Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆಯಾಗಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಸೋರಿಕೆ ಆದ ಆಕ್ಸೀಜನ್ ಸಿಲಿಂಡರ್ ಸರಿಪಡಿಸಿದ್ದಾರೆ.ಹೀಗಾಗಿ ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಆಕ್ಸಿಜನ್ ಸೋರಿಕೆಯ ವಾಸನೆ ಬರುತ್ತಿದ್ದಂತೆ ಗಾಬರಿಗೊಂಡ ಗರ್ಭಿಣಿ ಮಹಿಳೆಯರು ಮತ್ತು ರೋಗಿಗಳು ಹಾಗೂ ಸಂಬಂಧಿಕರು ಹೊರಗೆ ಓಡಿ ಬಂದಿದ್ದಾರೆ. ಈ ಮಧ್ಯ ಅಡುಗೆ ಅನಿಲ ಸೋರಿಕೆ ಆಗಿದೆ ಎಂದು ಸುದ್ದಿ ಹರಡಿ ಪರಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಎದ್ದೋ, ಬಿದ್ದೋ ಎಂದು ಗರ್ಭಿಣಿಯರು, ಬಾಣತಿಯರು, ಮಕ್ಕಳು ಕರೆದುಕೊಂಡು ಹೊರಗೆ ಓಡಿ ಹೋಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ಆಕ್ಸಿಜನ್ ಸೋರಿಕೆ ಆಗುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕೂಡಲೇ ಸೋರಿಕೆ ಆದ ಆಕ್ಸೀಜನ್ ಸಿಲಿಂಡರ್ ಸರಿಪಡಿಸಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಆತಂಕ ಕಡಿಮೆಯಾಗಿದೆ. ಆಸ್ಪತ್ರೆತ ಸಿಬ್ಬಂದಿ ಸೋರಿಕೆಯಾಗಿದ್ದು ಅಡುಗೆ ಅನಿಲ ಅಲ್ಲ ಎಂದು ಸ್ಪಷ್ಟಪಡಿಸಿದ ನಂತರ ರೋಗಿಗಳು ಸಂಬಂಧಿಕರು ವಾರ್ಡ ಒಳಗೆ ಹೋಗಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಟ ದರ್ಶನ್ ಹಾಗೂ 6 ಆರೋಪಿಗಳ ಬಟ್ಟೆಯ ಮೇಲೆ ರೇಣುಕಾಸ್ವಾಮಿಯಾ ರಕ್ತದ ಕಲೆ ಪತ್ತೆಯಾಗಿದೆ ಎಂದು FSL ವರದಿಯಲ್ಲಿ ಬಹಿರಂಗವಾಗಿತ್ತು. ಇದೀಗ ಪ್ರಕರಣದ A1 ಆರೋಪಿಯಾಗಿರುವ ಪವಿತ್ರ ಗೌಡ ಚಪ್ಪಲಿಯಲ್ಲಿ ಕೂಡ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹೌದು ರೇಣುಕಾಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ ನಲ್ಲಿ ನಟ ದರ್ಶನ್ ಹಾಗೂ ಸಹಚರರು ಹಲ್ಲೆ ಮಾಡಿದ್ದರು. ಈ ವೇಳೆ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಪವಿತ್ರಾ ಗೌಡ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ. ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ನಟ…
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಬೆಂಗಳೂರಿನ ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ನಿಗಮದ ಕಚೇರಿಯ ಮೇಲೆ ದಾಳಿ ಮಾಡಿದ್ದು, ಹಲವು ಮಹತ್ವದ ದಾಖಲೆ ಹಾಗೂ ಕಡತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಸತತ ಮೂರು ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲ ಮಹತ್ವದ ಕಡತಗಳನ್ನು ವಶಕ್ಕೆ6 ಪಡೆದುಕೊಂಡು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ. ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ 2021-22 ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದೆ. ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಾಗೂ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ಹಣ…
ಬೆಂಗಳೂರು : ಚಿನ್ನಾಭರಣ ಅಂಗಡಿಯಲ್ಲಿ ಜನರು ಅವಶ್ಯಕತೆ ಬಿದ್ದಾಗ ತಮ್ಮ ಚಿನ್ನವನ್ನು ಅಡ ಬಿಟ್ಟು ಹಣ ಪಡೆದುಕೊಳ್ಳುತ್ತಾರೆ. ಆದರೆ ಬೆಂಗಳೂರಿನಲ್ಲಿ ಚಿನ್ನಾಭರಣ ಅಂಗಡಿ ಇಟ್ಟುಕೊಂಡಿದ್ದ ಸೇಟು ಒಬ್ಬ ಜನರು ಗಿರವಿ ಇಟ್ಟಿದ್ದ ಆಭರಣಗಳ ಜೊತೆ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ. ಹೌದು ಗಿರವಿ ಅಂಗಡಿ ಮುಚ್ಚಿ ಇದೀಗ ಸೇಟು ಪರಾರಿಯಾಗಿದ್ದಾನೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಈ ಒಂದು ಗ್ರಾಮದಲ್ಲಿ ರಾಜಸ್ಥಾನ ಮೂಲದ ಮಾರ್ವಾಡಿ ಮುನಾರಾಮ್ ಪರಾರಿಯಾಗಿದ್ದಾನೆ. ಈತ ಆನಂದ ಜುವೆಲರ್ಸ್ ಮತ್ತು ಕೇಸರ ಬ್ಯಾಂಕರ್ಸ್ ಮಾಲೀಕ ಎಂದು ಹೇಳಲಾಗುತ್ತಿದ್ದು, ಕಳೆದ 10 ವರ್ಷದಿಂದ ಮುನಾರಾಮ್ ಗಿರವಿ ಅಂಗಡಿ ನಡೆಸುತ್ತಿದ್ದ. ಈ ವೇಳೆ ಜನರು ಅಂಗಡಿಯಲ್ಲಿ ಚಿನ್ನಾಭರಣವನ್ನು ಅಡವಿಟ್ಟು ಹಣವನ್ನು ಪಡೆದಿದ್ದರು. ಸದ್ಯ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಸೇಟು ಪರಾರಿಯಾಗಿದ್ದಾನೆ. ಮನೆ ಖಾಲಿ ಮಾಡಿಕೊಂಡು ಚಿನ್ನಾಭರಣದ ಜೊತೆಗೆ ಸೇಟು ಪರಾರಿಯಾಗಿದ್ದಾನೆ. ನೂರಾರು ಜನರಿಗೆ ವಂಚಿಸಿ ಮುನಾರಾಮ್ ಪರಾರಿ ಆಗಿದ್ದಾನೆ ಹಾಗಾಗಿ ಚಿನ್ನಾಭರಣವನ್ನು ಗಿರವಿ ಇಟ್ಟಿದ್ದ ನೂರಾರು…
ಶಿವಮೊಗ್ಗ : ರಾಜ್ಯದಲ್ಲಿ ಇತ್ತೀಚಿಗೆ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನ ಚಲಾಯಿಸುವಾಗ ಎಷ್ಟೇ ಕಟ್ಟೇಚ್ಚರ ವಹಿಸಿದರು ಕಡಿಮೆಯೇ, ಅದರಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಹೌದು ಪಿಕಪ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಗಸರಕೋಣೆ ಬಳಿ ನಡೆದಿದೆ.ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ, ಬಾಂಬ್ ಸ್ಕ್ವಾಡ್ ಕರೆಯಿಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹೋಟೆಲ್‌ಗಳ ಮುಂದೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಮುಂಜಾನೆ ಬಾಂಬ್…
ನವದೆಹಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಇತರರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿಸ್ತರಿಸಿದರು. ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಆಮ್ ಆದ್ಮಿ ಪಕ್ಷದ ನಾಯಕ ಈ ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಇಲ್ಲಿನ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಇತ್ಯರ್ಥವನ್ನು ಸಕ್ರಿಯಗೊಳಿಸಲು ಅರವಿಂದ್ ಕೇಜ್ರಿವಾಲ್ ಅವರ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಚಾಮರಾಜನಗರ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನಡೆದಿದೆ. ರಂಗಮ್ಮ(85) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ತಡರಾತ್ರಿಯ ಧಾರಾಕಾರ ಮಳೆಗೆ ಮನೆಯ ಒಂದು ಭಾಗ ಕುಸಿದಿದಿದೆ. ಈ ವೇಳೆ ಮನೆಯಲ್ಲಿ ರಂಗಮ್ಮ, ಪುತ್ರಿ ಲಕ್ಷ್ಮಮ್ಮ, ಹಾಗೂ ಪುತ್ರ ರಂಗಯ್ಯ ಮಲಗಿದ್ದರು. ರಂಗಮ್ಮ ಅವಶೇಷಗಳಡಿ ಸಿಲುಕಿ ಮೃತಪಟ್ಟರು. ಗೋಡೆ ಬೀಳುವ ಶಬ್ದಕ್ಕೆ ಎಚ್ಚರಗೊಂಡ ಮಗ ಮತ್ತು ಮಗಳು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ‘ನಾಟಿ’ ಅಷ್ಟೇ ಅಲ್ಲ, ನೇಗಿಲು ಹಿಡಿದು ‘ಉಳುಮೆ’ ಮಾಡುತ್ತೇನೆ : HDK ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ತಿರುಗೇಟು
ಮಂಡ್ಯ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನಾನು ಕೂಡ ಭತ್ತ ನಾಟಿ ಮಾಡಿದ್ದೇನೆ ಎಂಬ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದು, ನಾನು ನಾಟಿ ಅಷ್ಟೇ ಅಲ್ಲ ನೇಗಿಲು ಹಿಡಿದು ಉಳುಮೆ ಮಾಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಭತ್ತ ನಾಟಿ ಮಾಡಿದ್ದನ್ನು ಗೇಲಿ ಮಾಡಿದ ಚೆಲುವರಾಯಸ್ವಾಮಿ, ಮಂಡ್ಯದವರಿಗೆ ಹುಟ್ಟುತ್ತಲೇ ಭತ್ತ ನಾಟಿ ಮಾಡೋದು ಗೊತ್ತಿದೆ. ಹುಟ್ಟುತಲೇ ಭತ್ತ ಹಾಗೂ ಕಬ್ಬು ನಾಟಿ ಮಾಡೋದು ಗೊತ್ತಿದೆ.ಹೊಸ ಮಾದರಿಯಲ್ಲಿ ನಾಟಿ ಮಾಡೋದು ಕಲಿಸಲು ಬಂದಿದ್ದರೇನೋ.ನಾಟಿ ಕಾರ್ಯಕ್ರಮ ಇವೆಂಟ್ ಮ್ಯಾನೇಜ್ಮೆಂಟ್ ಗೆ ಕೊಟ್ಟಿದ್ರು. ಪುಟ್ಟರಾಜು ಯಜಮಾನರು ಎವೆಂಟ್ ಮ್ಯಾನೇಜ್ಮೆಂಟ್ ಗೆ ಕೊಟ್ಟಿದ್ರುಎಂದು ತಿಳಿಸಿದರು. ನಾನು ನಾಟಿ ಅಷ್ಟೇ ಅಲ್ಲ ನೇಗಿಲು ಹಿಡಿದು ಉಳುಮೆ ಮಾಡುತ್ತೇನೆ. ನಾನು ಬೇರೆ ಕಡೆಗೆ ಹೋದಾಗ ಟ್ರ್ಯಾಕ್ಟರ್ ಎಲ್ಲಾ ಓಡಿಸುತ್ತೇನೆ. ಅದನ್ನು ನಾನು ರಾಜಕೀಯವಾಗಿ ಬಳಕೆ ಮಾಡುಕೊಳ್ಳುವುದಿಲ್ಲ. ಎಚ್ ಡಿ ಕುಮಾರಸ್ವಾಮಿ ಯುವಕರಿಗೆ ಕೆಲಸ ಕೊಡಿಸುತ್ತೇನೆ ಎಂದಿದ್ದಾರೆ ಕೆಡಿಪಿ…
ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಉತ್ತನಹಳ್ಳಿಯಲ್ಲಿ ನಡೆದಿದ್ದು, ಮೃತ ಮಹಿಳೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಎಂದು ಗುರುತಿಸಲಾಗಿದೆ. ಹೌದು ಮೃತ ದುರ್ಗಮ್ಮ ಹಾಗೂ ಮಾರುತಿ 2 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದರು. ನಂತರ ಎರಡು ಕುಟುಂಬಗಳು ಇದನ್ನು ಒಪ್ಪಿಕೊಂಡು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ, ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡ್ತಿದ್ದರು. ಆದರೆ ಮದುವೆಯಾದ ಬಳಿಕ ಮಾರುತಿ ಹೆಂಡತಿಯ ಮೇಲೆ ಅನುಮಾನ ಪಡೋಕೆ ಶುರು ಮಾಡಿದ್ದಾನೇ ನಂತರ ದಿನವೂ ಹೆಂಡತಿಯ ಮೇಲೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ ಮಾಡಿಕೊಂಡು ಮೃತ ಮಹಿಳೆ ದುರ್ಗಮ್ಮ ಊರಿಗೆ ಹೋಗಿದ್ದಳು. ಬಳಿಕ 15 ದಿನಗಳ ಹಿಂದೆ ಪತ್ನಿಯ ಮನವೊಲಿಸಿ ಗಂಡ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಆದರೆ ಬಂದ 15 ದಿನದಲ್ಲೆ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ…