Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಕಲ್ಕತ್ತಾದ ಟ್ರೈನಿ ವೈದ್ಯೇಯ ಮೇಲೆ ನಡೆದಿರುವ ಅತ್ಯಾಚಾರಕ್ಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಹೋರಾಟಗಳು ನಡೆಯುತ್ತಿರುವಾಗ ಇದೀಗ ರಾಜ್ಯದಲ್ಲಿ ಕೂಡ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದೀಗ ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ ನಡೆದಿದೆ. ಘಟನೆ ಖಂಡಿಸಿ ಹಾಸನದಲ್ಲಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಸನ ಡಿಸಿ ಕಚೇರಿದರು ಧರಣಿ ನಡೆಸಿ ಮನವಿ ಸಲ್ಲಿಕೆ ಮಾಡಲಾಗಿದೆ. ಆರೋಪಿ ವಿರುದ್ಧ ವಿರುದ್ದ ಕ್ಷಣ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿಬಂದಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಅಲ್ಲದೆ ಇನ್ನೊಂದು ಕಡೆ ಗಣಿ ಹಗರಣದ ಸಂಬಂಧ HD ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ JDS ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಟ್ವೀಟ್ ನಲ್ಲಿ ಕುಂಬಳಕಾಯಿ ಕಳ್ಳ ಎಂದರೆ, ಹೆಗಲು ಮುಟ್ಟಿ” ನೋಡುವ ಸಿದ್ದರಾಮಯ್ಯ ಗೌರವಾನ್ವಿತ ರಾಜ್ಯಪಾಲರು ಮುಡಾ ಸ್ಕ್ಯಾಮ್ ಬಗ್ಗೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದೇ ತಡ “ಸುಳ್ಳು”ರಾಮಯ್ಯಗೆ ನಡುಕ ಶುರುವಾಗಿದೆ.”ಕಪ್ಪು ಚುಕ್ಕೆ” ಮೇಲೆ “ವೈಟ್ನರ್ ಹಾಕಿ” ಸಾಕ್ಷ್ಯ ನಾಶದಲ್ಲಿ “ಸಿದ್ಧಹಸ್ತ”ರಾದವರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲು “ಸಿದ್ಧ”ರಾಗಿ ಎಂದು ಜೆಡಿಎಸ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಹಾಗಾದ್ರೆ ಕಾಂಗ್ರೆಸ್ ಹೇಳಿದ್ದೇನು? ಕಳ್ಳನ ಮನಸು ಉಳ್ಳುಳ್ಳಗೆ! ಗಣಿ ಹಗರಣದ ತನಿಖೆಗೆ ಅನುಮತಿ ಕೋರಿದ ಮತ್ತೊಂದು ಪತ್ರ ರಾಜ್ಯಪಾಲರ ಟೇಬಲ್ HD ಕುಮಾರಸ್ವಾಮಿ ಅವರಲ್ಲಿ ಉದ್ವೇಗ, ಆತಂಕ ಮಿತಿ ಮೀರಿದೆ.ಆ ಆತಂಕದಲ್ಲೇ…
ಬೆಂಗಳೂರು : ಗ್ರಾಮೀಣ ಭಾಗದಲ್ಲಿನ ಆಸ್ಪತ್ರೆಗಳಲ್ಲಿ ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ, ಪಿಎಚ್ಒ ಹಾಗೂ ಎಚ್ಎಒ ಹುದ್ದೆಗಳು ಶೇ.40ರಷ್ಟು ಖಾಲಿ ಇವೆ. ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು, ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವಂತೆ ಹಣಕಾಸು ಇಲಾಖೆಯನ್ನು ಕೋರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು. ಕೋಲಾರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೈದ್ಯರು, ದಾದಿಯರು ಹಾಗೂ ಆಡಳಿತ ವರ್ಗ ಸೇರಿದಂತೆ ಸುಮಾರು ಶೇ.40 ರಷ್ಟು ಹುದ್ದೆಗಳು ಖಾಲಿ ಇವೆ. ಈ ಕಾರಣದಿಂದಾಗಿ ರಾಜ್ಯದ ಜನರಿಗೆ ಸಾಕಷ್ಟು ತೊಂದರೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವಂತೆ ಹಣಕಾಸು ಇಲಾಖೆಗೆ ಕೋರಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅಲ್ಲದೆ ಮುಂದಿನ 2 ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನ ಭರ್ತಿ ಮಾಡುವ ಭರವಸೆ ನೀಡಿದ್ದಾರೆ.ಸದ್ಯ ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಆಡಳಿತಾತ್ಮಕ ಹುದ್ದೆಗಳಲ್ಲಿರುವಂತಹ ತಜ್ಞರ ವೈದ್ಯರನ್ನು ಮರಳಿ ಅದೇ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತಿದ್ದು, ಶೀಘ್ರವೇ ರಾಜ್ಯದಲ್ಲಿ ಖಾಲಿಯಿರುವ ಡಿಎಚ್ಒ…
ಆಂಧ್ರಪ್ರದೇಶ : ಆಂಧ್ರಪ್ರದೇಶದ ಅಚ್ಚುತಪುರಂ ಸಮೀಪವಿರುವ ಕಂಪನಿ ಒಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು 15 ಜನರು ದಾರುಣವಾಗಿ ಸಾವನ್ನಪ್ಪಿದ್ದು, 31 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಆಂಧ್ರಪ್ರದೇಶದ ಅಚ್ಚುತಪುರಂ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಅಚ್ಚುತಪುರಂ ಸಮೀಪ ಇರುವ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡಿದೆ. ಈ ವೇಳೆ 15 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.ಈ ಒಂದು ಘಟನೆಯಲ್ಲಿ 31ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, A2 ಆರೋಪಿಯಿಂದ A1 ಆರೋಪಿಯನ್ನಾಗಿ ಮಾಡಲು ಇದೀಗ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರು ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಒಂದು ಪ್ರಕರಣದಲ್ಲಿ ಪವಿತ್ರ ಗೌಡಾಳನ್ನು A1 ಆರೋಪಿನ್ನಾಗಿ ಮಾಡಲಾಗಿದ್ದು, ದಷ್ಟ ದರ್ಶನ ಅವರನ್ನು A2 ಆರೋಪಿನ್ನಾಗಿ ಪ್ರಕರಣ ದಾಖಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು A2 ನಿಂದ A1 ಆರೋಪಿಯನ್ನಾಗಿ ಮಾಡಿ ಚಾರ್ಜ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ನಟ ದರ್ಶನ ಅವರನ್ನು A2 ಆರೋಪಿಯನ್ನಾಗಿ ಮಾಡಲಾಗಿತ್ತು. ಅಲ್ಲದೆ ಪವಿತ್ರ ಗೌಡರನ್ನು ಮೊದಲ ಆರೋಪಿ ಮಾಡಲಾಗಿತ್ತು. ಹಾಗಾಗಿ ಇದೀಗ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಮುಡಾ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಆರೋಪಗಳ ಮೇಲೆ ಆರೋಪಗಳು ಮಾಡುತ್ತಿದ್ದಾರೆ. ಇವೆಲ್ಲದರ ಮಧ್ಯೆ ಇದೀಗ ಸಿದ್ದರಾಮಯ್ಯ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿ ಮುಡಾದ ಮೂಲ ದಾಖಲೆಗಳಿವೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪ ಮಾಡಿದ್ದಾರೆ. ಹೌದು ಮುಡಾ ಹಗರಣದ ಮೂಲ ದಾಖಲೆಗಳು ಸಿಎಂ ಸಿದ್ದರಾಮಯ್ಯ ಅವರ ಬಳಿ ಇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ, ಡಿಸಿ, ಮುಡಾ ಆಯುಕ್ತರು ಮತ್ತು ಅಧ್ಯಕ್ಷರು ಸೇರಿ ಹಲವರಿಗೆ ಪತ್ರ ಬರೆದಿದ್ದಾರೆ. ಆರ್ಟಿಐನಲ್ಲಿ ದಾಖಲೆ ಕೇಳಿದ್ದೆ ಆದರೆ, ಮುಡಾ ಕಚೇರಿ ಕೊಟ್ಟಿಲ್ಲ. ಬದಲಿಗೆ ಆ ದಾಖಲೆಗಳನ್ನ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯರಿಗೆ ಆ ದಾಖಲೆಗಳು ಹೇಗೆ ಸಿಕ್ಕವು ಎಂದು ಪ್ರಶ್ನಿಸಿದ್ದಾರೆ. ಆ ದಾಖಲೆ ಸಿಎಂ ಅವರ ಮನೆಯಲ್ಲೇ ಇರಬೇಕು. ಈ ಕುರಿತು ಸ್ಪಷ್ಟನೆ ನೀಡುವಂತೆ, ಜೊತೆಗೆ ಆದಷ್ಟು…
ಕೊಲ್ಕತ್ತ : ಕೊಲ್ಕತ್ತಾದಲ್ಲಿ ಇತ್ತೀಚೆಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ನಂತರ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆಯೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪೊದೆಯೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಗ್ರಾಮದ ರಸ್ತೆ ಬದಿಯ ಪೊದೆಯಲ್ಲಿ ಇಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಆ ಶವದ ಮೇಲೆ ಹಲವಾರು ಗಾಯಗಳಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮೊದಲು ಶವವನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆನಂದಪುರದ ಪೊದೆಗಳ ಹಿಂದೆ ಅಪರಿಚಿತ ಮಹಿಳೆಯ ಶವವನ್ನು ಪತ್ತೆ ಮಾಡಿದ ಸ್ಥಳೀಯ ನಿವಾಸಿಗಳು ಆಕೆಯನ್ನು ಗುರುತಿಸಲು ಸಾಧ್ಯವಾಗದ ಕಾರಣ ಅವರು ಆ ಪ್ರದೇಶದವರಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದಾರೆ.ಈ ಬಗ್ಗೆ ತನಿಖೆ ಮುಂದುವರಿದಿದ್ದು,…
ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಟ್ರಾಫಿಕ್ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರ ವಹಿಸುವ ಕೆಲಸ ಆಗುತ್ತಿದೆ. ಅಲ್ಲದೆ ರೌಡಿಶೀಟರ್ ಗಳ ಬಗ್ಗೆಯೂ ಗಮನಹರಿಸುತ್ತೇವೆ.ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು ಎಂದು ತಿಳಿಸಿದರು. ಬಿಬಿಎಂಪಿಯ 63 ಉಪ ವಿಭಾಗಗಳಲ್ಲಿ ತೆರೆದ…
ಚಿಕ್ಕಬಳ್ಳಾಪುರ : ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಪ್ರಕರಣ ಘಟನೆ ಮಾಸುವ ಮುನ್ನವೇ, ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರದಲ್ಲಿ 65 ವರ್ಷದ ವೃದ್ಧೆಯ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹೌದು ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಇರ್ಫಾನ್ ಎನ್ನುವ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಈ ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಪನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು : ಹಗರಣಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ಹೊಸ ಟ್ವಿಸ್ಟ್ಗಳು ಹೊರಬರುತ್ತಿವೆ. ಇದೀಗ ಅಕ್ರಮ ಆರೋಪ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸ್ಪಷ್ಟೀಕರಣ ನೀಡಿ ಬಿಡುಗಡೆಗೊಳಿಸಿದ ದಾಖಲೆ ತಿದ್ದಲಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್, ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ ಎಂದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ತಿದ್ದುವಂತಹ ಪರಿಸ್ಥಿತಿ ಬಂದಿಲ್ಲ. ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ಲವಾ ಎಂದು ಪ್ರಶ್ನಿಸಿದ್ದಾರೆ. ಜಮೀನಿಗೆ ಪರಿಹಾರ ನೀಡಿಲ್ಲ, ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ, ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ,…