Author: kannadanewsnow05

ಬೆಂಗಳೂರು : ಇಂದು ಬೆಳಿಗ್ಗೆ ಜಿಗಣಿ ಪೊಲೀಸರು ಮತ್ತೆ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ.ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಇಂದು ಬೆಂಗಳೂರಿನ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಜಡ್ಜ್ ಸಲ್ಮಾ ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಬಳಿಕ ಪಾಕಿಸ್ತಾನ ಪ್ರಜೆಗಳಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಬಂಧಿತ 14 ಪಾಕಿಸ್ತಾನದ ಪ್ರಜೆಗಳ ಪೈಕಿ ಇಬ್ಬರನ್ನು FRO ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. FRO (Foreigners Registration Office) ನಿಸಾರ್ ಅಹಮದ್ ಹಾಗೂ ಫರ್ರಾಂ ವಿದೇಶಿಯರ ನೋಂದಣಿ ಕಚೇರಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇದೆ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿರುವುದರಿಂದ ಗುಡ್ಡ ಕುಸಿದಿದೆ. ಕೊಟ್ಟಿಗೆಹಾರ, ಬಾಳೂರು, ಬಣಕಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಮಳೆ ಆರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಈ ವೇಳೆ ರಸ್ತೆಯ ಮೇಲೆ ಮಳೆಯ ನೀರ ನದಿಯಂತೆ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಳೆ ಹಾಗೂ ಗುಡ್ಡ ಕುಸಿತದಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಕಿಲೋ ಮೀಟರ್ ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಅಲ್ಲದೆ ಸವಾರರು ಕೂಡ ತೀವ್ರ ಪರದಾಟ ನಡೆಸುತ್ತಿದ್ದಾರೆ.

Read More

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಕೆ.ಎಸ್ ಈಶ್ವರಪ್ಪ ಅವರು, RCB ಸಂಘಟನೆ ಕಟ್ಟಲು ತಯ್ಯಾರಿ ಮಾಡಿಕೊಂಡಿದ್ದಾರೆ.ಈ ಹಿಂದೆ ಬಿಎಸ್​ವೈ ವಿರುದ್ಧ ಈಶ್ವರಪ್ಪ ರಾಯಣ್ಣ ಬ್ರಿಗೇಡ್​ ಕಟ್ಟಿದ್ದರು. ಇದೀಗ ವಿಜಯೇಂದ್ರ ವಿರುದ್ಧ ಆರ್​ಸಿಬಿ ಬ್ರಿಗೇಡ್​ ಕಟ್ಟಲು ಎಲ್ಲಾ ತಯಾರಿ ನಡೆದಿದ್ದು, ಇದಕ್ಕೆ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಆರ್​ಸಿಬಿ (ರಾಯಣ್ಣ,ಚನ್ನಮ್ಮ ಬ್ರಿಗೇಡ್‌) ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು. ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ. ನಾನು ಲಂಬಿ ರೇಸ್ ಕಾ ಗೋಡಾ ನೋಡೋಣ ಎಂದು ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಯೋಗ್ಯತೆ ಕಳೆದುಕೊಂಡಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ ವಿಜಯೇಂದ್ರ, ಎಲ್ಲರನ್ನು ವಿಶ್ವಾಸಕ್ಕೆ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತ ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತು. ಹೌದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತ ಹಗರಣದ ಕುರಿತಂತೆ, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ವರದಿ ಸಲ್ಲಿಸಿತು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇಡಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಇಡಿ ಸಲ್ಲಿಸಿರುವ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪರಿಜ್ಞಾನಕ್ಕೆ ಪಡೆದಿದೆ. https://twitter.com/dir_ed/status/1843977188007461301?t=2z7-WJy7E-pxMAew-NEGdg&s=19

Read More

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ನನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಂಧಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಕೂಡ ಅಬ್ದುಲ್ ಸತ್ತಾರ್ ಹಲವರನ್ನು ಜಾಲಕ್ಕೆ ಬೀಳಿಸಿ ಸುಲಿಗೆ ಮಾಡಿದ್ದ ಮುಮ್ತಾಜ್ ಅಲಿ ಪ್ರಕರಣದ A3 ಶಾಫಿ A 4 ಮುಸ್ತಫನನ್ನು ಕೂಡ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ A1 ಆರೋಪಿ ಆಯಿಷಾ, ಆಕೆಯ ಪತಿ A5 ಶೋಯೆಬ್ ಹಾಗೂ A6 ಸಿರಾಜ್ ನನ್ನು ಪೊಲೀಸರು ಬಂಧಿಸಿದ್ದರು. ಹಣಕ್ಕಾಗಿ ಮುಮ್ತಾಜ್ ಅಲಿ ಬ್ಲಾಕ್ ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಆರು ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಲ್ಲದೆ A1 ಆರೋಪಿ ಆಯೇಷ ಮಮ್ತಾಜ್ ಅಲಿಗೆ ನನ್ನನ್ನು ಮದುವೆ ಮಾಡಿ ಕೊಳ್ಳುವಂತೆ ಕಿರುಕುಳ ನೀಡಿದ್ದಳು. ಮದುವೆಯಾಗದಿದ್ದರೆ ಹಣಕ್ಕೆ ಬೇಡಿಕೆ…

Read More

ಕೊಪ್ಪಳ : ಬೈಕ್ ವೀಲಿಂಗ್ ತಡೆದಿದ್ದಕ್ಕೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪುಂಡರು ಥಳಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೊರವಲಯದಲ್ಲಿ ನಡೆದಿದೆ. ಗಂಗಾವತಿಯ ಹೊರವಲಯದಲ್ಲಿ ಪುಂಡರು ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ವೇಳೆ ಬೈಕ್ ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದಂತಹ ಮತ್ತೊಬ್ಬ ಕಾನ್ಸ್ಟೇಬಲ್ ಮೇಲು ಹಲ್ಲೆ ಮಾಡಿದ್ದಾರೆ. ಕೂಡಲೇ ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಪುಂಡರ ವಿರುದ್ಧ ಕಠಿಣ ಅಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಕುರಿತಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿಗೆ ಮಾಲ್ಡಿವ್ಸ್ ಅಧ್ಯಕ್ಷರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜನೆ ಮಾಡಲಾಗಿತ್ತು. ಔತನಕೂಟದಲ್ಲಿ ರಾಜ್ಯಪಾಲರದ ಥಾವರ್ ಚಂದ್ ಗೆಹ್ಲೊಟ್, ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ನಲ್ಲಿ ಕರ್ನಾಟಕ & ಮಾಲ್ಡೀವ್ಸ್ ನಡುವಿನ ಶೈಕ್ಷಣಿಕ, ಸಾಂಸ್ಕೃತಿಕ ವಿನಿಮಯವನ್ನು ಬಲಪಡಿಸಲು ಪ್ರಯತ್ನಿಸಲಾಗುತ್ತೆ ಎಂದು ತಿಳಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷರು ಮತ್ತು ಪ್ರಥಮ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ಮಹಿಳೆಯನ್ನು ಸ್ವಾಗತಿಸಲು ನನಗೆ ಗೌರವವಿದೆ. ಮಹಿಳೆ ಈ ನಗರದಲ್ಲಿ ವಿದ್ಯಾರ್ಥಿಯಾಗಿದ್ದಳು ಎಂಬುದನ್ನು ಗಮನಿಸುವುದು ಸಂತೋಷಕರವಾಗಿದೆ. ಬೆಂಗಳೂರಿನ ಪ್ರಮುಖ ಐಟಿ ವಲಯದೊಂದಿಗೆ ಪಾಲುದಾರಿಕೆಯಲ್ಲಿ ಮಾಲ್ಡೀವ್ಸ್ ಸರ್ಕಾರದ ಆಸಕ್ತಿಯು ಉತ್ತೇಜನಕಾರಿಯಾಗಿದೆ ಮತ್ತು ಭಾರತದ ಸಿಲಿಕಾನ್ ವ್ಯಾಲಿಯಾಗಿ, ಮಾಲ್ಡೀವ್ಸ್‌ನಲ್ಲಿ ಐಟಿ ಬೆಳವಣಿಗೆಯನ್ನು ಬೆಂಬಲಿಸಲು ನಾವು ಉತ್ಸುಕರಾಗಿದ್ದೇವೆ. ಮಾಲ್ಡೀವ್ಸ್‌ಗೆ ಭೇಟಿ ನೀಡುವ ಅನೇಕ ಪ್ರವಾಸಿಗರಿಗೆ ಕರ್ನಾಟಕದ ಹೆಸರಾಂತ ಕರಕುಶಲ ಮತ್ತು ಕೈಮಗ್ಗಗಳನ್ನು ಉತ್ತೇಜಿಸುವ ಮೂಲಕ ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ,…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಸದ್ಯ ಬಳ್ಳಾರಿ ಜಿಲ್ಲೆಯಲ್ಲಿ ಇದ್ದಾರೆ.ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಬಳ್ಳಾರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಬ್ಬರು ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರುವುದಕ್ಕೆ ಬಳ್ಳಾರಿಗೆ ಬಂದಿಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಜೈಲಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲ್ಲ ಎಂದು ತಿಳಿಸಿದರು. ಬಳ್ಳಾರಿ ಜೈಲಲ್ಲಿ ದರ್ಶನ್ ಇರುವ ಕಾರಣಕ್ಕೆ ಬಂದಿರಲಿಲ್ಲ ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ದರ್ಶನ್ ಇರುವ ಕಾರಣಕ್ಕೆ ಬಳ್ಳಾರಿಗೆ ಬಂದಿಲ್ಲ ಅನ್ನೋದು ಸುಳ್ಳು. ಆದರೆ ಜೈಲಲ್ಲಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಭೇಟಿ ಮಾಡಲ್ಲ ಎಂದು ಅವರು ತಿಳಿಸಿದರು. ಇನ್ನು ಮೈಸೂರಿನಲ್ಲಿ ದಲಿತ ಕಾಂಗ್ರೆಸ್ ನಾಯಕರಿಂದ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆಗ ಸಚಿವ ಎಸ್ ಸಿ ಮಹದೇವಪ್ಪ ಮನೆಗೆ ಹೋಗಿದ್ದಾರೆ. ಸಚಿವರ ಭೇಟಿಯ ವೇಳೆ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಸಚಿವರು ಸಭೆ ಸೇರಿದ್ದು ರಾಜಕೀಯ…

Read More

ಚಿಕ್ಕಮಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯ ಸಿಎಂ ಬದಲಾವಣೆ ಕುರಿತು ಕೂಗು ಕೇಳಿ ಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಅಂದರೆ ಸತೀಶ್ ಜಾರಕಿಹೊಳಿ ಎಂದು ಪರೋಕ್ಷವಾಗಿ ಸತೀಶ್ ಮುಂದಿನ ಸಿಎಂ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು. ಚಿಕ್ಕಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಯವರು ಸರಳ ಸಜ್ಜನ ರಾಜಕಾರಣಿ. ಸಿಎಂ ಸಿದ್ದರಾಮಯ್ಯ ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ನಂತರ ಮತ್ತೊಬ್ಬ ನಾಯಕ ಇದ್ದರೆ ಅದು ಸತೀಶ್ ಜಾರಕಿಹೊಳಿ ಎಂದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ಶಾಸಕ ಎಚ್.ಡಿ ತಮ್ಮಯ್ಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದು ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ನಾಯಕನಿದ್ದರೆ ಅದು ಸತೀಶ್ ಜಾರಕಿಹೊಳಿಯವರೇ. ಒಂದು ಕಡೆ ಡಿಕೆಶಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಾಕಷ್ಟು ಹಗ್ಗ ಜಗ್ಗಾಟ ನಡೆದಿತ್ತು. ಇದೀಗ ಈ ಒಂದು ಎಲ್ಲಾ ಜಟಾಪಟಿ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ಮಾಡಿದ್ದಾರೆ. ಹೌದು ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಮುಡಾ ಹಗರಣ ಸೇರಿದಂತೆ ಹಲವು ವಿಚಾರವಾಗಿ ರಾಜ್ಯಪಾಲರು ಹಲವು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ವರದಿ ಕೇಳಿದ್ದರು. ಅಲ್ಲದೆ ಕಾಂಗ್ರೆಸ್ ನಾಯಕರು ಕೂಡ ರಾಜ್ಯಪಾಲರ ಈ ಒಂದು ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು…

Read More