Author: kannadanewsnow05

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಇಂದಿಗೆ 29 ದಿನಗಳು ಕಳೆದಿವೆ. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಗುಡ್ಡ ಕುಸಿತದಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ನಾಪತ್ತೆಯಾಗಿದ್ದಾರೆ. ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಕೊಚ್ಚಿ ಹೋದವರ ಬಗ್ಗೆ ಮಹತ್ವದ ಅಪ್ಡೇಟ್​​ ಸಿಕ್ಕಿದೆ. ಹೌದು ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಶೋಧ ಕಾರ್ಯ ವೇಳೆ ಲಾರಿಯ ಜಾಕ್ ಹಾಗೂ ಬಿಡಿ ಭಾಗಗಳು ಪತ್ತೆಯಾಗಿವೆ. ಕೇರಳ ಮೂಲದ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಇದೀಗ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದೆ. ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆಯ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ. ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಎಂದು ಮಾಲೀಕ ಮುಫಿನ್ ಖಚಿತಪಡಿಸಿದ್ದಾರೆ.…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಗಾಣಗಾಪುರದ ಸಂಗಮದಲ್ಲಿ ಅಷ್ಟ ತೀರ್ಥದಲ್ಲಿ ಸ್ಥಾನಕ್ಕೆ ಎಂದು ತೆರಳಿದ್ದ ಬಾಲಕರು ಇಬ್ಬರು ಸಾವನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಗಣಕಾಪುರದ ಸಂಗಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಗಾಣಗಾಪುರದ ಸಂಗಮದಲ್ಲಿ ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕರಿಬ್ಬರು ಸಾವನ್ನಪ್ಪಿದ್ದು, ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಪ್ರಕಾಶ್(15) ಹಾಗೂ ಸೋನು (16) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಸ್ನಾನ ಮಾಡುವಾಗ ಸೋನು ಕಾಲುಜಾರಿ ನೀರಿಗೆ ಬಿದ್ದಿದ್ದಾನೆ. ಈ ವೇಳೆ ಸೋನುನನ್ನು ಕಾಪಾಡಲು ಹೋಗಿದ್ದ ಪ್ರಕಾಶ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, SDRF ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಮಧ್ಯ ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶಿಸಿದೆ. ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿ ಸಲ್ಲಿಸಿದ್ದರು.ಈ ವೇಳೆ ಯಾವ ಕಾನೂನಿನ ಅಡಿ ನೀವು ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, FSL ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ನಟ ದರ್ಶನ್ ಸೇರಿದಂತೆ 6 ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದೆ. ಹೌದು ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಕೃತ್ಯ ನಡೆದ ಸ್ಥಳಗಳಲ್ಲಿ ಸಿಕ್ಕ ದೊಣ್ಣೆ ಮತ್ತು ಬೆಲ್ಟ್ ನಲ್ಲಿ ರಕ್ತದ ಕಲೆ ಪತ್ತೆಯಾಗಿದೆ. ಅಲ್ಲದೆ ಶವ ಸಾಗಾಟ ಮಾಡಿದ ಸ್ಕಾರ್ಪಿಯೋ ಕಾರಿನಲ್ಲಿ ಕೂಡ ರಕ್ತದ ಕಲೆಗಳು ಪತ್ತೆಯಾಗಿದೆ. ಸಿಸಿಟಿವಿ ಡಿವಿಆರ್ ಗಳನ್ನು ರೀಟ್ರೀವ್ ಮಾಡಿದ ಪೊಲೀಸರು, ಆರೋಪಿಗಳು ಪಟ್ಟಣಗೆರೆ ಶೆಡ್ ಗೆ ಬಂದು ಹೋಗಿರುವ ದೃಶ್ಯಗಳು, ಹಾಗೂ ಸ್ಟೋನಿ ಬ್ರೂಕ್ಸ್ ಪಬ್ನಲ್ಲಿ ಪಾರ್ಟಿ ಮಾಡಿರುವ ವಿಡಿಯೋ ಕೃತ್ಯ ನಡೆದ ಸ್ಥಳದಲ್ಲಿ ಸಿಕ್ಕ ಆರೋಪಿಗಳ ಫಿಂಗರ್ ಪ್ರಿಂಟ್ ಸೇರಿದಂತೆ ಎಲ್ಲದರ ಕುರಿತು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ಮಾಹಿತಿ ಬಹಿರಂಗವಾಗಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟಗಳ ಸರಮಾಲೆಗಳೇ ಸುತ್ತಿಕೊಂಡಿದ್ದು, ಇದೀಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ. ಹೌದು ಸ್ನೇಹ ಮಯಿ ಕೃಷ್ಣ ಎನ್ನುವವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತರದ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗವರ್ನರ್ ಗೆ ದೂರು ಸಲ್ಲಿಸಿದ್ದಾರೆ. ಇನ್ನು ನಿನ್ನೆ ಟಿಜೆ ಅಬ್ರಹಾಂ ಅವರು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಏನಾಗುತ್ತದೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ವೋಲ್ವೋ ಬಸ್ ನಿಂದ ಸರಣಿ ಅಪಘಾತವಾಗಿದ್ದು, ಇದರಿಂದ ಓರ್ವ ಬೈಕ್ ಸವಾರನಿಗೆ ಗಾಯವಾಗಿದ್ದು, ಹಲವು ವಾಹನಗಳು ಜಖಂಗೊಂಡಿರುವ ಘಟನೆ ಹೆಬ್ಬಾಳದ ಎಸ್ಟೀಂ ಮಾಲ್ ಸಮೀಪದ ಫ್ಲೈ ಓವರ್‌ನ ಮೇಲೆ ನಡೆದಿದೆ. ಹೌದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ಹೆಚ್ಎಸ್ಆರ್ ಲೇಔಟ್‌ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೋಲ್ವೋ ಬಸ್ ಬೆಳಗ್ಗೆ 9.25ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಮೊದಲು ಬೈಕ್‌ವೊಂದಕ್ಕೆ ಡಿಕ್ಕಿಯಾದ ಬಸ್ ನೋಡ ನೋಡುತ್ತಿದ್ದಂತೆ ಇನ್ನೂ ಕೆಲ ಬೈಕ್, ಕಾರುಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಬ್ರೇಕ್‌ನಲ್ಲಿ ಉಂಟಾದ ತಾಂತ್ರಿಕ ದೋಷದ ಕಾರಣದಿಂದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕೊಪ್ಪಳ : ನೀರಿನ ರಭಸಕ್ಕೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡ್ಯಾಂಗೆ ಭೇಟಿ ನೀಡಿ, ತ್ವರಿತವಾಗಿ ಹೊಸ ಗೇಟ್ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದು ಟಿಬಿ ಡ್ಯಾಂ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಟಿ ಬಿ ಡ್ಯಾಂನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯವು 70 ವರ್ಷಗಳಷ್ಟು ಹಳೆಯದು. 2019 ರಲ್ಲಿ ಎಡದಂಡೆ ನಾಲೆ ಏರಿ ಒಡೆದು ಹಾನಿಯಾಗಿತ್ತು. ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ನೀರು ಪೋಲಾಗಿತ್ತು. 70 ವರ್ಷಗಳ ಇತಿಹಾಸದಲ್ಲಿ ಯಾವುದೇ ಗೇಟಿಗೆ ಹಾನಿಯಾಗಿಲ್ಲ. 33 ಗೇಟ್ ಗಳ ಪೈಕಿ ವರೆಗೂ ಯಾವುದೇ ಗೇಟ್ ಹಾನಿಯಾಗಿರಲಿಲ್ಲ. ಕಾಲಕಾಲಕ್ಕೆ ಬೋರ್ಡ್ ನವರು ಗೇಟ್ ಪರಿಶೀಲಿಸಬೇಕಾಗಿತ್ತು ಎಂದರು. ಆಂಧ್ರ, ತೆಲಂಗಾಣದ ಸಚಿವರು, ಸಂಸದರು, ಶಾಸಕರು ಬಂದಿದ್ದಾರೆ. ರೈತರ ಬೆಳೆಗೆ ನೀರು ಉಳಿಸಿಕೊಡಲು ಪ್ರಯತ್ನ ನಡೆಯುತ್ತಿದೆ. ತ್ವರಿತವಾಗಿ ಹೊಸ ಗೇಟ್ ಅಳವಡಿಸುವ…

Read More

ಬೆಂಗಳೂರು : ಅವರಿಬ್ಬರದು ಎರಡು ವರ್ಷದ ಪ್ರೀತಿ ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಂದಾಗಿ ಆಗಾಗ ಇಬ್ಬರ ನಡುವೆ ಮನಸ್ತಾಪ ಉಂಟಾಗುತ್ತಿತ್ತು. ಇದರಿಂದ ಇಬ್ಬರು ದೂರವಾಗಿದ್ದರು. ಆದ್ರೆ ಬ್ರೇಕ್ ಅಪ್ ನಿಂದಾಗಿ ಮನನೊಂದ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹೌದು ಡಾರ್ಜಿಲಿಂಗ್‌ ಮೂಲದ ಲಿಖಿತ ಜಾಸ್ಮೀನ್(24) ಮೃತ ದುರ್ದೈವಿ. 10 ದಿನಗಳ ಹಿಂದೆ ತನ್ನ ಅಕ್ಕ ಕೃತಿಕ ಜಾಸ್ಮೀನ್ ಮನೆಗೆ ಬಂದಿದ್ದ ಯುವತಿ ಇಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಲಿಖಿತ ಜಾಸ್ಮೀನ್ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರ ಪ್ರೇಮ ಚನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ಲಿಖಿತ ಜಾಸ್ಮೀನ್ ಮನನೊಂದಿದ್ದಳು. ತಂಗಿ ಒಬ್ಬಳೇ ಇದ್ದರೆ ಏನಾದ್ರು ಮಾಡಿಕೊಳ್ಳುತ್ತಾಳೆಂದು ಭಯಪಟ್ಟು ಲಿಖಿತ ಅಕ್ಕ ಕೃತಿಕ ತಂಗಿಯ ನೋವು ಮರೆಸುವ ಸಲುವಾಗಿ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿದ್ದ ತನ್ನ ಮನೆಗೆ…

Read More

ಬೆಂಗಳೂರು: ರಾಜಧಾನಿಯಲ್ಲಿ ಪ್ರತ್ಯೇಕವಾಗಿ ನಡೆದ ಮೂರು ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೊದಲನೆಯದಾಗಿ ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಆದಿಲಕ್ಷ್ಮಮ್ಮ(69) ಮೃತರು ಎಂದು ತಿಳಿದುಬಂದಿದೆ. ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ಮೊಹಮ್ಮದ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೈಕ್‌ ಸವಾರ ಸಾವು ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕೂಡ್ಲು ನಿವಾಸಿ ವೇಣುಗೋಪಾಲ್‌(53) ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೊಮ್ಮನಹಳ್ಳಿ ಜಂಕ್ಷನ್ ಬಳಿ ಈ ಒಂದು ದುರ್ಘಟನೆ ನಡೆದಿದೆ. ಸೀರೆ ವ್ಯಾಪಾರಿಯಾಗಿರುವ…

Read More

ವಿಜಯಪುರ : ಹಿಂದೂ ಧರ್ಮ ಲಿಂಗಾಯತ ಧರ್ಮ ಒಂದೇ ನಾವೆಲ್ಲರೂ ಹಿಂದೂಗಳೇ. ಹಿಂದೂ ಎಂಬುವುದು ಮಹಾಸಾಗರ. ಬೌದ್ಧ ಜೈನ್ ಸಿಖ್ ಲಿಂಗಾಯತ ವೈಷ್ಣವ ಎಂಬ ನದಿಗಳಿವೆ. ಅನೇಕ ನದಿಗಳು ಹಿಂದೂ ಎಂಬ ಮಹಾಸಾಗರದಲ್ಲಿ ವಿಲೀನವಾಗಿವೆ ಎಂದು ಹರಿಹರದ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ವಿಜಯಪುರದ ಜ್ಞಾನ ಯೋಗಾಶ್ರಮದಲ್ಲಿ ಮಾತನಾಡಿದ ಅವರು, ಶಂಕರಾಚಾರ್ಯರು, ಮಧ್ವಾಚಾರ್ಯರು, ರಾಮಾನುಜಾಚಾರ್ಯರು, ಗುರುನಾನಕರು, ಜ್ಞಾನೇಶ್ವರರು, ಬಸವಣ್ಣನವರು ಆಯಾ ಕಾಲಘಟ್ಟದಲ್ಲಿ ಅವರವರ ವಿಚಾರಧಾರೆಗಳನ್ನು ಅವರು ಹೇಳಿದರು. ಆ ವಿಚಾರಧಾರೆಗಳೆ ಧರ್ಮಗಳಾದವು ಎಂದು ಹೇಳಿದರು. ರಾಜ್ಯದಲ್ಲಿ 12ನೇ ಶತಮಾನದಲ್ಲಿ ಬಸವಣ್ಣ ಜಗತ್ತಿಗೆ ಹೊಸದನ್ನು ಕೊಟ್ಟರು. ಜಗಜ್ಯೋತಿ ಬಸವೇಶ್ವರರ ವಿಚಾರಧಾರೆಯನ್ನು ಸೀಮಿತ ಮಾಡಬಾರದು.ಯಾವುದೇ ಮಹಾಪುರುಷರ ಅನುಕರಣೆ ಮಾಡುವವರನ್ನು ಟೀಕಿಸಬಾರದು.ನಾವೇ ಶ್ರೇಷ್ಠವೆಂದು ಟೀಕಿಸಬಾರದೆಂದು ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ಒಂದು ಧರ್ಮದ ಆಚರಣೆಗಳನ್ನು ಕೀಳಾಗಿ ಕಾಣುವುದು ಒಳಿತಲ್ಲ ಮತ್ತೊಂದು ತತ್ವಗಳನ್ನು ಸ್ವಚ್ಛವಾಗಿ ಕಾಣಬಾರದು ಎಲ್ಲವೂ ಒಂದೇ ಹಿಂದೂ ಧರ್ಮ ಲಿಂಗಾಯತ ಧರ್ಮ ಎರಡು ಒಂದೇ ಎಂದು ವಿಜಯಪುರದ ಜ್ಞಾನ ಯೋಗಶ್ರಮದಲ್ಲಿ ವಚನಾನಂದ…

Read More