Author: kannadanewsnow05

ಬೆಂಗಳೂರು : ರಾಜ್ಯದ ಆಸ್ಪತ್ರೆಗಳಲ್ಲಿ ಬಳಸುವಂತಹ ‘IV’ ಫ್ಲುಯೆಡ್ ಅಸುರಕ್ಷಿತವಾಗಿವೆ. ಈ ಕುರಿತು ರಾಜ್ಯದ ಲ್ಯಾಬ್ ನಲ್ಲಿ ಸುಮಾರು 92 ಐವಿ ಫ್ಲುಯೆಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 22 ಅಸುರಕ್ಷಿತ ಎಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಹೌದು 92 ಐವಿ ಫ್ಲುಯೆಡ್ ಗಳಲ್ಲಿ 22 ‘ಐವಿ ಫ್ಲ್ಯೂಯೆಡ್’ ರಿಪೋರ್ಟ್ ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಲ್ ಅಂಶ ಪತ್ತೆಯಾಗಿದೆ. ಆಸ್ಪತ್ರೆಗಳಲ್ಲಿ ಬಳಸೋ ಬಹುತೇಕ ಐವಿ ಫ್ಲುಯೆಡ್ ಅಸುರಕ್ಷಿತ ಎಂದು ವರದಿ ಬಂದಿದೆ. 92 ಸ್ಯಾಂಪಲ್ಗಳ ರಿಪೋರ್ಟ್ ನಲ್ಲಿ 22 ಅಸುರಕ್ಷಿತ ಎಂದು ರಾಜ್ಯದ ಲ್ಯಾಬ್ ನಲ್ಲಿ ಈ ಒಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ರಾಜ್ಯದ ಐವಿ ಫ್ಲುಯೆಡ್ ವರದಿಯಲ್ಲಿ ಶಾಕಿಂಗ್ ವರದಿ ಬಹಿರಂಗವಾಗಿದೆ. 92 ಸ್ಯಾಂಪಲ್ಸ್ ವರದಿ ಬಿಡುಗಡೆಯಾಗಿದ್ದು, ಅದರಲ್ಲಿ 22 ಅಸುರಕ್ಷಿತ ಎಂದು ತಿಳಿದು ಬಂದಿದೆ. 22 ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಾ ಅಂಶಗಳು ಕಂಡುಬಂದಿವೆ. ಐ ವಿ ಫ್ಲೂಯೆಡ್ ರಿಪೋರ್ಟ್ ನಲ್ಲಿ ಸುರಕ್ಷಿತ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ಕೇಂದ್ರದ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ನಲ್ಲಿ A1 ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ, ಎಲ್ಲಾ ಆರೋಪಿಗಳ ಅರೆಸ್ಟ್ ಮೆಮೋದ ಕಾಪಿ ನೀಡಲು ಆರೋಪಿಗಳ ಪರ ವಕೀಲರಿಗೆ ಜಡ್ಜ್ ವಿಶ್ವಜೀತ್ ಶೆಟ್ಟಿ ಸೂಚನೆ ನೀಡಿದರು.ಬಳಿಕ ವಿಚಾರಣೆಯನ್ನು ಡಿಸೆಂಬರ್ 6 ರಂದು ಮುಂದೂಡಿ ಆದೇಶ ಹೊರಡಿಸಿದರು.ಇದೆ ವೇಳೆ ನಟ ದರ್ಶನ್ ಅವರ ಜಾಮೀನು ಅರ್ಜಿ ಕೂಡ ಡಿಸೆಂಬರ್ 6 ರಂದು ಮುಂದೂಡಿ ಆದೇಶಿಸಿದರು. ವಿಚಾರಣೆ ಆರಂಭವಾದ ಬಳಿಕ ಹೈಕೋರ್ಟ್ ಜಡ್ಜ್ ಎಸ್.ವಿಶ್ವಜೀತ್ ಶೆಟ್ಟಿ ಅವರು, ಪವಿತ್ರ ಗೌಡ ಅವರ ಪರ ವಕೀಲ ಟಾಮಿ ಸೆನಾಸ್ಟಿಯನ್ ಅವರಿಗೆ ಎಷ್ಟು ಹೊತ್ತು ವಾದ ಮಂಡಿಸುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು ಅರ್ಧ ಗಂಟೆಗಳ ಕಾಲ ವಾದ ಮಂಡಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು. ಪವಿತ್ರಾಗೌಡ ಹಾಗೂ ನಟ ದರ್ಶನ್ ಲೀವ್ ಇನ್ ರಿಲೇಷನ್ಶಿಪ್ ನಲ್ಲಿ ಇದ್ದರು. ಪ್ರಕರಣದ A3 ಆರೋಪಿ ಪವಿತ್ರ ಗೌಡ ಬಳಿ…

Read More

ದಾವಣಗೆರೆ : ಪ್ರಕರಣ ಒಂದರಲ್ಲಿ ಆರೋಪಿಗಳ ಹೆಸರನ್ನು ಕೈ ಬಿಡಲು ASI ಈರಣ್ಣ ಎನ್ನುವವರು ವ್ಯಕ್ತಿ ಒಬ್ಬರ ಬಳಿ 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಗಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸರಸ್ವತಿ ನಗರದ ಮಣಿಕಂಠ ಆಚಾರ್ಯನಿಂದ ಎಎಸ್ಐ ಅಧಿಕಾರಿ ಲಂಚ ಪಡೆಯುತ್ತಿದ್ದ. ಮಣಿಕಂಠ ತಾಯಿ ಮತ್ತು ಪತಿ ನಡುವೆ ಜಗಳವಾಗಿ ಎಫ್ಐಆರ್ ದಾಖಲಾಗಿತ್ತು. ಚಾರ್ಜ್ ಶೀಟ್ ನಲ್ಲಿ ಇಬ್ಬರ ಹೆಸರು ಕೈಬಿಡಲು 1 ಲಕ್ಷ ರೂಪಾಯಿಗೆ ಕೆಟಿಜಿ ನಗರ ಠಾಣೆಯ ಎಎಸ್ಐ ಈರಣ್ಣ ಬೇಡಿಕೆ ಇಟ್ಟಿದ್ದ. ಈ ವೇಳೆ ಮುಂಗಡವಾಗಿ ಠಾಣೆ ಬಳಿ ರಂಜಸ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ. ಎಸ್ ಕೌಲಾಪುರೆ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಸದ್ಯ ಎಎಸ್ಐ ಈರಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದು ತನಿಖೆ ಮುಂದುವರಿಸಿದ್ದಾರೆ.

Read More

ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐಎಸ್ ಅಧಿಕಾರಿ ಕೆ.ಶ್ರೀನಿವಾಸ ಅವರನ್ನು ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಬಾಣಂತಿಯರ ಸರಣಿ ಸಾವುಗಳು ಸಂಭವಿಸಿದ್ದವು. ಈ ಹಿನ್ನೆಲೆ ಇದೀಗ ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನು ನೇಮಕ ಮಾಡಿದ್ದು, ಮುಖ್ಯಸ್ಥರಾಗಿರುವಂತಹ ಕೆ ಶ್ರೀನಿವಾಸ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿರುವ ಕೆ. ಶ್ರೀನಿವಾಸ್ ಅವರಿಗೆ ಮುಂದಿನ ಆದೇಶದವರೆಗೂ ಶ್ರೀನಿವಾಸ್ ಅವರಿಗೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಅವರು ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು. ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.ಆ ಮೂಲಕ ಸುಪ್ರೀಂ ಕೋರ್ಟ್ ತನಿಖೆಗೆ ಗ್ರೀನ್ ಸಿಗ್ನಲ್‌ ನೀಡಿತ್ತು. ಈ ಹಿಂದೆ ಪ್ರಕರಣ ದಾಖಲಾದಾಗ ಎಸಿಬಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಸಮತೋಲನ ಆಸ್ತಿಗಳಿಕೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ನಂತರ ಎಸಿಬಿ ರದ್ದು ಮಾಡಿ ರಾಜ್ಯ…

Read More

ಬೆಂಗಳೂರು : ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ…

Read More

ಬೆಂಗಳೂರು : ವಿಧಾನಸಭೆಯ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಎನ್ನುವವರಿಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರ ಅವರು 5 ಕೋಟಿ ಪಡೆದು ವಂಚನೆ ಎಸಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚೈತ್ರ ಅವರು ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದರೆ. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಚೈತ್ರ ಇಂದು ನ್ಯಾಯಾಲಯಕ್ಕೆ ಹಾಜರಾದರು. ಬಿಗ್ ಬಾಸ್ ಮನೆಯಿಂದ ಹೊರಬಂದು ಚೈತ್ರ ಕೋರ್ಟಿಗೆ ಹಾಜರಾದರು.ಚೈತ್ರ ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ವಾರೆಂಟ್ ರಿ ಕಾಲ್ ಮಾಡಿಸಿಕೊಂಡು ಚೈತ್ರ ಮತ್ತೆ ಬಿಗ್ ಬಾಸ್ ಗೆ ತೆರಳಿದ್ದಾರೆ. 1ನೇ ಎಸಿಎಂ ನ್ಯಾಯಾಧೀಶರ ಮುಂದೆ ಚೈತ್ರ ಹಾಜರಾಗಿದ್ದರು.ಈ ಹಿಂದೆ ವಂಚನೆ ಕೇಸ್ ನಲ್ಲಿ ಸಿಸಿಬಿ ಅಧಿಕಾರಿಗಳು ಚೈತ್ರ ಅವರನ್ನು ಅರೆಸ್ಟ್ ಮಾಡಿದರು.ಮುಂದಿನ ವಿಚಾರಣೆ 2025 ಜನವರಿ 13ರಂದು ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

Read More

ಬೀದರ್ : ವಕ್ಫ್ ವಿವಾದದ ಕುರಿತಂತೆ ಈಗಾಗಲೇ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಮಾಡುತ್ತಿದ್ದು, ಇದುವರೆಗೂ ರೈತರ ಜಮೀನುಗಳು, ಶಾಲೆ, ಸರ್ಕಾರಿ ಕಚೇರಿಗಳು ಹಾಗೂ ಹಲವು ದೇವಸ್ಥಾನಗಳ ಮೇಲೆ ವಕ್ಫ್ ನ ಕರಿನೆರಳು ಬಿದ್ದಿತ್ತು. ಇದೀಗ ಬೀದರ್ ನಲ್ಲಿರುವ ವಿಶ್ವಗುರು ಬಸವಣ್ಣನವರು ಪಠಿಸುತ್ತಿದ್ದ ವಚನ ಮಹಾಮಠ ಬಸವಗಿರಿಯ ಜಾಗವು ಕೂಡ ವಕ್ಫ್ ಎಂದು ನಮೂದಾಗಿದೆ. ಹೌದು ಬೀದರ್‌ನ ಪಾಪನಾಶ ದೇವಸ್ಥಾನದ ಬಳಿಯಿರುವ ಬಸವಗಿರಿಯ ಸರ್ವೇ ನಂ.37ರ 5 ಎಕರೆ 19 ಗುಂಟೆ ಜಾಗ 2019ರಲ್ಲಿ ವಕ್ಫ್ಗೆ ಸೇರಿಸಿದ್ದು ಬಸವ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 2008 ರಲ್ಲಿ ಈ ಬಸವಗಿರಿ ಉದ್ಘಾಟನೆಯಾಗಿದ್ದು, ಬಹುತೇಕ 16 ವರ್ಷದಿಂದ ಪ್ರತಿ ದಿನ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡಿ ಬಸವಣ್ಣನವರ ಭಾವಚಿತ್ರಕ್ಕೆ ನಮಿಸಿ ವಚನಗಳ ಪಠಣೆ ಮಾಡುತ್ತಾರೆ. ಬೀದರ್‌ನಲ್ಲಿ ಇದುವರೆಗು ರೈತರ ಜಮೀನು, ಐತಿಹಾಸಿಕ ಸ್ಮಾರಕಗಳು, ಸರ್ಕಾರಿ ಜಾಗಗಳು ಸೇರಿದಂತೆ ಒಟ್ಟು 13 ಸಾವಿರಕ್ಕೂ ಅಧಿಕ ಆಸ್ತಿ ವಕ್ಫ್ ಪಾಲಾಗಿದೆ. ಇದೀಗ ಮತ್ತೆ ಬಗೆದಷ್ಟು…

Read More

ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ಕಾನೂನು ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ KLE ಸಂಸ್ಥೆಯ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಾಂಕ್ ಬಟಕುರ್ಕಿ (19) ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೆ ಕಾರಣ ತಿಳಿದು ಬಂದಿಲ್ಲ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಯುವಕ ಚುಡಾಯಿಸಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಕಳೆದ ಹಲವಾರು ದಿನಗಳಿಂದ ಅಪ್ರಾಪ್ತೆಯ ಹಿಂದೆ ಯುವಕ ಬಿದ್ದಿದ್ದ. ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಗೆ ಸಂಗಮೇಶ್ ಜಂಜವಾರ್ ಕಿರುಕುಳ ನೀಡಿದ್ದಾನೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಸಂಗಮೇಶ್ ಬಾಲಕಿಗೆ ಚುಡಾಯಿಸುತ್ತಿದ್ದ. ಅಲ್ಲದೇ ಅಪ್ರಾಪ್ತೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ನನ್ನ ಪ್ರೀತಿಸು ಎಂದು ಬಾಲಕಿಗೆ ಸಂಗಮೇಶ್ ಬಲವಂತ ಮಾಡುತ್ತಿದ್ದ. ಸಂಗಮೇಶನನ್ನು ಪ್ರಶ್ನಿಸಿದ್ದ ಬಾಲಕಿಯ ಸಹೋದರಿಯ ಮೇಲೆ ಕೂಡ ಆತ ಹಲ್ಲೆ ಮಾಡಿದ್ದ. ಅಲ್ಲದೆ ಸಂಗಮೇಶ ವಿರುದ್ಧ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ನವೆಂಬರ್ 27ರಂದು ಮುದ್ದೇಬಿಹಾಳ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ದೂರು ನೀಡಿದ್ದಾಳೆ. ಸಂಗಮೇಶ್, ಮೌನೇಶ್ ಮಾದರ ಹಾಗೂ ಚಿದಾನಂದ ಕಟ್ಟಿಮನಿ ವಿರುದ್ಧ ದೂರು ಸಲ್ಲಿಸಿದ್ದಾಳೆ. ಮೂವರ…

Read More