Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ. ಕಡದಕಟ್ಟೆ ಗ್ರಾಮದ ನಿವಾಸಿ ಕಾರ್ತಿಕ್ (23) ಮೃತ ದುರದೇವಿ ಎಂದು ತಿಳಿದುಬಂದಿದೆ. ಯುಗಾದಿ ಬಳಿಕ ಪುಣ್ಯ ಕ್ಷೇತ್ರದಲ್ಲಿ ಕಾರ್ತಿಕ್ ಜಾತ್ರೆಗೆ ಹೋಗಿದ್ದ. ಗೋವಿನಕೋವಿ ಗ್ರಾಮದ ಬಳಿ ಇರುವ ಗೆಡ್ಡೆ ರಾಮೇಶ್ವರ ಪುಣ್ಯಕ್ಷೇತ್ರಕ್ಕೆ ಹೋಗಿದ್ದ ಈ ವೇಳೆ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದಾಗ ನೀರಿನಲ್ಲಿ ಮುಳುಗಿ ಕಾರ್ತಿಕ್ ಸಾವನಪ್ಪಿದ್ದಾನೆ. ನದಿಯಿಂದ ಕಾರ್ತಿಕ್ ಮೃತದೇಹವನ್ನ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಒಂದು ಪಾರ್ಟಿಯಾಗಿದೆ 9 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇರಾನ್ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಪರಿಣಾಮ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಮೇಲು ಬೀರಿದೆ. ಇದೀಗ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲಿ ಡೀಸೆಲ್ ಖರೀದಿ ಮಾಡುತ್ತಿದ್ದೇವೆ. ಆದರೆ ಟಿಕೆಟ್ ದರ ಜಾಸ್ತಿ ಮಾಡುವುದಿಲ್ಲ ಯುದ್ಧದ ಪರಿಣಾಮದಿಂದ ಬಲ್ಕ್ ನಲ್ಲಿ ಡೀಸೆಲ್ ದರ ಏರಿಕೆಯಾಗಿದೆ. ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಳಗಾವಿಯಲ್ಲಿ ವೃದ್ಧ ಉದ್ಯಮಿಗೆ 15 ಕೋಟಿ ಸೈಬರ್ ವಂಚನೆ ಎಸಗಲಾಗಿದೆ. ಹಿರಿಯ ನಾಗರಿಕರನ್ನೇ ಟಾರ್ಗೆಟ್ ಮಾಡಿ ಸೈಬರ್ ವಂಚಕರು ವಂಚನೆ ಎಸಿಗುತ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಇದೀಗ ವೃದ್ಧ ಉದ್ಯಮಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ವೃದ್ಧ ಉದ್ಯಮಿಗೆ ವಿಡಿಯೋ ಕಾಲ್ ಮಾಡಿ ಸೈಬರ್ ವಂಚಕರು ಬೆದರಿಸಿದ್ದಾರೆ. ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಲಿಸ್ಟ್ ನಲ್ಲಿ ಇದೆ ನೀವು ಮನೆ ಲಾಂಡ್ರಿಂಗ್ ಮಾಡುತ್ತಿದ್ದೀರಿ ಎಂದು ವೃದ್ಧ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ. ಬೇರೆ ಖಾತೆಗೆ ಹಣ ವರ್ಗಾಯಿಸಿ ಎಂದು ಅಕೌಂಟ್ ನಂಬರ್ ಕೊಟ್ಟಿದ್ದಾರೆ. ತನಿಖೆ ಮುಗಿದ ಬಳಿಕ ನಿಮ್ಮ ಹಣ ನಿಮಗೆ ವಾಪಸ್ ಕೊಡುತ್ತೇವೆ ಎಂದು ನಂಬಿಸಿದ್ದಾರೆ. ಈ ವೇಳೆ ಹಂತ ಹಂತವಾಗಿ 15 ಕೋಟಿ ಹಣ ಸೈಬರ್ ವಂಚಕರು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಬಳಿಕ ಸಂಪರ್ಕಕ್ಕೆ ಸಿಗದೇ ಇದ್ದಾಗ ಅನುಮಾನಗೊಂಡು ವೃದ್ಧ ಉದ್ಯಮಿ ಬೆಳಗಾವಿ ನಗರದ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 18ರಂದು ಈ ಒಂದು ಘಟನೆ ನಡೆದಿದ್ದು,…
ಬೆಂಗಳೂರು : 2026 ಐಪಿಎಲ್ ಹಬ್ಬಕ್ಕೆ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಂದು ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಹಾಗೂ ಹೈದರಾಬಾದ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಕಳೆದ ವರ್ಷ ಕಾಲ್ತುಳಿತ ಘಟನೆ ಸಂಭವಿಸಿದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೂ ಯಾವುದೇ ಪಂದ್ಯ ನಡೆಸಿಲ್ಲ. ಆ ಒಂದು ಘಟನೆ ಆದ ಬಳಿಕ ಫ್ರಾಂಚೈಸಿ ಎಚ್ಚೆತ್ತುಕೊಂಡಿದ್ದು, 35,000 ಸೀಟ್ ಸಾಮರ್ಥವಿದ್ದರೂ ಬಫರ್ ಜೋನ್ ನಿಗದಿ ಮಾಡಲಾಗಿದೆ. ಜನದಟ್ಟಣೆ ಪತ್ತೆಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಳಕೆ ಮಾಡಲಾಗುತ್ತಿದೆ. ಜನದಟ್ಟಣೆ ಕಂಡ ಕೂಡಲೇ ಬೋರ್ಡಿಂಗ್ ಪ್ರದೇಶ ಬಂದ್ ಮಾಡಲಾಗುತ್ತದೆ. ತುರ್ತು ಚಿಕಿತ್ಸೆಗೆ ಸ್ಟೇಡಿಯಂ ಬಳಿ 8 ಆಂಬುಲೆನ್ಸ್ ಲಭ್ಯವಿರುತ್ತದೆ. 25,000 ಜನರಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಆಂಬುಲೆನ್ಸ್ ಇರಲಿದೆ. 35 ಸೀಟ್ ಸಾಮರ್ಥ್ಯ ಇದ್ದರೂ ಕೂಡ 28,000 ಪ್ರೇಕ್ಷಕರಿಗೆ ಮಾತ್ರ ಅವಕಾಶ ಇರಲಿದೆ.
ದಾವಣಗೆರೆ : ಇಂದು ದೇಶದಾದ್ಯಂತ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು ಆದರೆ ದಾವಣಗೆರೆಯಲ್ಲಿ ರಂಜಾನ್ ಹಿನ್ನೆಲೆಯಲ್ಲಿ ನಮಾಜ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ. ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೆನೂ ದಾಳಿ ಮಾಡಿದ್ದು, ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ನಮಾಜ್ ಮಾಡುವ ವೇಳೆ ಯುವಕರು ಹೆಜ್ಜೆನುಗೂಡಿಗೆ ಕಲ್ಲು ಎಸೆದಿದ್ದಾರೆ. ತಕ್ಷಣ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮಾದನಾಯಕನಹಳ್ಳಿ ಬಳಿ ಲಾರಿಗೆ ಸಿಲುಕಿ ತಂದೆ ತಾಯಿಯ ಎದುರೇ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ನಾಲ್ಕು ವರ್ಷದ ಬಾಲಕಿ ನಿಶಿಕ ಸಾವನಪ್ಪಿದ್ದಾಳೆ. ತಂದೆ ತಾಯಿ ಎದುರುಗಡೆನೇ ನಾಲ್ಕು ವರ್ಷದ ಬಾಲಕಿ ನಿಷಿಕಾ ಸಾವನಪ್ಪಿದ್ದಾಳೆ. ಕೈ ಹಿಡಿದುಕೊಂಡು ರಸ್ತೆಯಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಂದು ಮಗು ಕಂಕಗಳಲ್ಲಿ ಇಟ್ಟುಕೊಂಡಿರುತ್ತಾರೆ. ನೋಡು ನೋಡುತ್ತಿದ್ದಂತೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು ಲಾರಿ ಸಿಲುಕಿ ಸಾವನಪ್ಪಿದ್ದಾಳೆ. ತಾಯಿಯ ಜೊತೆಗೆ ದೇವಸ್ಥಾನಕ್ಕೆ ಬಾಲಕಿ ತೆರಳುತ್ತಿದ್ದ ವೇಳೆ ಈ ಒಂದು ಘಟನೆ ನಡೆದಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ರಾಯಚೂರು : ರಾಯಚೂರಿನಲ್ಲಿ ಯುಗಾದಿ ಹಬ್ಬದ ದಿನ ಘೋರ ದುರಂತ ಒಂದು ಸಂಭವಿಸಿದ್ದು ಯುಗಾದಿ ಹಬ್ಬ ಆಚರಣೆ ಮಾಡಿದ ನಂತರ ಹೋಳಿ ಬಣ್ಣ ಆಟ ಆಡಿ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನಿರುಪಾಲ ಆಗಿರುವ ಘಟನೆ ಜಿಲ್ಲೆಯ ಅರಕೇರಾ ತಾಲೂಕಿನ ನಾಗೋಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ನಾರಾಯಣಪೂರ ಬಲದಂಡೆ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬುದ್ದಿನ್ನಿ ಗ್ರಾಮದ ನಿವಾಸಿ 20 ವರ್ಷದ ಗಂಗಾಧರ ಮೃತ ದುರ್ದೈವಿ. ಹೋಳಿ ಬಳಿಕ ಸ್ನೇಹಿತರೊಂದಿಗೆ ಸ್ನಾನ ಮಾಡಲು ಕಾಲುವೆಗೆ ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದ. ಮಾಹಿತಿ ತಿಳಿದು ಗ್ರಾಮಸ್ಥರು ನಿರಂತರ ಶೋಧ ಕಾರ್ಯ ನಡೆಸಿದ್ದರು. ನಾಗೋಲಿ ಗ್ರಾಮದ ಬಳಿ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಗಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಗೋವಿನದೊಡ್ಡಿ ಗ್ರಾಮದಲ್ಲಿ ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲಾಗಿದ್ದಾನೆ. ಯುಗಾದಿ ಹಬ್ಬದ ಕರಿ ಹಿನ್ನೆಲೆ ಹೋಳಿ ಆಟವಾಡಿದ್ದ…
ಹಾಸನ : ಜೂಜಾಟದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ ಈ ವೇಳೆ ಓಡುವಾಗ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಯುಗಾದಿ ಹಿನ್ನೆಲೆ ನಿರ್ಜನ ಪ್ರದೇಶದಲ್ಲಿ ಯುವಕರು ಜೂಜು ಆಡುತ್ತಿದ್ದರು. ಈ ವಿಚಾರ ತಿಳಿದು ಅಡ್ಡಿಯ ಮೇಲೆ ದಾಳಿ ಮಾಡಿದ್ದಾರೆ. ಆಗ ಸ್ಥಳದಿಂದ ತಪ್ಪಿಸಿಕೊಳ್ಳಲು ಯುವಕರು ಕೂಡಿದರೆ ಈ ವೇಳೆ ಆಯತ ಬಿದ್ದು 34 ವರ್ಷದ ಪ್ರವೀಣ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ ಜಾವಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಮರಣೋತ್ತರ ಪರೀಕ್ಷೆಗಾಗಿ ಪ್ರವೀಣ್ ಶಿವ ವನ್ನು ಹಾಸನದ ಹಿಂಸೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಶವದ ಮೇಲೆ ರಕ್ತದ ಕಲೆ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳೆಯರನ್ನು ಕೇವಲ ಮನೆಯ ಕೆಲಸಕ್ಕೆ ಸೀಮಿತಗೊಳಿಸದೆ, ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿ ಮಾಡುವ ಉದ್ದೇಶದಿಂದ ‘ಅಕ್ಕ ಕೆಫೆ’ (Akka Cafe) ಯೋಜನೆಯನ್ನು ಜಾರಿಗೆ ತಂದಿದೆ. ನೀವು ಅಥವಾ ನಿಮ್ಮ ಮನೆಯ ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಕನಸು ಕಂಡಿದ್ದರೆ, ಈ ಯೋಜನೆ ಅದಕ್ಕೆ ಭದ್ರ ಬುನಾದಿ ಹಾಕಿಕೊಡಲಿದೆ. 1. ಯೋಜನೆಯ ಉದ್ದೇಶ ಮತ್ತು ಗುರಿ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶ. ರಾಜ್ಯಾದ್ಯಂತ ಒಟ್ಟು 2,500 ಅಕ್ಕ ಕೆಫೆಗಳನ್ನು ಸ್ಥಾಪಿಸಲು ಸರ್ಕಾರ ಗುರಿ ಹೊಂದಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಇವು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. 2. ಸರ್ಕಾರ ನೀಡುವ ಆರ್ಥಿಕ ಸಹಾಯ ಎಷ್ಟು?: ಒಂದು ಸುಸಜ್ಜಿತ ಕೆಫೆ ಅಥವಾ ಹೋಟೆಲ್ ಆರಂಭಿಸಲು ದೊಡ್ಡ ಮಟ್ಟದ ಬಂಡವಾಳ ಬೇಕಾಗುತ್ತದೆ. ಇದನ್ನು ಮನಗಂಡ ಸರ್ಕಾರವು: ಕೆಫೆ ಸ್ಥಾಪನೆಗೆ ಬೇಕಾದ ಫರ್ನಿಚರ್ (Furniture), ಪಾತ್ರೆಗಳು ಮತ್ತು ಇತರ ಪರಿಕರಗಳನ್ನು ಖರೀದಿಸಲು 15 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡುತ್ತದೆ.…













