Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಕಾರು ಪಾರ್ಕ್ ಮಾಡಿ ಹೋಗುವವರೇ ಹುಷಾರ್.ಯಾಕೆ ಈ ಮಾತು ಹೇಳಲಾಗುತ್ತಿದೆ ಅಂದರೆ, ಬೆಳಗಾಗೋದ್ರೊಳಗೆ ನಿಮ್ಮ ಕಾರಿನ ಚಕ್ರಗಳೇ ಇರಲ್ಲ. ಹಾಗಾಗಿ ಪಾರ್ಕ್ ಮಾಡೋಕು ಮುನ್ನ ಸ್ವಲ್ಪ ಎಚ್ಚರದಿಂದ ಇರಿ. ಇದೀಗ ಪಾರ್ಕ್ ಮಾಡಿದ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳರು ಕದ್ದಿದ್ದಾರೆ. ಗಾಂಧಿನಗರ ಹೋಟೆಲ್ ಬಳಿ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಹುಬ್ಬಳ್ಳಿ ಮೂಲದ ಗೋವಿಂದ ಗೌಡರಿಗೆ ಈ ಒಂದು ಕಾರು ಸೇರಿದ್ದು ಕೆಲಸದ ನಿಮಿತ್ತ ಗೋವಿಂದ ಗೌಡ ಅವರು ಶನಿವಾರ ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿನಗರದ ಹೋಟೆಲ್ ಬಳಿ ತಮ್ಮ ಕಾರು ಪಾರ್ಕ್ ಮಾಡಿದ್ದರು.ಆದರೆ ಬೆಳಿಗ್ಗೆ ನೋಡುವಷ್ಟರಲ್ಲಿ ಕಾರಿನ ನಾಲ್ಕು ಚಕ್ರಗಳು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಕಾರಿನ ನಾಲ್ಕು ಚಕ್ರಗಳು ಮಾಯ ಆಗಿದ್ದನ್ನು ನೋಡಿ ಗೋವಿಂದ ಗೌಡ ದಂಗಾಗಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷನ ಗುಂಡಾಗಿರಿ ನಡೆದಿದ್ದು, ರಾತ್ರಿ 1 ಗಂಟೆಗೆ ಎಣ್ಣೆ ಕೊಡಲಿಲ್ಲ ಎಂದು ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ವಿರುದ್ಧ ಈ ಒಂದು ಆರೋಪ ಕೇಳಿ ಬರುತ್ತಿದೆ. ಸದಸ್ಯ ರಾಶ್ವೀಕ್ ಸೇರಿದಂತೆ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಲಾಗಿದೆ. ರಾತ್ರಿ 1 ಗಂಟೆಗೆ ಎಣ್ಣೆ ಕೊಡಲಿಲ್ಲ ಎಂದು ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದಾರೆ. ಮರುದಿನ ಬೆಳಗ್ಗೆ ಬಂದು ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಶಿಯರ್ ಮೇಲೆ ಹಲ್ಲಿಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಹಲ್ಲೆ ಮಾಡಿದರೂ ಕೂಡ ಕ್ಯಾಶಿಯರ್ ದೂರು ನೀಡಿಲ್ಲ. ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ ಆದರೆ ಕ್ಯಾಶರ್ ಮಾತ್ರ ದೂರು ನೀಡಿಲ್ಲ.

Read More

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಷರತ್ತು ಸಡಿಲಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಷರತ್ತು ಸಡಿಲಿಸಿ ಕೋರಿ ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಪಿ ಪಿ ಕಾಲಾವಕಾಶ ಕೋರಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘಿಸಿದ್ದಾರೆ. ಕೋರ್ಟ್ ಅನುಮತಿ ಪಡೆಯದೆ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಹೈಕೋರ್ಟ್ ಗೆ ಎಸ್‌ಪಿಪಿ ಅಶೋಕ್ ನಾಯಕ್ ಹೇಳಿಕೆ ನೀಡಿದರು. ಈಗಾಗಲೇ ಕೇಸ್ ಸಂಬಂಧ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು. ಅಲ್ಲದೇ ಕಳೆದ ಮಾರ್ಚ್ 14 ರಂದು ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್,…

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಸದ್ಯ ನಟಿ ರನ್ಯಾರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಡಿ ಆರ್ ಐ ಅಧಿಕಾರಿಗಳು ನಟಿ ರನ್ಯಾರಾವ್ ಅವರ ಪತಿ ಜತಿನ್ ಹುಕ್ಕೇರಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಜತಿನ್ ಹುಕ್ಕೇರಿ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಜತಿನ್ ಹುಕ್ಕೇರಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಹಾಗಾಗಿ ಜತಿನ್ ಹುಕ್ಕೇರಿಗೆ ಸದ್ಯಕ್ಕೆ ಈ ಒಂದು ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೇ ಇತ್ತೀಚಿಗೆ ನಟಿ ರನ್ಯಾ ರಾವ್ ದುಬೈಗೆ ತೆರಳಲು ಪತಿ ಜತಿನ್ ಹುಕ್ಕೇರಿ ಕ್ರೆಡಿಟ್ ಕಾರ್ಡ್ ಬಳಸಿ ಟಿಕೆಟ್ ಬುಕ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿರುವ ಜತಿನ್ ನಿವಾಸ ಪ್ರೆಸ್ಟೀಜ್ ಅಕ್ರಾಪೊಲಿಸ್ ಅಪಾರ್ಟ್ ಮೆಂಟ್ ನಿವಾಸದ…

Read More

ಕೋಲಾರ : ಕೋಲಾರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕ್ರಶರ್‌ನಲ್ಲಿ ಬಂಡೆ ಒಡೆಯಲು ಸ್ಫೋಟಿಸುವ ವೇಳೆ ಕಲ್ಲು ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ಮಾಲೂರು ತಾಲೂಕಿನ ಮಾಕಾರಹಳ್ಳಿ ಬಳಿ ನಡೆದಿದೆ. ಮೃತ ಕಾರ್ಮಿಕನನ್ನು ಆಂಧ್ರಪ್ರದೇಶ ಮೂಲದ ವೆಂಕಟೇಶ್ (60) ಎಂದು ತಿಳಿದುಬಂದಿದೆ. ಇನ್ನು ಇದೆ ಘಟನೆಯಲ್ಲಿ ಹರೀಶ್ ಮತ್ತು ಈಶ್ವರ್ ಎಂಬುವರಿಗೆ ಗಾಯಗಳಾಗಿವೆ. ಬಂಡೆಯನ್ನು ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಕಲ್ಲು ಬಂಡೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿತ್ರದುರ್ಗ : ಈಗಾಗಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ಕುರಿತು ಕಾಂಗ್ರೆಸ್ ನಾಯಕರು ಹಲವಾರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಮಧ್ಯ ಆಗಾಗ ದಲಿತ ಸಿಎಂ ಕೂಗು ಕೂಡ ಕೇಳಿ ಬರುತ್ತದೆ. ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಜಾತ್ರೆಯಲ್ಲಿ ಬಾಳೆಹಣ್ಣಿನ ಮೇಲೆ ನೆಕ್ಸ್ಟ್ ಸಿಎಂ ಸತೀಶ್ ಜಾರಕಿಹೊಳಿ ಎಂದು ಬರೆದು ರಥೋತ್ಸವಕ್ಕೆ ಎಸೆದು ಘೋಷಣೆ ಕೂಗಿದ್ದಾರೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಜಾತ್ರೆಯಲ್ಲಿ ಅಭಿಮಾನಿಗಳಿಂದ ಸತೀಶ್ ಜಾರಕಿಹೊಳಿ ನೆಕ್ಸ್ಟ್ ಸಿಎಂ ಎಂದು ಘೋಷಣೆ ಕೂಗಲಾಯಿತು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋ ಪ್ರದರ್ಶಿಸಿ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಅಲ್ಲದೆ ಬಾಳೆಹಣ್ಣಿನ ಮೇಲೆ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಬರೆದು ರಥದ ಮೇಲೆ ಬಾಳೆಹಣ್ಣು ಎಸೆದಿದ್ದಾರೆಸಚಿವ ಸತೀಶ್ ಬೆಂಬಲಿಗರು. ಸ್ವೀಟ್ ಕಾರ್ನ್ ಗಾಡಿಗೆ ಬೆಂಕಿ ಇದೇ ಒಂದು ನಾಯಕನಹಟ್ಟಿ ಜಾತ್ರೆಯಲ್ಲಿ ರಥೋತ್ಸವದ ವೇಳೆ ಏಕಾಏಕಿ ಸ್ವೀಟ್ ಕಾರ್ನ್…

Read More

ಬೆಂಗಳೂರು : ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ ಅದಕ್ಕೆ ಸ್ವಲ್ಪ ಕಾಯಿರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಇದೀಗ ಈ ಒಂದು ಹೇಳಿಕೆ ಭಾರಿ ಸಂಚಲನ ಮೂಡಿಸಿದ್ದು ಪವರ್ ಶೇರಿಂಗ್ ಕುರಿತು ಡಿಕೆ ಶಿವಕುಮಾರ್ ಸುಳಿವು ನೀಡಿದ್ರಾ ಎನ್ನುವ ಕುತೂಹಲ ಮೂಡಿಸಿದೆ. ಹೌದು ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾರೂ ಬೇಕಾದರೂ ಕೆಪಿಸಿಸಿ ಜವಾಬ್ದಾರಿ ತೆಗೆದುಕೊಳ್ಳಬಹುದು ಎಂದು ಹೇಳುವ ಮೂಲಕ ಪವರ್ ಶೇರ್ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ. ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲಾ ಮಟ್ಟದಲ್ಲಿ ಎರಡು ಹುದ್ದೆಗಳ ಬಗ್ಗೆ ಪ್ರಸ್ತಾಪ ಮಾಡಿದರು. ಆಗ ಅಲ್ಲಿಯೇ ಇದ್ದ ಡಿಕೆಶಿ ತಕ್ಷಣವೇ, ನೋಡ್ರಪ್ಪ, ಸಮಯ, ಸಂದರ್ಭ ನೋಡಿಕೊಂಡು ನಮ್ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಕೆಪಿಸಿಸಿ…

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಯಕನಹಟ್ಟಿ ರಥೋತ್ಸವದ ವೇಳೆ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ತಗುಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಸ್ಥಳೀಯ ಸೇವಾ ಕಾರ್ಯಕರ್ತರ ಸಭೆ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ. ಹೌದು ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನಾಯಕನಹಟ್ಟಿ ರಥೋತ್ಸವದ ವೇಳೆ ಈ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಜಾತ್ರೆಗೆಂದು ಸೇರಿದ ಭಕ್ತರು ದಿಕ್ಕಾಪಾಲಾಗಿ ಓಡಿ ಹೋಗಿ ಪ್ರಣ ಉಳಿಸಿಕೊಂಡಿದ್ದಾರೆ. ಈ ವೇಳೆ ಜಾತ್ರೆಯಲ್ಲಿನ ಸೇವಾ ಕಾರ್ಯಕರ್ತರು ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವೀಟ್ ಕಾರ್ನ್ ಗಾಡಿಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಸೇವಾ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಘಟನೆ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯದಲ್ಲಿ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಮೃತ ಬಾಲಕ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ ಕಾಗೆಪುರದಲ್ಲಿ ಈ ಒಂದು ಘಟನೆ ನಡೆದಿತ್ತು. ಗೋಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಂಕೇಶ್, ಊಟ ಸಪ್ಲೈ ಮಾಡುತ್ತಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಮದನ್ ಕಲ್ಯಾಣ ಮಂಟಪದ ಮ್ಯಾನೇಜರ್ ಕೃಷ್ಣ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ ಮೂರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಳವಳ್ಳಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ್ದ ವೈದ್ಯೆಗೆ ಇದೀಗ ಶೋಕಾಶ್ ನೋಟಿಸ್ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಮೇರೆಗೆ ಕಾರಣ ಕೇಳಿ ಇದೀಗ ನೋಟಿಸ್ ನೀಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಡಿಎಂಇ ಡಾ. ಸುಜಾತ ರಾಥೋಡ್ ಅವರಿಂದ ವೈದ್ಯೆ ಪ್ರಿಯದರ್ಶಿನಿಗೆ ನೋಟಿಸ್ ನೀಡಲಾಗಿದೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿಸೆ. ಹೌದು ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.…

Read More