Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ ಹಾಗಾಗಿ ನಾಳೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ, ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ ಬಗ್ಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ನಿಮ್ಮ ಆಶೀರ್ವಾದ ಇರುವವರೆಗೂ ಏನು ಮಾಡೋಕಾಗಲ್ಲ. ಯಾರೂ ನನ್ನ ಏನು ಮಾಡೋಕಾಗಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರಂತೆ ಅಂತ ಹೇಳುತ್ತಿದ್ದಾರೆ. ರಾಜೀನಾಮೆ ಕೇಳುತ್ತಿದ್ದಾರೆ ಎಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ, ಜಗ್ಗಲ್ಲ, ಬಗ್ಗಲ್ಲ, ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯ ಮೇಲೆ ಗುಡುಗಿದರು.
ಬೀದರ್ : ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಯಾಕೆ ತಡವಾಗಿ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿದ ಪಿಎಸ್ಐ ಮೇಲೆ ಕಾನ್ಸ್ಟೇಬಲ್ ಒಬ್ಬ ಹಲ್ಲೆ ನಡೆಸಿರುವ ಘಟನೆ ಬೀದರ್ನ ಮಾದವನಗರದಲ್ಲಿ ನಡೆದಿದೆ. ಹೌದು ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಹಿನ್ನಲೆ ಬೀದರ್ನ ಮಾದವನಗರದ ಪರೀಕ್ಷಾ ಕೇಂದ್ರದಲ್ಲಿ ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು. ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ತಡವಾಗಿ ಬಂದಿದ್ದರು. ಇದನ್ನು ಪ್ರಶ್ನಿಸಿದ ಪಿಎಸ್ಐ ಯಲ್ಲಮ್ಮ ಅವರ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್ಐ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು ನಾಳೆಯಿಂದ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ ಇದರ ಮಧ್ಯ ಈ ಒಂದು ಹಗರಣದಲ್ಲಿ ನೀವು ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ ಅಭಿಮಾನಿ ಒಬ್ಬರು ರಕ್ತದ ಮೂಲಕ ಪತ್ರ ಬರೆದು ಮನವಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹೌದು ರಾಜೀನಾಮೆ ನೀಡದಂತೆ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಮುತ್ತಹಳ್ಳಿಯ ಸಚಿನ್, ಅರಸು ಬಳಿಕ ಅತಿ ಹೆಚ್ಚು ಸರಕಾರಿ ಯೋಜನೆ ನೀಡಿದ್ದೀರಿ. ಬಡ ಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಮುಖ್ಯಮಂತ್ರಿ ನೀವು. ಬಡವರು ಹಾಗೂ ದೀನ ದಲಿತರ ಪರವಾಗಿರುವಂತಹ ಮುಖ್ಯಮಂತ್ರಿಗಳು ನೀವು. ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಸಚಿನ್ ಪತ್ರ ಬರೆದಿದ್ದಾರೆ.
ಕೋಲಾರ : ಹಿಂದೂ ಕೋಲಾರದಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ತರಬೇತಿ ನಿಮಿತ್ಯ ಹಾರಾಟ ನಡೆಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಒಂದು ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತುರ್ತಾಗಿ ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿ ಎಂಬಲ್ಲಿ ನಡೆದಿದೆ. ಹೌದು ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಡಿಕೆ ಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಕರೆ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಸ್ಪರ್ಶ ಮಾಡಿದೆ. ಹೆಲಿಕ್ಯಾಪ್ಟರ್ ನಲ್ಲಿ ಇದ್ದ ಅಧಿಕಾರಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ತರಬೇತಿ ನಿಮಿತ್ಯ ಕೆಜಿಫ್ ಹಾಗೂ ಬಂಗಾರಪೇಟೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸಲಾಗುತ್ತಿತ್ತು.
ಮೈಸೂರು : ಕೆಆರ್ಎಸ್ ಹಿನ್ನೀರಿನ ಬಳಿ ಇರುವ ಎಡಹಳ್ಳಿಯಲ್ಲಿ ಇಂದು ಅನುಮತಿ ಪಡೆಯದೆ ರೇವ್ ಪಾರ್ಟಿ ಆಯೋಜನೆ ವಿಚಾರವಾಗಿ ಬಂಧಿತ 64 ಜನರ ಪೈಕಿ 8 ಯುವತಿಯರಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಇಂದು ಕೆಆರ್ಎಸ್ ಹಿನ್ನೀರಿನ ಬಳಿ ಇರುವ ಎಡಹಳ್ಳಿಯಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಸಂತೋಷ್ ಎಂಬಾತನಿಂದ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಧು ಎಂಬಾತನಿಗೆ ಸೇರಿದ ಜಮೀನಿನಲ್ಲಿ ಪಾರ್ಟಿ ಆಯೋಜಿಸಿದ್ದರು. ಇನ್ನು ಪಾರ್ಟಿಗೆ ಅಧಿಕೃತವಾಗಿ ಅನುಮತಿ ಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತೋಷ್ ಅಪ್ಲೋಡ್ ಮಾಡಿದ್ದರು. ಇದನ್ನು ನಂಬಿ 50ಕ್ಕೂ ಹೆಚ್ಚು ಜೋಡಿ ಪಾರ್ಟಿಗೆ ನೋಂದಾಯಿಸಿಕೊಂಡಿದ್ದರು. 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ತಲಾ 2 ಸಾವಿರ ವಸೂಲಿ ಮಾಡಿ, ಇಸ್ರೇಲ್ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ ಕರೆಸಿದ್ದರು. ಡಿಜೆ ಮೂಲಕ ಅಬ್ಬರದ ಮ್ಯೂಸಿಕ್ ಹಾಕಿದ್ದ ಕಾರಣ ಎಸ್ಪಿಗೆ ಮಾಹಿತಿ ನೀಡಲಾಗಿದೆ. ಮೈಸೂರು ಎಸ್ಪಿ ಆದೇಶದಂತೆ…
ಬೆಂಗಳೂರು : ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಇಂದು ಭಾರಿ ಅನಾಹುತ ಒಂದು ತಪ್ಪಿದೆ, ನಿಂತಿದ್ದ ಲಾರಿ ಒಂದು ಏಕಾಏಕಿ ಚಲಿಸಿದ್ದು ಎದುರುಗಡೆ ಮಾರಾಟಕ್ಕೆ ಎಂದು ಇಟ್ಟಿದ್ದ ಗಣಪತಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎದುರುಗಡೆ ಯಾವುದೇ ವಾಹನಗಳು ಇಲ್ಲದಿರುವುದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಹೌದು ನಿಂತಿದ್ದ ಟಿಪ್ಪರ್ ಲಾರಿ ಚಲಿಸಿ ಒಂದು ಲೈಟ್ ಕಂಬ ಹಾಗೂ ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣಪತಿ ಮೂರ್ತಿಗೆ ಡಿಕ್ಕಿ ಹೊಡೆದಿದೆ.ರಾತ್ರಿ 1.30 ಸುಮಾರಿಗೆ ಟಿಪ್ಪರ್ ಲಾರಿ ಚಾಲಕ, ಜಲ್ಲಿ ಕಲ್ಲು ಅನ್ ಲೋಡ್ ಮಾಡಲು ಟಿಪ್ಪರ್ ನಿಲ್ಲಿಸಿ ಜಲ್ಲಿ ಕಲ್ಲಿನ ಫೋಟೋ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಬ್ರೇಕ್ ಫೇಲ್ ಆಗಿ ಟಿಪ್ಪರ್ ಏಕಾಏಕಿ ಚಲಿಸಿದ್ದು, ರಸ್ತೆ ದಾಟಿ ಎದುರುಗಡೆಗೆ ಹೋಗಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ವಾಹನ ಓಡಾಟ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ.ಇದೀಗ ಲೈಟ್ ಕಂಬವನ್ನು ಬೆಸ್ಕಾಂ ಸಿಬ್ಬಂದಿ ತೆರವು ಗೊಳಿಸಿದ್ದು, ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ…
ಮೈಸೂರು : ಮಹಿಷ ದಸರಾ ಕಾರ್ಯಕ್ರಮದಲ್ಲಿ ಪ್ರೊಫೆಸರ್ ನಂಜರಾಜ ಅರಸ್ ಅವರು ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದು, ಚಾಮುಂಡಿ ಕೇವಲ ಕಾಲ್ಪನಿಕ ವ್ಯಕ್ತಿ. ಆದರೆ ಮಹಿಶಾಸುರ ಜೀವಂತ ವ್ಯಕ್ತಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನ ಮಹಿಷ ದಸರಾದಲ್ಲಿ ಪ್ರೊಫೆಸರ್ ನಂಜರಾಜ್ ಅರಸ್ ಮಾತನಾಡಿ, ಚಾಮುಂಡಿ ಜೀವಂತ ವ್ಯಕ್ತಿ ಅಲ್ಲ. ಕೇವಲ ಕಾಲ್ಪನಿಕ. ಮಹಿಷಾಸುರ ಜೀವಂತ ವ್ಯಕ್ತಿ. ಚಾಮುಂಡಿ ಕೇವಲ ಕಾಲ್ಪನಿಕ ಅಸುರ ಮತ್ತು ರಾಕ್ಷಸ ಅನ್ನೋದು ಸಮುದಾಯಗಳ ಹೆಸರು. ದೇವರ ಪುರಾಣ ಓದಿದರೆ ಸೂಸೈಡ್ ಮಾಡ್ಕೋಬೇಕು. ಇಷ್ಟು ಕೀಳಾದವರು ಎನಿಸುತ್ತದೆ. ಚಾಮುಂಡಿ ಮಹಿಷಾಸುರನನ್ನು ಕೊಂದಿಲ್ಲ. ಚಾಮುಂಡಿ ಜೀವಂತ ವ್ಯಕ್ತಿ ಅಲ್ಲ ಕೇವಲ ಕಾಲ್ಪನಿಕ ಎಂದು ಪ್ರೊಫೆಸರ್ ನಂಜರಾಜೇ ಇದೆ ವೇಳೆ ವಿವಾದಾತ್ಮಕ ಮಾತು ಹೇಳಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ನಿಷೇಧವಿದ್ದರೂ ಸಹ ಇದೀಗ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಸಮಿತಿಯ 5 ಸದಸ್ಯರನ್ನು ಪೊಲೀಸರೆ ಕರೆದೋಯ್ದು ಪುಷ್ಪರ್ಚನೆ ಸಲ್ಲಿಸಿರುವ ಘಟನೆ ನಡೆದಿದ್ದು, ಇದೀಗ ಪೊಲೀಸರೆ ಕಾನೂನು ಉಲ್ಲಂಘಿಸಿರುವ ಘಟನೆ ನಡೆದಿದೆ. ಹೌದು ಮಹಿಷ ದಸರಾ ಆಚರಣೆಯ ಸಮಿತಿ ಸದಸ್ಯರನ್ನು ಕರೆದೋಯ್ದ ಪೊಲೀಸರು ಕದ್ದು ಮುಚ್ಚಿ ಕರೆದೋಯ್ದು ಪುಷ್ಪಾರ್ಚನೆ ಮಾಡಿಸಿದ್ದಾರೆ.ಆ ಮೂಲಕ ಪೊಲೀಸರಿಂದಲೇ ಕಾನೂನು ಉಲಂಘನೆ ಆಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹೇಶಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗಿದೆ. ತಾವೇ ಹಾಕಿದ ನಿಷೇಧಾಜ್ಞೆಗೆ ಪೊಲೀಸರು ಎಳ್ಳು ನೀರು ಬಿಟ್ಟಿದ್ದಾರೆ. ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು. ಪೊಲೀಸ್ ಕಮಿಷನರ್ ನಿಷೇಧಾಜ್ಞೆ ಜಾರಿ ಮಾಡಿದ್ದರು. ಹೀಗಿದ್ದರೂ ಪೊಲೀಸರು ಇವರನ್ನು ಕರೆದುಕೊಂಡು ಹೋಗಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಆ ಮೂಲಕ ಪೊಲೀಸರಿಂದಲೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಮೈಸೂರು : ಮನುಸ್ಮೃತಿಯಲ್ಲಿ ಶೂದ್ರರು ಅಂದರೆ ವೇಶ್ಯೆಗೆ ಹುಟ್ಟಿದವನು ಅಂತಿದೆ. ಮನುಸ್ಮೃತಿಯಲ್ಲಿ ಹೇಳಿರುವಂತೆ ನಾವು ಶೂದ್ರರೆಂದು ಒಪ್ಪಿಕೊಳ್ಳಬೇಕಾ? ಎಂದು ಮೈಸೂರಿನ ಮಹಿಷ ದಸರಾದಲ್ಲಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದರು. ಹಿಂದೂ ಧರ್ಮ ನಮ್ಮದಲ್ಲ ನಮಗೆ ಹಿಂದೂ ಧರ್ಮ ಬೇಕಾಗಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದನ್ನು ನಂಬಿ ಎಂದು ಗೌತಮ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳದಿದ್ದರೆ ಸ್ವರ್ಗ ಸಿಗಲ್ಲವೆಂದು ಏಸು ಹೇಳುತ್ತಾರೆ. ನನ್ನ ಮಾತು ಕೇಳದಿದ್ದರೆ ಮೋಕ್ಷ ಸಿಗಲ್ಲವೆಂದು ಪ್ರವಾದಿ ಹೇಳುತ್ತಾರೆ. ನಾನು ಹೇಳಿದ್ದರೂ ಕೇಳದಿದ್ದರೆ ನರಕಕ್ಕೆ ಹೋಗುತ್ತೀರೆಂದು ಕೃಷ್ಣ ಹೇಳುತ್ತಾನೆ. ಶೂದ್ರರು ವೇಶ್ಯೆಗೆ ಹುಟ್ಟಿದವರೆಂದು ಹೇಳುವ ಧರ್ಮದಲ್ಲಿ ಇರಬಾರದು. ನಾವು ಬೌದ್ಧ ಧರ್ಮಕ್ಕೆ ಹೋಗಬೇಕು ಎಂದು ಪ್ರೊಫೆಸರ್ ಭಗವಾನ್ ತಿಳಿಸಿದರು. ಶೂದ್ರರು ವೇಶ್ಯೆ ಮಕ್ಕಳೆಂದು ಹೇಳುವ ಧರ್ಮಕ್ಕೆ ಎಕ್ಕಡಲ್ಲಿ ಹೊಡಿಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನೂ ಆಗಿದ್ದಾನೆ, ಅವನು ಹಿಂದೂ. ಯಾರೂ ಹಿಂದೂ ಆಗಬಾರದು. ಜ್ಞಾನದ ಹಸಿವು ಇಲ್ಲದ ಕಾರಣ…
ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದ ಭಾಷಣದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ನನಗೆ 83 ವರ್ಷ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ ಎಂದು ತಿಳಿಸಿದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನನಗೆ ಈಗ 83 ವರ್ಷ. ನಾನು ಇಷ್ಟು ಬೇಗ ಸಾಯುವುದಿಲ್ಲ ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ. ಚುನಾವಣಾ ರ‍್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಮರು ಸ್ಥಾಪಿಸಲು ಹೋರಾಡುತ್ತೇವೆ ಎಂದು ತಿಳಿಸಿದರು. ಭಾಷಣದ ವೇಳೆ ಅಸ್ವಸ್ಥ! ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಈ…











