Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪ್ರಪಂಚ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ ಏಕೆಂದರೆ ಆ ಕುರಿತಂತೆ ನಟ ದರ್ಶನ್ ಅವರು ದೇಶದಲ್ಲಿ ಬಿಂದಾಸ್ ಆಗಿದ್ದಾರೆ ಎನ್ನುವ ಫೋಟೋಗಳು ಹಾಗೂ ವಿಡಿಯೋ ಕಾಲ್ ಮಾಡಿರುವ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಹೌದು ಸ್ಯಾಂಡಲ್ವುಡ್ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರ ಜೈಲು ವಾಸ ಕಷ್ಟಕರವಾಗಿದೆ ಎಂದು ಇಷ್ಟು ದಿನ ಊಹಿಸಲಾಗಿತ್ತು. ಆದರೆ ಈಗ ಕೆಲವು ಶಾಕಿಂಗ್ ವಿಚಾರಗಳು ಹೊರಬರುತ್ತಿವೆ. ಕೊಲೆ ಆರೋಪ ಹೊತ್ತಿರುವ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಕಲ ಸೌಕರ್ಯಗಳು ಸಿಗುತ್ತಿವೆ ಎಂಬುದಕ್ಕೆ ಒಂದಷ್ಟು ಸಾಕ್ಷಿಗಳು ಲಭ್ಯವಾಗುತ್ತಿವೆ. ಸ್ಪೆಷಲ್ ಬ್ಯಾರಕ್ನಲ್ಲಿ ಇರುವ ದರ್ಶನ್ ಅವರಿಗೆ ವಿಡಿಯೋ ಕಾಲ್ ಸೌಲಭ್ಯವನ್ನೂ ನೀಡಲಾಗಿದೆ. ಅದಕ್ಕೆ ಸಾಕ್ಷಿಯಾಗಿರುವ ವಿಡಿಯೋ ಈಗ ವೈರಲ್ ಆಗಿದೆ. ನಟ ದರ್ಶನ್ ಜೈಲಿನಲ್ಲಿ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ, ಗೋಕಾಕ್, ಮೂಡಲಗಿ ತಾಲೂಕಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ತಿಂಗಳಲ್ಲಿ ಎರಡನೇ ಸಲ ಗೋಕಾಕ್ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.ಬೆಳಿಗ್ಗೆ 11:45 ಕ್ಕೆ ಬೆಳಗಾವಿ ಏರ್ಪೋರ್ಟ್ ಗೆ ಆಗಮಿಸಲಿದ್ದು, ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಗೋಕಾಕ್ ತಾಲೂಕಿನ ಕೌಜಲಗಿಗೆ ಭೇಟಿ ನೀಡಲಿದ್ದಾರೆ. ಬಳಿಕ ಕುರುಬ ಸಂಘದ ರಾಜ್ಯ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಫಾರ್ಮ್ ಹೌಸ್ ಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದು ನಂತರ ಕಳ್ಳುಗುದ್ದಿ, ಯಾದವಾಡ, ಕಲ್ಲೋಳಿಗೆ ಭೇಟಿ ನೀಡಲಿದ್ದಾರೆ.ಅಲ್ಲಿ ಕೂಡ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.ಅದಾದ ಬಳಿಕ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.
ಹುಬ್ಬಳ್ಳಿ : ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಅನ್ನೋದಂತೆ ಲೈಂಗಿಕ ಪ್ರಕರಣಗಳು, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಜನ ಭಯಭೀತರಾಗಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು 15 ವರ್ಷದ ಬಾಲಕನ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ. ಹೌದು 15 ವರ್ಷದ ಬಾಲಕನ ಮೇಲೆ ಯುವಕನಿಂದ ಅತ್ಯಾಚಾರ ನಡೆದಿರುವ ಘಟನೆ ಹುಬ್ಬಳ್ಳಿಯ ಕಸಬಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಸುಮ್ ಹುಲಮನಿ ಎಂಬ ಯುವಕನಿಂದ ಈ ಒಂದು ದುಷ್ಕೃತ್ಯ ನಡೆದಿದೆ.ಗಾರೆ ಮತ್ತು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮಾಸುಮ್ ಮೊಬೈಲ್ ಕೊಡಿಸುವುದಾಗಿ ಬಾಲಕನನ್ನು ಕರೆದೋಯ್ದು ದುಷ್ಕೃತ್ಯ ಎಸೆಗಿದ್ದಾನೆ.ಇದೀಗ ಪೊಲೀಸರು ಆರೋಪಿ ಮಾಸುಮ್ ಹುಲಮನಿಯನ್ನು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ದಿನದಿಂದಲೂ ಕರ್ನಾಟಕ ಸೇರಿದಂತೆ ದೇಶದ ಇನ್ನಿತರ ರಾಜ್ಯಗಳಲ್ಲೂ ಸಹ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಏಳು ವರ್ಷದ ಬಾಲಿಕೆಯ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹೌದು ಹುಬ್ಬಳ್ಳಿಯ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಆಟವಾಡುವ ನೆಪದಲ್ಲಿ ಏಳು ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ನೂರ ಅಹಮ್ಮದ್ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ, ಸಾಹಿತಿಗಳಾದ ಎಸ್ ಎಲ್ ಭೈರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು ಅವರು ಪ್ರಾಮಾಣಿಕರಾಗಿದ್ದರೆ ತನಿಖೆಯನ್ನು ಎದುರಿಸಲಿ ಆದರೆ ರಾಜ್ಯಪಾಲರಿಗೆ ಅಗೌರವ ತೋರಬಾರದು ಎಂದು ತಿಳಿಸಿದರು. ಮೈಸೂರು ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗ ಅದನ್ನು ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುವ ಬದಲು ಅವರಿಗೆ ಅಗೌರವ ತರುವಂತೆ ನಡೆದುಕೊಳ್ಳುವುದು ಸರಿಯಲ್ಲ ಎಂದರು. ಇಂಥ ದೂರುಗಳು ಬಂದಾಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶ ನೀಡಬಹುದು. ಆರೋಪ ಹೊತ್ತವರು ಪ್ರಾಮಾಣಿಕರಿದ್ದರೆ ಎದುರಿಸಬೇಕಷ್ಟೆ ಎಂದು ಅವರು ತಮ್ಮ ಅಭಿಪ್ರಾಯ ತಿಳಿಸಿದರು.ರಾಜ್ಯಪಾಲರ ಹುದ್ದೆ ಪರಮೋಚ್ಚ ಸಾಂವಿಧಾನಿಕ ಹುದ್ದೆ. ಕಾಲಾನಂತರ ಅದು ಗಂಡಾಂತರಕಾರಿ ಸ್ಥಾನ ಎಂದರು.
ಧಾರವಾಡ : ಮುಡಾ ಹಗರಣ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ ಕಳಚಿದ್ದು, ಭ್ರಷ್ಟಾಚಾರ ಮೆತ್ತಿಕೊಂಡಿದೆ.ಹೀಗಾಗಿ ಅವರು ರಾಜೀನಾಮೆ ನೀಡುವುದು ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆಗೆ ಚರ್ಚಿಸಿದ್ದಾರೆ. ಅಲ್ಲದೆ ಹೈಕಮಾಂಡ್ ಕೂಡ ಇವರ ಬೆನ್ನಿಗೆ ನಿಲ್ಲುತ್ತೆ ಎಂದು ತಿಳಿಸಿದ್ದಾರೆ. ಹೀಗಾಗಿ ಅವರು ಶಾಸಕರ ಸಭೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ನಡೆಸಿದ್ದಾರೆ. ಈ ಕಾರಣದಿಂದಲೇ ಅವರು ದೆಹಲಿ ನಾಯಕರ ಭೇಟಿಗೆ ಹೋಗಿದ್ದಾರೆ ಎಂದರು. ಮುಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ. 5 ಸಾವಿರ ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ 5 ಸಾವಿರ ಕೋಟಿ ಬೆಲೆ ಬಾಳುವ ಸಾವಿರಾರು ಮುಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ. ಸಿದ್ದರಾಮಯ್ಯನವರು ಪತ್ನಿ ಹೆಸರಿನಲ್ಲಿ ಕಾನೂನು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಕೊಟ್ಟ ಭರವಸೆಯಂತೆ 5 ಪ್ರಮುಖ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ಆದರೆ ವಿಪಕ್ಷದವರು ಇದು ಎಂಪಿ ಚುನಾವಣೆವರೆಗೂ ಮಾತ್ರ ಎಂದಿದ್ದರು.ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಭರವಸೆಯ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ಆಶ್ವಾಸನೆ ಕೊಟ್ಟ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ಧರ್ಮ, ಜಾತಿ ಭೇದವಿಲ್ಲದೆ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ವಿಪಕ್ಷಗಳು ಗ್ಯಾರಂಟಿಗಳನ್ನ ಜಾರಿಗೆ ಮಾಡಲ್ಲ ಅಂತ ಅಂದಿದ್ದರು. ಜಾರಿ ಮಾಡಿದ ಮೇಲೆ ಎಂಪಿ ಚುನಾವಣೆವರೆಗೂ ಅಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದರು.ಅಭಿವೃದ್ಧಿ ಯೋಜನೆಗೆ 1.60 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ. ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲ ಅನ್ನೋದು ಸುಳ್ಳು ಎಂದು ಅವರು ತಿಳಿಸಿದರು.
ಬೆಂಗಳೂರು: ಪರಪ್ಪನ ಅಗ್ರಹಾರ ಸೆರೆಮನೆಯೇ ಅಥವಾ ಅರಮನೆಯೇ ಎಂಬುದನ್ನು ಗೃಹ ಇಲಾಖೆ ಮತ್ತು ಗೃಹ ಸಚಿವರು ನಾಡಿನ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಚಿತ್ರದುರ್ಗದ ರೇಣುಕಸ್ವಾಮಿ ಅವರ ಕೊಲೆ ಆರೋಪಿ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ, ರಾಜಾತಿಥ್ಯ ವ್ಯವಸ್ಥೆಯನ್ನು ಅಲ್ಲಿನ ಜೈಲಿನ ಅಧಿಕಾರಿಗಳು ಮತ್ತು ಪೆÇಲೀಸ್ ಇಲಾಖೆ ಕಲ್ಪಿಸಿಕೊಟ್ಟಿರುವುದು ತೀವ್ರ ಖಂಡನೀಯ ಎಂದಿರುವ ಅವರು, ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿ ಎಂದು ಟೀಕಿಸಿದ್ದಾರೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಈ ಪ್ರಕರಣದ ವೈಫಲ್ಯವೇ ಎತ್ತಿ ತೋರಿಸುತ್ತದೆ. ಈ ಪ್ರಕರಣದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ತಿಳಿಸಿದ್ದಾರೆ.ಈ ಐಷಾರಾಮಿ ವ್ಯವಸ್ಥೆಯನ್ನು ನೋಡಿದರೆ ಅಲ್ಲಿನ ಸಂಬಂಧಪಟ್ಟ ಜೈಲಿನ ಅಧಿಕಾರಿಗಳು ಮತ್ತು ಅಲ್ಲಿನ ಸಿಬ್ಬಂದಿಗಳು ಆರೋಪಿಗಳ ಜೊತೆ ಶಾಮೀಲಾಗಿರುವುದು ಗೋಚರಿಸುತ್ತದೆ. ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಕುಳಿತುಕೊಳ್ಳಲು ಕುರ್ಚಿ, ಟೇಬಲ್, ಕಾಫಿ-ಟೀ ಜೊತೆಗೆ ಸಿಗರೇಟ್ ಸೇರಿದಂತೆ…
ತುಮಕೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸಂಪುಟದ ಎಲ್ಲಾ ಸಚಿವರು, ಶಾಸಕರು ಸೇರಿದಂತೆ ಹೈಕಮಾಂಡ್ ಕೂಡ ಬೆಂಬಲ ಸೂಚಿಸಿದ್ದು, ಇದೀಗ ಮಾಜಿ ಸಚಿವ ಸಿಎಂ ಇಬ್ರಾಹಿಂ ಕೂಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬಿಸಿದ್ದು ಸಿದ್ದರಾಮಯ್ಯ ಒಬ್ಬ ಪ್ರಾಮಾಣಿಕ ಮನುಷ್ಯ. ಸೈಕಲ್ ಮೇಲೆ ತಿರುಗಾಡಿ ಪಕ್ಷೇತರ ಶಾಸಕನಾಗಿದ್ದ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಿಎಂ ಇಬ್ರಾಹಿಂ ಈ ಕುರಿತು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾರು ಎಂದು ಇಡೀ ರಾಜ್ಯಕ್ಕೆ ಗುತ್ತಿಗೊತ್ತಿದೆ. ರಾಜ್ಯದ ಸಿಎಂ ಗೆ ಮೂರುವರೆ ಎಕರೆ ಜಮೀನು ದೊಡ್ಡದ? ಎಂದು ಪ್ರಶ್ನಿಸಿದರು. ಪಾಪ ಸಿದ್ದರಾಮಯ್ಯ ಪ್ರಾಮಾಣಿಕ ಮನುಷ್ಯ ಸಿದ್ದರಾಮಯ್ಯ ನನಗೆ ಮೊದಲಿನಿಂದ ಗೊತ್ತು ಸೈಕಲ್ ನಲ್ಲಿ ತಿರುಗಾಡಿ ಪಕ್ಷೇತರ ಶಾಸಕನಾಗಿದ್ದ ಮನುಷ್ಯ ಸಿದ್ದರಾಮಯ್ಯ ಹಣ ಮಾಡಲಿಲ್ಲ ಆದರೆ ಜನ ಸಂಪಾದಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಸ್ನೇಹಿತರು ಸ್ನೇಹವೇ ಬೇರೆ ಪಕ್ಷವೇ ಬೇರೆ ಎಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಸೇಮೆ ಇಬ್ರಾಹಿಂ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರು ಕಾಫಿ ಕುಡಿಯುತ್ತಿರುವುದು ಹಾಗೂ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿತ್ತು. ಇದರಿಂದ ಕೂಡಲೇ ಎಚ್ಚೆತ್ತ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಪ್ರಕರಣದ ಕುರಿತಂತೆ ತನಿಖೆಗೆ ಆದೇಶಿಸಿದ್ದಾರೆ. ಹೌದು ತನಿಖೆಗೆ ಆದೇಶಿಸಿದ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಅವರು ಇದೀಗ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಪೊಲೀಸ್ ಅಧಿಕಾರಿಗಳಾದ ಆನಂದ್ ರೆಡ್ಡಿ ಹಾಗೂ ಸೋಮಶೇಖರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದು, ಸಂಪೂರ್ಣವಾಗಿ ತನಿಖೆ ನಡೆಸಿದ ಬಳಿಕ ಕಾರಾಗೃಹದ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೆಸಲಾಗುತ್ತಿದೆ…