Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿರ್ದೇಶಕ ಹಾಗೂ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಬ್ಯಾಚುಲರ್ಸ್ ಪಾರ್ಟಿಯಲ್ಲಿ ಎರಡು ಚಿತ್ರಗಳ ಹಾಡನ್ನು ಬಳಸಿ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ FIR ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಕ್ಷಿತ್ ಶೆಟ್ಟಿ ಯಶವಂತಪುರ ಠಾಣೆಗೆ ವಿಚಾರಣೆಗೆ ಹಾಜರಾದರು. ಹೌದು ‘ನ್ಯಾಯ ಎಲ್ಲಿದೆ’ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಎಂಬ ಎರಡು ಹಾಡುಗಳನ್ನು ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದರು. ಈ ಹಿನ್ನಲೆಯಲ್ಲಿ MRT ಮ್ಯೂಸಿಕ್ ಸಂಸ್ಥೆಯ ಪಾಲುದಾರ ನವೀನ್ ಕುಮಾರ್ ಎಂಬುವರು ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾಗಾಗಿ ನಟ ರಕ್ಷಿತ್ ಶೆಟ್ಟಿ ಅವರು ಇಂದು ಯಶವಂತಪುರ ಠಾಣೆಗೆ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಮೇಲಿರುವ ಎಫ್ ಐ ಆರ್ ರದ್ದು ಕೋರಿ ಈ ಹಿಂದೆ ಅವರು ಕೋರ್ಟ್ ಮೊರೆ ಕೂಡ ಹೋಗಿದ್ದರು. ಠಾಣೆಯಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ…
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಕೊಲೆಯಾಗಿದ್ದು ಪ್ರತಿಯೊಬ್ಬ ಇನ್ಸ್ಟಾಗ್ರಾಮ್ ಲೈವ್ ಗೆ ಬಂದು ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ತಬರೇಜ್ ಪಾಷಾ ಎಂಬಾತ ಪತ್ನಿ ಫಾಜಿಲ್ ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.ಒಂಬತ್ತು ವರ್ಷದ ಹಿಂದೆ ಫಾಜಿಲಾ ಮದುವೆಯಾಗಿದ್ದ ಎನ್ನಲಾಗಿದೆ. ತಬರೇಜ್ ಹಾಗೂ ಫಾಜಿಲ್ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಈ ಮಧ್ಯ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಫಾಜಿಲ್ ತಾಯಿ ಮನೆಯಲ್ಲಿದ್ದಳು. ಕಳೆದ ಎರಡು ವರ್ಷದಿಂದ ತಾಯಿ ಮನೆಯಲ್ಲಿ ವಾಸವಿದ್ದಳು. ಮಕ್ಕಳು ಶಾಲೆಗೆ ಹೋದಾಗ ಮನೆಗೆ ನುಗ್ಗಿ ಚಾಕುವಿರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇನ್ಸ್ಟಾಗ್ರಾಮ್ ನಲ್ಲಿ ಲೈವ್ ಬಂದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಚಾಮರಾಜಪೇಟೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾಕು ಇರಿದು ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿ ಅಲ್ಲಿಂದ ಪರಾರಿಯಾಗಿದ್ದಾನೆ ಇದೀಗ ಪೊಲೀಸರು ಆತನಿಗಾಗಿ ಬಲೇಬೀಸಿದ್ದಾರೆ.
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಹೌದು ಈ ಮೊದಲು ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದ ಗೃಹ ಸಚಿವರು ಇದೀಗ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ.ಈ ಕುರಿತು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು. ಪಾದಯಾತ್ರೆ ಕುರಿತಂತೆ ಕೆಲವು ದಿನಗಳ ಹಿಂದಷ್ಟೇ ಜಿ ಪರಮೇಶ್ವರ್ ಅವರು ಯಾವುದೇ ಕಾರಣಕ್ಕೂ ಸರ್ಕಾರದಿಂದ ಅನುಮತಿ ನೀಡುವುದಿಲ್ಲ. ಅವರು ಬೇಕಾದರೆ ತಮ್ಮ ಪಾಡಿಗೆ ತಾವು ಪಾದಯಾತ್ರೆ ಮಾಡಿಕೊಳ್ಳಲಿ.ಆದರೆ ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ನೀಡಲ್ಲ ಎಂದಿದ್ದರು. ಇನ್ನು ಈ ವಿಷಯವಾಗಿ ಇಂದು ಬೆಳಿಗ್ಗೆ…
ಮಂಡ್ಯ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ಮಾಡಲು ನಿರ್ಧರಿಸಿದೆ ಈ ವಿಷಯವಾಗಿ ಅಧಿಕಾರದಿಂದ ತೆಗೆಯುತ್ತಾರೆಂದು HD ಕುಮಾರಸ್ವಾಮಿ ಪಾದಯಾತ್ರೆಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಇಂದು ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಪ್ರಶ್ನೆ ಮಾಡುತ್ತೇವೆ. ನಮ್ಮ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿ.ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಕೊಡಲೇಬೇಕಲ್ಲ. ಅಧಿಕಾರದಿಂದ ತೆಗೆಯುತ್ತಾರೆ ಎಂದು ಬೆಂಬಲ ಕೊಡುತ್ತಿದ್ದಾರೆ.ಬಿಜೆಪಿಯವರು ಎಚ್ಡಿಕೆಗೆ ಹೆದರಿಸಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದರು. ಬಿಜೆಪಿ ಜೆಡಿಎಸ್ ಪಾದಯಾತ್ರೆ ವಿಚಾರ ನಾವು ಅವರಿಗೂ ಮೊದಲೇ ಜನಾಲೋಂದನ ಸಭೆ ಮಾಡುತ್ತೇವೆ. ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಮಾಡಿದರೆ ಮಾತು ಬದಲಿಸುವುದಿಲ್ಲ ಅಂತಿದ್ರು. ಇದೀಗ ಹೆಚ್ ಡಿ ಕುಮಾರಸ್ವಾಮಿ ಯಾಕೆ ಮಾತು ಬದಲಿಸಿದ್ದಾರೆ ಎಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕಿಡಿ ಕಾರಿದರು. ಇನ್ನೂ ಸಿಎಂ…
ಬೆಂಗಳೂರು : ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರನ್ನು ತನಿಖೆಗೆ ಒಳಪಡಿಸಲು ಪ್ರಾಸಿಕ್ಯೂಷನ್ ನೋಟಿಸ್ ನೀಡಿದ ವಿಚಾರವಾಗಿ, ರಾಜ್ಯಪಾಲರು ‘ಪ್ರಾಸಿಕ್ಯೂಷನ್’ ಗೆ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ನಿನ್ನೆ ರಾತ್ರಿ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್ ಕೊಟ್ಟಿದ್ದಾರೆ ಎಂದರು. ಜುಲೈ 26ರಂದದು ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ಮೂಲಕ ಸಿ ಎಸ್ ಅವರಿಂದ ಉತ್ತರ ಕಳುಹಿಸಲಾಗಿದೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರು ಅದನ್ನು ಕಾನೂನು ಪ್ರಕಾರ…
ಬೆಂಗಳೂರು : ಮುಡಾದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ನೋಟಿಸ್ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಕ್ಷೇಪ ವ್ಯಕ್ತಪಡಿಸಿದರು. ಈ ಹಿನ್ನೆಲೆ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ನೀಡಿದ ನೋಟಿಸ್ ಹಿಂಪಡೆಯಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು. ಇನ್ನು ಈ ವಿಷಯವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯಪಾಲರು ನೀಡಿರುವ ಪ್ರಸಿಕ್ಯೂಷನ್ ನೋಟಿಸ್ ಹಿಂಪಡೆಯುವಂತೆ ಸಂಪುಟ ನಿರ್ಧರಿಸಿದೆ. ಟಿಜೆ ಅಬ್ರಹಾಂ ದೂರನ್ನು ತಿರಸ್ಕರಿಸಲು ಸಂಪುಟದಲ್ಲಿ ನಿರ್ಣಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡಲು ತೀರ್ಮಾನಿಸಲಾಗುತ್ತಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ನ ಕದ ತಟ್ಟಲು ಸರ್ಕಾರ ನಿರ್ಧಾರ ಮಾಡಿದೆ. ಇಡೀ ಬೆಳವಣಿಗೆ ಕಾನೂನಾತ್ಮಕ ಎಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಪ್ತ ಕಾನೂನು…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಆಕಸ್ಮಿಕವಾಗಿ ಒಂದು ಘಟನೆ ನಡೆದಿದ್ದು ಭಾರಿ ಅನಾಹುತ ಒಂದು ತಪ್ಪಿದೆ. ನಿನ್ನೆ ರಾತ್ರಿ 4 ವರ್ಷದ ಮಗುವೊಂದು ಮೆಟ್ರೋ ಹಳಿಗೆ ಜಿಗಿದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಲೋಪ ಉಂಟಾಗಿದ್ದು ನಿನ್ನೆ ರಾತ್ರಿ ಟ್ರ್ಯಾಕ್ಗೆ ಮಗು ಜಿಗಿದಿದೆ. ನಿನ್ನೆ ಆಟವಾಡುತ್ತಾ ಟ್ರ್ಯಾಕ್ಗೆ 4 ವರ್ಷದ ಮಗು ಜಿಗಿದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಗು ಇದೀಗ ಪಾರಾಗಿದೆ. ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ನಲ್ಲಿ ಈ ಒಂದು ಅವಘಡ ನಡೆದಿದೆ. ಈ ವೇಳೆ ತಕ್ಷಣ ಟ್ರ್ಯಾಕ್ ನ ವಿದ್ಯುತ್ ಸಂಪರ್ಕ ಸ್ಥಗಿತ ಮಾಡಿದ ಸಿಬ್ಬಂದಿಗಳು. ಬೈಯಪ್ಪನಹಳ್ಳಿ ಪರ್ಪಲ್ ಲೈನ್ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.ನಿನ್ನೆ ರಾತ್ರಿ 9 16ರ ವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತಯ ಉಂಟಾಗಿತ್ತು.ತಕ್ಷಣ ಬಿಎಂಆರ್‌ಸಿಎಲ್ 2 ಮೆಟ್ರೋ ಸಂಚಾರ ಸ್ಥಗಿತಗೊಳಿಸಿತ್ತು. ಬಳಿಕ ಎಂದಿನಂತೆ ಮೆಟ್ರೋ ಸಂಚಾರ ಪುನರಾರಂಭಗೊಂಡಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ತಾಯಿಯ ಸಾವಿಗೆ ಮನನೊಂದು ಅಣ್ಣ ತಂಗಿ ಇಬ್ಬರು ಶಿಡ್ಲಘಟ್ಟ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಅಣ್ಣ ಪ್ರಭು (25) ಹಾಗೂ ತಂಗಿ ನವ್ಯ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಶಿಡ್ಲಘಟ್ಟದವರು ಎಂದು ತಿಳಿದು ಬಂದಿದೆ.ಇತ್ತೀಚಿಗೆ ಮೃತರ ತಾಯಿ ಕೂಡ ನಿಧನರಾಗಿದ್ದರು. ತಾಯಿಯ ಸಾವಿಗೆ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಎಫ್ ಎಸ್ ಎಲ್ ವರದಿಯಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋಗಳು ಅಸಲಿ ಎಂದು ವರದಿ ಬಹಿರಂಗಪಡಿಸಿದೆ. ಇದೇ ಒಂದು ವರದಿಯನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು, ಶೀಘ್ರವೇ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಎಸ್ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಎರಡು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ ಎನ್ನಲಾಗುತ್ತಿದೆ. ಸಾಕ್ಷವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಿದೆ. ವೈರಲ್ ಆದ ವಿಡಿಯೋ ಮಾರ್ಪ ಅಲ್ಲ ಎಂದು ಈಗಾಗಲೇ ವರದಿ ಬಂದಿದ್ದು ಈ ಕುರಿತು ಎಫ್ಎಸ್ಎಲ್ ನಿಂದ ಬಂದಂತಹ ವರದಿಯನ್ನು ಆಧರಿಸಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆ ಇದೆ ಎಂದು…
ಬೆಂಗಳೂರು : ಮಹಿಳೆಯರ ಮೇಲೆ ಅತ್ಯಾಚಾರ ಆರೋಪದಡಿ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ಅಸಲಿ ಎಂದು ಎಫ್ ಎಸ್ ಎಲ್ ಇದೀಗ ವರದಿ ಬಹಿರಂಗಗೊಳಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಪೆನ್‌ಡ್ರೈವ್‌ಗಳಿಂದ ಹತ್ತಾರು ಅಶ್ಲೀಲ ವಿಡಿಯೋಗಳನ್ನು ಸಂಗ್ರಹ ಮಾಡಿತ್ತು. ಈ ವಿಡಿಯೋಗಳು ಅಸಲಿಯೋ, ನಕಲಿಯೋ ಎಂದು ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಇದರ ರಿಪೋರ್ಟ್ ಬಂದಿದ್ದು, ಎಲ್ಲಾ ವಿಡಿಯೋಗಳು ಅಸಲಿ ಎಂದು ಗೊತ್ತಾಗಿದೆ. ಯಾವ ವಿಡಿಯೋಗಳನ್ನು ತಿರುಚಲಾಗಿಲ್ಲ ಎಂದು FSL (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ನೀಡಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋಗಳಲ್ಲಿ ಪುರಷನ ಮುಖ ಸ್ಪಷ್ಟವಾಗಿ ಕಂಡುಬಂದಿಲ್ಲ. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬುವುದು ತನಿಖೆಯ ಬಳಿಕವೇ ತಿಳಿದುಬರಲಿದೆ. ಇನ್ನು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ…