Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಮಾಡಿದ್ದಾರೆ. ಹೌದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಜಾರಕಿಹೊಳಿ ದೆಹಲಿಯಲ್ಲಿ ನಿನ್ನೆ ಭೇಟಿಯಾಗಿ ಚರ್ಚಿಸಿದ್ದಾರೆ. ಭೇಟಿಯ ವೇಳೆ ಹಲವು ವಿಚಾರಗಳ ಕುರಿತಂತೆ ಖರ್ಗೆ ಜೊತೆ ಜಾರಕಿಹೊಳಿ ಚರ್ಚಿಸಿದ್ದಾರೆ. ಹಾಗಾಗಿ ರಾಜ್ಯ ರಾಜಕೀಯದಲ್ಲಿ ಈ ಒಂದು ಭೇಟಿ ತೀವ್ರ ಕುತೂಹಲ ಮೂಡಿಸಿದೆ.ಅಲ್ಲದೆ ಮೊನ್ನೆಯಷ್ಟೇ ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ಸಭೆ ಸೇರಿದ್ದರು. ಬೆಂಗಳೂರಿನಲ್ಲಿ ರಹಸ್ಯ ಸಭೆ ಮಾಡಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಸತೀಶ್ ಜಾರಕಿಹೊಳಿ ಅವರ ಈ ಒಂದು ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ : ಮಹಾರಾಷ್ಟ್ರ ಸರ್ಕಾರದ ಜಲಸಂರಕ್ಷಣಾ ಸಚಿವ ಸಚಿವ ಸಂಜಯ್ ರಾಥೋಡ್ ಅವರ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ಈ ಅಪಘಾತದಿಂದ ಸಂಜಯ್ ರಾಥೋಡ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಅಪಘಾತದ ವೇಳೆ ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಸಂಜಯ್ ರಾಥೋಡ್ ಅವರ ಪ್ರಾಣ ಉಳಿಸಲಾಗಿದೆ. ರಾಥೋಡ್ ಅವರ ಕಾರು ಮುಂಭಾಗದ ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಯವಾಲ್‌ನ ದಿಗ್ರಾಸ್ ಬಳಿಯ ಕೊಪ್ರಾದಲ್ಲಿ ಈ ಅಪಘಾತ ಸಂಭವಿಸಿದೆ. ರಾಥೋಡ್ ಅವರ ಕಾರು ಹಿಂದಿನಿಂದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಾಥೋಡ್ ಅವರ ಕಾರು ವೇಗವಾಗಿ ಚಲಿಸುತ್ತಿತ್ತು. ಇದರಿಂದ ಅವರ ಕಾರಿನ ಮುಂಭಾಗ ಜಖಂಗೊಂಡಿದೆ. ರಾಥೋಡ್ ಅವರ ಕಾರು ಅತಿವೇಗದಲ್ಲಿ ಪಿಕಪ್‌ಗೆ ಡಿಕ್ಕಿ ಹೊಡೆದು ಪಿಕಪ್ ಪಲ್ಟಿಯಾಗಿ ಚಾಲಕ ಗಾಯಗೊಂಡಿದ್ದಾನೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಭೇಟಿ…
ಮಹಾರಾಷ್ಟ್ರ : ದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತ್ತಲೇ ಇವೆ. ಇದೀಗ ಪುಣೆಯಲ್ಲಿ ಯುವತಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಪುಣೆಯ ಹೊರ ವಲಯದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬೋಪದೇವ ಘರ್ ಪ್ರದೇಶದಲ್ಲಿ ಮೂವರು ಸೇರಿ ಅತ್ಯಾಚಾರ ಎಸಗಿದ್ದಾರೆ.ಆಕೆ ತನ್ನ ಸ್ನೇಹಿತನ ಜತೆ ಬೋಪ್ದೇವ್ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಸಾಮೂಹಿಕ ಅತ್ಯಾಚಾರದ ಹಿಂದಿನ ಆರೋಪಿಗಳ ಪತ್ತೆಗೆ 10 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದು, ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಖೊಂಡ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನವದೆಹಲಿ : ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಲಡ್ಡು ವಿವಾದದ ಕುರಿತ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಸ್ವತಂತ್ರ ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಆದೇಶ ಹೊರಡಿಸಿದ್ದಾರೆ. ಹೌದು ತಿರುಪತಿ ಲಡ್ಡು ವಿವಾದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಜಡ್ಜ್ ಸ್ವತಂತ್ರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ. ಒಟ್ಟು ಐವರ ವಿಶೇಷ ತನಿಖಾತಂಡ ರಚಿಸಿದ ಸುಪ್ರೀಂ ಕೋರ್ಟ್, ರಾಜ್ಯದ ಅಧಿಕಾರಿಗಳು ಸಿಬಿಐ, ಫುಡ್ ಸೇಫ್ಟಿ ಅಧಿಕಾರಿಗಳು ಈ ಒಂದು ತಂಡದಲ್ಲಿ ಇದ್ದಾರೆ. ಸಿಬಿಐನ ಇಬ್ಬರು ಅಧಿಕಾರಿಗಳು ರಾಜ್ಯದ ಇಬ್ಬರು ಅಧಿಕಾರಿಗಳು ಫುಡ್ ಸೇಫ್ಟಿ ಸಂಸ್ಥೆಯ ಓರ್ವ ಅಧಿಕಾರಿ ಒಳಗೊಂಡ ತನಿಖಾ ತಂಡ ಇದಾಗಿದೆ. ಒಟ್ಟು ಐವರ ವಿಶೇಷ ತನಿಖಾ ತಂಡವನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಆಂಧ್ರಪ್ರದೇಶ ಸರ್ಕಾರದ ಎಸ್ಐಟಿ ತನಿಖೆ ಬೇಡ ಸ್ವತಂತ್ರವಾದಂತಹ ವಿಶೇಷ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬಿಎಂಟಿಸಿ ಬಸ್ ನಲ್ಲಿ ಕಂಡಕ್ಟರ್ ಗೆ ಚಾಕು ಇರಿದಿದ್ದ ಪ್ರಕರಣ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಹೌದು ಪ್ರಯಾಣಿಕ ಒಬ್ಬ ಬಿಎಂಟಿಸಿ ವೋಲ್ವೋ ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಬಿಎಂಟಿಸಿ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದಂತಹ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅತ್ತಿಬೆಲೆಯಿಂದ ಮೆಜೆಸ್ಟಿಕ್ ಗೆ ಹೋಗುತ್ತಿದ್ದ ವೋಲ್ವೋ ಬಸ್ ನಲ್ಲಿ ನಿನ್ನೆ ಸಂಜೆ 4:30 ಗಂಟೆಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೊಸ ರೋಡ್ ನಿಲ್ದಾಣದ ಬಳಿ ಇಳಿದು ಪ್ರಯಾಣಿಕ ಉದ್ಧಟತನ ತೋರಿದ್ದಾನೆ. ಬಸ್ ಸ್ಟಾಪ್ ಆದಾಗ ಬಸ್ ನಿಂದ ಇಳಿದು ಬ್ಯಾಗಿನಿಂದ ಸ್ಕ್ರೂಡ್ರೈವರ್ ತೋರಿಸಿ ಬೆದರಿಸಿದ್ದಾನೆ. ಕೊನಪ್ಪನ ಅಗ್ರಹಾರದಲ್ಲಿ ಪ್ರಯಾಣಿಕ ಬಸ್ ಹತ್ತಿದ್ದಾನೆ ಹೊಸ ರೋಡ್…
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ 50 ಕೋಟಿ ರೂಪಾಯಿ ಆರೋಪ ಕೇಳಿಬಂದಿದ್ದು, ಈ ಕುರಿತು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತಾ FIR ದಾಖಲಿಸಿದ್ದಾರೆ. ಈ ಕುರಿತಂತೆ ಅಮೃತಹಳ್ಳಿ ಠಾಣೆಯ ಪೊಲೀಸರು ಉದ್ಯಮಿ ವಿಜಯ್ ತಾತಾಗೆ ಆರೋಪ ಮಾಡಿರುವ ಕುರಿತು ದಾಖಲೆ ನೀಡಿ ಎಂದು ನೋಟಿಸ್ ನೀಡಿದ್ದಾರೆ. ಹೌದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಿಸಿ ದೂರಿನ ಸಂಬಂಧ ದಾಖಲೆ ಒದಗಿಸುವಂತೆ ವಿಜಯ್ ತಾತಾಗೆ ಅಮೃತ ಹಳ್ಳಿಯ ಪೊಲೀಸರು ದಾಖಲೆ ಒದಗಿಸುವಂತೆ ನೋಟಿಸ್ ನೀಡಿದ್ದಾರೆ. ರಮೇಶ್ ಗೌಡ ಬಂದಿದ್ದ ಬಗ್ಗೆ ಟೆಕ್ನಿಕಲ್ ಎವಿಡೆನ್ಸ್ ಹಾಗೂ ಹಣ ಕೇಳಿದರ ಬಗ್ಗೆ ಏನಾದರೂ ದಾಖಲೆಗಳಿದ್ದರೆ ನೀಡುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಣ ಕೇಳಿರುವುದರ ಕುರಿತು ಪ್ರೂವ್ ಮಾಡುತ್ತೇನೆ ಇನ್ನು ವಿಜಯ್ ತಾತಾ ಅವರು ಪ್ರಕರಣದ ಕುರಿತಂತೆ ನನ್ನ ವಿರುದ್ಧ 100 ಕೋಟಿ ರೂಪಾಯಿ…
ಕೊಡಗು : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಕೊಡಲಿಯಿಂದ ಭೀಕರವಾಗಿ ಕೊಂದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ಸ್ನೇಹಿತನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಲ್ಲೆಗೆ ಒಳಗಾಗಿದ್ದ ವಸಂತ (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೊಡಲಿದ್ದ ಹೊಡೆದು ನಿನ್ನೆ ಜೋಸೆಫ್ (45) ಮೇಲೆ ಕೊಲೆ ಆರೋಪಿ ಗಿರೀಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಜಗಳ ತಡೆಯಲು ಹೋಗಿದ್ದ ವಸಂತ ಮೇಲು ಗಿರೀಶ್ ಹಲ್ಲೆಗೈದಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ವಸಂತ್ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ. ಕೃತ್ಯದ ಬಳಿಕ ಪೊಲೀಸರಿಗೆ ಆ ಕೊಲೆ ಆರೋಪಿ ಗಿರೀಶ್ ಶರಣಾಗಿದ್ದಾನೆ.ಕುಶಲಾನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಆನೇಕಲ್ಲಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅವಘಡ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಪರಶುರಾಮ (24) ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪೈಪ್ ಅಳವಡಿಕೆಗೆ ಮಣ್ಣು ಹಾಗೆ ಇರುವಾಗ ಕಾಂಪೌಂಡ್ ಕುಸಿದು ಬಿದ್ದಿದೆ. ರಾಯಚೂರು ಮೂಲದ ಐದರಿಂದ ಆರು ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಈ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು. ಇದೇ ವೇಳೆ ಸ್ಥಳದಲ್ಲಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಹಗರಣದಲ್ಲಿ ಜಿಟಿ ದೇವೇಗೌಡರ ಅಕ್ರಮವು ಇದೆ ಎಂದು ಸ್ಪೋಟಕವಾದ ಆರೋಪ ಮಾಡಿದರು. ಸ್ಥಳ ಮಹಜರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಜಿಟಿ ದೇವೇಗೌಡ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ್ದು ಮುಡಾದಲ್ಲಿ ಜಿಟಿ ದೇವೇಗೌಡರ ಅಕ್ರಮವಿರಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು ಈ ಒಂದು ಹಗರಣದಲ್ಲಿ ಭಾಗಿಯಾಗಿರುವುದರಿಂದ ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ ಎಂದು ಅವರು ಆರೋಪಿಸಿದರು. ಅಲ್ಲದೆ HC ಮಾದೇವಪ್ಪ ಸಹೋದರ ಮಗನಿಗೂ ಸೈಟ್ ಕೊಡಲಾಗಿದೆ. ಮರಿಗೌಡ ಸಹೋದರನಿಗೂ ಶಿವಣ್ಣನಿಗೂ ಸೈಟ್ ಕೊಡಲಾಗಿದೆ ಕಳ್ಳರು ಕಳ್ಳರು ಎಲ್ಲರೂ ಒಂದಾಗಿದ್ದಾರೆ. ಹಾಗಾಗಿ ಹೀಗೆ ಹೇಳುತ್ತಿದ್ದಾರೆ ತಮ್ಮ ರಕ್ಷಣೆಗಾಗಿ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು. ಹೌದು ಕೆಸರೆ ಗ್ರಾಮದ ಜಮೀನಿನ ಬದಲಾಗಿ ಮೈಸೂರಿನ ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಈ ಒಂದು ಸೈಟ್ ಪಡೆದುಕೊಂಡಿದ್ದರು. ಮೈಸೂರಿನ ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸ್ಥಳ ಮಹಜರು ಪ್ರಕ್ರಿಯೆ ನಡೆಯಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಲೋಕಾಯುಕ್ತ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಸೈಟ್ ಗಳ ಮಹಜರು ನಡೆಸಲಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಇಂದು ಲೋಕಾಯುಕ್ತ ಅಧಿಕಾರಿಗಳು ಸಹ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಿದ್ದರು. ಹಾಗಾಗಿ ಅವರ ಸಮ್ಮುಖದಲ್ಲಿ ಮೈಸೂರಿನ ವಿಜಯನಗರದಲ್ಲಿರುವ 14 ಸೈಟ್ ಗಳ…














