Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಹಿಂದೂ ಧರ್ಮದ ಕುರಿತು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಮಠದ ಪಂಡಿತರಾಧ್ಯ ಶ್ರೀಗಳು ವಿವಾದದ ಹೇಳಿಕೆ ನೀಡಿದ್ದು, ಹಿಂದೂ ಎನ್ನುವುದು ಒಂದರ್ಥದಲ್ಲಿ ಧರ್ಮವೇ ಅಲ್ಲ ಹಿಂದೂ ಎನ್ನುವುದು ಅನೈತಿಕ ಮತ್ತು ಅನಾಚಾರವನ್ನು ಒಳಗೊಂಡಿದೆ ಎಂದು ವಿವಾದದ ಹೇಳಿಕೆ ನೀಡಿದ್ದಾರೆ. ಇಂದು ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಒಂದರ್ಥದಲ್ಲಿ ಧರ್ಮವೇ ಅಲ್ಲ. ಸಾಣೆಹಳ್ಳಿ ತರಳಬಾಳು ಮಠದ ಪಂಡಿತರಾಧ್ಯ ಶ್ರೀಗಳು ಈ ಒಂದು ಹೇಳಿಕೆ ನೀಡಿದ್ದು, ಹಿಂದೂ ಎಂಬುವುದು ಅನೈತಿಕ ಮತ್ತು ಅನಾಚಾರ ಒಳಗೊಂಡಿದೆ. ಅಹಿಂಸಾ ಜೀವನ ನಡೆಸಬೇಕು ಎಂದು ಬಸವಣ್ಣ ಹೇಳಿದ್ದರು. ಸಿಂಧೂ ನದಿಯ ಬೈಲಲ್ಲಿ ಇರುವವರು ಕೂಡ ಎಲ್ಲರೂ ಹಿಂದುಗಳು ಎಂದರು. ನಮ್ಮದು ಸ್ವತಂತ್ರ ಲಿಂಗಾಯತ ಧರ್ಮ. ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವೇ ಅಲ್ಲ. ಮಲ್ಲಿಕಾರ್ಜುನ ಸ್ವಾಮೀಜಿ ಬಸವ ತತ್ವದ ನಿಷ್ಠರಾಗಿದ್ದರು. ಈಗಿನ ದಿನಗಳಲ್ಲಿ ಸ್ವಾಮೀಜಿಗಳೆಲ್ಲರೂ ನಿಷ್ಠೆಯನ್ನು ಬಿಟ್ಟಿದ್ದೇವೆ. ಬದಲಾಗಬೇಕಿರುವುದು ಭಕ್ತರಲ್ಲ ಸ್ವಾಮೀಜಿಗಳು ಎಂದು ಅವರು ತಿಳಿಸಿದರು.
ಬೆಂಗಳೂರು : ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಹೌದು ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎಸಿಎಂಎಂ ಸಮನ್ಸ್ ನೀಡಲಾಗಿದ್ದು, ಆಗಸ್ಟ್ 29 ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಇದೀಗ ಸಮನ್ಸ್ ನೀಡಲಾಗಿದೆ. ಪ್ರಕರಣ ಹಿನ್ನೆಲೆ? 2022 ರಲ್ಲಿ ಪ್ರತಿ ಪಕ್ಷದಲ್ಲಿದ್ದಾಗ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮಾಡಿದ್ದರು. ಈ ಒಂದು ಪ್ರತಿಭಟನೆಗೆ ಸಂಬಂಧಿಸಿದಂತೆ ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆ ಎಂದು ಬೆಂಗಳೂರಿನ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಆರಂಭಸಿ 6 ದಿನ ಕಳೆದಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಈ ಒಂದು ಹಗರಣದಲ್ಲಿ ನಮ್ಮ ತಂದೆಗೆ ಕ್ಲೀನ್ ಚಿಟ್ ಸಿಕ್ಕಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಜನರಿಂದ ಆಯ್ಕೆಯಾದ ಸರ್ಕಾರವನ್ನು ಸುಳ್ಳು ಆರೋಪ ಮಾಡಿ ಬಿಳಿಸುವ ಕುತಂತ್ರಕ್ಕೆ ನಾವು ಬಿಡೊಲ್ಲ. ಅದರ ವಿರುದ್ಧ ಏನು ಮಾಡಬೇಕೋ ಆ ಹೋರಾಟವನ್ನು ನಮ್ಮ ಪಕ್ಷದವರು ಮಾಡುತ್ತಾರೆ. ದೆಹಲಿ ಹೈಕಮಾಂಡ್ ಕೂಡ ನಮ್ಮ ತಂದೆಯವರದು ಏನೂ ತಪ್ಪಿಲ್ಲ, ಮುಖ್ಯಮಂತ್ರಿಗಳಿಗೆ ಬೆಂಬಲ ಕೊಡ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ನಮಗೆ ಪಕ್ಷದ ಬೆಂಬಲ, ನಾಯಕರ ಬೆಂಬಲ ಹಾಗೂ ಕಾರ್ಯಕರ್ತರ ಬೆಂಬಲವಿದೆ.ಏನೂ ತಪ್ಪು ಮಾಡದಿದ್ರೂ ಸಿಎಂ ಸಿದ್ದರಾಮಯ್ಯ ಅವರು ಇವತ್ತು ಆರೋಪ ಎದುರಿಸಬೇಕಾಗಿ ಬಂದಿದೆ. ಈಗ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನ ಜನರು, ಬೆಂಬಲಿಗರು ಅರ್ಥಮಾಡಿಕೊಳ್ಳುವಂತಾಗುತ್ತೆ ಎಂದು ತಿಳಿಸಿದರು.
ಬೆಂಗಳೂರು : ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ನಿಮ್ಮ ಕಷ್ಟ, ಸಮಸ್ಯೆ ಆಲಿಸಲು ಕನಕಪುರಕ್ಕೆ ಬರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ. ಹೌದು ಪ್ರತಿ ತಿಂಗಳು 2 ಮತ್ತು 3ನೇ ಶನಿವಾರ ಕನಕಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲಿದ್ದು ಕ್ಷೇತ್ರದ ಜನರ ಸಮಸ್ಯೆ ಆಲಿಸಲಿದ್ದಾರೆ. ಕ್ಷೇತ್ರದ ಜನರು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸುತ್ತೇನೆ. ಕನಕಪುರಕ್ಕೆ ಬಂದು ಕ್ಷೇತ್ರದ ಜನರ ಅಹವಾಲನ್ನು ಸ್ವೀಕರಿಸುವೆ ಎಂದು ಕನಕಪುರ ಕ್ಷೇತ್ರದ ಜನರಿಗೆ ಡಿ.ಕೆ.ಶಿವಕುಮಾರ್ ಸಂದೇಶ ನೀಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ. ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿದೆ. ಇನ್ನು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ರೀತಿ ಸುಳ್ಳ ಕೇಸ್ ಗಳು ಹಾಕಿದರು ಅದಕ್ಕೆಲ್ಲ ಉತ್ತರ ಕೊಡಲು ನಮಗೆ ಶಕ್ತಿ ಇದೆ. ಸುಳ್ಳು ಕೇಸ್ ಗಳು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದು ತಿಳಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಹಿ ಕೃಷ್ಣ ಎಂಬುವವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಆರೋಪಿಯನ್ನಾಗಿಸಿ ಇದೀಗ ಖಾಸಗಿ ದೂರು ಸಲ್ಲಿಸಿದ್ದಾರೆ. ಖಾಸಗಿ ದೂರು ಸಂಬಂಧ ನಾಳೆ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ಪಡೆಯದೆ ಖಾಸಗಿ ದೂರು ಸಲ್ಲಿಸಲಾಗಿದೆ.
ಮಂಡ್ಯ : ಮುಡಾ ಹಗರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಪಾರಿಯಾತ್ರೆ ಆರಂಭಿಸಿದ್ದು ಇಂದು 5ನೇ ದಿನವಾಗಿದ್ದರಿಂದ ಮಂಡ್ಯ ಜಿಲ್ಲೆಗೆ ಪಾದಯಾತ್ರೆ ತಲುಪಿತು. ಆದರೆ ಇವತ್ತು ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಯಿತು. ಹೌದು ಪಾದಯಾತ್ರೆ ಆರಂಭಕ್ಕೂ ಮುನ್ನ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ಗೆ ಖಡಕ್ ಸಂದೇಶವನ್ನು ಕಳುಹಿಸಿದ್ದರು. ನಮ್ಮ ಪಕ್ಷದವರು ಪಾದಯಾತ್ರೆಯಲ್ಲಿ ಭಾಗವಹಿಸಬೇಕಾದರೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಎಲ್ಲಿಯೂ ಕಾಣಿಸಿಕೊಳ್ಳಬಾರದು ಎಂಬ ಶರತ್ತು ವಿಧಿಸಿದ್ದರು. ಇದಕ್ಕೆ ಬಿಜೆಪಿ ನಾಯಕರು ಕೂಡ ಸಮ್ಮತಿಸಿದ್ದರು. ಬಿಜೆಪಿ ನಾಯಕರ ಮನವೊಲಿಕೆಯಿಂದ ಹೆಚ್ ಡಿ ಕುಮಾರಸ್ವಾಮಿ ಈ ಒಂದು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಆದರೆ ಇಂದು ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಹಜವಾಗಿ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ಇವಳೆ ಪಾದಯಾತ್ರೆ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ…
ಬೆಂಗಳೂರು : ಒಂದು ಕಡೆ ಮುಡಾ ಹಗರಣ ಖಂಡಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರ ಆರಂಭಿಸಿದ್ದರೆ, ಇನ್ನೊಂದು ಕಡೆ ಸದಾ ಸಿದ್ದರಾಮಯ್ಯರನ್ನು ಟೀಕಿಸುತ್ತಾ ಬಂದಿರುವ, ಬಿಕೆ ಹರಿಪ್ರಸಾದ್ ಅವರು, ಇಂದು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು ತೀವ್ರ ಅಚ್ಚರಿ ಮೂಡಿಸಿದೆ. ಹೌದು ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಚ್ಚರಿಯ ಬೆಳವಣಿಗೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಬಿಕೆ ಹರಿಪ್ರಸಾದ್ ಅವರು ಭೇಟಿ ಮಾಡಿದ್ದಾರೆ. ಈ ಒಂದು ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ. ಸಿಎಂ ಭೇಟಿಯಾಗಿ ಬಿಕೆ ಹರಿ ಪ್ರಸಾದ್ ಚರ್ಚೆ ಮಾಡಿದ್ದಾರೆ.ಸಿಎಂ ನಿವಾಸಕ್ಕೆ ಆಗಮಿಸಿ ಹರಿಪ್ರಸಾದ್ ಮಾತುಕತೆ ನಡೆಸಿದ್ದಾರೆ. ಹಾಗಾಗಿ ಈ ಒಂದು ಭೇಟಿ ಭಾರಿ ಕುತೂಹಲ ಮೂಡಿಸಿದೆ. ಉಭಯ ನಾಯಕರ ಭೇಟಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಬಲ್ಲ ಮೂಳಗಳಿಂದ ತಿಳಿದುಬಂದಿದೆ. ಹಿಂದುಳಿದ ನಾಯಕರ ಸಂಬಂಧ ಗಟ್ಟಿ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಮುಂದಿನ ರಾಜಕೀಯ…
ವಿಜಯಪುರ : ಶಾಲೆಯ ಸ್ಟಾಕ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಾಲಾ ಹೆಡ್ ಮಾಸ್ಟರ್ ಶವ ಪತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರು ಎಂಬಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸಿಎಸ್ ಹಡಪದ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿ ಎಸ್ ಹಡಪದ ಅವರು ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿ ಎಸ್ ಹಡಪದ ಸಾವಿಗೆ ಇದೀಗ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ನಾಗೂರು ಶಾಲೆಗೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಟಾಕ್ ರೂಮಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆಯು ಅಥವಾ ಕೊಲೆಯೂ ಎಂಬುವುದರ ಕುರಿತು ಪೊಲೀಸರ ತನಿಖೆಯ ಬಳಿಕ ತಿಳಿದುಬರಲಿದೆ.
ಮಂಡ್ಯ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಹಿರಂಗ ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮಗೇನು ದಾರಿದ್ರ್ಯ ಬಂದಿತ್ತಾ? ನಿಮಗೆ ಜ್ಞಾನ ಬೇಡವೇ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಆಗಿರುವ ನಿಮಗೆ ಜ್ಞಾನ ಬೇಕಲ್ಲ. ಗಬ್ಬು ಹಿಡಿದಿರುವ ಮುಡಾದಲ್ಲಿ ಯಾಕೆ ಸೈಟ್ ಬರಿಸಿಕೊಂಡಿರಿ. ದಲಿತ ಕುಟುಂಬದಿಂದ ಹೇಗೆ ಸೈಟ್ ಬರಿಸಿಕೊಂಡಿದ್ದೀರಿ. ಸಿಎಂ ಆಗಿ ಅವರ ಆಸ್ತಿಯನ್ನು ನೀವು ಕಬಳಿಸಿದ್ದೀರಾ. ಇದು ನ್ಯಾಯನಾ ಎಂದು ಪ್ರಶ್ನೆ ಮಾಡಿದ್ದಾರೆ. ಸತ್ತಿರುವವನ ಹೆಸರಿಗೆ ಡಿ ನೋಟಿಫಿಕೇಷನ್ ಮಾಡಿಸಿದ್ದಾರೆ. ಇದರ ಪ್ರತಿ ಹಂತದಲ್ಲೂ ಸಿದ್ದರಾಮಯ್ಯ ಅವರ ಪಾತ್ರ ಇದೆ. ಜಮೀನು ಐದು ಲಕ್ಷಕ್ಕೆ ಪಡೆದು ಇದೀಗ 62 ಕೋಟಿ ಕೇಳುತ್ತಿದ್ದಾರೆ. ಇದು ಪಾದಯಾತ್ರೆ ಅಲ್ಲ, ಜನಯಾತ್ರೆ ಆಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಕುಂಕುಮಕ್ಕೆ 7, ಅರಿಶಿನಕ್ಕೆ 7 ಸೈಟ್ ಕೊಟ್ಟಿದ್ದಾರೆ. ನಿಮಗೆ ದಾರಿದ್ರ್ಯ…
ಚಾಮರಾಜನಗರ : ಇಂದು ಬೆಳಿಗ್ಗೆ ಬೆಂಗಳೂರಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಚಾಮರಾಜನಗರದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಗರ್ಭಿಣಿ ದುರ್ಮರಣ ಹೊಂದಿದ್ದಾಳೆ. ಹೌದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಗರ್ಭಿಣಿ ನಮಿತ (22) ಸಾವನ್ನಪ್ಪಿದ್ದಾಳೆ. ಹೋಲಿ ಕ್ರಾಸ್ ಬಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುವಾಗ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕೆಎಸ್ಆರ್ಟಿಸಿ ಬಸ್ ಬಿಟ್ಟು ಚಾಲಕ ಪರಾಗಿದ್ದಾನೆ. ಈ ವೇಳೆ ಮೃತಳ ಕುಟುಂಬಸ್ಥರು, ಸ್ಥಳೀಯರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಪೊಲೀಸರು ಹೈರಾಣಾಗಿದ್ದಾರೆ. ಕೊಳ್ಳೇಗಾಲ ಗ್ರಾಮದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.