Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಪರಸ್ಪರ ವಾಕ್ಸಮರ ತಾರಕಕ್ಕೆ ಏರಿದ್ದು, ಇದೀಗ ಎಡಿಜಿಪಿ ಯವರು ತಮ್ಮ ಸಿಬ್ಬಂದಿಗೆ ಬರೆದ ಪತ್ರದಲ್ಲಿ ಹಂದಿಗಳ ಜೊತೆಗೆ ಗಲಾಟೆ ಬೇಡ ಎಂದು ಉಲ್ಲೇಖಿಸಿದ್ದರು. ಈ ಒಂದು ವಿಚಾರವಾಗಿ ಇದೀಗ ಎಚ್ ಡಿ ಕುಮಾರಸ್ವಾಮಿ ವಿ ಡಿಜಿಪಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೆಚ್‍ಡಿ ಕುಮಾರಸ್ವಾಮಿ ಪತ್ರ ಬರೆದಿದ್ದು,ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಪರಿಶೀಲಿಸಬೇಕು.ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಕೂಡ ಪರಿಶೀಲಿಸಬೇಕಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೇಂದ್ರ ಸಚಿವ ಕುಮಾರಸ್ವಾಮಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಗಂಭೀರವಾದಂತಹ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಹಾಗೂ ಕಂದಾಯ ಇಲಾಖೆ ಮೇಲು ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಹೇಳಿಕೆಗೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ಸರ್ಕಾರ ಬೀಳಿಸುವ ಕುರಿತು ಬಿಜೆಪಿ ಯತ್ನ ಮಾಡುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಿ.ಎಸ್ ಉಗ್ರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮತ್ತು ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಮಾರು ಒಂದು ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಆ ಹಣವನ್ನು ಬಳಸಿ ಜನಪರವಾಗಿ ಕೆಲಸ ಮಾಡಿರುವಂತಹ ಜನಾದೇಶ ಇರುವಂತಹ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಬರುವ ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗಲಿದ್ದು, ಸರ್ಕಾರವನ್ನು ತೆಗೆಯುವಂತಹ ಪ್ರಯತ್ನ ಆಗುತ್ತೆ ಎನ್ನುವ ಅಭಿಪ್ರಾಯವನ್ನು ಮಾಧ್ಯಮಗಳ ಮೂಲಕ ಹೇಳಿದ್ದಾರೆ. ಹಾಗಾಗಿ ಬಸನಗೌಡ ಪಾಟೀಲ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.ಇಂತಹ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ‘ECIR’ ದಾಖಲಿಸಿದ್ದಾರೆ. ಒಂದು ವೇಳೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬಂಧನವಾದರೆ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತ ರಾಜ್ಯದಲ್ಲೂ ಮರುಕಳಿಸುತ್ತಾ ಎಂದು ಜನರಲ್ಲಿ ಕುತೂಹಲ ಮೂಡಿಸಿದೆ. ಹೌದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ECIR ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ…
ಬೆಂಗಳೂರು : ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸರಿದಂತೆ ನಾಲ್ವರು ಆರೋಪಿಗಳ ಬಂಧನ ವಿಚಾರವಾಗಿ ಇದೀಗ ಜಿಗಣಿ ಪೊಲೀಸರು ಎಲ್ಲಾ ಆರೋಪಿಗಳನ್ನು ಇಂದು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ಪಾಕ್ ಪ್ರಜೆಗಳಾದ ರಶೀದ್, ಪತ್ನಿ ಆಯೇಷಳನ್ನು 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಇಂದು ಜಿಗಣಿಯಲ್ಲಿ ಪಾಕ್ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಗೆ ಐಬಿ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳು ಪೊಲೀಸರಿಂದ ಆರೋಪಿಗಳ ಪೂರ್ವಾಪರ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಇದೀಗ ಜಿಗಣಿ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದು 10 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಪ್ರಜೆ ಸೇರಿಂದತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಪ್ರಜೆ…
ಕಲಬುರ್ಗಿ : ಕಲುಷಿತ ನೀರು ಸೇವಿಸಿ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಎಂಬ ಈ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸದೆ, ಗ್ರಾಮಕ್ಕೆ ನೀರು ಪೂರೈಸಲಾಗುತ್ತಿತ್ತು. ಇದರಿಂದ, ಸುಮಾರು 30ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಕುರಿತಂತೆ ಆಳಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೇಷನ್ಸ್ (24ನೇ ಎಸಿಎಂಎಂ) ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುವಾಸಿಗಳಾಗಿದ್ದು, ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಕ್ಷಗಳ ವಿಚಾರಣೆ ಶಶಿನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಇನ್ನು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ವಿಚಾರಣೆಯನ್ನು ಮುಂದುಡಿದೆ. ಅಲ್ಲದೆ ಪ್ರಕರಣದ A1 ಆರೋಪಿ ಆಗಿರುವ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಅಕ್ಟೋಬರ್ 4ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ರದ್ದುಗೊಳಿಸುವಂತೆ ನಳಿನ್ ಕುಮಾರ್ ಕಟೀಲು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ನಳಿನ್ ಕುಮಾರ್ ಕಟೀಲ್ ಪರ ಕೆಜಿ ರಾಘವನ್ ವಾದ ಮಂಡಿಸಿದ್ದು, ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಆರೋಪ ಬರುವುದಿಲ್ಲ. ಜಾರಿ ನಿರ್ದೇಶನಾಲಯವನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಜಡ್ಜ್ ಮುಂದೆ ತಿಳಿಸಿದರು.ಈ ವೇಳೆ ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಇಡಿ ಭಯದಲ್ಲಿ ರಾಜಕೀಯ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ.ಇದು ಸುಲಿಗೆ ಅಲ್ಲದೆ ಮತ್ತೇನು ಅಲ್ಲವೆಂದು ಪ್ರಶಾಂತ ಭೂಷಣ್ ವಾದಿಸಿದರು. ಈ ವೇಳೆ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ. ಎಂ. ನಾಗ ಪ್ರಸನ್ನ ಅವರು ಸುಲಿಗೆ ಎಂದರೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರಬೇಕು.ಸುಲಿಗೆಗೆ ಒಳಗಾದವರೇ ಪೊಲೀಸರಿಗೆ ದೂರು ನೀಡಬೇಕು ಆದರೆ ದೂರುದಾರ ತಾವು ಸುಲಿಗೆಗೆ ಒಳಗಾಗಿದ್ದೇನೆ ಎಂದು…
BREAKING : ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ : ಸ್ನೇಹಮಯಿ ಕೃಷ್ಣ ಹೇಳಿಕೆ!
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಶಿಕ್ಷಣ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಆರಂಭವಷ್ಟೇ ಅಂತ್ಯವಲ್ಲ. ಇಂದು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಆಗಮಿಸಿದ್ದೇನೆ. ತನಿಖೆಯ ಕುರಿತು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಬಂದಿದ್ದೆ. ಯಾವುದೇ ಕೇಸ್ ದಾಖಲಿಸಿದರು ಫಾಲೋ ಅಪ್ ಮಾಡುತ್ತೇನೆ ತನಿಖೆಗೆ ಸಹಕಾರಿ ಆಗುವ ಅಂಶ ಪತ್ರದಲ್ಲಿ ದಾಖಲಿಸಿದ್ದೇನೆ ಎಂದರು. ನನಗೆ ಈಗಲೂ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಇಡಿಗೆ ಇಂದು ನೇರವಾಗಿ ದೂರನ್ನು ನೀಡಲಾಗಿದೆ. ಸಿಬಿಐ ಇಡಿ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟವರಿಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ…
ಉಡುಪಿ : ರಾಜ್ಯದಲ್ಲಿ ಇಂದು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತದ ಘಟನೆ ಮಾಸುವ ಮನವೇ ಇದೀಗ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಬಂಧಿಸಿದ್ದು, ಲಾರಿ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೌದು ಕಾರ್ಕಳ ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮೂವರು ಮಕ್ಕಳು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸಗುಡ್ಡೆ ಬಳಿ ಈ ಒಂದು ದುರಂತ ಸಂಭವಿಸಿದೆ. ಸುರೇಶ್ ಆಚಾರ್ಯ (36) ಮಕ್ಕಳಾದ ಸಮೀಕ್ಷ, (7) ಸುಶ್ಮಿತಾ (5) ಸುಶಾಂತ್ (2) ಸಾವನ್ನಪ್ಪಿದ್ದಾರೆ ಇನ್ನು ಪತ್ನಿ ಮೀನಾಕ್ಷಿ ಆಚಾರ್ಯ (32) ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.











