Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಗುತ್ತಿಗೆದಾರರೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ PDO ಅಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಮುನಿರಾಜು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಗುತ್ತಿಗೆದಾರ ವೆಂಕಟಾಚಲಯ್ಯ ಎಂಬವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಿದ ಕೆಲಸಕ್ಕೆ ಸಂಬಂಧಿಸಿದಂತೆ ಪಿಡಿಒ ಮುನಿರಾಜು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ರಾಮನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ರಾಮನಗರ ಲೋಕಾಯುಕ್ತ ಪೊಲೀಸರು ಪಿಡಿಒ ಮುನಿರಾಜು ಅವರನ್ನು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಪಿಡಿಒ ಮುನಿರಾಜುನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ನಡೆದಿದ್ದು ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಇದೀಗ ಬಿಜೆಪಿಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಹೌದು 6 ವರ್ಷಗಳ ಕಾಲ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯಿಂದ ಅವರನ್ನು ಉಚ್ಚಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕಾರಣ ಏನೆಂದರೆ ಪದೇಪದೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಯತ್ನಾಳ್ ಅವರಿಗೆ ಈಗಾಗಲೇ ಹಲವಾರು ಬಾರಿ ಶಿಸ್ತು ಸಮಿತಿಯು ನೋಟಿಸ್ ನೀಡಿತ್ತು. ಆದರೆ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ.
ನವದೆಹಲಿ : ಡಿಕೆ ಶಿವಕುಮಾರ್ ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ಉಳಿಸುವ ಯತ್ನದಲ್ಲಿ ಬಿ ವೈ ವಿಜಯೇಂದ್ರ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದರು. ದೆಹಲಿಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ, ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಮಾತನಾಡದಿರಲು ಕಾರಣ ಬಿವೈ ವಿಜಯೇಂದ್ರ. ಕಾಂಗ್ರೆಸ್ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ವಿಜೇಂದ್ರ ಮನೆಯಲ್ಲಿ ಭಿನ್ನರ ಸಭೆ ಮಾಡಿದ್ದಾರೆ. ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ ಹಾಗಾಗಿ ಬಿವೈ ವಿಜಯೇಂದ್ರಗು ನೋಟಿಸ್ ಕೊಡಬೇಕು ಎಂದು ಶಾಸಕ ಯತ್ನಾಳ್ ವಿಜಯೇಂದ್ರ ವಿರುದ್ಧ ಸರಣಿ ಆರೋಪ ಮಾಡಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ನನಗೆ ಉತ್ತರ ನೀಡುವಂತೆ ನೋಟಿಸ್ ನೀಡಿದಾಗ, ಆ ಒಂದು ನೋಟಿಸ್ ಗೆ ನಾನು ಉತ್ತರ ನೀಡುವ ಸಮಯದಲ್ಲಿ ಹೇಳಿದ್ದೆ. ಬಿವೈ ವಿಜಯೇಂದ್ರಗೂ ಸಹ ನೋಟಿಸ್ ನೀಡಬೇಕು ಎಂದು ಹೇಳಿದ್ದೆ. ನನಗಷ್ಟೇ ನೋಟಿಸ್ ಕೊಟ್ಟು ಅವರು ಸಾಚ ಅಂತ ಆಗಲ್ವಾ? ವಿಜೇತರಿಗೆ ನೋಟಿಸ್ ಕೊಡುತ್ತಿದ್ದರೆ…
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ರಜತ್ ಮತ್ತು ವಿನಯ್ ಗೌಡನನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಅದೇಶಿಸಿದ್ದಾರೆ. ವಿಚಾರಣೆ ಆರಂಭವಾದಗ ರಜತ್ ಮತ್ತು ವಿನಯ್ ಗೌಡ ಪರವಾಗಿ ವಕೀಲ ಪ್ರಕಾಶ್ ವಾದ ಮಂಡಿಸಿದರು. ಆರೋಪಿಗಳ ವಿರುದ್ಧ ಸುಮೊಟೊ ಕೇಸ್ ದಾಖಲು ಮಾಡಿದ್ದಾರೆ. ರೀಲ್ಸ್ ನಲ್ಲಿ ಮಾರಕಾಸ್ತ್ರ ಹಿಡಿದಿದ್ದಾರೆ ಎಂದು 1 ಕೇಸ್ ದಾಖಲಾಗಿದೆ. ಈ ಸೆಕ್ಷನ್ ನಲ್ಲಿ 3 ವರ್ಷದಿಂದ 7 ವರ್ಷಗಳವರೆಗೆ ಶಿಕ್ಷೆ ಇದೆ. ಇದು ಜಾಮೀನು ನೀಡುವಂತಹ ಪ್ರಕರಣವಾಗಿದೆ ಎಂದು ಆರೋಪಿಗಳಾದ ರಜತ್ ಮತ್ತು ವಿನಯ್ ಗೌಡ ಪರವಾಗಿ ವಕೀಲ ಪ್ರಕಾಶ್ ಅವರು ವಾದ ಮಂಡಿಸಿದರು. ಬಂಧನಕ್ಕೂ ಮುನ್ನ ಅಕ್ಷಯ್ ಸ್ಟುಡಿಯೋದಲ್ಲಿ ಮಹಜರು…
BREAKING : ಹೊಸದಾಗಿ ವಿದ್ಯುತ್ ಕನೆಕ್ಷನ್ ಪಡೆಯುವವರಿಗೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ : ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ KSRTC ಬಸ್ ಟಿಕೆಟ್ ಹಾಗೂ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ಸ್ಮಾರ್ಟ್ ಮೀಟರ್ ಕಡ್ಡಾಯವಾಗಿ ಅಳವಡಿಸಬೇಕು ಇಂದು ಇಂಧನ ಇಲಾಖೆ ಸಚಿವ ಕೆ ಜೆ ಚಾರ್ಜ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿದ್ದೇವೆ. ಈ ವರ್ಷ 56 ಸಬ್ ಸ್ಟೇಷನ್ ಖರೀದಿ ಮಾಡಿದ್ದೇವೆ. ಮುಂದಿನ ವರ್ಷ 100 ಸಬ್ ಸ್ಟೇಷನ್ ಖರೀದಿ ಮಾಡುತ್ತೇವೆ. ತೆಲಂಗಾಣ ಕರ್ನಾಟಕ ಬಿಟ್ಟರೆ ಎಲ್ಲಾ ಕಡೆಗೆ ಸ್ಮಾರ್ಟ್ ಮೀಟರ್ ಇದೆ. ಸ್ಮಾರ್ಟ್ ಮೀಟರ್ ಅಳವಡಿಕೆಗೆ 900 ರೂಪಾಯಿಗೆ ಸಬ್ಸಿಡಿ ಕೊಡ್ತಿದ್ದೇವೆ. ಮನೆ ಮನೆಗೆ ಹೋಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಬೇಕು ಎಂದರು. ಹೊಸದಾಗಿ ವಿದ್ಯುತ್ ಕನೆಕ್ಷನ್ ಪಡೆಯುವವರಿಗೆ ಹಾಗು ಟೆಂಪರ್ವರಿಯಾಗಿ ಪಡೆಯುವವರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯ. ಪರಮನೆಂಟ್ ವೇಳೆ ಅದೇ ಮೀಟರ್ ಹಾಕ್ತಾರೆ.…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಗ್ರೇಟರ್ ಬೆಂಗಳೂರು ವಿಧೇಯಕವನ್ನು ಇದೀಗ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಬಿಜೆಪಿ ಜೆಡಿಎಸ್ ವಿರೋಧದ ನಡೆಯು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಈ ಒಂದು ವಿಜಯದ ಬಿಲ್ ಪಾಸ್ ಮಾಡಿತು. ಆದರೆ ರಾಜ್ಯಪಾಲರು ಅಂಕಿತ ಹಾಕದೆ ಇದನ್ನು ವಾಪಸ್ ಕಳುಹಿಸಿದ್ದಾರೆ. ಹೌದು ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಈ ಒಂದು ವಿಧೇಯಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಿಜೆಪಿ ಜೆಡಿಎಸ್ ಪಕ್ಷೇತರ ನಡುವೆ ಬಿಲ್ ಪಾಸ್ ಮಾಡಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಬಿಬಿಎಂಪಿ ವಿಭಜನೆ ಮಾಡುವ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ವಾಪಸ್ ಕಳುಹಿಸಿದ್ದಾರೆ.
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಿಸ್ತು ಸಮಿತಿಯು ಇತ್ತೀಚಿಗೆ ಶಾಸಕರಾದಂತಹ ಎಸ್ ಟಿ ಸೋಮಶೇಖರ ಹಾಗೂ ಶಿವರಾಂ ಹೆಬ್ಬಾರ್ ಅವರಿಗೆ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ನೀಡಿದ ವಿಚಾರವಾಗಿ ಶಾಸಕ ಶಿವರಾಂ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬನಾಗಿದ್ದೇನೆ ಎಂದು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಭಯ ಇಲ್ಲ. ಹೈಕಮಾಂಡ್ ಹೇಳಿರುವ ಗಡುವಿನ ಒಳಗೆ ಉತ್ತರ ನೀಡುತ್ತೇನೆ. ಪಾಪ ಅಮಾಯಕ ಬಿಪಿ ಹರೀಶ್ ಗು ನೋಟಿಸ್ ಕೊಟ್ಟಿದ್ದಾರೆ. ಯಾರನ್ನೋ ರಕ್ಷಿಸಲು ಇನ್ಯಾರಿಗೋ ನೋಟಿಸ್ ಕೊಟ್ಟಿದ್ದಾರೆ ಜಿಲೇಬಿ ತಿನ್ನುವವರೇ ಬೇರೆ, ಜೈಲಿಗೆ ಹೋಗುವವರೇ ಬೇರೆ ಎಂದು ತಿಳಿಸಿದರು. ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ. ನಾನು ಬಿಜೆಪಿ ಶಾಸಕನಷ್ಟೇ ಅಲ್ಲ ಸರ್ಕಾರದ ಭಾಗವು…
ಬೆಂಗಳೂರು : ಇದೇ ಮಾರ್ಚ್ 31 ರಂದು ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಕೆ ಎಸ್ ಆರ್ ಟಿ ಸಿ ಸಂಸ್ಥೆಯಿಂದ ಎರಡು ಸಾವಿರಕ್ಕೂ ಅಧಿಕ ಬಸ್ಗಳ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಇದೀಗ ಸಿಹಿ ಸುದ್ದಿ ನೀಡಿದೆ. ಯುಗಾದಿ ಹಬ್ಬ ಹಿನ್ನೆಲೆ ಮಾರ್ಚ್ 28 ರಿಂದ 30ರವರೆಗೆ ಎರಡು ದಿನಗಳ ಕಾಲ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹೌದು ಮಾರ್ಚ್ 28ರಿಂದ 30 ವರೆಗೆ 2000 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆ ನಡೆಸಲಿವೆ. ಯುಗಾದಿ ಹಬ್ಬದ ನಿಮಿತ್ಯವಾಗಿ ಹೆಚ್ಚುವರಿ ಬಸ್ ಬಿಡಲಾಗಿದ್ದು, ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿನಗರ, ಸ್ಯಾಟಲೈಟ್, ಪೀಣ್ಯ ಬಸವ ನಿಲ್ದಾಣದಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚರಿಸಲಿವೆ. ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್…
ಬೆಳಗಾವಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ವಿದ್ಯಾರ್ಥಿನಿ ದೀಪಿಕಾ ಬಡಿಗೇರ್ ಫೇಲ್ ಅಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾ.25ರಂದು ಎಸ್ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.ದೀಪಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ಲಾಂಗ್ ಹಿಡಿದು ಸಾರ್ವಜನಿಕವಾಗಿ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಆರೋಪಿಗಳಾದಂತಹ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದಂತಹ ರಜತ್ ಕಿಶನ್ ಹಾಗೂ ವಿನಯ್ ಗೌಡನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೌದು ಆರೋಪಿಗಳಾದ ರಜತ್ ವಿನಯನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಕೋರ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.