Author: kannadanewsnow05

ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆದಂತಹ ಬಿ.ದಯಾನಂದ ಅವರು ಪೊಲೀಸ್ ಸಿಬ್ಬಂದಿಗಳಿಗೆ ಇಂದು ಖಡಕ್ ವಾರ್ನಿಂಗ್ ನೀಡಿದ ಪ್ರಸಂಗ ನಡೆಯಿತು. ಪೊಲೀಸ್ ಸಿಬ್ಬಂದಿಗಳಿಗೆ ದಯಾನಂದ ಅವರು ಯಾವ ಕಾರಣಕ್ಕಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಮುಂದೆ ಈ ಸುದ್ದಿ ಓದಿ ಇಂದು ಪೊಲೀಸ್ ಸಿಬ್ಬಂದಿಗಳಿಗೆ ಕಮಿಷನರ್ ಬಿ.ದಯಾನಂದ್ ವರ್ಗಾವಣೆ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಾಸಿಕ ಸೇವಾ ಕವಾಯಿತು ಕಾರ್ಯಕ್ರಮದಲ್ಲಿ ವಾರ್ನ್ ನೀಡಿದ್ದಾರೆ. ಆಡುಗೋಡಿ ಸಿ ಎ ಆರ್ ಮೈದಾನದಲ್ಲಿ ಈ ಒಂದು ಕಾರ್ಯಕ್ರಮ ನಡೆದಿತ್ತು. ವರ್ಗಾವಣೆ ವಿಚಾರವಾಗಿ ಸಾಕಷ್ಟು ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ.ಪ್ರತಿದಿನ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿ ಬಿಡುತ್ತದೆ. ಇದನ್ನು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಸಿಬ್ಬಂದಿಗಳಿಗೆ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದು, ಇಂದು ಬೆಳಿಗ್ಗೆ ಏಕಾಏಕಿ ದೆಹಲಿಯ ಇಡಿ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮೇಲೆ ದಾಳಿ ನಡೆದಿದೆ. ಹೌದು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಬೆಂಗಳೂರಿನ 5 ಕಡೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡದಿಂದ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸಿಬ್ಬಂದಿಗಳ ಮನೆಯಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ದಾಳಿಯ ಕುರಿತಂತೆ ಅಧಿಕಾರಿಗಳಿಂದ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಕಲಬುರಗಿ : ಕುಡಿದ ಮತ್ತಿನಲ್ಲಿ ಪತ್ನಿಯ ತಲೆಯನ್ನು ಜಜ್ಜಿ ಭೀಕರವಾಗಿ ಕೊಂದಿರುವ ಘಟನೆ ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಪ್ರಿಯಾಂಕಾ (35) ಎಂದು ಹೇಳಲಾಗುತ್ತಿದ್ದು, ಪತಿಯನ್ನು ವಕೀಲ್ ರಾಠೋಡ್ ಎಂದು ತಿಳಿದುಬಂದಿದೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ ಅದೇ ತಾಲೂಕಿನ ನಿಂಬರ್ಗಾ ಗ್ರಾಮದ ವಕೀಲ್ ರಾಠೋಡ್ ಜೊತೆ ಮದ್ವೆ ಮಾಡಿಕೊಡಲಾಗಿತ್ತು. ಇವರು ಮಕ್ಕಳೊಂದಿಗೆ ಶಹಬಾದ್ ರಸ್ತೆಯಲ್ಲಿನ ಇಟ್ಟಿಗೆ ಭಟ್ಟಿ ಬಳಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದರು. ಹಿಗೇ ಅದೇ ಇಟ್ಟಿಗೆ ಭಟ್ಟಿಯಲ್ಲಿ ಒಟ್ಟೊಟ್ಟಿಗೆ ಕೆಲಸ ಮಾಡ್ತಿದ್ದ ದಂಪತಿ ನಿತ್ಯವೂ ಕಂಠಪೂರ್ತಿ ಕುಡಿಯುತ್ತಿದ್ದರು. ಪತಿ ವಕೀಲ್ ರಾಠೋಡ್ ಮತ್ತು ಪತ್ನಿ ಪ್ರಿಯಾಂಕಾ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಾ, ಸಂಜೆಯಾದರೆ ಸಾಕು ರಾಠೋಡ್ ಮನೆಗೆ ಎಣ್ಣೆ ತರುತ್ತಿದ್ದನು. ಬಳಿಕ ಇಬ್ಬರೂ ಒಟ್ಟೊಟ್ಟಿಗೆ ಎಣ್ಣೆ ಹೊಡೆದು ಇಬ್ಬರು ಮಕ್ಕಳನ್ನ ನಿರ್ಲಕ್ಷ್ಯ ಮಾಡುತ್ತಿದ್ದರಿಂದ, ಕೆಲ ದಿನಗಳ ಹಿಂದೆ ಮಕ್ಕಳನ್ನ ಅಜ್ಜ ಅಜ್ಜಿ ಬಳಿ ಬಿಟ್ಟು ಬಂದಿದ್ದರು. ಇಷ್ಟಾದರೂ ಸಹ ಇಬ್ಬರ…

Read More

ಗುಜರಾತ್ : ಇತ್ತೀಚೆಗೆ ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ಇಡೀ ದೇಶವೇ ಬೆಚ್ಚಿ ಬೀಳಿಸುವಂತಿತ್ತು. ಅದಾದ ದೇಶದ ಎಲ್ಲೆಡೆ ಮಹಿಳೆಯರ ಮೇಲೆ ಹಾಗೂ ಯುವತಿಯರ ಮೇಲೆ ಲೈಂಗಿಕ ಕಿರುಕುಳ ಹಾಗು ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಗುಜರಾತ್ ನಲ್ಲಿ ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಎಸಗಿರುವ ಹೀನ ಕೃತ್ಯ ನಡೆದಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್​ನ ಸೂರತ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ. ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ…

Read More

ಬೆಂಗಳೂರು : ಉದ್ಯಮಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಈ ಕುರಿತಂತೆ ಉದ್ಯಮಿ ವಿಜಯ್ ತಾತ ಅವರು ಎಚ್ ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಕೇಳಿದ್ದಾರೆ ಎಂದು ನಾನು ಪ್ರೂವ್ ಮಾಡುತ್ತೇನೆ ಎಂದು ಮತ್ತೊಂದು ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ವಿಜಯ್ ತಾತಾ ಅವರು ಮಾತನಾಡಿದ್ದು, ನನ್ನ ವಿರುದ್ಧ 100 ಕೋಟಿ ರೂಪಾಯಿ ಆರೋಪ ಕೇಳಿ ಬಂದಿದೆ. ಇಂತದಕ್ಕೆಲ್ಲ ಅರ್ಥ ಬೇಡ್ವಾ? ಕೇಂದ್ರ ಸಚಿವರ ಹತ್ತಿರ ನಾನು 100 ಕೋಟಿ ಕೇಳುವುದಕ್ಕೆ ಸಾಧ್ಯನಾ? ಸ್ವಲ್ಪ ಆದ್ರೂ ಕಾಮನ್ ಸೆನ್ಸ್ ಇದೆಯಾ ಇಂತ ಹೇಳಿಕೆ ಕೊಡೋದಕ್ಕೆ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತಾ ಆಕ್ರೋಶ ಹೊರಹಾಕಿದ್ದಾರೆ. ನಾನು 50 ಕೋಟಿ ಕೇಳಿದ್ದಾರೆ ಅಂತ…

Read More

ತೃತೀಯ ಚಂದ್ರಾಕೃತಿಯೊಂದಿಗೆ ಶುಕ್ರವಾರದಂದು ಮನೆಯಲ್ಲಿ ವಾರಾಹಿ ಅಮ್ಮನವರನ್ನು ಈ ರೀತಿ ಪೂಜಿಸುವವರಿಗೆ ಎಲ್ಲಾ ಕಷ್ಟಗಳು ದೂರವಾಗುತ್ತವೆ ಮತ್ತು ಮುಟ್ಟಿದ ಎಲ್ಲಾ ವಿಷಯಗಳು ವಿಜಯಶಾಲಿಯಾಗುತ್ತವೆ. ನವರಾತ್ರಿಯ ಎರಡನೇ ದಿನವಾದ ಈ ಅದ್ಭುತವಾದ ದಿನವಾದ ಶುಕ್ರವಾರದಂದು ವರಗಿ ಅಮ್ಮನನ್ನು ಪೂಜಿಸುವುದರಿಂದ ನಮ್ಮ ಜೀವನದಲ್ಲಿನ ಎಲ್ಲಾ ಕಷ್ಟಗಳು ದೂರವಾಗುತ್ತವೆ ಮತ್ತು ಬಯಸಿದ ಕೆಲಸವು ಯಶಸ್ವಿಯಾಗುತ್ತದೆ, ಆದರೆ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಅಂತಹ ಒಂದು ರೀತಿಯ ಪೂಜೆಯನ್ನು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ…

Read More

ಚೈನ್ನೈ : ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಪಟ್ಟಂತೆ ತಮಿಳು ನಟ ರಜನಿಕಾಂತ್ ಅವರು ಸೆಪ್ಟೆಂಬರ್ 30ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಪಡೆದುಕೊಂಡ ಬಳಿಕ ಇಂದು ನಟ ರಜನಿಕಾಂತ್ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 30ರ ತಡರಾತ್ರಿ ಆಸ್ಪತ್ರೆಗೆ ನಟ ರಜನಿಕಾಂತ್ ದಾಖಲಾಗಿದ್ದರು.ಬಳಿಕ ನುರಿತ ವೈದ್ಯರಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್​ ಅವರಿಗೆ ಸ್ಟೆಂಟ್​ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ. ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ವಯೋ ಸಹಜವಾಗಿ ಅವರು ಒಂದಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ದಿಢೀರ್​ ಅಂತ ಆಸ್ಪತ್ರೆಗೆ ದಾಖಲಾಗಿದ್ದರಿಂದ ಎಲ್ಲರಿಗೂ ಆತಂಕ ಹೆಚ್ಚಿತ್ತು. ಸದ್ಯ ಕೆಲವು ದಿನಗಳ ಕಾಲ ರಜನಿಕಾಂತ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ. ಸಂಪೂರ್ಣ ಗುಣಮುಖರಾದ ನಂತರವೇ…

Read More

ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು ಟ್ರಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಮಿರ್ಜಾಪುರದ ಕಚ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಕಾ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ನಂತರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾರಣಾಸಿಯ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ. ಮಾಹಿತಿ ಪ್ರಕಾರ ಟ್ರ್ಯಾಕ್ಟರ್ ನಲ್ಲಿ ಒಟ್ಟು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ಔರಾಯ್‌ನ ತಿವಾರಿ ಗ್ರಾಮದಿಂದ ಎರಕಹೊಯ್ದ ನಂತರ ವಾರಣಾಸಿಗೆ ಮನೆಗೆ ಮರಳುತ್ತಿದ್ದರು. ಅಪಘಾತದಲ್ಲಿ 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ದಾವಣಗೆರೆ : ಇಂದು ದಾವಣಗೆರೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು, 6 ಜನರಿಗೆ ಗಾಯವಾಗಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ತುರ್ಚಗಟ್ಟೆ ಎಂಬ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ. ಹೌದು ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ಒಂದು ಅನಾಹುತ ಸಂಭವಿಸಿದ್ದು,ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ. ಈ ಒಂದು ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಿಲಿಂಡರ್ ಸ್ಪೋಟಗೊಂಡ ಬಳಿಕ ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನೆ ಕುರಿತಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ. ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿರುವುದು ಹಾಗೂ ವಿಡಿಯೋ ಕಾಲ್ ನಲ್ಲಿ ವ್ಯಕ್ತಿಯ ಜೊತೆ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು,ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ! ದರ್ಶನ್ ಗೆ…

Read More