Author: kannadanewsnow05

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ಅವರ ವಾಕ್ಸಮರ ತಾರಕಕ್ಕೆ ಏರಿದ್ದು, ಈ ಒಂದು ವಿಚಾರವಾಗಿ ಹೆಚ್‍ಡಿ ಕುಮಾರಸ್ವಾಮಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಹತ್ತಿರ ಏನು ದಾಖಲೆ ಇದೆಯೋ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲಿಕ್ ಮಾಡಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದೀಗ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಅವರು ಏನು ಮಾತನಾಡುತ್ತಿದ್ದಾರೆ ಎಂದು ಅವರಿಗೆ ಗೊತ್ತಿಲ್ಲ. ಕೆಪಿಸಿಸಿಗೂ ಎಡಿಜಿಪಿ ಚಂದ್ರಶೇಖರ್ ಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು. ನಾನು ನಿನ್ನೆ ಬೆಂಗಳೂರಿನಲ್ಲಿ ಇರಲಿಲ್ಲ. ನಾನು ಸಾತನೂರು ಹಾಗೂ…

Read More

ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಹೊಸ ಬಾಂಬ್ ಒಂದನ್ನು ಸಿಡಿಸಿದ್ದು, ಕೆಲವರು ಸಿಎಂ ಸ್ಥಾನಕ್ಕಾಗಿ ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಇಂದು ದಾವಣಗೆರೆಯಲ್ಲಿ ಮಜಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್​ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ಟೆನ್ಶನ್ ಆಗಿದ್ದಾರೆ ಎಂದು ಹೇಳಲಾಗುತ್ತಿತ್ತು ಆದರೆ ಅವರಿಗೆ ಯಾವುದೇ ಭಯವಿಲ್ಲದೆ, ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದೀಗ ಜಾತಿ ಗಣತಿ ವರದಿಯ ಕುರಿತು ಮಾತನಾಡಿದ್ದು, ಜಾತಿಗಣತಿ ವರದಿ ನಮ್ಮ ಪಕ್ಷದ ಅಜೆಂಡವಾಗಿದ್ದು, ಅದನ್ನು ಮುಂದೆ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನು ಸಂಪೂರ್ಣವಾಗಿ ನೋಡಿಲ್ಲ. ಮುಂದೆ ಜಾತಿಗಣತಿ ವರದಿ ಸಂಪುಟದ ಮುಂದೆ ಇಟ್ಟು ಜಾರಿಗೊಳಿಸುತ್ತೇನೆ ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡವಾಗಿದೆ. ಹಾಗಾಗಿ ಅದನ್ನು ಜಾರಿಗೆ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ..

Read More

ಮೈಸೂರು : ಈ ಬಾರಿ ಮೈಸೂರು ದಸರಾಗೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ಎಲ್ಲಾ ಹಂತದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇದೀಗ ಇಂದು ದಸರಾ ಮಹೋತ್ಸವದ ವೇಳೆ ಭಾಗವಹಿಸುವ ಆನೆಗಳಿಗೆ ಕುಶಾಲು ತೋಪು ಸಿಡಿಸಿ ತಾಲಿಮು ನಡೆಸುವ ವೇಳೆ ಭಾರಿ ಅನಾಹುತ ಒಂದು ನಡೆದಿದೆ. ಹೌದು ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ಸಿಡಿಸಿ ತಾಲಿಮು ಮೂಡಿಸಲಾಗುತ್ತಿತ್ತು. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಈ ಒಂದು ತಾಲಿಮು ನಡೆಸಲಾಗುತ್ತಿತ್ತು. ಸದ್ದಿಗೆ ಬೆದರಿ ಕಾವಾಡಿಯನ್ನೇ ದಂತದಿಂದ ಹೆಣ್ಣಾಣೆ ಒಂದು ಎತ್ತಿದೆ. ಈ ವೇಳೆ ಹರಸಾಹಸ್ಪಟ್ಟು ಕಾವಾಡಿ ಹೆಣ್ಣಾಣೆಯನ್ನು ನಿಯಂತ್ರಿಸಿದ್ದಾನೆ.ಸ್ವಲ್ಪ ಹೊತ್ತಿನ ನಂತರ ಹೆಣ್ಣಾನೇ ಶಾಂತವಾಗಿದೆ.

Read More

ಶ್ರೀನಗರ : ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಬಾಷಣ ಮಾಡುತ್ತಿದ್ದಾಗ ಏಕಾಏಕಿ ಅಸ್ವಸ್ಥರಾಗಿ ಕುಸಿದಿರುವ ಘಟನೆ ನಡೆದಿದೆ. ಹೌದು ಇಂದು ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದಾರೆ.ಇಂದು ಪ್ರಚಾರ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬೀಳುತ್ತಿದ್ದರು. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಅವರನ್ನು ತಡೆದು ನಿಲ್ಲಿಸಿದ್ದಾರೆ. ಕೂಡಲೇ ಅವರಿಗೆ ನೀರು ಕುಡಿಸಿದ್ದಾರೆ.ಈ ವೇಳೆ ಸಾವರಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ನಂತರ ಕುರ್ಚಿಯ ಮೇಲೆ ಕುಳಿತುಕೊಂಡು ಭಾಷಣ ಮುಂದುವರಿಸಿದರು.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ನಾಲ್ಕು ತಂಡಗಳು ರಚನೆಯಾಗಿದ್ದು, ಈ ಕುರಿತಾಗಿ ಲೋಕಾಯುಕ್ತ ತನಿಖೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಲೋಕಾಯುಕ್ತ ಎಡಿಜಿಪಿ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಡುವಿನ ಗುದ್ದಾಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಚ್‌ಡಿ ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Read More

ನವದೆಹಲಿ : ಚುನಾವಣಾ ಬಾಂಡ್ ಹೆಸರಲ್ಲಿ ವಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಮೇಲೆ ಎಫ್ಐಆರ್ ದಾಖಲಾಗಿದೆ. ಹಾಗಾಗಿ ಕೂಡಲೇ ಅವರು ರಾಜಿನಾಮೆ ನೀಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಅನ್ನೋದು ಬಿಜೆಪಿಯ ವಸೂಲಿಯ ಒಂದು ಮಾರ್ಗ. ಮಹಾ ಷಡ್ಯಂತ್ರದ ಹಿಂದೆ 8,000 ಕೋಟಿ ರೂಪಾಯಿ ವಸೂಲಿ ಕಥೆ ಇದೆ. ಎಫ್ಐಆರ್ ದಾಖಲಾಗಿದೆ. ನಿರ್ಮಲಾ ಸೀತಾರಾಮನ್ ವಿರುದ್ಧ ಸಮನ್ಸ್ ಜಾರಿ ಆಗಲೇಬೇಕು. ಅದಾದ ಮೇಲೆ ವಿಚಾರಣೆ ಬಳಿಕ ಬಂಧನ ಆಗಲೇಬೇಕು. ಇದಕ್ಕಿಂತ ಫಿಟ್ ಕೇಸ್ ಇನ್ನೊಂದು ಇಲ್ಲ. ಹೀಗಾಗಿ ಈ ಕೇಸ್ ನಲ್ಲಿ ಸಚಿವೆ ನಿರ್ಮಲ ಸೀತಾರಾಮನ್ ರಾಜೀನಾಮೆ ಕೊಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ಹಣಕಾಸು ಸಚಿವರು ಒಬ್ಬರೇ ಮಾಡಲು ಅವರಿಗೆ ಧೈರ್ಯ ಇಲ್ಲ. ಯಾರ ಆದೇಶ ಮತ್ತು ನಿರ್ದೇಶನ ಮೇಲೆ ಆಗಿದೆ ಎಲ್ಲರಿಗೂ ಗೊತ್ತಿದೆ. RBI ಪತ್ರ ಬರೆದರೆ ಸರ್ಕಾರ ಅದನ್ನು…

Read More

ಮೈಸೂರು : ಮಹಿಷಾ ದಸರಾ ಆಚರಣೆಗೆ ಅವಕಾಶ ಇಲ್ಲ ಎಂದು ಈಗಾಗಲೇ ತಿಳಿಸಿತ್ತು. ಆದರೂ ಇಂದು ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ದಸರಾ ಸಮಿತಿಯ ಸದಸ್ಯರು ಮಹಿಷ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಹೌದು ಮಹಿಷ ಮೂರ್ತಿ ಪುಷ್ಪಾರ್ಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಎಂದು ಭಾರಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಟೌನ್ ಹಾಲ್ನಲ್ಲಿ ಸಮಿತಿಯ ಸದಸ್ಯರಿಂದ ಹೈಡ್ರಾಮ ನಡೆದಿದೆ. ಈ ವೇಳೆ ಪೊಲೀಸರ ಜೊತೆ ಮತ್ತು ಮಹಿಷ ದಸರಾ ಸಮಿತಿ ಸದಸ್ಯರ ನಡುವೆ ಚಾಮುಂಡಿ ಬೆಟ್ಟದಲ್ಲಿ ವಾಗ್ವಾದ ನಡೆದಿದೆ.

Read More

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೊಂದು ಬಿಗ್ ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಠಾವೋ ಎಂಬ ಅಭಿಯಾನ ಆರಂಭ ಮಾಡುವ ಕುರಿತು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಆರಂಭದ ಕುರಿತು ಯತ್ನಾಳ ನೇತ್ರತ್ವದಲ್ಲಿ ಜೆಐಎಂಟಿ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಬಿಜೆಪಿ ಮಾಜಿ ಸಂಸಾರದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ ಹಾಗೂ ಹರಿಹರದ ಬಿಜೆಪಿ ಶಾಸಕ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಜಿಎಂಐಟಿ ಅತಿಥಿ ಗೃಹದ ವಿಐಪಿ ರೂಮ್ನಲ್ಲಿ ಗುಪ್ತವಾಗಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಒಂದು ಬಂಡಾಯ ನಾಯಕರ ಸಭೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.ಈಗಾಗಲೇ ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಸಭೆ ನಡದಿತ್ತು. ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ…

Read More

ಮೈಸೂರು : ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಕೇರಳ ಮೂಲದ ಮ್ಯಾನೇಜರ್ ನನ್ನು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿಗೆ ಸಮೀಪದ ಹೆಬ್ಬಳ್ಳ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಗಿರೀಶ್ ಅಬ್ರಹಂ(38) ಎಂದು ತಿಳಿದುಬಂದಿದೆ.ಹಂತಕನನ್ನು ಶಂಸುದ್ದಿನ್ ಎಂದು ಹೇಳಲಾಗುತ್ತಿದ್ದು, ಇಬ್ಬರು ಕೂಡ ಒಂದೇ ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು.ಆರೋಪಿ ಶಂಸುದ್ದೀನ್ ತನಗೆ ಹೆಚ್ಚಿನ ಕೆಲಸ ಹೇಳುವುದು, ತನ್ನ ವಿರುದ್ದ ಮಾಲಕರಿಗೆ ಚಾಡಿ ಹೇಳುತ್ತಾನೆಂಬ ಕಾರಣಕ್ಕೆ ಶುಕ್ರವಾರ ರಾತ್ರಿ ಶೆಡ್‌ನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಂಸುದ್ದೀನ್ ಚಾಕುವಿನಿಂದ ಗಿರೀಶ್ ಬೆನ್ನಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಿರಿಶ್ ಅಬ್ರಹಂ ಕೊಲೆ ಸಂಬಂಧ ಸಹೋದರ ವಿನೋದ್ ಅಬ್ರಹಂ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

Read More