Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಕಲ್ಬುರ್ಗಿಯಲ್ಲಿ ಉದ್ಯಮಿಗಳ ಮೇಲೆ 2 ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಲು ಯತ್ನಿಸಿ, 6 ಕೋಟಿ ನೀಡುವಂತೆ ಒತ್ತಾಯಿಸಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ ಮೂವರು ಆರೋಪಿಗಳನ್ನು ವಿದ್ಯಾ ಬಿರಾದರ್ ಪಾಟೀಲ್, ಗಗನ್ ಹಾಗೂ ಸೂರ್ಯನಾರಾಯಣ್ ಎಂದು ತಿಳಿದುಬಂದಿದೆ. ಕಳೆದ ಆಗಸ್ಟ್ 31ರಂದು ಸ್ಬಾಮೀಜಿಗೆ ಕರೆ ಮಾಡಿದ ಆರೋಪಿತೆ ವಿದ್ಯಾ, ತಾನು ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷೆ ಹಾಗೂ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಅವರ ಸಹೋದರಿಯಾಗಿದ್ದೇನೆ ಎಂದು ಹೇಳಿದ್ದಾಳೆ. ಬಳಿಕ ನಿಮಗೆ ಸಂಬಂಧಿಸಿ, ಮಹಿಳೆಯೊಂದಿಗಿನ ಆಶ್ಲೀಲ ವಿಡಿಯೋ ಕಳುಹಿಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಹೀಗಾಗಿ, ಕೂಡಲೇ ಭೇಟಿಯಾಗುವಂತೆ ಹೇಳಿದ್ದರು.ಇದರಂತೆ ಭೇಟಿಯಾದಾಗ ಸ್ವಾಮೀಜಿಯವರಿಗೆ ಸಂಬಂಧಿಸಿದ ಆಶ್ಲೀಲ ವಿಡಿಯೊಗಳಿವೆ ಎಂದು ಆರೋಪಿಗಳು ತಿಳಿಸಿದ್ದಾರೆ. ಈ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಬಾರದು ಎಂದರೆ 6 ಕೋಟಿ ರೂ. ಹಣ…
ದಾವಣಗೆರೆ : ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುತ್ತಿರುವ ವೇಳೆ ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಲೈನ್ ಮ್ಯಾನ್ ಅನ್ನು ಮುತ್ತು(32) ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಸಮಸ್ಯೆ ಎದುರಾಗಿತ್ತು ಹಾಗಾಗಿ ಗ್ರಾಮಸ್ಥರು ಕೆಇಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ಲೈನ್ ಮ್ಯಾನ್ ದುರಸ್ಥಿಗೆ ಎಂದು ಆಗಮಿಸಿದ್ದ. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ನಿಂದಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲೈನ್‌ಮ್ಯಾನ್‌ಗೆ ಕೈಗವಸು, ಶೂ, ಇತರೆ ಜೀವ ರಕ್ಷಕ ಅಗತ್ಯ ಸಲಕರಣೆಗಳಿರಬೇಕು ಆದರೆ ಕೆಇಬಿ ಸಿಬ್ಬಂದಿ ಯಾವುದೇ ಕೈಗವಸು ಶೂ ಇಲ್ಲ. ಲೈನ್ ಮ್ಯಾನ್ ಸಾವಿಗೆ ಕೆಇಬಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬಳಿಕ ಇತ್ತೀಚಿಗೆ ಸಿಎಂ ಪತ್ನಿ ಪಾರ್ವತಿಯವರು ಮುಡಾದ 14 ಸೈಟ್ ಗಳನ್ನು ವಾಪಾಸ್ ನೀಡಿದ್ದರು. ಈ ವಿಚಾರವಾಗಿ ಇದರಲ್ಲಿ ಯತಿಂದ್ರ ಸಿದ್ದರಾಮಯ್ಯ ಅವರು ಪಾಲುದಾರರಾಗಿದ್ದಾರೆ ಎಂದು ದೂರುದಾರ ಪ್ರದೀಪ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ದೂರುದಾರ ಪ್ರದೀಪ್ ಎನ್ನುವವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳಿಗೆ ಮತ್ತೊಂದು ಮನವಿ ನೀಡಿದ್ದಾರೆ. ಹಾಗಾಗಿ ತನಿಖೆ ನಡೆಸುವಂತೆ ಇಡಿಗೆ ದೂರುದಾರ ಪ್ರದೀಪ್ ಮನವಿ ಮಾಡಿದ್ದಾರೆ. ಮುಡಾದ 14 ಸೈಟ್ ಸಂಬಂಧ ತನಿಖೆಗೆ ದೂರುದಾರ ಮನವಿ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ.ಸೈಟ್ ವಾಪಸ್ ಪಡೆಯುವ ಮೂಲಕ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ಮಾಡಲಾಗಿದೆ…
ಬೆಂಗಳೂರು : ಕಳೆದ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಜೊತೆಗೆ ವಿದೇಶಿ ಪ್ರಜೆಗಳ ಬಂಧನವಾಗಿತ್ತು. ಇದೀಗ ಇಂದು ಮತ್ತೆ ಪೀಣ್ಯದಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ನಿನ್ನೆ ತಾನೇ ಬಂಧಿಸಿದ್ದರು. ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ! ಇನ್ನು ಬಂಧಿತ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಮಾಹಿತಿ ಒಂದು ಹೊರಬಿದ್ದಿದ್ದು, ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ನನಗೆ ಇಡಿ ಆಗಲಿ ಇನ್ಯಾವುದೇ ತನಿಖಾ ಸಂಸ್ಥೆಯಿಂದ ನೋಟಿಸ್ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ಬಂದಿದೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿರಾ? ನಾನೇನು ಅಂತ ಪಾಪ ಮಾಡಿದೀನಿ ನನಗೆ ಗೊತ್ತಾಗ್ತಿಲ್ಲ ಈ ರೀತಿ ಸುಳ್ಳು ಸುದ್ದಿ ಹರಡಿಸಬಾರದು. ಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮನೆಗೆ ನೋಟಿಸ್ ಅಂಟಿಸೋಕೆ ಅದೇನೋ ಪೋಸ್ಟ್ ಆಫೀಸಾ? ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಈ ರೀತಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ಮಾಧ್ಯಮಗಳಿಗೆ ಖಾರವಾಗಿ ಉತ್ತರ ನೀಡಿದರು.ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.…
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಇದೀಗ ಬಳ್ಳಾರಿ ಜೈಲ್ನಲ್ಲಿ ಬೆನ್ನು ನೋವಿನಿಂದ ತೀವ್ರವಾಗಿ ಅವರು ನೋವು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಜೈಲಲ್ಲೇ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ. ಈ ವೇಳೆ ನಟ ದರ್ಶನವರು ನಾನು ಬೆಂಗಳೂರಿಗೆ ಹೋದ ಮೇಲೆ ಸ್ಕ್ಯಾನ್ ಮಾಡಿಸಿಕೊಳ್ಳುತ್ತೇನೆ ಸದ್ಯಕ್ಕೆ, ನಾವು ಕಡಿಮೆಯಾಗುವಂತಹ ಯಾವುದಾದರೂ ಮಾತ್ರೆ ಇದ್ರೆ ಕೊಡಿ ಎಂದು ವೈದ್ಯರಿಗೆ ತಿಳಿಸಿದ್ದಾರೆ. ಹಾಗಾಗಿ ನಟ ದರ್ಶನ್ ಸದ್ಯ ಈ ಒಂದು ಬೆನ್ನು ನೋವಿನಿಂದ ಬಳಲುತ್ತಿರುವುದು ತಿಳಿದುಬಂದಿದೆ. ಇನ್ನೊಂದೆಡೆ ದರ್ಶನವರು ಜಾಮೀನು ಅರ್ಜಿ ಸಲ್ಲಿಸಿದ್ದು, ನಾಳೆ ಈ ಒಂದು ಅರ್ಜಿಯ…
ಕೋಲಾರ : ಬುಲೆರೋ ವಾಹನಕ್ಕೆ ವೇಗವಾಗಿ ಬಂದಂತಹ ಕಂಟೇನರ್ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮಡೇರಹಳ್ಳಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ವಿಜಯಕುಮಾರ್ ಎಂದು ಹೇಳಲಾಗುತ್ತಿದ್ದು, ಕಂಟೇನರ್ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಬೋಲೇರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಾದಗಿರಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಯಾವುದೇ ನೈತಿಕತೆ ಇಲ್ಲ. ಬಿ.ಎಸ್ ಯಡಿಯೂರಪ್ಪ, HD ಕುಮಾರಸ್ವಾಮಿ ಇಬ್ಬರು ಕಳ್ಳರೇ. ಕುಮಾರಸ್ವಾಮಿ ದೊಡ್ಡ ಕಳ್ಳ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಜಾಗ ವಾಪಸ್ ಕೊಟ್ಟಿದ್ದು, ಮುಖ್ಯಮಂತ್ರಿ ಪತ್ನಿ ಅವರ ನೈತಿಕತೆ ಎದ್ದು ಕಾಣುತ್ತದೆ. ಆದರೆ, ಇದನ್ನೇ ಯುಟರ್ನ್ ಹೊಡಿದ್ದಾರೆಂಬ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪದಲ್ಲಿ ಯಾವುದೇ ಹುರುಳಿಲ್ಲ.ಮುಡಾದಲ್ಲಿ ಕುಮಾರಸ್ವಾಮಿ ಕುಟುಂಬದವರ ಎಷ್ಟು ಸೈಟ್‌ಗಳಿವೆ ಗೊತ್ತಾ, ಆ ಬಗ್ಗೆ ತುಟ್ಟಿ ಬಿಚ್ಚದ ಅವರು, ಸುಖಾಸುಮ್ಮನೆ ಆರೋಪ ಮಾಡುವುದರಲ್ಲಿ ಕುಮಾರಸ್ವಾಮಿ ಎತ್ತಿದ ಕೈ ಎಂದರು. ಮುಡಾ ವಿಷಯದಲ್ಲಿ ಸಿಎಂ ಸಿದ್ದರಾಯಮ್ಮ ಅವರ ಪಾತ್ರ ಎಲ್ಲೂ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ತಗ್ಗಿಸುವ ಕೆಲಸವನ್ನು ವಿರೋಧ ಪಕ್ಷದವರು ಮಾಡುತ್ತಿದ್ದಾರೆ.ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ, ಮುಡಾ ಪರ್ಯಾಯವಾಗಿ ಸ್ಥಳ ಹಂಚಿಕೆ…
ದಾವಣಗೆರೆ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇನ್ನು ಮುಂದೆ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಸಚಿವರಾದಂತಹ ವಿ.ಸೋಮಣ್ಣ ಅವರು ಘೋಷಣೆ ಮಾಡಿದರು. ದಾವಣಗೆರೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಕಳೆದ 40 ವರ್ಷಗಳಿಂದ ಇದ್ದಂತಹ ಬೇಡಿಕೆಯನ್ನು ಇಂದು ಈಡೇರಿಸಲಾಗಿದೆ ಎಂದು ತಿಳಿಸಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು,15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.














