Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ ನಡೆದಿದೆ. ಹೆಬ್ಬಾಳ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸಾಲಗಾರರ ಕಾಟಕ್ಕೆ ಬೇಸತ್ತು ವೆಂಕಟೇಶ (50) ಎನ್ನುವವರು ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಇವರು ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ್ದರು. ಜೊತೆಗೆ ವೆಂಕಟೇಶ್ ಅನಾರೋಗ್ಯದಿಂದ ಕೂಡ ಬಳಲುತ್ತಿದ್ದರು. ನಿನ್ನೆ ಹೆಬ್ಬಾಳ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
BREAKING : ಇಸ್ರೇಲ್-ಇರಾನ್ ಯುದ್ಧ ಮುಂದುವರಿದ ಹಿನ್ನೆಲೆ : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 21 ವಿಮಾನಗಳ ಹಾರಾಟ ರದ್ದು!
ಬೆಂಗಳೂರು : ಇಸ್ರೇಲ್ ಇರಾನ್ ಯುದ್ಧ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರು ಏರ್ಪೋರ್ಟ್ ನಿಂದ ವಿಮಾನ ಸಂಚಾರ ರದ್ದು ಮಾಡಲಾಗಿದೆ. ಅರಬ್ ರಾಷ್ಟ್ರಗಳಿಗೆ ತೇರಳಬೇಕಿದ್ದ 11 ವಿಮಾನಗಳ ರದ್ದು ಮಾಡಲಾಗಿದೆ. ಅಲ್ಲದೇ ಆಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದು ಪಡಿಸಲಾಗಿದೆ. ಈ ಕುರಿತು ವಿಮಾನಗಳ ಸಂಚಾರದ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಹೋಗುವ ಮತ್ತು ಬರುವ ವಿಮಾನಗಳನ್ನು ರದ್ದುಪಡಿಸಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೆಪಲ್ಲಿ ಗ್ರಾಮದ ಬಳಿ ನಡೆದಿದೆ. ಪೆನುಮಲೆ ಗ್ರಾಮದ ಉದಯಕುಮಾರ್ (70) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡು ಕಾರು ಏಕಾಏಕಿ ಹೊತ್ತಿ ಉರಿದಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಬಗ್ಗೆ ಬೆಂಕಿ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ : ಮುಂಬರುವ 2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳದಲ್ಲಿ ಮನವಿ ಮಾಡಿದರು. ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಮಾನಾಥ ರೈ ಅವರು ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ರಮಾನಾಥ ರೈ ಕ್ಷೇತ್ರಕ್ಕೆ ಐದು ಸಾವಿರ ಕೋಟಿ ರೂಪಾಯಿಯನ್ನು ಕಳೆದ ಅವಧಿಯಲ್ಲಿ ತರಿಸಿ ಅಭಿವೃದ್ಧಿ ಮಾಡಲಾಗಿತ್ತು. ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದರು. ಇದು ನೋವಿನ ಸಂಗತಿ ಅಲ್ವಾ? ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ, ಪ್ರಾಮಾಣಿಕ ಸಚಿವರಲ್ಲಿ ರಮಾನಾಥ ರೈ ಕೂಡ ಒಬ್ಬರಾಗಿದ್ದರು. ಹೀಗಾಗಿ ಅವರು ಮತ್ತೆ ಗೆಲ್ಲಬೇಕು ಎಂದರು.
ಗದಗ : ಗದಗದಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು, ಅಕ್ರಮ ಗಣಿಗಾರಿಕೆಗೆ ನರ್ಸಿಂಗ್ ವಿದ್ಯಾರ್ಥಿ ಒಬ್ಬ ಬಲಿಯಾಗಿದ್ದಾನೆ. ಗದಗ ಜಿಲ್ಲೆಯ ಕಣಗಿನಾಳ ರಸ್ತೆಯ ಹೊಂಡದಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿಯ ನರ್ಸಿಂಗ್ ವಿದ್ಯಾರ್ಥಿ ಆದಿತ್ಯ ಸ್ನಾನಕ್ಕೆಂದು ಹೊಂಡದಲ್ಲಿ ಇಳಿದಾಗ ನೀರಲ್ಲಿ ಮುಳುಗಿ ಸಾವನಪ್ಪಿದ್ದಾನೆ. ನಿನ್ನೆ ಹೋಳಿ ಹಬ್ಬ ಆಚರಣೆ ಮಾಡಿ ಸ್ನಾನಕ್ಕೆ ಆರರಿಂದ ಏಳು ಗೆಳೆಯರ ಜೊತೆಗೆ ಹೋಗಿದ್ದರು. 30 ರಿಂದ 40 ಅಡಿ ಆಳದ ಕೊಂಡ ತೆಗೆದು ಗಣಿಗಾರಿಕೆ ಮಾಡಲಾಗುತ್ತಿತ್ತು. ನೀರಿನಲ್ಲಿ ಮುಳುಗಿ ಬೆಳಗಾವಿ ಮೂಲದ ವಿದ್ಯಾರ್ಥಿ ಆದಿತ್ಯ ಸಾವನ್ನಪ್ಪಿದ್ದಾನೆ. ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷ ಮುಗಿಸಿದ್ದ. ವಿದ್ಯಾರ್ಥಿ ಆದಿತ್ಯ ಘಟನೆಯಲ್ಲಿ ಸಾವನಪ್ಪಿದ್ದಾನೆ. ಈ ಒಂದು ಸಾವಿಗೆ ಗಣಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿನ ಹೊಣೆಯನ್ನು ಗಣಿ ಇಲಾಖೆ ಹೊತ್ತು ಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.
ತುಮಕೂರು : ಕಳೆದ ಜನೆವರಿಯಲ್ಲಿ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿ ಗ್ರಾಮದ ಪರಮೇಶ್ ಎಂಬುವವರ ಸಾವಿನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಪರಮೇಶ್ ಮೃತಪಟ್ಟು ಇನ್ನೂ ತಿಂಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಆತನ ಪತ್ನಿ ಆಶಾ ಇನ್ನೊಂದು ಮದುವೆಯಾದ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಆಶಾ ಸೇರಿದಂತೆ ಇಬ್ಬರನ್ನು ಪೊಲೀಸರು ಅರೆಸ್ಟ್ ಮಡಿದ್ದಾರೆ. ಪತಿ ಮೃತಪಟ್ಟ 20 ದಿನಕ್ಕೆ ಆತನ ಪತ್ನಿ ಮತ್ತೊಂದು ಮದುವೆಯಾದ ನಂತರ ಪತಿ ಕೊಲೆಯಾಗಿದ್ದಾನೆ ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ. ಆತನ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಲ್ಲಿ ಹೊರಬಿದ್ದಿದೆ. ಕೊಲೆ ಮಾಡಿದ್ದ ಮೃತನ ಪತ್ನಿ ಮತ್ತು ಮೂರನೇ ಗಂಡ ಇದೀಗ ಜೈಲು ಕಂಬಿ ಎಣಿಸುವಂತಾಗಿದೆ. ಪ್ರಕರಣ ಹಿನ್ನೆಲೆ? ಜನವರಿ 30ರಂದು ಹೃದಯಾಘಾತದಿಂದ ಸಾವನಪ್ಪಿದ್ದಾನೆ ಎಂದು ಪರಮೇಶ್ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲಾಗಿತ್ತು. ತುಮಕೂರು ತಾಲೂಕಿನ ಹೆಬ್ಬೂರಿನ ದಾಸರಹಳ್ಳಿ ನಿವಾಸಿ ಮೃತ ಪರಮೇಶ್ ಅವರು ಆಶಾಳನ್ನ ಎರಡನೇ ಮದುವೆ ಆಗಿದ್ದರು. ಮಾಗಡಿ…
ಬೆಂಗಳೂರು : ಟಾಲಿವುಡ್ ಖ್ಯಾತ ನಟ ಜೂನಿಯರ್ NTR ಬೆಂಗಳೂರಿಗೆ ಭೇಟಿ ನೀಡಿದ್ದು, ಬೆಂಗಳೂರಿನ ಮಾದೇವಪುರದಲ್ಲಿರುವ ನೂತನ ಕಿಮ್ಸ್ ಆಸ್ಪತ್ರೆ ಉದ್ಘಾಟನೆ ಮಾಡಿದರು. ಟಾಲಿವುಡ ಜೂನಿಯರ್ NTR ನೋಡಲು ಅಭಿಮಾನಿಗಳು ಇದೇ ವೇಳೆ ಮುಗಿಬಿದ್ದರು. ಪೊಲೀಸರಿಂದ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಪೊಲೀಸರು ಲಘು ಲಾಟಿಚಾರ್ಜ್ ನಡೆಸಿ ಗುಂಪು ಚದುರಿಸಿದರು.
ಬೆಂಗಳೂರು : ಬೆಂಗಳೂರಿನ ಜಯ್ ಮಹಲ್ ಹಿಟ್ ಅಂಡ್ ರನ್ ಕೇಸ್ ಘಟನೆ ನಡೆದಿದ್ದು, ಬೈಕಿಗೆ ಗುದ್ದಿ ಇನೋವಾ ಚಾಲಕ ಎಳೆದೊಯ್ದಿದ್ದಾನೆ. ಡಿಕ್ಕಿ ರಭಸಕ್ಕೆ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಹಿಟ್ ಅಂಡ್ ರನ್ನಿನ ದೃಶ್ಯ ಸೆರೆಯಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ನಿಂದ ಪೆಟ್ರೋಲ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮಹಿಳೆಗೆ ಗಂಭೀರ ಗಾಯವಾಗಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಾಗಿದೆ. ಅಪಘಾತ ಮಾಡಿದ ನಂತರ ಕಾರು ಚಾಲಕ ಅಲ್ಲಿಂದ ಪರಾರಿ ಆಗಿದ್ದಾನೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ ಮಾಡಿ ಚಿಮುಲ್ ನಿರ್ಣಯ ಕೈಗೊಂಡಿದೆ. ಕಳೆದ ಹೊಸ ವರ್ಷಕ್ಕೆ ಜನವರಿ 1 ರಂದು ಲೀಟರ್‌ಗೆ 1 ರೂಪಾಯಿ ಹೆಚ್ಚಳ ಮಾಡಿದ್ದ ಚಿಮುಲ್ ಈಗ ಮತ್ತೆ 50 ಪೈಸೆ ಏರಿಕೆ ಮಾಡಿದೆ. ಇದರಿಂದ ಹೈನುಗಾರರಿಗೆ ಪ್ರತಿ ಲೀಟರ್‌ಗೆ 36 ರೂಪಾಯಿ 40 ಪೈಸೆ ಸಿಗಲಿದ್ದು, ಮೇ ಅಂತ್ಯದವರೆಗೂ ಈ 50 ಪೈಸೆ ಹೆಚ್ಚಳ ಇರಲಿದೆ. ಈಗಾಗಲೇ ಹೊಸ ವರ್ಷಕ್ಕೆ ಒಂದು ರೂಪಾಯಿ ಏರಿಕೆ ಮಾಡಿದ್ದು ಅಧಿಕ ಲಾಭ ಬಂದ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಇದೀಗ 50 ಪೈಸೆ ಹೆಚ್ಚಳ ಮಾಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಾಭಾಂಶ ಬಂದರೆ ಹಾಲು ಉತ್ಪಾದಕರಿಗೆ ಮತ್ತಷ್ಟು ದರ ಹೆಚ್ಚಳ ಮಾಡುವ ಕುರಿತು ತೀರ್ಮಾನಿಸಲಾಗುತ್ತೆ ಎಂದು ಚಿಮುಲ ಅಧ್ಯಕ್ಷ ಮಂಜುನಾಥ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ವಿಮಾನಗಳ ಹಾರಾಟ ರದ್ದಾಗಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಆಗಮಿಸಬೇಕಿದ್ದ 24 ವಿಮಾನಗಳ ಹಾರಾಟ ರದ್ದಾಗಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ 12 ವಿಮಾನಗಳು ತಿರುಳಬೇಕಿತ್ತು. ಇನ್ನು ಅರಬ್ ರಾಷ್ಟ್ರಗಳಿಂದ 12 ವಿಮಾನಗಳು ಆಗಮಿಸಬೇಕಿತ್ತು. ಆದರೆ ಯುದ್ಧ ಮುಂದುವರೆದ ಹಿನ್ನೆಲೆಯಲ್ಲಿ ಆಗಮಿಸಬೇಕಿದ್ದ ಮತ್ತು ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದಾಗಿದೆ.













