Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಾಳೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಅಂದರೆ ಅಕ್ಟೋಬರ್ 13 ರವರೆಗೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜಂಬೂಸವಾರಿ, ವಿಜಯದಶಮಿ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ನಾಳೆ ಅಂದರೆ ಅಕ್ಟೋಬರ್ 11ರಂದು ಬೆಳಿಗ್ಗೆ 10:25 ಕ್ಕೆ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಲಿದ್ದಾರೆ. ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಕ್ಟೋಬರ್ 12 ರಂದು ಮಧ್ಯಾಹ್ನ 1:41 ರಿಂದ 2:10ರವರೆಗೆ ನಂದಿ ದ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಅರಮನೆಯ ಬಲರಾಮದ್ವಾರದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಅದೇ ರೀತಿ ಅಕ್ಟೊಬರ್ 12 ರಂದು ಸಂಜೆ 4 ರಿಂದ 4:30ವರೆಗೆ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯಲ್ಲಿ ಅಸೀನರಾಗುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದು, ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ…
ರಾಮನಗರ : ಚನ್ನಪಟ್ಟಣದ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ದೇವಾಲಯ ಒಂದರಲ್ಲಿ ಜೆಡಿಎಸ್ ಸಭೆ ಬಳಿಕ ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ದಿನಾಂಕ ಘೋಷಣೆ ಆಗುತ್ತೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಕಳೆದ ಎರಡು ಚುನಾವಣೆಯನ್ನ ನಿರಂತರವಾಗಿ ಈ ಕ್ಷೇತ್ರದಿಂದ ಗೆದ್ದಿದ್ದೇವೆ. ಈ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಾನು ಯಾವುದೇ ನಿರ್ಣಯ ಮಾಡಲ್ಲ. 2013ರಲ್ಲೂ ಕೇವಲ 3 ಸಾವಿರ ಮತಗಳಲ್ಲಿ ಸೋತಿದ್ದೇವೆ. 2018, 23ರಲ್ಲಿ ನಿರಂತರವಾಗಿ ಗೆದ್ದಿದ್ದೇವೆ. ಮೊದಲಿನಿಂದಲೂ ಇದು ಜನತಾದಳದ ಭದ್ರಕೋಟೆ ಎಂದಿದ್ದಾರೆ. ಇನ್ನು ಕೋವಿಡ್ ಹಗರಣದ ಕುರಿತು ಎಸ್ ಐ ಟಿ ರಚನೆ ವಿಚಾರವಾಗಿ,ಈ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರುಗಳು ವಿರೋಧ ಪಕ್ಷದಲ್ಲಿ ಕೆಲಸ ಮಾಡುವಾಗ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದರು. ಪಿಎಸಿಎಲ್ ಚೇರ್ಮನ್ ಅವರ ಪಕ್ಷದವರೇ ಇದ್ದಾರೆ. ಇಲ್ಲಿಯವರೆಗೆ ಯಾವುದೇ ರೀತಿಯ ತನಿಖೆ ಮಾಡಿಲ್ಲ. ಈಗ ಏಕೆ ಕೊಟ್ಟಿದ್ದೀರಿ…
ಮಂಗಳೂರು : ದ್ವೇಷ ಭಾಷಣ ಮಾಡಿದ ಆರೋಪದ ಅಡಿ ಪ್ರಾಧ್ಯಪಕ ಅರುಣ್ ಉಳ್ಳಾಲ್ ವಿರುದ್ಧ FIR ದಾಖಲಾಗಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಇದೆ ಅಕ್ಟೋಬರ್ 15ರಂದು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದೆ. ಹೌದು ಇದೆ ಅಕ್ಟೋಬರ್ 15ಕ್ಕೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಶಿವಾನಂದ್ ಮೆಂಡನ್ ಈ ಕುರಿತು ಹೇಳಿಕೆ ನೀಡಿದ್ದಾರೆ.ಹಿಂದೂಗಳನ್ನು ಗುರಿಯಾಗಿಸಿಕೊಂಡು ಅರುಣ್ ಉಳ್ಳಾಲ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಆದರೆ ಅರುಣ್ ಉಳ್ಳಾಲ್ ಪರವಾಗಿ ವಿ ಹೆಚ್ ಪಿ ನಿಲ್ಲುತ್ತದೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಡಾ.ಅರುಣ್ ಉಳ್ಳಾಲ್, ಕ್ರೈಸ್ತ, ಮುಸ್ಲಿಮರು ಸಹಿತ ಭಿನ್ನ ಧರ್ಮದವರ ಮದುವೆ ಹಾಲ್‌ಗಳಲ್ಲಿ ಹಿಂದೂಗಳು ಮದುವೆಗಳನ್ನು ನಡೆಸಬಾರದು, ಅವರ ಒಡೆತನದ ಶಿಕ್ಷಣ ಸಂಸ್ಥೆಗಳಿಗೆ ಹಿಂದೂಗಳು ಮಕ್ಕಳನ್ನು ಸೇರಿಸಬಾರದು, ಹಿಂದೂಗಳ ಒಡೆತನದ ಮದುವೆ ಹಾಲ್‌ಗಳು, ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಬಳಸಬೇಕು. ಒಂದು ಅಂಶ…
ಕಲಬುರ್ಗಿ : ಆಸ್ಪತ್ರೆಯ ಮೇಲ್ಚಾವಣಿಯಲ್ಲಿ ನೀರು ತುಂಬಲು ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಆಸ್ಪತ್ರೆಯ ಡಿ ಗ್ರೂಪ್ ನೌಕರರ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಕರಜಗಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಸಿಬ್ಬಂದಿಯನ್ನು ಶಿವಪುತ್ರ (30) ಎಂದು ಹೇಳಲಾಗುತ್ತಿದೆ. ಶಿವಪುತ್ರ ಅಫ್ಜಲ್ ಪುರ ತಾಲೂಕಿನ ಮಾಶಾಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಎಂದಿನಂತೆ ಇಂದು ಕೂಡ ಆಸ್ಪತ್ರೆಯ ಮೇಲ್ಚಾವಣಿಯಲ್ಲಿ ನೀರು ತುಂಬಲು ಹೋದಾಗ ನೀರಿನ ಪೈಪ್ ವಿದ್ಯುತ್ ತಂತಿಗೆ ತಗುಲಿದೆ. ಹಾಗಾಗಿ ಶಿವಪುತ್ರ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು ಘಟನೆ ಕುರಿತಂತೆ ಅಫ್ಜಲ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲಬುರ್ಗಿಯಲ್ಲಿ ಕಿಡಿಗೇಡಿಗಳು ರಸ್ತೆಯ ಬದಿಯಲ್ಲಿ ಇದ್ದಂತಹ ದರ್ಗಾವನ್ನು ಧ್ವಂಸಗೊಳಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಇರುವಂತಹ ಹಜರತ್ ಸೈಯದ್ ಪೀರ್ ದರ್ಗಾದಲ್ಲಿನ ಸಮಾಧಿ ಕಿತ್ತು ಹಾಕಿದ ಕಿಡಿಗೇಡಿಗಳು ಮಜಾರ್, ಸುತ್ತಲೂ ಕಟ್ಟಿದ ತಡೆಗೋಡೆಯ ಕಲ್ಲುಗಳನ್ನು ನೆಲಕ್ಕುರುಳಿಸಿದ್ದಾರೆ. ದರ್ಗಾ ಧ್ವಂಸ ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದರ್ಗಾದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಸೈಯದ್ ಅಲಿ ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.ಪ್ರಕರಣದ ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆ ಬದಿಯಲ್ಲಿದ್ದ ಹಜರತ್ ಸೈಯದ್ ಪೀರ್ ದರ್ಗಾ ಕಟ್ಟಡಕ್ಕೆ ಹಾನಿ ಮಾಡಿದ ಕಿಡಿಗೇಡಿಗಳು ದರ್ಗಾ ಮುಂಭಾಗದಲ್ಲಿನ ಹೊಲದಲ್ಲಿ ಇದ್ದ ಮತ್ತೊಂದು ಸಣ್ಣದಾದ ಸಮಾಧಿ ಕಿತ್ತು…
ಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ,ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಜಂಬೂ ಸವಾರಿ ವೀಕ್ಷಿಸಲು ಹಾಗೂ ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2,000 ಹೆಚ್ಚುವರಿ ಯಾಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹೌದು ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಜಿಲ್ಲೆಗಳು ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿನಿಂದ ಶನಿವಾರದವರಿಗೆ ಹೆಚ್ಚು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಹೊರಡಲಿವೆ. ಜಿಲ್ಲಾ ಕೇಂದ್ರಗಳು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬಸ್ ಬರಲಿದ್ದು, ಅಕ್ಟೋಬರ್ 13 ಮತ್ತು 14ರಂದು ವಿಶೇಷ ವಾಹನಗಳ ಕಾರ್ಯಾಚರಣೆ ನಡೆಯಲಿದೆ.
ಕಲಬುರ್ಗಿ : ಉಚಿತ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಂಚ ಗ್ಯಾರಂಟಿಗಳಲ್ಲಿ ಗೃಹಜೋತಿ ಕೂಡ ಒಂದು ಪ್ರತಿ ಮನೆಗೂ ಕೂಡ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ ಈ ಒಂದು ಗ್ರಾಮದಲ್ಲಿ ಕರೆಂಟ್ ಬಿಲ್ ನೋಡಿಯೇ ಗ್ರಾಮಸ್ಥರು ಶಾಕ್ ಗೆ ಒಳಗಾಗಿದ್ದಾರೆ. ಹೌದು ಜೆಸ್ಕಾಂ ಕೊಟ್ಟ ಶಾಕ್‌ನಿಂದ ಕಲಬುರಗಿ ತಾಲೂಕಿನ ಕುಸನೂರು ಗ್ರಾಮಸ್ಥರು ಕಂಗಲಾಗಿದ್ದಾರೆ. ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಪಡೆದು ತಿಂಗಳಿಗೆ 100 ರಿಂದ 200 ರೂ. ಬಿಲ್ ಪಡೆಯುತ್ತಿದ್ದ ಕೂಸನೂರು ಗ್ರಾಮಸ್ಥರು, ಈ ತಿಂಗಳು ಬರೊಬ್ಬರಿ 18 ಸಾವಿರ, 20 ಸಾವಿರ, 49 ಸಾವಿರದಂತೆ ಅಡ್ಡಾದಿಡ್ಡಿ ಬಿಲ್ ನೋಡಿ ಕಂಗಾಲಾಗಿದ್ದಾರೆ. ಈ ವೇಳೆ ಗ್ರಾಮಕ್ಕೆ ಜೆಸ್ಕಾಂ ಎಇಇ ಭೇಟಿ ನೀಡಿದಾಗ ಅವರನ್ನು ತರಾಟೆಗೆ ತೆಗೆದುಕೊಂಡು, ಬಾಡಿಗೆ ಮನೆಯಲ್ಲಿದ್ದವರಿಗೂ 28 ಸಾವಿರ ಬಿಲ್ ಬಂದಿದೆ. ಎಲ್ಲಿಂದ ಕಟ್ಟಬೇಕು ಎಂದು ಗಲಾಟೆ ಮಾಡಿದರು. ಇನ್ನು…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಅಕ್ಟೊಬರ್ 14 ರವರೆಗೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದರು. ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ, ಪ್ರತ್ಯಕ್ಷ ಸಾಕ್ಷಿ ಬಿಟ್ಟರೆ ಬೇರೆ ಸಾಕ್ಷಿಯೇ ಇಲ್ಲ. ಕ್ರತ್ಯ ಸಾಬೀತುಪಡಿಸುವಂತಹ ಒಂದು ಅಂಶವೂ ಇಲ್ಲ. ರಿಮ್ಯಾಂಡ್ ಅರ್ಜಿ ಸಲ್ಲಿಸಿದರೆ ಕೋರ್ಟಿಗೆ ಕೇಸ್ ಡೈರಿ ಪ್ರತಿ ನೀಡಬೇಕು. ಕೇಸ್ ಡೈರಿಯಲ್ಲ ಡೈರಿಯ ಪ್ರತಿ ಸಲ್ಲಿಸಬೇಕು. ಏಕೆಂದರೆ ಕೆಸ್ ಡೈರಿ ಕೊಟ್ಟರೆ ಅದನ್ನು ತನಿಖಾಧಿಕಾರಿ ಪಡೆಯುತ್ತಾರೆ. ಹೀಗಾಗಿಯೇ ಕೆಸ್ ಡೈರಿಯ ಪ್ರತಿಯನ್ನು ಕೋರ್ಟಿಗೆ ಸಲ್ಲಿಸಬೇಕು.ಇದಕ್ಕೆ ಪ್ರಸನ್ನ ಕುಮಾರ್ ನಾವು ಕೇಸ್ ಡೈರಿ ಪ್ರತಿ ಸಲ್ಲಿಸಿದ್ದೇವೆ. ಗೊತ್ತಿಲ್ಲದಿದ್ದರೆ ಹಿರಿಯ ವಕೀಲರು ಆ ಬಗ್ಗೆ ವಾದ ಮಂಡಿಸಬಾರದು ಎಂದರು. ಈ ವೇಳೆ ದರ್ಶನ್ ಪರ ವಕೀಲ ಸಿವಿ ನಾಗೇಶ್, ಪವಿತ್ರ ಗೌಡ…
ಕಲಬುರಗಿ : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬಂದಂತಹ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ನಡೆದಿದೆ. ನಿನ್ನೆ ರಾತ್ರಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎನ್ನುವವರು ಸಾವನ್ನಪ್ಪಿದ್ದಾರೆ.ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಈ ಒಂದು ಭೀಕರ ಅಪಘಾತ ನಡೆದಿದೆ. ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಲಬುರ್ಗಿ : ಬಾಲಕಿಯರು ಇಬ್ಬರು ಬಟ್ಟೆ ತೊಳೆಯಲು ಎಂದು ಭೀಮಾನದಿಗೆ ತೆರಳಿದ್ದಾರೆ. ಈ ವೇಳೆ ಬಟ್ಟೆ ತೊಳೆದ ಬಳಿಕ ನದಿಯಲ್ಲಿ ಈಜಾಡುತ್ತಿದ್ದಾಗ ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಅಫ್ಜಲ್ ಪುರ ತಾಲೂಕಿನಲ್ಲಿ ನಡೆದಿದೆ. ಹೌದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಭೂಮಿಕಾ ದೊಡ್ಮನಿ (8) ಶ್ರಾವಣಿ ನಾಟಿಕಾರ್ (11) ನೀರು ಪಾಲಾಗಿರುವ ದುರ್ದೈವಿಗಳು ಎಂದು ತಿಳಿದು ಬಂದಿದೆ. ಭೀಮಾ ನದಿಯಲ್ಲಿ ಈ ಬಾಲಕಿಯರು ಬಟ್ಟೆ ತೊಳೆಯಲು ಎಂದು ಹೋಗಿದ್ದರು. ಬಟ್ಟೆ ತೊಳೆದ ನಂತರ ಬಾಲಕಿಯರು ನದಿಯಲು ಈಜಾಡಲು ಮುಂದಾಗಿದ್ದಾರೆ. ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಮನೆ ಕೊಚ್ಚಿ ಹೋಗುತ್ತಿದ್ದಳು. ಕೂಡಲೇ ಭೂಮಿಕಾಳನ್ನು ರಕ್ಷಿಸಲು ಹೋಗಿದ್ದ ಶ್ರಾವಣಿ ಕೂಡ ನೀರು ಪಾಲಾಗಿದ್ದಾಳೆ. ಭೀಮಾ ನದಿ ನೀರಿನ ರಭಸಕ್ಕೆ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಶ್ರಾವಣಿ ನಾಟಿಕರ್ ಶವವನ್ನು ಹೊರ ತೆಗೆದಿದ್ದಾರೆ. ಚಿಂಚೋಳಿ ಗ್ರಾಮದ ಶ್ರಾವಣಿ ನಾಟಿಕಾರ್ ಮೃತ…













