Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನ್ನ ಡೆತ್ ನೋಟ್ನಲ್ಲಿ ಮಹಾಲಕ್ಷ್ಮಿ ಕುರಿತ ಹಲವು ವಿಷಯಗಳನ್ನು ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಹೌದು ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮಹಾಲಕ್ಷ್ಮಿ ಕುರಿತಂತೆ ಹಲವು ವಿಷಯಗಳನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಹಲವು ವಿಷಯಗಳು ಪೊಲೀಸರ ತನಿಖೆಯ ವೇಳೆ ಬಹಿರಂಗವಾಗಿವೆ. ಡೆತ್ ನೋಟ್ ನಲ್ಲಿ ನಾನು ಅವಳನ್ನು ಕೊಲ್ಲದಿದ್ದರೆ ನನ್ನನ್ನು ಕೊಲ್ಲುತ್ತಿದ್ದಳು ಅಂತ ಆತ್ಮಹತ್ಯೆ ಮಾಡಿಕೊಂಡ ಹಂತಕ ಮುಕ್ತಿ ರಂಜನ್ ಸಾಯುವ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದ ಮಹಾಲಕ್ಷ್ಮಿ ಕೊಲೆ ರಹಸ್ಯ ಈಗ ಬಯಲಾಗಿದೆ. ಡೆತ್ ನೋಟ್ ನಲ್ಲಿನ ರಹಸ್ಯ ಏನು? ಮಹಾಲಕ್ಷ್ಮಿ ತನ್ನನ್ನು ಕೊಲ್ಲಲು ಮುಂದಾಗಿದ್ದಳು ಮತ್ತು ದೇಹವನ್ನು ಎಸೆಯುವುದಕ್ಕೆ ಕಪ್ಪು ಸೂಟ್‌ಕೇಸ್ ಸಹ ಖರೀದಿಸಿದ್ದಳು ಎಂದು ಬರೆದಿದ್ದಾನೆ.…

Read More

ಬೀದರ್ : ಪೋಷಕರ ಜೊತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುಕೇಶ್ ಭೀಮಣ್ಣ ಮೊಳಕೆರ (16) ಎಂಬ ಬಾಲಕ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಮೇಹಕರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಕೇಶ್ ಸೋಯಾಬೀನ್ ಕಟಾವಿಗೆ ತೆರಳಿದ್ದ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಮಹಿಳಾ ಅಧಿಕಾರಿ, ಶಿಕ್ಷಕಿಯರು ಹಾಗೂ ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.ಈ ಸಮಿತಿಯು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕಿಯರ ದೂರು ಪರಿಶೀಲನೆ ನಡೆಸುತ್ತದೆ. ಅಲ್ಲದೆ ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿಯೂ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟ ಚೇತನ ಅಹಿಂಸಾ ಸೇರಿದಂತೆ ಹಲವು ಹಿರಿಯ ನಟ ನಟಿಯರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇರಳ ಮಾದರಿಯಲ್ಲಿ ಹೇಮಾ ಸಮಿತಿ ರಚನೆ ಮಾಡಿ ಎಂದು…

Read More

ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ/ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಭಾರತದ ಮೂರನೇ ಅತಿದೊಡ್ಡ ಭೂಒಡೆಯ ಆಗಿದೆಯಾ ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ ? ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ ? ಅಸಲೀಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು ? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ. ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್…

Read More

ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ ಬಿಜೆಪಿ ಅನಾಯಾಸವಾಗಿ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಗೆಲುವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸದ ಪ್ರತೀಕವಾಗಿದೆ, ಮುಂಬರಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಮೋದಿಯವರ ಮ್ಯಾಜಿಕ್ ನಡೆಯಲಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದರು.

Read More

ಬೆಂಗಳೂರು : ಇಂದು ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್‍ ಪೋಸ್ಟ್‌ಗಳಲ್ಲಿ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೀದರ್, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ, ಬೆಳಗಾವಿ ಆರ್‌ಟಿಓ ಚೆಕ್‍ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದು, ಹಲವೆಡೆ ನಗದು ವಶಪಡಿಸಿಕೊಂಡಿವುದಾಗಿ ವರದಿಯಾಗಿದೆ. ಹೌದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ವೇಳೆ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ ಬಳಿ ಇರುವ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 2 ಲಕ್ಷ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಇನ್ನು ಬಳ್ಳಾರಿ ತಾಲೂಕಿನ ಪಿ.ಡಿ.ಹಳ್ಳಿ ಆರ್‌ಟಿಓ ಚೆಕ್‍ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ, ಜಿಲ್ಲೆಯ ಹಗರಿ ಚೆಕ್ ಪೋಸ್ಟ್ ನಲ್ಲಿ 45,000 ನಗದು ಪತ್ತೆ ಹಚ್ಚಿ, ನಗದು ಹಣ ಸೇರಿದಂತೆ ಹಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

Read More

ವಿಜಯನಗರ : ರಾಜ್ಯದಲ್ಲಿ ಇಂದು ಮತ್ತೊಂದು ಘೋರ ದುರಂತ ನಡೆದಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಬಳಿ ಒಂದು ದುರಂತ ನಡೆದಿದೆ. ಹೌದು ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಮೂವರು ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ಒಂದು ಘೋರ ದುರಂತ ಸಂಭವಿಸಿದೆ. ಗ್ರಾಮದ ಸಾಗರ್ (14) ಗುರು (14) ಹಾಗೂ ವಿನಯ್ (11) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಕೆರೆಯಲ್ಲಿ ಈಜಲು ಹೋಗಿದ್ದರು ಖಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More

ನವದೆಹಲಿ : ತುಮಕೂರಿನ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂದು ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಿದ್ದಾರೆ. ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ತುಮಕೂರು– ರಾಯದುರ್ಗ ಮತ್ತು ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆಯೂ ಮೋದಿ ಅವರಿಗೆ ಸೋಮಣ್ಣ ಮನವಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ತಮ್ಮನಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಕೊಲೆ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ಇದಕ್ಕೂ ಮುನ್ನ ಕಳೆದ ವಿಚಾರಣೆಯ ವೇಳೆ ಪೊಲೀಸರ ಹಲವು ಲೋಪಗಳನ್ನು ಎತ್ತಿ ಹಿಡಿದು ದರ್ಶನ್ ಪರ ವಕೀಲರಾದಂತಹ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇದಕ್ಕೆ ಪ್ರಸನ್ನ ಕುಮಾರ್ ಅವರು ಎಲ್ಲ ಪ್ರಶ್ನೆಗಳಿಗು ನಮ್ಮಲ್ಲಿ ಉತ್ತರವಿದೆ ಎಂದು ಕೊನೆಯಲ್ಲಿ ತಿಳಿಸಿದ್ದರು. ಇಂದು ಅದಕ್ಕೆ ಪ್ರತಿಯಾಗಿ ಪೊಲೀಸ್ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಮಾಧ್ಯಮಗಳಿಗೆ ಪೊಲೀಸರಿಂದ ಮಾಹಿತಿ ಸೋರಿಕೆಯಾಗಿಲ್ಲ. ಪ್ರತಿ ಬಾರಿ ಆರೋಪಿಗಳ ಪರ ವಕೀಲರು ಸಂದರ್ಶನ ಕೊಡುತ್ತಿದ್ದಾರೆ. ಸುದ್ದಿ ಬರಬಾರದೆನ್ನುವರು ಸಂದರ್ಶನ ಯಾಕೆ ಕೊಟ್ಟಿದ್ದು? ಮಾಧ್ಯಮಗಳ ವರದಿಯಿಂದ ಕೇಸ್ ಪೂರ್ವಾಗ್ರಹಕ್ಕೆ ಒಳಗಾಗುವುದು ಎಂಬುವುದು ಸರಿಯಲ್ಲ. ಮಾಧ್ಯಮಗಳಿಗೆ ಪೊಲೀಸರಿಂದ ಮಾಹಿತಿ ಸೋರಿಕೆಯಾಗಿಲ್ಲ ಎಂದು ವಾದಿಸಿದರು.…

Read More

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತೀವ್ರ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಒಂದು ಕಡೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ ಎಂದು ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ನಾವೆಲ್ಲ ಅವರ ಕೈ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಸದ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದರು. ಇನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ನೀವು ಅವರನ್ನೇ ಕೇಳಿ ಎಂದು ತಿಳಿಸಿದರು.

Read More