕರು ಮೋಸ ಎಸಗಿದ್ದಾರೆ ವಾಟ್ಸಪ್ ನಾರ್ಮಲ್ ಕಾಲ್ ಮಾಡಿ ವಂಚಕರು ನಂಬಿಸಿದ್ದರು. ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಣೆ ಉಲ್ಲೇಖಿಸಿದೆ. ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ಹೋಗುವಂತಹ ವಾಹನಗಳು ಸೋಪ್ ಫ್ಯಾಕ್ಟರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ ಅವರು ರೌಡಿಶೀಟರ್ ಗಳ ಜೊತೆಗೆ ಕಾಫಿ ಕುಡಿಯುತ್ತಾ ಹಾಗೂ ಸಿಗರೇಟ್ ಸಿಗುತ್ತಾ ಕುಳಿತಿರುವ ಫೋಟೋ ವೈರಲ್ ಆಗಿತ್ತು. ಈ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹದ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರೊಂದಿಗೆ ಚರ್ಚೆ ಮಾಡಿದ್ದು ಆಂತರಿಕತೆ ಕರೆ ಮಾಡಿ ಕೊಡಲಿ ವರದಿ ಸಲ್ಲಿಸಿ ಎಂದು ಸಿಟ್ಟಾಗಿದ್ದಾರೆ. ಹೌದು ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಅವರು ಟೀ ಕುಡಿಯುತ್ತಿರುವ ಫೋಟೋಗಳು ಇವೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಿಟ್ಟಾಗಿದ್ದು, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದು, ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು…

Read More

ಬೆಂಗಳೂರು : ಬೆಂಗಳೂರಿನ ಕಾವೇರಿಪುರದ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದಂತಹ ಘಟನೆಗೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆಯ ಪೊಲೀಸರು ಆರೋಪಿ ಮಲತಂದೆ ಸುಮಿತ್ ನನ್ನು ಬಂಧಿಸಿದ್ದಾರೆ. ಹೌದು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಸುಮಿತ್ ನನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಅಮೃತಹಳ್ಳಿ ಠಾಣೆಯ ಪೋಲಿಸರಿಂದ ಆರೋಪಿ ಸಮೀತ್ ಪಂಧನವಾಗಿದೆ. ಬೆಂಗಳೂರುನ್ನು ತೊರೆಯಲು ಸುಮಿತ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ. ರಾತ್ರಿ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಸುಮಿತ್ ಬಂದಿದ್ದ. ಈ ವೇಳೆ ಟಿಕೆಟ್ ಗಾಗಿ ಮೊಬೈಲ್ ಆನ್ ಮಾಡಿದ್ದಾನೆ. ಕೆಲವೇ ಸೆಕೆಂಡ್ ಆನ್ ಮಾಡಿ ಮತ್ತೆ ಮೊಬೈಲ್ ಆಫ್ ಮಾಡಿದ್ದ. ಅಷ್ಟೊತ್ತಿಗೆ ಆಗಲೇ ಆರೋಪಿಯನ್ನು ಪೊಲೀಸರು ಆತನನ್ನು ಸುತ್ತುವರೆದಿದ್ದರರು. ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾವೇರಿಪುರದ ನಿವಾಸದಲ್ಲಿರುವ ತನ್ನ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿ ಆರೋಪಿಸುಮಿತ್ ಅಲ್ಲಿಂದ ಪರಾರಿಯಾಗಿದ್ದ. ಪ್ರಕರಣವನ್ನು…

Read More

ಬೆಂಗಳೂರು : ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ‘ಡ್ರಿಂಕ್ ಆ್ಯಂಡ್ ಡ್ರೈವ್’ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀ ಸರು, ಶನಿವಾರ ಪಾನಮತ್ತ ಚಾಲಕ, ಸವಾರರ ವಿರುದ್ಧ 324 ಪ್ರಕರಣ ದಾಖಲಿಸಿದ್ದಾರೆ. ಹೌದು ಮೊನ್ನೆ ಶನಿವಾರ ರಾತ್ರಿ ನಗರ ಸಂಚಾರ ವಿಭಾಗದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿ ಯಲ್ಲಿ 161 ಮಂದಿ ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ 536 ಸಿಬ್ಬಂದಿ ಸೇರಿ,ಒಟ್ಟು 697 ಮಂದಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 18,769 ವಿವಿಧ ಮಾದರಿಯ ವಾಹನಗಳನ್ನು ತಪಾಸಣೆ ಮಾಡಿದ್ದು, ಈ ಪೈಕಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ 324 ಮಂದಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ದ ಮೋಟಾರು ವಾಹನ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾ ಗಿದೆ. ರಸ್ತೆ ಸುರಕ್ಷತೆ ದೃಷ್ಟಿಯಿಂದ ಇಂತಹ ಕಾರ್ಯಾಚರಣೆಗಳು ಮುಂದು ವರೆಯಲಿವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್‌ ತಿಳಿಸಿದ್ದಾರೆ.

Read More

ಉಡುಪಿ : ಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡದ್ದಿತ್ತು. ಇದೀಗಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತ ಯುವತಿಯು ಘಟನೆ ವೇಳೆ ಮಾದಕ ವಸ್ತು ಸೇವಿಸಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟಿದೆ. ಆದರೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ಕ್ಷೇವಿಯರ್ ರಿಚರ್ಡ್ ರಕ್ತ ಪರೀಕ್ಷೆ ವರದಿ ನೆಗೆಟಿವ್‌ ಬಂದಿದೆ. ಮೂರು ತಿಂಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹಿಂದೂ ಯುವತಿಯನ್ನು ಭೇಟಿ ನೆಪದಲ್ಲಿ ಕರೆಸಿ ನಂತರ ಅತ್ಯಾಚಾರ ಎಸಗಿದ ಪ್ರಕರಣ ಶುಕ್ರವಾರ ಕಾರ್ಕಳದಲ್ಲಿ ನಡೆದಿತ್ತು. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಯುವತಿಗೆ ಕುಡಿಸಿ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿತ್ತು. ಅದರಂತೆ ಆರೋಪಿ ಅಲ್ತಾಫ್ ಹಾಗೂ ಕ್ಷೇವಿಯರ್ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಆಗ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಅದನ್ನು ಹುಡುಗಿ ಸೇವಿಸಿದ್ದಾಗಿ ಅಲ್ತಾಫ್ ತಿಳಿಸಿದ್ದ. ಅದರಂತೆ ಆ ಪುಡಿಯನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಅಲ್ಲಿಂದ ಇನ್ನಷ್ಟೇ ಮಾಹಿತಿ ಬಹಿರಂಗವಾಗಬೇಕಿದೆ. ಪ್ರಕರಣದಲ್ಲಿ ಡ್ರಗ್ ಎಲ್ಲಿಂದ ಬಂದಿದೆ ಎಂಬ ಕುರಿತು ಪೂರ್ಣ ತನಿಖೆ…

Read More

ತುಮಕೂರು : ತಡೆಗೋಡೆ ಇಲ್ಲದ ಪರಿಣಾಮವಾಗಿ ಕಾರು ಮೂರು ಪಲ್ಟಿಯಾಗಿದ್ದರು ಸಹ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಅದೃಷ್ಟ ವರ್ಷ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆಯ ಶೀರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೌದು ಅಪಘಾತದ ವೇಳೆ ಕಾರು ತಡೆಗೋಡೆ ಇಲ್ಲದ್ದರಿಂದ ಮೂರು ಬಾರಿ ಪಲ್ಟಿ ಹೊಡೆದಿದೆ. ಜ್ ಈ ವೇಳೆ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.ತಕ್ಷಣ ಅವರನ್ನು ಶೀರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಕುಟುಂಬ ಒಂದು ಹೊರಟಿತ್ತು. ತಡೆಗೋಡೆ ಇಲ್ಲದೆ ಕಾರು 3 ಪಲ್ಟಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಇನ್ನಿಬ್ಬರಿಗೆ ಕೈ ಕಾಲು ಮುರಿದಿದೆ. ಶೀರಾ ತಾಲೂಕಿನ ಆಸ್ಪತ್ರೆಯಲ್ಲಿ ಗಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪದೇ-ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ. ಈ ರೀತಿ ಅಪಘಾತಗಳಿಂದ ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ವೇಳೆ ಸ್ಥಳೀಯ ನಿವಾಸಿಗಳು ಕೆಲಕಾಲ ರಸ್ತೆ…

Read More

ಬೆಂಗಳೂರು : ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಪೆರಂಡಪಲ್ಲಿ ಭೀಕರವಾದಂತ ಸರಣಿ ಅಪಘಾತವಾಗಿದ್ದು, ಅಪಘಾತದಲ್ಲಿ 10 ಜನರು ಗಾಯಗಿಂಡಿದ್ದರು. ಆದರೆ ಅದರಲ್ಲಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೌದು ನಿನ್ನೆ ಹೊಸೂರು ಸಮೀಪದ ಪೆರಂಡಪಲ್ಲಿ ಬಳಿ 3 ಲಾರಿ, 1 ಬಸ್ ಮತ್ತು 6 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿತು. ಕಾರುಗಳಲ್ಲಿದ್ದ ಒಟ್ಟು 10 ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ನಡೆದಿತ್ತು. ಕೂಡಲೇ ಗಾಯಾಳುಗಳನ್ನು ಕೃಷ್ಣಗಿರಿ, ಹೊಸೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಅದರಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ.

Read More

ಶಿವಮೊಗ್ಗ : ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು.ಇಲ್ಲವಾದರೆ ನಮ್ಮ ಪ್ರಾಣಕ್ಕೆ ಕಂಟಕ ಎದುರಾಗುವ ಸಂಭವವಿರುತ್ತದೆ. ಇದೀಗ ಇಂತಹದ್ದೇ ಒಂದು ದುರಂತ ಸಂಭವಿಸಿದ್ದು, ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More