Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗುಮ್ಮಲ ಡ್ಯಾಂನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗ್ರಾಮದಲ್ಲಿ ಈಜುಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿ ಮುಳುಗಿ ಸಾವನ್ನಪ್ಪಿದ್ದರೆ. ಮೃತರನ್ನು ಶ್ರೀಶ (13) ಹಾಗೂ ಜಯಂತ್ (19) ಎಂದು ತಿಳಿದು ಬಂದಿದೆ.ರಜೆ ಹಿನ್ನೆಲೆಯಲ್ಲಿ ಗೆಳೆಯರ ಜೊತೆಗೆ ಇಬ್ಬರು ಈಜಲು ಹೋಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹಳೆಯ ನಂಬರ್ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೌದು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಸಿದೆ. HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರಂದು ಕೊನೆಯ ದಿನವಾಗಿತ್ತು. ಇದೀಗ ಸಾರಿಗೆ ಇಲಾಖೆಯಿಂದ ವರ್ಷಾಂತ್ಯದ ವರೆಗೆ ಗಡಗು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಅಷ್ಟು ಹಳೆಯ ವಾಹನಗಳು ಇವೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿತ್ತು. ಆದರೆ 55 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಿವೆ. ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ…
ಬಳ್ಳಾರಿ : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ವಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರಿಂದ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವಿಚಾರವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಓವೈಸಿ ನಾವು ಮುಸ್ಲಿಮರು ಏನೆಂದು ತೋರಿಸುತ್ತೇವೆ ಅಂತ ಹೇಳಿದಾಗ ಕೇಸ್ ಹಾಕಲಿಲ್ಲ. ಸ್ವಾಮಿಜಿ ವಿರುದ್ಧ ಕೇಸ್ ಹಾಕುತ್ತೀರಾ? ಓವೈಸಿ ಅಂತವರೆಲ್ಲ ನಿಮ್ಮ ಬ್ರದರ್ಸ್ ಸ್ವಾಮೀಜಿ ನಿಮ್ಮ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದರು. ಆಟೋದಲ್ಲಿ ಕುಕ್ಕರ್ ಬಾಂಬ್ ಇಟ್ಟವನಿಗೆ ನಾನು ಬ್ರದರ್ ಅಂದಿಲ್ಲ. ಕುಮಾರಸ್ವಾಮಿಗೆ ಕರಿಯ ಅಂದ್ರು. ಅದಕ್ಕೆ ಯಾಕೆ ಕೇಸ್ ಹಾಕಿಲ್ಲ ಸಚಿವ ಜಮೀರ್ ಅಹ್ಮದ್ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ವಿಧಾನಸೌಧದಲ್ಲಿ ಪಾಕಿಸ್ತಾನದಿಂದ ಘೋಷಣೆ ಕೂಗಿದರು. ಪಾಕಿಸ್ತಾನ ಜಿಂದಾಬಾದ್ ಕೂಗಿದವರ ಮೇಲು ಸರ್ಕಾರ ಕೇಸ್ ಹಾಕಿಲ್ಲ. ಸ್ವಾಮೀಜಿಗೆ ಕ್ಯಾನ್ಸರ್ ಇದೆ ಕೇಸ್ ಹಾಕಿ ಚಿತ್ರಹಿಂಸೆ ಕೊಡುತ್ತಿದ್ದೀರಾ? ಚುನಾವಣೆ ಬಂದಾಗ ಕಾಂಗ್ರೆಸ್ನವರು ಸ್ವಾಮೀಜಿಯ ಕಾಲು ಹಿಡಿದಿಲ್ವಾ? ಈ ಹಿಂದೆ ಅಕ್ಬರೋದ್ದೀನ್ ಓವೈಸಿ ಪ್ರಚೋದನಾಕಾರಿ…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಪ್ರೀತಿ, ಮದುವೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಒಂದು ಹೆಸರಿನಲ್ಲಿ ಯುವಕ ಮತ್ತು ಯುವತಿರು ಇಬ್ಬರು ಕೂಡ ಮೋಸ ಹೋಗುತ್ತಿದ್ದಾರೆ ಇದೀಗ ಬೆಂಗಳೂರಿನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆಗೆ ಪ್ರೀತಿಸುವ ನಾಟಕವಾಡಿದ್ದು, ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ನಿರಂತರವಾಗಿ ಒಂದುವರೆ ವರ್ಷ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಇದೀಗ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಅತ್ಯಾಚಾರ ಎಸಗಿರುವ ಆರೋಪಿಯನ್ನು ಬೆಂಗಳೂರಿನ ತಾವರೆಕೆರೆ ಬಳಿಯ ಹೊಸಪಾಳ್ಯದ ಯುವಕ ಶ್ರೀಕಾಂತ ಎಂದು ಗುರುತಿಸಲಾಗಿದ್ದು, ಆಕೆ, ನೆಲಮಂಗಲದ ಬಳಿಯ ಮಧ್ಯಮ ಕುಟುಂಬದ ಯುವತಿ. ಇನ್‌ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಸಂಪಾದಿಸಿದ್ದಾನೆ. ಚಾಟಿಂಗ್ ಮಾಡುತ್ತಾ ಬಣ್ಣದ ಮಾತನಾಡಿ ಪ್ರೀತಿಯ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ. ನಂತರ ಬೆಂಗಳೂರಿನಲ್ಲಿ ಪಾರ್ಕ್, ಸಿನಿಮಾ ಎಂದೆಲ್ಲಾ ಸುತ್ತಾಡಿದ ನಂತರ ಯುವತಿಗೆ ಮದುವೆ ಮಾಡಿಕೊಳ್ಳುವ ಭರವಸೆ ನೀಡಿದ್ದಾನೆ. ಬಳಿಕ ಯುವತಿಗೆ ಅದು ಇದು ಹೇಳಿ ನೆಲಮಂಗಲದ…
ಬೆಂಗಳೂರು : ಇದೆ ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದು, ಈ ಒಂದು ವಿಚಾರವಾಗಿ ಡಿಡಿಸಿಎಂ ಸೆಂಬ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಾಸನ ಸಮಾವೇಶಕ್ಕೆ ಯಾವುದೇ ಗೊಂದಲವಿಲ್ಲ. ಪಕ್ಷದ ವೇದಿಕೆಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ನನ್ನ ನೇತೃತ್ವದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜಿಲ್ಲಾ ಮಂತ್ರಿಗಳು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲೆಕ್ಷನ್ ಮುಗಿದ ಮಾತ್ರಕ್ಕೆ ಮರಿಯೋದು ಅಲ್ಲ. ಮುಂಬರುವ ಚುನಾವಣೆಯ ಬಗ್ಗೆಯೂ ಯೋಚನೆ ಮಾಡಬೇಕು. ಹೀಗಾಗಿ ಡಿಸೆಂಬರ್ 5ರಂದು ಹಾಸನದಲ್ಲಿ ಸಮಾವೇಶ ಮಾಡಲಿದ್ದೇವೆ. ಯಾರು ನಮಗೆ ಬೆಂಬಲ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇವೆ. ಹಾಸನ ಮೈಸೂರು ಚಾಮರಾಜನಗರ ಉಸ್ತುವಾರಿ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದು ಎಲ್ಲರೂ ಸಹ ಈ ಸಮಾವೇಶಕ್ಕೆ ಬಂದು ಯಶಸ್ವಿ ಮಾಡಬೇಕು ಎಂದು ತಿಳಿಸಿದರು. ಪಕ್ಷ ಸಂಘಟನೆ ಮಾಡುವಾಗ ದೃಷ್ಟಿಯಿಂದ ಸಮಾವೇಶ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶಕ್ಕೆ ತೀರ್ಮಾನ ಮಾಡಿದ್ದೇವೆ ಎಲ್ಲೆಲ್ಲಿ…
ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷರಾಗಿ ಜಯ್ ಶಾ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನವೆಂಬರ್ 20ರಿಂದ ಐಸಿಸಿ ಅಧ್ಯಕ್ಷರಾಗಿದ್ದ ಗ್ರೇಗ್ ಬಾರ್ಕ್ಲೆ ಉತ್ತರಾಧಿಕಾರಿಯಾಗಿ ಬಿಸಿಸಿಐನ ಮಾಜಿ ಕಾರ್ಯದರ್ಶಿ ಜಯ್ ಶಾ ಕಾರ್ಯನಿರ್ವಹಿಸಲಿದ್ದಾರೆ. ಅಧ್ಯಕ್ಷರಾದ ಬಳಿಕ ವಿವಿಧ ಮಾದರಿಗಳ ಸಹ ಅಸ್ತಿತ್ವ ಹಾಗೂ ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವೇಗ ನೀಡಬೇಕಾದ ಸಂಕೀರ್ಣ ಘಟ್ಟದಲ್ಲಿದ್ದೇವೆ. ಕ್ರಿಕೆಟ್ ಜಾಗತಿಕವಾಗಿ ಭಾರಿ ಪ್ರಭಾವಶಾಲಿಯಾಗಿದ್ದು, ನಾನು ಈ ಅವಕಾಶವನ್ನು ಬಳಸಿಕೊಂಡು ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಐಸಿಸಿ ತಂಡ ಹಾಗೂ ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಅವರು ತಿಳಿಸಿದರು. ಐಸಿಸಿ ಮುಖ್ಯಸ್ಥನ ಪಾತ್ರದಿಂದ ನಾನು ಗೌರವಕ್ಕೊಳಗಾಗಿದ್ದೇನೆ. ಐಸಿಸಿ ನಿರ್ದೇಶಕರು ಹಾಗೂ ಸದಸ್ಯರ ಬೆಂಬಲ ಮತ್ತು ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸೇರ್ಪಡೆಗೆ ಪ್ರಯತ್ನ ಹಾಗೂ ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ಆದ್ಯತೆ ನೀಡುವುದರತ್ತ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.36 ವರ್ಷ…
ಉತ್ತರಕನ್ನಡ : ಒಂದೆಡೆ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಈ ಒಂದು ಚಂಡಮಾರುತದ ಪರಿಣಾಮದಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇದೀಗ ಭೂಕಂಪನದ ಅನುಭವವಾಗಿದೆ. ಹೌದು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿ ಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ ಕಸಗೆ, ಬಂಡಳದಲ್ಲಿ ಭೂಮಿ ಕಂಪಿಸಿದೆ. 2 ತಾಲೂಕುಗಳ ಹಲವು ಪ್ರದೇಶಗಳಲ್ಲಿ 3 ಸೆಕೆಂಡ್ ಗಳ ವರೆಗೆ ಭೂಮಿ ಕಂಪಿಸಿದ ಅನುಭವ ಆಗಿದೆ.
ಬೆಂಗಳೂರು : ಮುಡಾದಲ್ಲಿ 50:50 ಅನುಪಾತದಲ್ಲಿ ಅಕ್ರಮವಾಗಿ ನಿವೇಶನಗಳ ಹಂಚಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಶ್ರೀವತ್ಸ ಅವರು ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅವರಿಗೆ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೌದು 50:50 ಅನುಪಾತದಲ್ಲಿ ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪದ ವಿಚಾರವಾಗಿ ರಾಜ್ಯಪಾಲರಿಗೆ ಮತ್ತೊಂದು ದೂರು ಕೊಡಲು ಶಾಸಕ ಶ್ರೀವತ್ಸ ಮುಂದಾಗಿದ್ದಾರೆ. 50:50 ಅನುಪಾತದಲ್ಲಿ ಸೈಟ್ ಪರಭಾರೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ನಕ್ಷೆಗೆ ಅನುಮತಿ ಕೊಡುವುದನ್ನು ನಿಲ್ಲಿಸಬೇಕು ನಿರ್ಮಾಣವಾಗುತ್ತಿರುವ ಕಟ್ಟಡದ ಕೆಲಸವನ್ನು ಸ್ಥಗಿತ ಮಾಡಬೇಕು ಈ ವಿಚಾರದಲ್ಲಿ ರಾಜಪಾಲರ ಮಧ್ಯಪ್ರವೇಶಕ್ಕೆ ನಾನು ಆ ಗ್ರಹ ಮಾಡುತ್ತೇನೆ ಎಂದಿದ್ದಾರೆ.
ಬೆಂಗಳೂರು : ನಾವು ಹಾಗೂ ಎಚ್ ಡಿ ದೇವೇಗೌಡರು ಜೆಡಿಎಸ್ ಪಕ್ಷ ಕಟ್ಟುವ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಇರಲೇ ಇಲ್ಲ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಜೆಡಿಎಸ್ ಪಕ್ಷ ಕಟ್ಟಿದ್ದು ನಾವು ಈಗ ಆ ಪಕ್ಷ ಜಾತ್ಯಾತೀತ ಆಗಿದೆಯಾ? ಜೆಡಿಎಸ್ ನವರು ಕೋಮುವಾದಿಗಳ ಜೊತೆಗೆ ಸೇರಿದ್ದಾರೆ. ನಾವು ಪಕ್ಷ ಕಟ್ಟುವಾಗ ಹೆಚ್‍ಡಿ ಕುಮಾರಸ್ವಾಮಿ ಇರಲಿಲ್ಲ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ ಆಗ ಅವರು ಇರಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು ಜೆಡಿಎಸ್ ನಿಂದ ಹೊರ ಹಾಕಿದ್ದಕ್ಕೆ ಅಹಿಂದ ಸಮಾವೇಶ ಶುರು ಮಾಡಿದ್ದು. ಇನ್ಮುಂದೆ ಪಕ್ಷ ಬಿಟ್ಟರು ಅಂತ ಹೇಳಬೇಡಿ. ಹಾಸನದಲ್ಲೂ ನಾನು ಅಹಿಂದ ಸಮಾವೇಶವನ್ನು ಮಾಡಿದ್ದೇನೆ. ಈಗ ಅಭಿನಂದನೆ ಹೇಳುವುದಕ್ಕೆ ಸಮಾವೇಶ ಮಾಡುತ್ತಿರುವುದು. ಜನರು ಕಾರ್ಯಕರ್ತರಿಗೆ ಅಭಿನಂದನೆ ಹೇಳಲು ಸಮಾವೇಶ ಮಾಡುತ್ತೇವೆ ಸರ್ಕಾರ, ಕೆಪಿಸಿಸಿ, ಸ್ವಾಭಿಮಾನಿ ಒಕ್ಕೂಟ ಸೇರಿ ಸಮಾವೇಶ…
ಬೆಂಗಳೂರು : ಬೆಂಗಳೂರು ಗ್ರಾಮಂತರ ಜಿಲ್ಲೆಯ ಆನೇಕಲ್ ಸಮೀಪದ ಜಿಗಣಿ ಮತ್ತು ಪಿಣ್ಯದಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ಒಂದು ಪ್ರಕರಣದ ಚಾರ್ಜ್ ಶೀಟ್ ಅನ್ನು ಆನೇಕಲ್ ಕೋರ್ಟ್ ಗೆ ಜಿಗಣಿ ಪೊಲೀಸರು ಸಲ್ಲಿಸಿದ್ದಾರೆ. ಈ ಒಂದು ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ವಾದಂತಹ ವಿಷಯ ಬಹಿರಂಗವಾಗಿದೆ. ಹೌದು ಪಾಕಿಸ್ತಾನ ಪ್ರಜೆಗಳ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆನೇಕಲ್ ಕೋರ್ಟಿಗೆ ಜಿಗಣಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 22 ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಇದೀಗ ಅದರಲ್ಲಿ ಒಂದು ಪ್ರಕರಣದ 1000 ಪುಟಗಳ ಚಾರ್ಜ್ ಶೀಟ್ ಅನ್ನು ಇದೀಗ ಪೊಲೀಸರು ಆನೇಕಲ್ ಕೋರ್ಟ್ ಗೆ ಸಲ್ಲಿಸಿದ್ದಾರೆ. ಆದರೆ ಚಾರ್ಜ್ ಶೀಟ್ ನಲ್ಲಿ ಬೆಚ್ಚಿ ಬೀಳಿಸುವ ವಿಷಯ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ A1 ಆರೋಪಿ ರಶೀದ್ ಅಲಿ ಸಿದ್ದಿಕಿ ಪಾಕಿಸ್ತಾನ ಮೂಲದವನು ಎಂಬುದು ಸಾಬೀತಾಗಿದೆ. ಆತನ ಪಾಕ್…














