Author: kannadanewsnow05

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೀಗ ಕೋರ್ಟ್ ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ತಲುಪಿದ್ದರಿಂದ ಚಿತ್ರದುರ್ಗದ ಜೈಲಿನಿಂದ ಮುರುಘಾ ಶ್ರೀಗಳು ಬಿಡುಗಡೆಯಾಗಿದ್ದಾರೆ. ಹೌದು ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಜೈಲಿನಿಂದ ರಿಲೀಸ್ ಆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವರ ಆಶೀರ್ವಾದದಿಂದ ಜೈಲಿನಿಂದ ಬಿಡುಗಡೆ ಆಗಿದ್ದೇನೆ. ಇದೀಗ ದಾವಣಗೆರೆ ಶಿವಯೋಗಿ ಆಶ್ರಮಕ್ಕೆ ತೆರಳುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರ ಮಾಡಿ ಮುಂದೆ ಹೆಜ್ಜೆ ಇಡುತ್ತೇನೆ. ಕಾನೂನು ಹೋರಾಟ ನಡೆಯುತ್ತಿದ್ದು ಸದ್ಯಕ್ಕೆ ಜಯ ಸಿಗಬಹುದು ಎಂಬ ನಿರೀಕ್ಷೆ ಇದೆ.ಇದು ಮೌನವಹಿಸುವಂತಹ ಕಾಲವಾಗಿದೆ ಎಂದು ತಿಳಿಸಿದರು. ಈ ಹಿಂದೆ ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು…

Read More

ಕೋಲಾರ : ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ. ಸೌಮ್ಯ ಕಳೆದ ರಾತ್ರಿ ಬಂಗಾರಪೇಟೆಯಲ್ಲಿರುವ ಅಮರಾವತಿ ನಗರದಲ್ಲಿರುವ ತನ್ನ ತವರು ಮನೆಗೆ ಬಂದಿದ್ದಳು. ತಡರಾತ್ರಿ ಎಲ್ಲರೂ ಮಲಗಿಕೊಂಡ ವೇಳೆ, ಸೌಮ್ಯ ಮನೆಯಿಂದ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಇನ್ನು ಕಳೆದ ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದಳು. ಮದುವೆಯ ಹೊಸತರಲಿ ಎಲ್ಲವೂ ಚೆನ್ನಾಗಿತ್ತು ಆದರೆ ಬರಬರುತ್ತ ಸುನಿಲ್ ಸೌಮ್ಯಾಗೆ ವರದಕ್ಷಿಣೆ ಕಿರುಕುಳ ನೀಡಿದ್ದಾನೆ.ಹಾಗಾಗಿ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪರ್ವೆಜ್ ವಿಚಾರಣೆ ವೇಳೆ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಹೌದು ಆರೋಪಿ ಪರ್ವೇಜ್ ಮೂಲತಃ ಉತ್ತರ ಪ್ರದೇಶದವನು ಎಂದು ಹೇಳಲಾಗುತ್ತಿದೆ. ಪರ್ವೇಜ್ ಪತ್ನಿ ಮೂಲ ಪಾಕಿಸ್ತಾನದವಳು ಆದರೂ ಕೂಡ ದೆಹಲಿಯಲ್ಲಿ ವಾಸವಿದ್ದರು. ಕೋರ್ಟ್ ಆದೇಶದಂತೆ ದೆಹಲಿಯಲ್ಲಿ ಪರ್ವೆಜ್ ಪತ್ನಿ ವಾಸವಾಗಿದ್ದರು. ಪ್ರತಿ ತಿಂಗಳು ಕೋರ್ಟ್ ನಲ್ಲಿ ಪರ್ವೆಜ್ ಪತ್ನಿ ಸಹಿ ಮಾಡುತ್ತಿದ್ದಾರೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರ್ವೇಶ್ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಪ್ರಮುಖ ಆರೋಪಿ ಪರ್ವೆಜ್ ಸಂಪರ್ಕದಲ್ಲಿ 50ಕ್ಕೂ ಹೆಚ್ಚು ಜನರು ಇದ್ದಾರೆ. ತರಬೇತಿ ಸಂಪರ್ಕದಲ್ಲಿ ಇರುವವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಎರಡು ತನಿಖಾ ತಂಡಗಳು ಮುಂಬೈ ಮತ್ತು ಚೆನ್ನೈನಲ್ಲಿ ಬೀಡು ಬಿಟ್ಟಿವೆ. ಮೆಹಂದಿ ಫೌಂಡೇಶನ್ ಚಟುವಟಿಕೆಗಳ ಬಗ್ಗೆಯೂ ಪೊಲೀಸರು ನಿಗಾವಹಿಸಿದ್ದಾರೆ.

Read More

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್ ಓ ಸಿ ಜಾರಿ ಮಾಡಿದ್ದೇವೆ. ನಿನ್ನೆ ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಬೆಳಿಗ್ಗೆ 10 ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಸಿಕ್ಕಿದೆ.ಮುಮ್ತಾಜ್ ಅಲಿ ಸಹೋದರ ಕಾವೂರು ಠಾಣೆಗೆ ದೂರು ನೀಡಿದ್ದಾರೆ.ಹನಿ ಟ್ರ್ಯಾಪ್ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಆರು ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಮೂರು ತಿಂಗಳಿನಿಂದ…

Read More

ಬೆಂಗಳೂರು : ಬಹು ಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ಅಧಿಕಾರಿಗಳು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಡಿವೈಎಸ್ಪಿ ಶ್ರೀಧರ್ ಪೂಜಾರ್ ರನ್ನು ಬಂಧಿಸಿದ್ದಾರೆ. ಹೌದು ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು ಈ ಒಂದು ಕೇಸ್ ಅಡಿಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ನನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೊದಲು ಬಂಧನ, ಜಾಮೀನು ಇದಕ್ಕೂ ಮೊದಲು ಫೆಬ್ರವರಿ 17 ರಂದು ರಂದು ಇದೇ ಪ್ರಕರಣದಲ್ಲಿ ಪೊಲೀಸರು ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದರು. ಬಳಿಕ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಶ್ರೀಧರ್ ಪೂಜಾರಿಗೆ ಜೂನ್ 17ಕ್ಕೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಲಾಗಿತ್ತು. ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್​ ದಾಖಲಿಸಿಕೊಂಡಿದ್ದ ಎಸ್​ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ…

Read More

ಬೆಂಗಳೂರು : ಅಕ್ಟೋಬರ್ 10ರಂದು ನಿಗದಿಯಾಗಿದ್ದ ಸಂಪುಟ ಸಭೆ ರದ್ದಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಗುರುವಾರ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೊಬರ್ 10 ರಂದು ನಡೆಯುವ ಸಂಪುಟ ಸಭೆ ರದ್ದಾಗಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಜಾತಿಗಣತಿ ವಿಚಾರಕ್ಕೆ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ಟೊಬರ್ 10 ರಂದು ಸಚಿವ ಸಂಪುಟ ಸಭೆ ಇಲ್ಲ. ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯ ನಡೆಸಲಾಗುವುದು. ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚಿಸುತ್ತೇವೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ವರದಿ ಜಾರಿಗೆ ಸಮೀಕ್ಷೆ ನಡೆಸಿದ್ದು, ಜಾತಿಗಣತಿ ವರದಿಯನ್ನು ನಾನು ಇನ್ನೂವರೆಗೂ ನೋಡಿಲ್ಲ. ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ವರದಿ ಸಲ್ಲಿಸಲು ಮುಂದಾಗಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವರದಿ ಪಡೆಯಲು ಒಪ್ಪಲಿಲ್ಲ. ಅಂದಿನ ಸಚಿವ ಪುಟ್ಟರಂಗಶೆಟ್ಟಿಗೆ ಹೇಳಿ ವರದಿ ಪಡೆಯುವುದು ಬೇಡ ಅಂದಿದ್ದರು.…

Read More

ಹುಬ್ಬಳ್ಳಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ  ಕೆಎಸ್ ಈಶ್ವರಪ್ಪ ಅವರು ನಾನು ಬಿಜೆಪಿಗೆ ಸೇರಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ಪ ಮಕ್ಕಳು ಹೊಂದಾಣಿಕೆಯಿಂದ ಬಿಜೆಪಿ ಮುಕ್ತಿಯಾಗಬೇಕು. ಬಿಜೆಪಿ ಶುದ್ದೀಕರಣವಾಗಲು ಚುನಾವಣೆ ನಿಂತಿದ್ದೆ. ನಾನು ಬಿಜೆಪಿ ಸೇರಲ್ಲ, ನನಗೆ ಸಮಾಧಾನ ಆದರೆ ಮಾತ್ರ ವಾಪಸ್ ಬಿಜೆಪಿ ಸೇರುತ್ತೇನೆ. ನನ್ನ ಮಗನಿಗೆ ಹಾವೇರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳೆ ಬಿಎಸ್​ ಯಡಿಯೂರಪ್ಪ ಮೋಸ ಮಾಡಿದರು ಎಂದು ಆರೋಪ ಮಾಡಿದರು. ನಾನು ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿಎಸ್​ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು…

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಇದರ ಮಧ್ಯ ಪ್ರತಿಯೊಬ್ಬರಿಗೂ ಸಚಿವ, ಡಿಸಿಎಂ, ಸಿಎಂ ಅನಂತರ ಕೇಂದ್ರ ಸಚಿವ ರಾಗಲು ಎಲ್ಲರಿಗೂ ಆಸೆ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಮೊದಲು ಸಚಿವ, ಅಮೇಲೆ ಡಿಸಿಎಂ, ಬಳಿಕ ಸಿಎಂ, ಅನಂತರ ಕೇಂದ್ರ ಸಚಿವರಾಗಬೇಕು ಅಂತಾ ಆಸೆ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ರೇಸ್ ಸನ್ನಿವೇಶ ಇಲ್ಲ. ಮುಡಾ ತನಿಖೆ ಆಗಬೇಕು. ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಅಲ್ಲ. ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಈಗ ರಾಜೀನಾಮೆ ಪ್ರಶ್ನೆ ಇಲ್ಲ ಎಂದರು. ನಮ್ಮ ಪಕ್ಷದ ಪರವಾಗಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಂತೆ ಬೆಂಗಳೂರು ದಕ್ಷಿಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನು ಸಂಪೂರ್ಣವಾಗಿ ಬೆತ್ತಲೆಗೊಳಿಸಿ ಭೀಕರವಾಗಿ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಅವಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಬೆತ್ತಲೆಗೊಳಿಸಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗುತ್ತಿದೆ. ನಡು ರಸ್ತೆಯಲ್ಲಿ ಬಟ್ಟೆ ಬಿಚ್ಚಿಸಿ ವ್ಯಕ್ತಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಒಂದು ಹಲ್ಲೆಯ ವಿಡಿಯೋವನ್ನು ಬೆಂಗಳೂರು ನಗರ ಪೊಲೀಸ್ ಪೇಜಿಗೂ ಈ ಒಂದು ವಿಡಿಯೋ ಟ್ಯಾಗ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ಥಣಿಸಂದ್ರದ ಹಜ್ ಭವನ ಮುಂಭಾಗ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://twitter.com/karnatakaportf/status/1843156226550505484?t=IvVYNHdAzdR6TbrdRiPmoQ&s=19

Read More