Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ: ಹೋಟೆಲ್, ಕಾರ್ಯಕ್ರಮ ಆಯೋಜಕರು ಮುಂತಾದವರು ಗ್ರಾಹಕರ ಆಧಾರ್‌ಕಾರ್ಡ್ ಫೋಟೋ ಕಾಪಿ ತೆಗೆದುಕೊಂಡು ದಾಖಲಿಸಿಟ್ಟು ಕೊಳ್ಳುವ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಲು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ಶೀಘ್ರದಲ್ಲೇ ಹೊಸ ನಿಯಮ ಜಾರಿಗೊಳಿಸಲಿದೆ. ಯುಐಡಿಎಐ ಈ ಕುರಿತು ಮಾತನಾಡಿದ ಭುವನೇಶ್ ಕುಮಾರ್, ‘ಆಧಾರ್ ಕಾಯ್ದೆಯ ಪ್ರಕಾರ, ಹೋಟೆಲ್ ಮೊದಲಾದೆಡೆ ಗ್ರಾಹಕರ ಆಧಾರ್ ಕಾರ್ಡ್ ಪಡೆದು ಕೊಳ್ಳುವುದು ಕಾನೂನುಬಾಹಿರ. ಇದನ್ನು ತಪ್ಪಿಸಲು ಹೊಸ ತಂತ್ರಜ್ಞಾನವನ್ನು ಜಾರಿ ಗೊಳಿಸುತ್ತಿದ್ದೇವೆ. ಇದರಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಅಥವಾ ಆಧಾರ್ ಆ್ಯಪ್‌ನ ಮೂಲಕ ಗ್ರಾಹಕರ ಗುರುತು ಪರಿಶೀಲನೆ ಸಾಧ್ಯವಾಗಲಿದೆ. ಕಾಗದರಹಿತ ಪರಿಶೀಲನೆ ಮಾಡುವು ದರಿಂದ ಗ್ರಾಹಕರ ಖಾಸಗಿತನವೂ ಉಳಿ ಯುತ್ತದೆ, ಆಧಾರ್‌ಮಾಹಿತಿ ಸೋರಿಕೆಯಾ ಗುವ ಅಪಾಯವೂ ಇಲ್ಲ ಎಂದರು. ಹೊಸ ನಿಯಮದ ಮುಖ್ಯ ಅಂಶಗಳು: ಹೋಟೆಲ್, ಈವೆಂಟ್ ಆಯೋಜಕರು ಇತ್ಯಾದಿ ಸಂಸ್ಥೆಗಳು ಆಧಾರ್‌ಮೂಲಕ ಗುರುತು ಪರಿಶೀಲನೆ ಮಾಡಬೇಕಾದರೆ ಕಡ್ಡಾಯವಾಗಿ ಯುಐಡಿಎಐನಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಯಾದ ಸಂಸ್ಥೆಗಳಿಗೆ ಹೊಸ ತಂತ್ರಜ್ಞಾನ (ಎಪಿಐ) ಸಿಗಲಿದೆ. ಗ್ರಾಹಕರ ಆಧಾರ್‌ನ ಕ್ಯೂಆರ್ ಕೋಡ್ ಸ್ಕ್ಯಾನ್…
BIG NEWS : ವಂದೇ ಮಾತರಂ ಚರ್ಚೆಗೆ ಇಂದು ಮೋದಿ ಚಾಲನೆ : ರಾಷ್ಟ್ರೀಯ ಗೀತೆಗೆ 150 ವರ್ಷ ಹಿನ್ನೆಲೆ ಲೋಕಸಭೆಯಲ್ಲಿ ಚರ್ಚೆ
ನವದೆಹಲಿ : ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ಈ ಕುರಿತ ಚರ್ಚೆಗೆ ಸೋಮವಾರ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಚರ್ಚೆಯನ್ನು ಪ್ರಾರಂಭಿಸಲಿದ್ದು, 10 ಗಂಟೆಗಳ ಕಾಲ ಚರ್ಚೆ ನಡೆಯಲಿದೆ. 1937ರಲ್ಲಿ ವಂದೇ ಮಾತ ರಂನ ಪ್ರಮುಖ ಚರಣಗಳಿಗೆ ಕಾಂಗ್ರೆಸ್ ಕತ್ತರಿ ಹಾಕಿತು ಎಂದು ಈ ಹಿಂದೆ ಪ್ರಧಾನಿ ಮೋದಿ ಆರೋಪಿಸಿದ್ದರು. ಇದನ್ನು ಪ್ರಸ್ತಾವಿಸಿ+ವಿಪಕ್ಷಗಳನ್ನು ತರಾಟೆಗೆತೆಗೆದುಕೊಳ್ಳುವ ಸಾಧ್ಯತೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೋದಿಯವರ ನಂತರ ಮಾತನಾಡಲಿದ್ದಾರೆ. ವಿಪಕ್ಷಗ ಳಿಂದ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೋಯ್ ಹಾಗೂ ಸಂಸದೆ ಪ್ರಿಯಾಂಕಾ ವಾದ್ರಾ ಚರ್ಚೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಇನ್ನು, ರಾಜ್ಯಸಭೆಯಲ್ಲಿ ಡಿ.9ರಂದು ಈ ಕುರಿತು ಚರ್ಚೆ ಆರಂಭವಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯಸಭೆಯ ನಾಯಕ ಜೆ.ಪಿ. ನಡ್ಡಾ ಚರ್ಚೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮದ್ಯದ ಅಮಲಿನಲ್ಲಿ ಚಾಲಕ ಕಂಪೌಂಡ್ ಗೆ ಗುದ್ದಿರುವ ಘಟನೆ ಬೆಂಗಳೂರಿನ ಬಸವನಗುಡಿಯ ವಾಸವಿ ಶಾಲೆಯ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಂಪೌಂಡಿಗೆ ಕಾರು ಗುದ್ದಿದೆ. 2 ಬೈಕ್ ಹಾಗೂ ಮತ್ತೊಂದು ಕಾರಿಗೂ ಹಾನಿಯಾಗಿದೆ. ಛತ್ತೀಸ್ಗಡ ನೊಂದಣಿಯ ಬೆಂಜ್ ಕಾರು ಅಪಘಾತಕ್ಕೆ ಈಡಾಗಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿದ್ದ ಬೆಂಗಳೂರು ನೇತಾಜಿ ನಗರದ ನಿವಾಸಿ ಪ್ರಣಯ್ ಜೈನ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಬಸವನಗುಡಿಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಗುಪ್ತಚರ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸನ್ನದ್ಧವಾಗಿದೆ. ಆಡಳಿತ, ವಿಪಕ್ಷ ನಾಯಕರ ಸ್ವಾಗತಕ್ಕೆ ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಕಲಾಪ ನಡೆಯಲಿರುವ ಸುವರ್ಣ ವಿಧಾನಸೌಧ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಚಳಿಗಾಲದ ಅಧಿವೇಶನಕ್ಕೆ ಈ ಬಾರಿಯೂ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಡಿ.8ರಿಂದ 19ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧಿವೇಶನಕ್ಕೂ ಮುನ್ನಾದಿನವೇ (ಇಂದು) ಸುವರ್ಣ ವಿಧಾನಸೌಧ ಮುಖ್ಯದ್ವಾರ, ಪ್ರವೇಶ ದ್ವಾರ ಸೇರಿದಂತೆ ಇಡೀ ಸೌಧದ ಸುತ್ತಲೂ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ, ಸಾರ್ವಜನಿಕರನ್ನು ತಪಾಸಣೆ ಮಾಡಿಯೇ ಪೊಲೀಸರು ಒಳಬಿಡುತ್ತಿದ್ದಾರೆ. ಅಧಿವೇಶನದ ಭದ್ರತೆಗೆ ಈ ಬಾರಿ ಅತೀ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. 146 ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ,…
ನವಲಗುಂದ : ನಿಮಗೆ ಜಾಸ್ತಿ ಮಕ್ಕಳು ಬೇಡ, ನೀವು ಎರಡೇ ಮಕ್ಕಳನ್ನು ಮಾಡಿಕೊಳ್ಳಿ. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಯಾಗಿ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣ ಇಂದಿನ ಅಗತ್ಯ. ಇದು ನೂತನ ದಂಪತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸಲಹೆ. ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಶಾಸಕ ಎನ್. ಎಚ್.ಕೋನರಡ್ಡಿಯವರು ತಮ್ಮ ಪುತ್ರ ನವೀನಕುಮಾರ ಅವರ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೂತನ ವಧು-ವರರಿಗೆ ಶುಭಾಶಯ ಕೋರಿದ ಸಿಎಂ, ಸರಳ,ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹ ಗಳು ಸಮಾಜದಲ್ಲಿ ಸಮಾನತೆ ತರಲು ಸಹಕಾರಿಎಂದರು. ಇಲ್ಲಿಮದುವೆಯಾದ ನೂತನ ದಂಪತಿಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಬೇಕು. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಹೆಚ್ಚಾಗುತ್ತಾ ಹೋಗುತ್ತಿದೆ ಎಂದು ಸಲಹೆ ನೀಡಿದರು. ಇಲ್ಲಿ ನಡೆದ 75 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯ 3ನ್ ಸಮಾಜದವರೂ ಮದುವೆ ಯಾಗುತ್ತಿರುವುದು ಸಂತೋಷದ ಕ್ಷಣ. ಸಮಾ ಜದಲ್ಲಿನ ಹಿಂದೂ, ಮುಸ್ಲಿಂ,…
BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ಗೆ ಲಾರಿ ಗುದ್ದಿ ಜೋಡಿ ಸಾವು!
ಗಂಗಾವತಿ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪ ನಡೆದಿದೆ. ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳು ಮರಳುತ್ತಿದ್ದರು. ಕವಿತಾರನ್ನು ತಮ್ಮ ಗಂಗಾವತಿಯ ಮನೆಗೆ ಬಿಟ್ಟು ಹೋಗಲು ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿಯೊಂದು ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡು ಗಂಗಾವತಿ ಆಸತ್ರೆಯಲ್ಲಿ ಮೃತಪಟ್ಟಿದಾರೆ.
ಬೆಂಗಳೂರು : ರಾಜ್ಯಾದ್ಯಂತ ನಿನ್ನೆ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ ಪತ್ರಿಕೆ-1ಕ್ಕೆ ಶೇ.93.35 ಅಭ್ಯರ್ಥಿಗಳು ಹಾಗೂ ಪತ್ರಿಕೆ-2ಕ್ಕೆ ಶೇ.94.79 ಅಭ್ಯರ್ಥಿಗಳು ಹಾಜರಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ 903 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 3.35 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಹಾವೇರಿಯ ಇಜಾರಿಲಕಮಾಪುರ ಪಿಯು ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಟಿಇಟಿ (ಪರೀಕ್ಷೆ)ಗೆ ಹಾಜರಾಗಲು ಬಂದಿದ್ದ ಮಹಿಳಾ ಅಭ್ಯರ್ಥಿಗಳ ಗಾಜಿನ ಬಳೆ, ಕಿವಿ ಓಲೆ, ಕಾಲು ಚೈನು ತೆಗೆದಿರಿಸಿ ಪರೀಕ್ಷಾ ಕೊಠಡಿಗೆ ಬರುವಂತೆ ಸಿಬ್ಬಂದಿ ಸೂಚನೆ ನೀಡಿದರು. ಈ ರೀತಿಯ ನಿಯಮ ಇಲ್ಲದಿದ್ದರೂ ಬಳೆ, ಕಿವಿಯೋಲೆ ತೆಗೆಸಿದ್ದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು. ಆದರೆ, ಇದನ್ನು ಅಲ್ಲಗಳೆದಿರುವ ಡಿಡಿಪಿಐ ಮೋಹನ ದಂಡಿನ್, ನಮ್ಮ ಸಿಬ್ಬಂದಿಗೆ ನಿಯಮದ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ಈ ರೀತಿಯ ಘಟನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ : ಮಹಿಳೆ ಮೇಲೆ 2 ರಾಟ್‌ವೀಲರ್ ನಾಯಿಗಳು ಭೀಕರ ದಾಳಿ ಮಾಡಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ನಾಯಿಗಳ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಶೈಲೇಶ್ ಕುಮಾರ್ ಬಂಧಿತರಾಗಿದ್ದು, ನಾಯಿಗಳನ್ನು ಜಿಲ್ಲೆಯ ಹೊನ್ನೂರು ಕ್ರಾಸ್ ಬಳಿ ಬಿಟ್ಟು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೈಲೇಶ್ ಅವರು ನಾಯಿಗಳನ್ನು ಆಟೋ ರಿಕ್ಷಾದಲ್ಲಿ ತಂದು ರಸ್ತೆ ಬದಿ ಬಿಟ್ಟು ಹೋಗಿದ್ದ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿ ಆತನನ್ನು ಬಂಧಿಸಿದ್ದಾರೆ. ಬುಧವಾರ ರಾತ್ರಿ ಶೈಲೇಶ್ ತಮ್ಮ 2 ರಾಟ್‌ವೀಲರ್ ನಾಯಿಗಳನ್ನು ಬಿಟ್ಟು ಕಾಲ್ಕಿತ್ತಿದ್ದರು. ಈ ನಾಯಿಗಳು ಅಮಲು ಬಂದಂತೆ ವರ್ತಿಸಿ, ರಸ್ತೆ ಬದಿ ಹಾದು ಹೋಗುತ್ತಿದ್ದ ಅನಿತಾ ಅವರ ಮೇಲೆ ದಾಳಿ ಮಾಡಿ, ಭೀಕರವಾಗಿ ದಾಳಿ ಮಾಡಿತ್ತು. ಗುರುವಾರ ಸ್ಥಳೀಯರು ಅನಿತಾರನ್ನು ಕಂಡು ಆಸ್ಪತ್ರೆಗೆ ಸೇರಿಸುವಾಗ ಅವರು ಅಸುನೀಗಿದ್ದರು.
ಬೆಂಗಳೂರು : ಕಳೆದೊಂದು ವಾರದಿಂದ ಇಂಡಿಗೋ ವಿಮಾ ನಯಾನ ಸಮಸ್ಯೆ ಮುಂದುವರಿದಿದ್ದು, ಭಾನುವಾರ ಇಲ್ಲಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 150 ವಿಮಾನಗಳು ರದ್ದಾಗಿದ್ದವು. ನಿಲ್ದಾಣಕ್ಕೆ ಬರುವ 76 ವಿಮಾನಗಳು ಹಾಗೂ ಇಲ್ಲಿಂದ ಹೊರಡಬೇಕಿದ್ದ 74 ವಿಮಾ ನಗಳ ಸಂಚಾರವನ್ನು ಇಂಡಿಗೋ ರದ್ದುಗೊ ಳಿಸಿತು. ಹಲವು ವಿಮಾನಗಳು ವಿಳಂಬವಾಗಿ ಆಗಮಿಸಿ, ಹೊರಟವು. ದೆಹಲಿ, ಹೈದರಾಬಾದ್, ಇಂದೋರ್, ರಾಯಪುರ್, ಕೊಲ್ಕತ್ತಾ, ಮಂಗಳೂರು ಕೊಚ್ಚಿ, ಶ್ರೀನಗರ, ಭೂಪಾಲ್, ಸೇರಿದಂತೆ ಹಲವಡೆ ತೆರಳಬೇ ಕಿದ್ದ ವಿಮಾನಗಳು ಸಂಚರಿಸುವುದಿಲ್ಲ ಎಂದು ನಿಲ್ದಾಣದ ಸಿಬ್ಬಂದಿ ಮಾಹಿತಿ ನೀಡಿದರು. 12 ಗಂಟೆ ಆಸುಪಾಸಿನಲ್ಲಿ ಹೊರಡಬೇಕಿದ್ದ ವಿಮಾನಗಳು ಹಾರಾಡಲಿಲ್ಲ. 11.50ರ ಕೊಲ್ಕತ್ತಾ, 12.40ರ ಮಂಗಳೂರು, 1 ಗಂಟೆಗೆ ದೆಹಲಿ, 1.5ಕ್ಕೆ ಕೊಚ್ಚಿ ಹಾಗೂ 1.20 ರ ನಾಸಿಕ್ ವಿಮಾನ ಸೇರಿ ವಿಮಾನಗಳು ರದ್ದಾಗಿದ್ದವು. ಟ್ರಾವೆಲ್ ಏಜೆಂಟರೊಬ್ಬರು ಮಾತನಾಡಿ, ವಿಮಾನ ರದ್ದತಿಯಿಂದ ನಮಗೆ ಸಾಕಷ್ಟು ತೊಂದರೆ ಆಗಿದೆ. ನಮ್ಮಲ್ಲಿ ಬುಕ್ ಮಾಡಿರುವ ಪ್ರಯಾಣಿಕರ ಸಂಚಾರ ವ್ಯತ್ಯಯಗೊಂಡು ಪ್ರವಾರ ರದ್ದುಪಡಿಸಿದರು. ಡಿಸೆಂಬರ್ತಿಂಗಳು ಪ್ರವಾಸದ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಬಂದೂಕಿನಿಂದ ಫೈರಿಂಗ್ ನಡೆಸಲಾಗಿದೆ. ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತಿಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರಾದ ಸತೀಶ್ (28) ಹಾಗೂ ಮಿಟ್ಟು (25) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗುಂಡು ಹಾರಿಸಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನೆಡೆಸುತ್ತಿದ್ದಾರೆ.














