Author: kannadanewsnow05

ವಿಜಯಪುರ : ದಸರಾ ಮುಗಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ಬಿವೈ ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡೋಕೆ ಆಗುತ್ತಾ? ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು. ದಸರಾ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಬಿ ವೈ ವಿಜಯೇಂದ್ರ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ವಿಜಯೇಂದ್ರ ಏನು ಕಾಂಗ್ರೆಸ್ ಹೈಕಮಾಂಡಾ? ಬಿವೈ ವಿಜಯೇಂದ್ರ ಹೇಳಿದಾಗ ರಾಜೀನಾಮೆ ಕೊಡುವುದಕ್ಕೆ ಆಗುತ್ತಾ? ರಾಹುಲ್, ಸೋನಿಯಾ, ಮಲ್ಲಿಕಾರ್ಜುನ ಖರ್ಗೆ ಅವ್ರೆ ನಮ್ಮ ಹೈಕಮಾಂಡ್ ಎಂದರು. ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಪಕ್ಷದ ವಿಚಾರ ಹೇಳೋಕೆ ಬಿ ವೈ ವಿಜಯೇಂದ್ರ ಯಾರು? ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜೀನಾಮೆ ಇಲ್ಲ ಎಂದು…

Read More

ಬೆಂಗಳೂರು : ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗುತ್ತದೆ ಎಂದು ನಾನೂ ನೋಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಸಂಬಂಧ ವಿಪಕ್ಷಗಳು ರಾಜಿನಾಮೆಗೆ ಆಗ್ರಹಿಸುತ್ತಿರುವ ಕುರಿತಾಗಿ ಸವಾಲು ಹಾಕಿದರು. ಇಂದು ಅವರು ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಉಗ್ರಪ್ಪ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ‌ ಸಿಗಬೇಕಿತ್ತು. ಸಿಕ್ಕಿಲ್ಲ ಎನ್ನುವ ಬೇಸರ ನನಗೂ ಇದೆ. ಮುಂದೆ ಅವಕಾಶ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು.ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳ ವಿಚಾರದಲ್ಲಿ ಯಾರ ಜೊತೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಹೋರಾಟದಲ್ಲಿ…

Read More

ಬಳ್ಳಾರಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರಿಂದ ಜನರ ಜೀವನ ಆಸ್ತವ್ಯಸ್ತವಾಗಿದೆ. ಇದೀಗ ಬಳ್ಳಾರಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು ಸಿಡಿಲಿಗೆ ಹದಿನೈದು ಕುರಿಗಳು ಸಾವನ್ನಪ್ಪಿದ್ದು, ಇಬ್ಬರು ಕುರಿಗಾಹಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಇಂದು ಸಂಜೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೋಡಾಲ್ ಗ್ರಾಮದಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಈ ವೇಳೆ ಸಿಡಿಲಿಗೆ 15 ಕುರಿಗಳು ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಕುರಿಗಾಹಿಗಳಾದ ಉಳೂರು ಗ್ರಾಮದ ಬಸಪ್ಪ ಹಾಗೂ ಕರಿಮಿಂಚಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಕೂಡಲೇ ಕುರಿಗಾಹಿಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನವರೇ ಸಿದ್ದರಾಮಯ್ಯಗೆ ರಾಜೀನಾಮೆ ಕೊಡುಸ್ತಾರೆ. ಈಗಾಗಲೇ ಸರಣಿ ಸಭೆಗಳು ಆಗುತ್ತಿವೆ. ಹಾಗಾಗಿ ಈ ಸರ್ಕಾರ ಜಾಸ್ತಿ ದಿನ ಇರಲ್ಲ. ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್ ಯಾರು ಬೇಕಾದರು ಸಿಎಂ ಆಗಲಿ. ಪರಮೇಶ್ವರ ನಮ್ಮ ಜಿಲ್ಲೆಯವರಾಗಿದ್ದರಿಂದ ಅವರೇ ಸಿಎಂ ಆಗಲಿ ಎಂದು ಬಯಸುತ್ತೇವೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದರು. ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪದೇ ಪದೇ ಸ್ಪಷ್ಟನೆ ನೀಡಿದ್ದಾರೆ. ಆದರೆ ವಿಪಕ್ಷ ನಾಯಕರು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಇದೀಗ ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ನವರೇ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡಿಸ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು. ಇಂದು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತಿಂಗಳ ಕೊನೆಯ ಅಥವಾ ನವೆಂಬರ್…

Read More

ಕೊಪ್ಪಳ : ಸಿಎಂ ಸಿದ್ದರಾಮಯ್ಯ ಬೆಂಗವಾಲು ಪಡೆಗೆ ವಿರುದ್ಧ ಕಾರು ಚಾಲನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಜನಾರ್ಧನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿತ್ತು. ಕರ್ತವ್ಯದಲ್ಲಿದ್ದ ಪೊಲೀಸರಿಂದ ಚಾಲಕನ ವಿರುದ್ಧ ಕಂಪ್ಲೇಂಟ್ ನೀಡಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಝೀರೋ ಟ್ರಾಫಿಕ್ ಕಾನೂನು ಉಲ್ಲಂಘನೆ ಫೇಸ್ ದಾಖಲಾಗಿದೆ. ಘಟನೆ ಹಿನ್ನೆಲೆ? ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದೆ. ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್…

Read More

ಉಡುಪಿ : ಇಂದು ಸಂಜೆ 4 ಗಂಟೆಯ ಸುಮಾರಿಗೆ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ. ಅಲ್ಲದೆ ಈ ಒಂದು ಭೀಕರ ಮೇಘ ಸ್ಫೋಟಕ್ಕೆ ಹಲವು ರೈತರ ಜಮೀನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ರಬ್ಬರ್ ಗಿಡ, ಅಡಿಕೆ ಮರ,ತೆಂಗಿನ ತೋಟ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಭಾರಿ ನೆರೆಯಿಂದ ಮನೆ ಮುಂದೆ ನಿಲ್ಲಿಸಿದಂತಹ ಎರಡು ಕಾರುಗಳು ಹಾಗೂ ಎರಡು ಬೈಕ್ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿರುವಂತಹ ಘಟನೆ ನಡೆದಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದ್ದು, ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತಿಯಾದ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 10 ರ ವರೆಗೆ ಮಳೆಯಾಗಲಿದೆ. ಇಂದಿನಿಂದ ಅಕ್ಟೋಬರ್ 9ವರೆಗೆ 12 ಜಿಲ್ಲೆಗಳಿಗೆ ಯಲ್ಲೋ ಆರ್ಲಟ್ ಘೋಷಣೆಯಾಗಿದೆ. ಬೆಂಗಳೂರಿಗೆ ಇನ್ನೂ ಮೂರು ದಿ‌ನ ಭಾರೀ ಮಳೆ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ವೆರೆಗೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿ ಅ.9ವೆರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಅ.10 ರವರೆಗೆ ಮಳೆ ಆಗಲಿದೆ…

Read More

ಬೆಂಗಳೂರು : ಒಂದುಕಡೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದ್ದು ದಲಿತ ಸಿಎಂ ಆಗಲೇಬೇಕು ಅನ್ನೋದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸ್ಥಾನ ಪಲ್ಲಟವಾದರೆ ದಲಿತರು ಸಿಎಂ ಆಗುವ ನಂಬಿಕೆ ಇದೆ. ಸಿಎಂ ಹುದ್ದೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಹುದ್ದೆಯ ಬಗ್ಗೆ ಬೀದಿಯಲ್ಲೋ ಸ್ವಾಮೀಜಿಗಳು ಮಾತನಾಡುವುದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು ಶೋಷಿತರ ಪರ ಇದ್ದಾರೆ. ಯಾವುದೇ ಪಕ್ಷ ಇರಲಿ ದಲಿತ ಸಿಎಂ ರಾಜ್ಯಕ್ಕೆ ಅಗತ್ಯವಿದೆ.ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರವಾಗಿ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದರು. ದಲಿತರನ್ನು ಸಿಎಂ ಮಾಡದಿದ್ದರೆ ಯಾವ ಪಕ್ಷದವರು…

Read More

ತುಮಕೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಒಂದು ಕಡೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿ ಸಂಕಷ್ಟ ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಇದರ ಮಧ್ಯ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕ್ರಮದಲ್ಲಿ ದಲಿತ ಮುಖಂಡರಿಂದ ಈ ಒಂದು ಘೋಷಣೆ ಮಾಡಲಾಯಿತು. ತುಮಕೂರಿನ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ದಲಿತ ಮುಖಂಡರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.

Read More

ಮೈಸೂರು : ದಸರಾ ಮುಗಿದ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟೆ ಕೊಡ್ತಾರೆ. ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ. ಮತ್ತೊಂದು ಕಡೆಗೆ ಸಚಿವರು ರಾಜ್ಯ ಪ್ರವಾಸ ಮಾಡುತ್ತಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಮಾತೇ ಇಲ್ಲ. ಎಂದು ಮೈಸೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಸರ್ಕಾರ ಬದುಕಿದಿಯೋ, ಸತ್ತಿದ್ಯೋ ಎಂದು ಜನರೇ ಪ್ರಶ್ನಿಸುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಪರವಾಗಿ ಜಿ ಟಿ ದೇವೇಗೌಡ ಅವರು ಬ್ಯಾಟಿಂಗ್ ಬೀಸಿದ್ದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಹೆಚ್ ಡಿ ಕುಮಾರಸ್ವಾಮಿಗೆ ಇದೆ ಅದು ಅವರ ವೈಯಕ್ತಿಕ ವಿಚಾರ ನಾನು ಅದರ ಬಗ್ಗೆ ಟೀಕಿಸುವುದಿಲ್ಲ. ಚನ್ನಪಟ್ಟಣ ಉಪಚುನಾವಣೆ ಕುರಿತಾಗಿ, ದೆಹಲಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಅಗರ್ವಾಲ್ ಚರ್ಚಿಸಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗಿದೆ ಎಂದು ನನಗೆ ಸರಿಯಾಗಿ ಮಾಹಿತಿ ಇಲ್ಲ. ಟಿಕೆಟ್ ವಿಚಾರವಾಗಿ ಹೈಕಮಾಂಡ್ ಜೊತೆಗೆ ಮಾತನಾಡುತ್ತೇನೆ. ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ತನ್ನದೇ ಆದ…

Read More