Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರ ಷಡ್ಯಂತರಗಳಿಗೆ ನಾನು ಯಾವುದೇ ಕಾರಣಕ್ಕೂ ಹೆದರಲ್ಲ ಜಗ್ಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಹಿಂದೆ ರಾಕ್ಷಸರು ಕೂಡ ಹೆದರಲ್ಲ ಅಂತಿದ್ದರಂತೆ, ನಾವು ಹಾಗೆ ಅಂದುಕೊಳ್ಳಬಹುದಾ ಎಂದು ವ್ಯಂಗ್ಯವಾಡಿದ್ದಾರೆ. ಚಿಕ್ಕಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂಗೆ ಸಂವಿಧಾನ-ಕಾನೂನಿನ ಬಗ್ಗೆ ಭಯವಿಲ್ಲ. ನೈತಿಕತೆ ಪ್ರಜ್ಞೆಯೂ ಇಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಹೆದರದಿದ್ದರೂ ಜನರಿಗೆ ಹೆದರಬೇಕು. ಅವರು ಜನರಿಗಿಂತಾ ದೊಡ್ಡವರಾ? ಜನ, ಸಂವಿಧಾನ, ಕಾನೂನು, ನ್ಯಾಯಾಲಯಕ್ಕೆ ಹೆದರಲ್ಲ ಅಂದ್ರೆ, ನಾವು ಮನುಷ್ಯರು ಅನ್ಕೊಳ್ಳಾದಾ? ರಾಕ್ಷಸರು ನಾವು ಯಾರಿಗೂ ಹೆದರಲ್ಲ ಅಂತಿದ್ರಂತೆ, ಹಾಗೇ ಅನ್ಕೋಬೇಕಾ ಎಂದು ವ್ಯಂಗ್ಯವಾಡಿದರು. ಇಂದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನ ಸಮಾವೇಶದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಅಧಿಕಾರ-ಹಣ ಉಪಯೋಗಿಸಿಕೊಂಡು ಯಾವ ಸಮಾವೇಶ ಬೇಕಾದರೂ ಮಾಡಬಹುದು. ಆದರೆ, ಸಮಾವೇಶಗಳ ಮೂಲಕ ಭ್ರಷ್ಟಾಚಾರ ಮುಚ್ಚಿ ಹಾಕಲು ಆಗಲ್ಲ.…
ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿ ೪೦% ಕಮಿಷನ್ ಹೊಡೆದು, ರಾಜ್ಯದ ಮರ್ಯಾದೆ ತೆಗೆದವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಘನತೆಗೆ ದಕ್ಕೆ ತರುವ ರೀತಿಯಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ.ಕೇಂದ್ರದ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ.ಕರ್ನಾಟಕದ ಜನರ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಕೋವಿಡ್ ವೇಳೆ ಲೂಟಿ ಮಾಡಿದವರು ನಮಗೆ ನೀತಿ ಪಾಠ ಮಾಡುತ್ತಿದ್ದಾರೆ.40% ಕಮಿಷನ್ ಮೂಲಕ ರಾಜ್ಯದ ಮರ್ಯಾದೆ ಹರಾಜು ಹಾಕಿದ್ದಾರೆ. ಅಂಥವರು ನಮಗೆ ನೀತಿ ಪಾಠ ಹೇಳುತ್ತಿದ್ದಾರೆ. ಅಂತವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಆಕ್ರೋಶ…
ಬೆಳಗಾವಿ : ಇತ್ತೀಚಿಗೆ ಹಣ ಡಬಲ್ ಮಾಡಿಕೊಡುವುದಾಗಿ ಹೇಳುವ ಸೈಬರ್ ವಂಚಕರಿಗೆ ಬಿಸಿನೆಸ್ ಮ್ಯಾನ್ ಗಳು , ಟೆಕ್ಕಿಗಳೇ ಟಾರ್ಗೆಟ್ ಆಗಿರುತ್ತಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಂದು ಸೈಬರ್ ವಂಚಕರ ಜಾಲ ಪತ್ತೆಯಾಗಿದ್ದು, ಇವರಿಗೆ ಬಾಣಂತಿಯರೇ ಟಾರ್ಗೆಟ್ ಆಗಿದ್ದಾರೆ. ಗರ್ಭಿಣಿಯರು ಮತ್ತು ಬಾಣಂತಿಯರನ್ನೇ ಗುರಿಯಾಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಹೆಸರಲ್ಲಿ ಸೈಬರ್ ವಂಚನೆ ಪ್ರಕರಣಗಳು ಬೆಳಗಾವಿಯಲ್ಲಿ ಬೆಳಕಿಗೆ ಬಂದಿವೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪೋಷಣ ಯೋಜನೆ ಅಡಿಯಲ್ಲಿ ನಿಮ್ಮ ಖಾತೆಗೆ ಹಣ ಬರುತ್ತದೆ.ನಿಮ್ಮ ವಾಟ್ಸಪ್ ಗೆ ಒಂದು ಲಿಂಕ್ ಕಳಿಸುತ್ತೇವೆ ಅದನ್ನು ಕ್ಲಿಕ್ ಮಾಡಿ ನಂತರ ಬರುವ ಓಟಿಪಿಯನ್ನು ನಮಗೆ ಹೇಳಿ ಎಂದು ಹೇಳುತ್ತಾರೆ. ಬಳಿಕ ಇವರು ಓಟಿಪಿ ಹೇಳಿದ ಬಳಿಕ ಬಾಣಂತಿಯರ ಖಾತೆಯಲ್ಲಿದ್ದ ಎಲ್ಲಾ ಹಣವನ್ನು ಲಪಟಾಯಿಸುತ್ತಾರೆ. ಕಳೆದ ಎರಡು ದಿನಗಳಲ್ಲಿ ಬೆಳಗಾವಿ ಸಿಇಎನ್ ಠಾಣೆಗೆ ಐವರು ಬಾಣಂತಿಯರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಈ ಕುರಿತು ನಗರ…
ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸ್ವಾಭಿಮಾನ ಸಮಾರಂಭದಲ್ಲಿ ಮಾತನಾಡಿ ವಿಪಕ್ಷಗಳು ರಾಜೀನಾಮೆ ಕೇಳುತ್ತಿದ್ದಾರೆ ನನಗೂ ಇದನ್ನು ಕೇಳಿ ಕೇಳಿ ಬೇಜಾರಾಗಿದೆ. ಆದರೂ ನಿಮಗೋಸ್ಕರ ನಾನು ಹೋರಾಟ ಮುಂದುವರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮಾನ್ವಿಯಲ್ಲಿ ಆಯೋಜಿಸಿದ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವನಲ್ಲ, ಜಗ್ಗುವನಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಅಂತ ನಿತ್ಯವೂ ಹೇಳುತ್ತಿದ್ದಾರೆ. ನನಗೂ ಬೇಜಾರಾಗಿದೆ.ಆದರೆ ನಿಮಗೋಸ್ಕರ ನಾನು ಹೋರಾಟ ಮುಂದುವರಿಸುತ್ತೇನೆ ಸ್ವಾಭಿಮಾನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಮಹಾತ್ಮ ಗಾಂಧೀಜಿಯವರು ಒಂದು ಮಾತನ್ನು ಹೇಳಿದ್ದರು.ಎಲ್ಲಾ ನ್ಯಾಯಾಲಯಗಳಿಗಿಂತ ಆತ್ಮಸಾಕ್ಷಿ ಎನ್ನುವ ನ್ಯಾಯಾಲಯ ದೊಡ್ಡದು ಅಂತ ಹೇಳಿದರು. ನಾನು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸ್ವಾಭಿಮಾನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೊಲೆ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಬಳಿಕ, ಜಾಮೀನು ಅರ್ಜಿಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆಯುತ್ತಿದ್ದು, A2 ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ, ಜೂನ್ 9ರಂದೇ ಪೊಲೀಸರಿಗೆ ಕೃತ್ಯದ ಸಂಪೂರ್ಣ ಮಾಹಿತಿ ಇತ್ತು. ಹಾಗಿದ್ದಾಗ ದರ್ಶನ್ ಹೇಳಿಕೆ ನೀಡುವವರೆಗೆ ಏಕೆ ಸುಮ್ಮನಿದ್ದರು? ಹೇಳಿಕೆ ನಂತರವೇ ಏಕೆ ವಸ್ತುಗಳನ್ನು ಸೀಜ್ ಮಾಡಿದರು. ವಾಚ್ ಮನ್ ರೂಮ್ನ ಎರಡು ಸಿಸಿಟಿವಿ ವಶಕ್ಕೆ ಪಡೆದಿದ್ದಾರೆ. ಇದನ್ನು ಪಿಎಸ್ಐ ವಿನಯ್ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದ ಎಂದು ನಾಗೇಶ್ ವಾದದಲ್ಲಿ ಹೇಳಿದ್ದಾರೆ. ಜೂನ್ 18ರಂದು ದರ್ಶನ ಮನೆಯಲ್ಲಿ 37.5 ಲಕ್ಷ ಪಡೆಯಲಾಗಿದೆ. ಸಾಕ್ಷಿಗಳಿಗೆ ಕೊಡಲೆಂದು ಈ ಹಣ ಇಟ್ಟಿದ್ದಾಗಿ ಹೇಳಿಕೆಗಳನ್ನು ಪಡೆದಿದ್ದಾರೆ. ಮೋಹನ…
ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ಸಂಕಷ್ಟದಲ್ಲಿ ಸಿಲುಕಿದ್ದು, ಬಳಿಕ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಎಲ್ಲ 14 ನಿವೇಶನಗಳನ್ನು ವಾಪಾಸ್ ನೀಡಿದ್ದಾರೆ. ಈ ವಿಚಾರವಾಗಿ ಸಿದ್ದರಾಮಯ್ಯ ಅವರು, ನನ್ನ ಹೆಂಡತಿ ಯಾವತ್ತು ರಾಜಕೀಯಕ್ಕೆ ಬಂದವಳಲ್ಲ, ಅಂತವಳನ್ನ ಬೀದಿಗೆ ತಂದರಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನನ್ನ ಹೆಂಡತಿ ಯಾವತ್ತು ರಾಜಕೀಯಕ್ಕೆ ಬಂದವಳು ಅಲ್ಲ. ಅಂತವಳನ್ನ ಬೀದಿಗೆ ತಂದರಲ್ಲ. ನಾನು ಏನ್ ತಪ್ಪು ಮಾಡಿದ್ದೇನೆ. ನನ್ನ ಮೇಲೆ ಕಪ್ಪು ಚುಕ್ಕಿ ಇಡಬೇಕು, ರಾಜಕೀಯವಾಗಿ ಹಣಿಯಬೇಕು. ಕುರಿ ಕಾಯುವನ ಮಗ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿಬಿಟ್ಟಲ್ಲ ಅಂತ ಹೊಟ್ಟೆ ಉರಿ ಎಂದು ವಾಗ್ದಾಳಿ ನಡೆಸಿದರು. ಮಾನ್ವಿ ಮತಕ್ಷೇತ್ರದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮಾಡಿದ್ದೇವೆ. ಹಂಪಯ್ಯ ನಾಯಕ ಶಾಸಕರಾದ ಬಳಿಕ 405 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ…
ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನ ಎರಡನೇ ಮಾಡಿಯಿಂದ ಯುವತಿಯೊಬ್ಬಳು ಬಿದ್ದು ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ಕುರಿತಂತೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಅಪಾರ್ಟ್ಮೆಂಟ್ ಒಂದರ 2 ನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಆರ್ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಅಥವಾ ಯಾವ ಕಾರಣಕ್ಕೆ ಯುವತಿ ಅಪಾರ್ಟ್ಮೆಂಟ್ ಮೇಲಿಂದ ಜಿಗಿದಿದ್ದಾಳೆ ಏನುವುದು ತಿಳಿದುಬಂದಿಲ್ಲ. ಹಾಗಾಗಿ ಎಲ್ಲ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆಯಾಗಿದ್ದು, ಬೆಂಗಳೂರಿನ ವಿವೇಕ ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಬಾಡಿಗೆ ಮನೆಯಲ್ಲಿ ಮೇಘನಾ ಶೆಟ್ಟಿ (27) ಎನ್ನುವ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮೇಘನಾ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು ಎಂದು ತಿಳಿದುಬಂದಿದೆ.ಮೃತ ಮೇಘನಾ ಪೋಷಕರಿಂದ ಇದು ಕೊಲೆ ಎಂದು ಆರೋಪಿಸುತ್ತಿದ್ದಾರೆ. ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಸುದೀಪ್-ಶೆಟ್ಟಿ ಜೊತೆ ಮೇಘನಾ ವಿವಾಹವಾಗಿತ್ತು. ಮೇಘನಾ ಶೆಟ್ಟಿ ಪತಿ ಸುದೀಪ್ ಸಹ ಇಂಜಿನಿಯರ್ ಆಗಿದ್ದಾರೆ. ಇತ್ತೀಚೆಗೆ ಪದೇಪದೇ ಹಣಕ್ಕಾಗಿ ಪತಿ ಕುಟುಂಬದಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ದಂಪತಿಯ ನಡುವೆ ಗಲಾಟೆ ನಡೆದಿತ್ತು. ಆದರೆ ಇಂದು ಬೆಳಿಗ್ಗೆ ಕಿಟಕಿಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೇಘನಾ ಶವ ಪತ್ತೆಯಾಗಿದೆ.ಮೇಘನಾ ಪೋಷಕರಿಂದ ಪತಿ ಸುದೀಪ್ ಶೆಟ್ಟಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಚೆಕ್ ಇನ್ ಮತ್ತು ಚೆಕ್ ಔಟ್ ಆಗೋಕೆ ಪರದಾಟ ನಡೆಸಿದ್ದಾರೆ. ಹೌದು ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಏರ್ಪೋರ್ಟ್ ನಲ್ಲಿ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಈ ಒಂದು ಸಮಸ್ಯೆ ಕಾಣಿಸಿಕೊಂಡಿದೆ. ಸಮಸ್ಯೆ ಸರ್ವರ್ ಹಿನ್ನೆಲೆಯಲ್ಲಿ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಂತಿದ್ದಾರೆ. ಕೆಲ ವಿಮಾನಗಳು ಸ್ಕೇಡ್ಯೂಲ್ ಮಾಡಿಕೊಂಡ ಏರ್ಲೈನ್ಸ್ ಸಿಬ್ಬಂದಿ, ಚೆಕ್ ಇನ್ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನಗಳ ಟೈಪ್ ಆಫ್ ನಲ್ಲೂ ವಿಳಂಬವಾಗಿದೆ. ಬೆಳಗ್ಗೆ 11 ಗಂಟೆಯಿಂದ ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವಸ್ ಸಮಸ್ಯೆ ಉಂಟಾಗಿದೆ ಎಂದು ಪ್ರಯಾಣಿಕರು ಒಬ್ಬರು ಕಿಡಿ ಕಾರಿದ್ದಾರೆ.
ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನನ್ನು ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ದೆವ್ವ ಆಗಿದ್ದರೆ ಮಾತ್ರ ಭಯ ಪಡಬೇಕು ಅವರೇನು ದೆವ್ವ ಅಲ್ಲ ಅಲ್ವಾ, ಅವರು ಅಂದ್ರೆ ನಾನು ಯಾಕೆ ಭಯ ಪಡಬೇಕು? ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯನವರದಲ್ಲಿ ಬೆಳೆದಿದ್ದೀನಾ? ಸಿಎಂ ಸಿದ್ದರಾಮಯ್ಯ ನೆರಳಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವಂತ ದುಡಿಮೆಯ ರಾಜಕೀಯಕ್ಕೆ ಬಂದಿದ್ದೇನೆ. ಸಿದ್ದರಾಮಯ್ಯ ಅವರೆ ದೇವೇಗೌಡರ ನೆರಳಲ್ಲಿ ಬಂದಿರುವಂತಹವರು. ಅವರು ನಮ್ಮ ಪಕ್ಷದ ಕಾರ್ಯಕರ್ತ. ನನಗೆ ಯಾವ ಬಂಧನದ ಭೀತಿನೂ ಇಲ್ಲ ಎಂದು ತಿಳಿಸಿದರು. ಜೆಡಿಎಸ್ ವೀಕ್ ಆಗುತ್ತೋ ಸ್ಟ್ರಾಂಗ್ ಆಗುತ್ತೋ ಭಗವಂತ ತೀರ್ಮಾನ ತೆಗೆದುಕೊಳ್ಳುತ್ತಾನೆ. ಮೊದಲು ತಾವು ಸಮಸ್ಯೆಯಲ್ಲಿದ್ದೀರಲ್ಲ ಅದನ್ನು ಸರಿಪಡಿಸಿಕೊಳ್ಳಿ. ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಯಾವ ಪಕ್ಷಕ್ಕೂ ಹೆದರಲ್ಲ. ಹೆದರುವುದು ದೇವರಿಗೆ ಮತ್ತು ಜನರಿಗೆ ಮಾತ್ರಸಿದ್ದರಾಮಯ್ಯನಂತವರು ಲಕ್ಷ ಜನ…











