Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಒಂದೆಡೆ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತಿದ್ದು ಮತ್ತೊಂದು ಕಡೆ ಸಂಪುಟ ಪುನರಚನೆ, ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯ ಬಿಜೆಪಿ ಶಾಸಕ ಸುನಿಲ್ ಕುಮಾರ್ ಜನವರಿ ಹೊತ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನವಾಗಲಿದ್ದು ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಕಾಲ ಹರಣ ಮಾಡಿದ್ದು, ಪಕ್ಷದವರೇ ನವೆಂಬರ್ ಕ್ರಾಂತಿ ಎನ್ನುವುದನ್ನು ಹುಟ್ಟುಹಾಕಿ ಚರ್ಚೆ ಮಾಡುತ್ತಿದ್ದಾರೆ. ನಾಯಕರು ಸಿಎಂ ಯಾರಾಗಬೇಕು ಎನ್ನುವ ಗೊಂದಲದಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಶಾಸಕರು ಪ್ರತ್ಯೇಕವಾಗಿ ಸಭೆ ಮಾಡುತ್ತಿದ್ದು, ಜನವರಿ ಹೊತ್ತಿಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಹಾಗಾಗಿ ಮಧ್ಯಂತರ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯದ ಜನರು ಈ ಹಿಂದೆಯೇ ಕಬ್ಬು ಬೆಳೆಗೆ ನಿರ್ದಿಷ್ಟ ಬೆಲೆ ನಿಗದಿಗೆ ಒತ್ತಾಯಿಸಿದ್ದರು. ಕಳೆದ 8 ದಿನಗಳಿಂದ ರೈತರು…
ಎಷ್ಟೇ ಜನ ಮಗುವಿನ ಲಾಲನೆ ಪಾಲನೆ ಮಾಡಿದರೂ ತಾಯಿಯನ್ನು ನೋಡಿಕೊಂಡಂತೆ ಆಗುವುದಿಲ್ಲ ಎನ್ನುತ್ತಾರೆ. ಕುಟುಂಬ ದೇವತೆಯ ಆರಾಧನೆಯ ವಿಷಯವೂ ಇದೇ ಆಗಿದೆ. ನಾವು ಎಷ್ಟೇ ಸಾವಿರ ದೇವರನ್ನು ಪೂಜಿಸಿದರೂ ನಮಗೆ ಕಷ್ಟ ಬಂದಾಗ ಮೊದಲು ಬಂದು ಸಹಾಯ ಮಾಡುವವರು ನಮ್ಮ ಕುಲದೇವರು. ಕುಲದೇವತೆಯಲ್ಲಿ ಹೃದಯ ಕರಗಿ ನಿಂತರೆ ಇತರ ದೇವತೆಗಳು ಕೇಳಿ ಪಡೆಯದ ವರಗಳೂ ತಾನಾಗಿಯೇ ಆಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಒಂದು ಕಾರ್ಯವನ್ನು ಮಾಡಿದರೆ ಅಂತಹ ಶಕ್ತಿಶಾಲಿ ಕುಲದೇವತೆಯನ್ನು ನಮ್ಮ ಮನೆಯಲ್ಲಿ ಸದಾ ಇರಿಸಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ಏನು ಮತ್ತು ಹೇಗೆ ಮಾಡಬೇಕೆಂದು ನೀವು ಕಂಡುಹಿಡಿಯಬಹುದು . ಆರಾಧನಾ ದೇವತೆಯ ಆರಾಧನೆಯು ನಮ್ಮೊಂದಿಗೆ ಮಾತ್ರ ಮಾಡಬಹುದಾದ ವಿಷಯವಲ್ಲ. ಇದು ನಮ್ಮ ಪೂರ್ವಜರು ಪೂಜಿಸಿದ ಮತ್ತು ನಾವು ಪೂಜಿಸುವ ದೇವತೆ ಮತ್ತು ನಮ್ಮ ಮುಂದಿನ ಪೀಳಿಗೆಯೂ ಪೂಜಿಸಬೇಕು. ಈ ದೇವತೆ ಸದಾ ನಮ್ಮೊಂದಿಗಿದ್ದರೆ…
ವಿಜಯಪುರ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳು ಅಟ್ಟಹಾಸ ಮೆರೆದಿದ್ದು, ಬಾಲಕಿಯನ್ನು ಅಟ್ಟಾಡಿಸಿ ಬೀದಿ ನಾಯಿಗಳು ದಾಳಿ ಮಾಡಿವೆ. ವಿಜಯಪುರದ ರಹಿಮ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಾಲಕಿ ಮೇಲಿನ ನಾಯಿಗಳು ದಾಳಿ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ತಕ್ಷಣ ಬೈಕ್ ಸವಾರ ಬಾಲಕಿಯನ್ನು ರಕ್ಷಣೆ ಮಾಡಿದ್ದಾನೆ. ಇದೇ ವರ್ಷದಲ್ಲಿ ವಿಜಯಪುರ ಜಿಲ್ಲೆಯ ಒಂದರಲ್ಲಿ 20 ಸಾವಿರ ಮಂದಿಗೆ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಆದರೂ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.
ಹೈದ್ರಾಬಾದ್ : ಸಾಮಾನ್ಯವಾಗಿ ಯಾವುದೇ ಮನುಷ್ಯ ಮಾನಸಿಕವಾಗಿ ಕೂಗಿ ಹೋದಾಗ ಅಥವಾ ಮನನೊಂದು ಸಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ. ಆದರೆ ಹೈದರಾಬಾದ್ ನಲ್ಲಿ ವಿಚಿತ್ರ ಘಟನೆ ಒಂದು ಸಂಭವಿಸಿದ್ದು ಇರುವೆಗಳಿಗೆ ಹೆದರಿಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ನವೆಂಬರ್ 4ರಂದು ಈ ಘಟನೆ ನಡೆದಿದೆ. 2022 ರಲ್ಲಿ ಮದುವೆಯಾದ ಮತ್ತು ಮೂರು ವರ್ಷದ ಮಗಳನ್ನು ಹೊಂದಿದ್ದ ಮಹಿಳೆ ಸೀಲಿಂಗ್ ಫ್ಯಾನ್ ಗೆ ಸೀರೆಯೊಂದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆ ಬಾಲ್ಯದಿಂದಲೂ ಇರುವೆಗಳಿಗೆ ಹೆದರುತ್ತಿದ್ದಳು ಮತ್ತು ಈ ಹಿಂದೆ ತನ್ನ ಹುಟ್ಟೂರಾದ ಮಂಚೇರಿಯಲ್ ಪಟ್ಟಣದ ಆಸ್ಪತ್ರೆಯಲ್ಲಿ ಕೌನ್ಸೆಲಿಂಗ್ ಪಡೆದಿದ್ದಳು. ಆ ದಿನದ ಮೊದಲು, ಮಹಿಳೆ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದಳು, ಅವರ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಅವಳನ್ನು ಕರೆದೊಯ್ಯುವುದಾಗಿ ಹೇಳಿದ್ದಳು. ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಆಕೆಯ ಪತಿ ಸಂಜೆ ಹಿಂದಿರುಗಿದಾಗ ಮುಖ್ಯ ಬಾಗಿಲು ಒಳಗಿನಿಂದ ಬೀಗ ಹಾಕಿರುವುದನ್ನು ಕಂಡರು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಿದ್ದ…
ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು. ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (55) ನಿನ್ನೆ ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ…
ರಾಯಚೂರು : ರಾಯಚೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. 25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು. ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಘಟನೆ ಬಳಿಕ ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ದಂಡನಯ್ಯ (58) ಎನ್ನುವ ರೈತ ಸ್ಥಳದಲ್ಲಿ ಸಾವನಪ್ಪಿದ್ದು, ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಹುಲಿ ದಾಳಿಗೆ ರೈತನೊಬ್ಬ ಬಳಿ ಹಾಕಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತ ಹುಲಿ ದಾಳಿಗೆ ಸಾವನಪ್ಪಿದ್ದಾನೆ.
ಬೆಂಗಳೂರು : ನೆಲಮಂಗಲ ರಸ್ತೆಯಲ್ಲಿ ಆರ್‌ಟಿಓ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸುಮಾರು 35ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತೆರಿಗೆ ಮತ್ತು ಸಾರಿಗೆ ನಿಯಮ ಮೀರಿ ಓಡಾಡುತ್ತಿದ್ದ ಖಾಸಗಿ ಬಸ್ ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ತುಮಕೂರು ರಸ್ತೆಯಲ್ಲಿ ಆರ್‌ಟಿಓ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದು ಬೇರೆ ಬೇರೆ ಊರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗಳನ್ನು ಸಿಜ್ ಮಾಡಿದ್ದಾರೆ ಈ ನೆಲೆಯಲ್ಲಿ ಅಧಿಕಾರಿಗಳು ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಿದರು ಮೆಟ್ರೋ ಮೂಲಕ ಬಸ್ ನಿಲ್ದಾಣಕ್ಕೆ ಕೆಲವು ಪ್ರಯಾಣಿಕರು ಹಿಂತಿರುಗಿದ್ದಾರೆ. ಹೆಚ್ಚುವರಿ ಆಯುಕ್ತ ಓಂಕಾರೇಶ್ವರ ಜಂಟಿ ಆಯುಕ್ತ ಶೋಭಾ ನೇತೃತ್ವದಲ್ಲಿ ಈ ಒಂದು ಕಾರ್ಯಚರಣೆ ನಡೆಸಿದ್ದು ಯಾವುದೇ ಸುರಕ್ಷತೆ ಕ್ರಮ ವಹಿಸಿದ ಖಾಸಗಿ ಬಸ್ ಗಳನ್ನು ಮಾಡಲಾಗಿದೆ. ಯಶವಂತಪುರ, ರಾಜಾಜಿನಗರ, ಜಾಲಹಳ್ಳಿ, ಟಿ ವಿ ಎಸ್ ಕ್ರಾಸ್, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ ತುಮಕೂರು ರಸ್ತೆ ಸೇರಿದಂತೆ ಸುಮಾರು 10 ಕಡೆ ಸಾರಿಗೆ ಇಲಾಖೆ ಅಧಿಕಾರಿಗಳಿಂದ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಮೃತರನ್ನು ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೆರಿಯಡ್ಕ ಬಳಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಮುಸ್ತಾಫ್ ಮತ್ತು ಮುಸ್ತಾಫ್ ಪೆರಿಯಡ್ಕ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹಪಾಠಿಯ ಆರೋಗ್ಯ ವಿಚಾರಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಗಮಿಸಿ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು ವಿದ್ಯಾರ್ಥಿನಿಯರು ಒಟ್ಟಿಗೆ ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅನ್ಯ ಕೊಬ್ಬಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಕೋಮು ದ್ವೇಷದಿಂದ ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳಿಗೆ ನಿಂದಿಸಿದ್ದಾರೆ ಓರ್ವ ವಿದ್ಯಾರ್ಥಿಗೆ ಇಬ್ಬರು ಆರೋಪಿಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ














