Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಹುದೊಡ್ಡ ಸಾಕ್ಷಿ ಸಿಕ್ಕಿದ್ದು FSL ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ತನಿಖೆಯಲ್ಲಿ ಪೊಲೀಸರಿಗೆ ದರ್ಶನ್ ವಿರುದ್ದ ಮತ್ತೊಂದು ಬಹುದೊಡ್ಡ ಸಾಕ್ಷಿ ಸಿಕ್ಕಿದೆ. ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವ ಸಂಬಂಧ ಎಫ್ ಎಸ್ ಎಲ್ ವರದಿ ಬಂದಿದ್ದು, ರೇಣುಕಾಸ್ವಾಮಿ ದೇಹದ ರಕ್ತದ ಕಲೆಗಳು ದರ್ಶನ್ ಬಟ್ಟೆಗಳ ಮೇಲೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಮಹಜರು ವೇಳೆ ವಶಪಡಿಸಿಕೊಂಡಿದ್ದ ದರ್ಶನ್ ಬಟ್ಟೆಯನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದರು. ಎಫ್ ಎಸ್ ಎಲ್ ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ…
ಕೊಪ್ಪಳ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮೃತ ಪರಶುರಾಮ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಪರಶುರಾಮ ಪತ್ನಿಗೆ ಸರಕಾರಿ ಕೆಲಸ ಹಾಗೂ ಅವರ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದರು. ಹೌದು ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಸೋಮನಾಳ ಗ್ರಾಮದ ಮೃತ ಪರಶುರಾಮ ಮನೆಗೆ ಭೇಟಿ ನೀಡಿದ ಅವರು ಪರಶುರಾಮ್ ತಂದೆ ತಾಯಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪರಶುರಾಮ್ ಕುಟುಂಬಕ್ಕೆ ಒಟ್ಟು 50 ಲಕ್ಷ ಹಣ ನೀಡುತ್ತೇವೆ ಎಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಜಿ.ಪರಮೇಶ್ವರ್ ತಿಳಿಸಿದರು. ಪರಶುರಾಮ್ ಅವರ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ.ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಥವಾ ಜೆಸ್ಕಾಂ ನಲ್ಲಿ ಕೊಡುವಂತೆ ಕೇಳಿದ್ದಾರೆ.…
ಕೋಲಾರ : ರಾಜ್ಯದಲ್ಲಿ ಭಾರಿ ಮಳೆ ಮುಂದುವರೆದಿದ್ದು ಇದೀಗ ಕೋಲಾರದಲ್ಲಿ ಸುರಿದ ಅಪಾರ ಪ್ರಮಾಣದ ಮಳೆಯಿಂದ ಕೋಲಾರದ ಅರಹಳ್ಳಿ ರೈಲ್ವೇ ಅಂಡರ್ ಪಾಸ್, ಈ ವೇಳೆ ಕಾರದ್ದು ನೀರಿನಲ್ಲಿ ಸಿಲುಕಿ ಕಾರ್ಮಿ ಚಾಲಕ ಪರದಾಟ ನಡೆಸುವ ಘಟನೆ ನಡೆದಿದೆ. ಹೌದು ಭಾರೀ ಮಳೆಗೆ ಕೋಲಾರದ ಅರಹಳ್ಳಿ ರೈಲ್ವೇ ಅಂಡರ್ ಪಾಸ್ ತುಂಬಿಕೊಂಡಿದ್ದು, ಬಸ್, ಕಾರು ಸೇರಿದಂತೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯ ಅಂಡರ್ ಪಾಸ್ನಲ್ಲಿ ಮಳೆಯಿಂದಾಗಿ ಸಂಪೂರ್ಣವಾಗಿ ನೀರು ತುಂಬಿ ಹರಿಯುತ್ತಿದೆ. ಕಳೆದ ಒಂದು ಗಂಟೆಯಿಂದ ಸುರಿದ ಮಳೆಗೆ ಕೋಲಾರ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಇದರಿಂದ ಹಲವೆಡೆ ಯುಜಿಡಿ ತುಂಬಿ ಹರಿಯುತ್ತಿದೆ. ಇನ್ನು ದಿಢೀರ್ ಮಳೆಗೆ ವಾಹನ ಸವಾರರು ಕಂಗಾಲಾಗಿದ್ದಾರೆ.
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಆಡುಗೋಡಿ ಎಂಬಲ್ಲಿ ನಡೆದಿದೆ. ಆಡುಗೋಡಿಯ ಬಸವಣ್ಣ ಟೆಂಪಲ್ ಲೇಔಟ್ ನಿವಾಸಿ ತನಿಷಾ ಚೌಧರಿ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆದರೆ ತನಿಷಾ ಪಾಲಕರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಆಕೆಯ ಪಾಲಕರು, ಅಳಿಯ ತರುಣ್ ಚೌಧರಿ ಮತ್ತು ಆತನ ಪಾಲಕರ ವಿರುದ್ಧ ವರದಕ್ಷಿಣೆ ಹಾಗೂ ಕಿರುಕುಳ ಆರೋಪದಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ಮೂಲಕ ತರುಣ್ ಚೌಧರಿ ಆಡುಗೋಡಿಯಲ್ಲಿ ಚಿನ್ನದ ಅಂಗಡಿ ಇಟ್ಟುಕೊಂಡಿದ್ದು, 2022 ರಲ್ಲಿ ರಾಜಸ್ಥಾನದ ಮೂಲದ ತನಿಷಾರನ್ನು ಮದುವೆಯಾಗಿದ್ದ. ಆರಂಭದಲ್ಲಿ ಅನ್ನೋನ್ಯವಾಗಿದ್ದ ದಂಪತಿಗಳ ನಡುವೆ ಇತ್ತೀಚೆಗೆ ಕೌಟುಂಬಿಕ ವಿಚಾರ ಹಾಗೂ ಮಕ್ಕಳಾಗದ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ತರುಣ್ ಚೌಧರಿ ಹಾಗೂ ಆತನ ಕುಟುಂಬ ಸದಸ್ಯರು ಆಕೆಗೆ ಹಿಂಸೆ ನೀಡುತ್ತಿದ್ದರು ಎಂದು ಹೇಳಲಾಗಿದೆ. ಅದರಿಂದ…
ಬೆಂಗಳೂರು : ಗೌರವಕ್ಕೆ ಧಕ್ಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇದೀಗ ಬೆಂಗಳೂರಿನ ಪರಸ್ ಗೊಯಲ್ಸ್ ಕಂಪನಿ ಮಾಲೀಕ ರೋಮನ್ ಪರಸ್ ವಿರುದ್ಧ ಪೀಣ್ಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಹೌದು ಈ ಕುರಿತಂತೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ಮಹಿಳೆ ದೂರು ಸಲ್ಲಿಸಿದ್ದಾರೆ. ರೋಮನ್ ಗೊಯಲ್ ವಿರುದ್ಧ ಮಹಿಳಾ ಉದ್ಯೋಗಿ ದೂರು ಸಲ್ಲಿಸಿದ್ದಾರೆ. ರೋಮನ್ ಗೋಯಲ್ ಪರಸ್ ಗೋಯಲ್ ಖಾಸಗಿ ಕಂಪನಿ ಮಾಲೀಕರು ಎಂದು ಹೇಳಲಾಗುತ್ತಿದೆ. ಕಂಪನಿ ಮಾಲೀಕನ ವಿರುದ್ಧ ಕಿರುಕುಳದ ಆರೋಪದ ಅಡಿ ಇದೀಗ ಮಹಿಳೂರು ಸಲ್ಲಿಸಿದ್ದಾರೆ.ಕಂಪನಿ ಉದ್ಯೋಗಿ ಶುಭಾಂಗಿಣಿ ನಾಯರ್ ಎನ್ನುವರು ದೂರು ದಾಖಲಿಸಿದ್ದಾರೆ. ತನ್ನ ಮನೆಯ ಗೇಟ್ ಬಳಿ ಗಲಾಟೆ ಮಾಡುತ್ತಿದ್ದಾನೆಂದು ಆರೋಪಿಸಿ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರು : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ 13 ವರ್ಷದ ಬಾಲಕಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಜಿಲ್ಲೆಯ ಹೊರಭಾಗದ ಜೋಕಟ್ಟೆ ಎಂಬ ಸ್ಥಳದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ ಕಗ್ಗೊಲೆ ನಡೆದಿದೆ ಚಿಕಿತ್ಸೆ ಪಡೆಯಲು ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಆಕೆಯನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಗಾಂಜಾ ಮತ್ತಿನಲ್ಲಿ ಪುಂಡನೋರ್ವ ಕರ್ತವ್ಯನಿರತ ಪೊಲೀಸರ ಮೇಲೆಯೇ ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೇಲೂರು -ಹಿರೇಮಗಳೂರು ರಸ್ತೆಯಲ್ಲಿ ಘಟನೆ ನಡೆದಿದೆ. ಹೌದು ಸಗನೀಪುರದ ಕೌಶಿಕ್ ಎಂಬುವವ ಪುಂಡಾಟ ನಡೆಸಿದ್ದು, ಎಣ್ಣೆ-ಗಾಂಜಾ ದಾಸನಾಗಿದ್ದ ವ್ಯಕ್ತಿ. ಗಾಂಜಾ ಸೇವಿಸಿ ಮತ್ತಿನಲ್ಲಿ ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ರಾಡು ಡ್ರ್ಯಾಗರ್ನಿಂದ ಇರಿದು ಹಲ್ಲೆ ಮಾಡುತ್ತಿದ್ದ ಪಾತಕಿ. ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಆತಂಕ ಸೃಷ್ಟಿಸಿದ್ದ. ಈ ವೇಳೆ ಸ್ಥಳೀಯರು ಆತನ ಪುಂಡಾಟಕ್ಕೆ ಬೆಟ್ಟಿ ಬಿದ್ದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಅವರ ಮೇಲು ಈತ ಹಲ್ಲೆ ನಡೆಸಲು ಮುಂದಾಗಿದ್ದ, ಈ ವೇಳೆ ಪೆಟ್ರೋಲ್ ಬಂಕಿ ನಿಂದ ಸಿಬ್ಬಂದಿಗೆ ಚಾಕುವಿನಿಂದ ಇರದಿದ್ದಾನೆ ಎನ್ನಲಾಗಿದೆ.ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಇದೀಗ ಬೆಂಗಳೂರಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು,ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ತಿಳಿಸಿದರು. ಪಾದಯಾತ್ರೆಯ ನಾಲ್ಕನೇ ದಿಂನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1,200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1,95,000 ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ ಎಂದು ವಿಜಯೇಂದ್ರ ಟೀಕಿಸಿದರು. ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್…
ಕೋಲಾರ : ಕೋಲಾರದಲ್ಲಿ ದುಷ್ಕರ್ಮಿಗಳು ಹಾಡು ಹಗಲೇ ಒಂದು ಕೋಟಿಗೂ ಅಧಿಕ ಹಣವನ್ನು ದರೋಡೆ ಮಾಡಿರುವ ಘಟನೆ ನಡೆದಿದ್ದು ಕಾರಿನ ಗಾಜು ಒಡೆದು ಸುಮಾರು 1.60 ಲಕ್ಷ ಹಣವನ್ನು ದೋಚಿರುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ. ಹೌದು ಕಾರಿನ ಗಾಜು ಒಡೆದು 1.60 ಲಕ್ಷ ಹಣವನ್ನು ದೋಚಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಬಸ್ ಡಿಪೋ ಎದುರುಗಡೆ ಕಾರು ನಿಲ್ಲಿಸಿದಾಗ ದರೋಡೆ ಮಾಡಲಾಗಿದೆ. ಬೆಂಗಳೂರಿನ ಗೋಪಾಲಕೃಷ್ಣ ಎಂಬುವರ ಹಣ ದರೋಡೆ ಮಾಡಿದ ಖದೀಮರು, ಗೋಪಾಲಕೃಷ್ಣ ಅವರು ಪ್ಲೈವುಡ್ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ. ಈ ವೇಳೆ ಸ್ಥಳೀಯ ಮಳಿಗೆಗಳಲ್ಲಿ ಕಲೆಕ್ಷನ್ ಮಾಡಿ ಹಣ ಇಟ್ಟಿದ್ದರು. ಮಧ್ಯಾಹ್ನ ಊಟಕ್ಕೆ ಕಾರು ನಿಲ್ಲಿಸಿ ಹೋದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದು, ಇದೀಗ ಥಾವರ್ ಚೆಂದ್ ಗೆಹ್ಲೋಟ್ ಅವರು ದೆಹಲಿಯಿಂದ ವಾಪಸ್ ಬರುತ್ತಿದ್ದಂತೆಯೇ ಅಬ್ರಾಹಂ ರಾಜ್ಯಪಾಲರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ,ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಕೊಟ್ಟಿದ್ದರು. ಆದ್ರೆ, 3 ಗಂಟೆ ಕ್ಯಾಬಿನೆಟ್ ಸಭೆ ನಡೆಸಿ ಗರ್ವನರ್ ನೋಟಿಸ್ ಕೊಟ್ಟಿದ್ದು ತಪ್ಪು ಅಂತಾರೆ. ಟಿ. ಜೆ ಅಬ್ರಹಾಂ ಸರಿಯಿಲ್ಲ ಅಂತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಸರಿಯಿದೆ, ಆದರೆ ಟಿ.ಜೆ ಅಬ್ರಹಂ ಸರಿಯಲ್ಲ ಅಂತಾರೆ. ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ರು ಎಂದರು. ಸಾಕಷ್ಟು ವಿವರಣೆ ಕೊಟ್ಟಿದ್ದೇನೆ. ಆದಷ್ಟು ಶೀಘ್ರದಲ್ಲಿ ರಾಜ್ಯಪಾಲರು ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ಎರಡನೇ ಶೋಕಾಸ್ ನೊಟೀಸ್…