Author: kannadanewsnow05

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳ ಉಪಟಳ ಮುಂದುವರೆದಿದ್ದು ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ನಿನ್ನೆ ಹುಲಿಕಂಡು ಚೆನ್ನಮ್ಮಲ್ಲಿಪುರ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸರಿಗೆ ಮದ್ದೂರು ಅರಣ್ಯ ವಲಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಜಯಪ್ರಕಾಶ್ ಎಂಬ ಸಾಕಾಣಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಓಡಾಟದಿಂದ ಜಮೀನಿಗೆ ತರಲು ರೈತರು ಹಿಂದೇಟು ಹಾಕುತ್ತಿದ್ದಾರೆ.

Read More

ಬೆಂಗಳೂರು : ಕರ್ನಾಟಕದಲ್ಲಿ ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಇನ್ನು ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಗೊಂದಲದಲ್ಲಿದೆ. ಇನ್ನು ಉಪಚುನಾವಣೆಗೆ ಹಿನ್ನಲೆ ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಗಮಿಸಲಿದ್ದು, ಚುನಾವಣಾ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಜೊತೆ ಸಿಎಂ ಡಿಸಿಎಂ ಜೊತೆ ಚರ್ಚಿಸಲಿದ್ದಾರೆ. ಇನ್ನು ಈ ವಿಚಾರವಾಗಿ ಜೆಡಿಎಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ವಿಧಾನಸಭಾ ಚುನಾವಣಾ ದಿನಾಂಕ ಘೋಷಣಾದ ಬೆನ್ನಲ್ಲೇ @INCIndia ಕಲೆಕ್ಷನ್ ಏಜೆಂಟ್, ಕರ್ನಾಟಕದ ಸೂಪರ್ ಸಿಎಂ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ!! ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಇಲ್ಲಿನ @INCKarnataka ಪಟಾಲಂ ಮತ್ತು ಡಿಸಿಎಂ @DKShivakumar ಕರ್ನಾಟಕವನ್ನು ಎಟಿಎಂ ಮಾಡಿಕೊಂಡು, ಹೈಕಮಾಂಡ್ ಖಜಾನೆ ತುಂಬಿಸಲು ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ. ಕಳೆದ ಬಾರಿ ವಾಲ್ಮೀಕಿ ನಿಗಮದಲ್ಲಿ…

Read More

ಬೆಂಗಳೂರು : ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ. ಈ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ ಟ್ವೀಟ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್’ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ…

Read More

ರಾಯಚೂರು : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ವಾರ್ಡ್ ನಂಬರ್ 14ರಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ಈಶಮ್ಮ (60) ಎಂದು ತಿಳಿದುಬಂದಿದೆ. ಮನೆ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಈಶಮ್ಮ ಗಾಯಗೊಂಡಿದ್ದರು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಮಸ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಮಸ್ಕಿ ಆಸ್ಪತ್ರೆಯಲ್ಲಿ ಈಶಮ್ಮ ಸಾವನ್ನಪ್ಪಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ಏಪ್ರಿಲ್ 9 ರಂದು ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಕಾಂಗ್ರೆಸ್ ಇನ್ನೂ ಟಿಕೆಟ್ ಹಂಚಿಕೆ ಗೊಂದಲದಲ್ಲಿದೆ ಆದರೆ ಉಪ ಚುನಾವಣೆ ಘೋಷಣೆಯಾದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಹೌದು ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ರೇಣುಕಾಚಾರ್ಯ ಅಪಸ್ವರ ಹೊರಡಿಸಿದ್ದಾರೆ. ವರಿಷ್ಠರು ಎಲ್ಲರನ್ನೂ ಕೂಡಿಸಿ ಚರ್ಚಿಸಿ ಟಿಕೆಟ್‌ ಘೋಷಿಸಬೇಕಿತ್ತು.ಏಕಾಏಕಿ ಟಿಕೆಟ್ ಘೋಷಿಸಿದ್ದು ಸರಿಯಲ್ಲ ಎಂದಿದ್ದಾರೆ. ಆದರೆ, ನಿನ್ನೆ ಬೆಂಗಳೂರಲ್ಲಿ ರೇಣುಕಾಚಾರ್ಯ ಅವರು ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ. ಪಕ್ಷದ ಗೆಲುವಿಗೆ ಒಟ್ಟಾಗಿ ಶ್ರಮಿಸುವ ಹೇಳಿಕೆ ನೀಡಿದ್ದರು. ಬಿಜೆಪಿ ಪರಿಶಿಷ್ಟ ಪಂಗಡದ ಮುಖಂಡ ಶ್ರೀನಿವಾಸ್‌ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಿಸಿದೆ.

Read More

ಹುಬ್ಬಳ್ಳಿ : ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನ ವಿರುದ್ಧ ಇದೀಗ ಕೇಸ್ ದಾಖಲು ಆಗಿದೆ ಪ್ರಕರಣ ದಾಖಲಾಗಿದೆ. ಸದ್ಯ ಅಪರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ನಿನ್ನೆ ಸಂಜೆ ವಾಹನಗಳ ಕ್ರಶ್ ರಿಲೀಸ್ ಮಾಡುವಾಗ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕೂಟಿಗೆ ಆಡಿ ಕಾರು ಡಿಕ್ಕಿಯಾಗಿ ನಮಿಷ ಸಾವನಪ್ಪಿದ್ದ. ಇದೀಗ ಮತ ಬಾಲಕನ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಮಿಷ ಜೊತೆಗೆ ಇದ್ದ ಮತ್ತೊಬ್ಬ ಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ಹಿನ್ನೆಲೆ? ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್…

Read More

ಬೆಂಗಳೂರು : ಯುಗಾದಿ ಹಬ್ಬದ ಮರುದಿನ ಬರುವ ‘ಹೊಸ ತೊಡಕು’ ಕನ್ನಡಿಗರ ಪಾಲಿಗೆ ಅತ್ಯಂತ ಸಂಭ್ರಮದ ದಿನ. ಹಬ್ಬದಷ್ಟೇ ಪ್ರಾಮುಖ್ಯತೆ ಪಡೆದಿರುವ ಈ ದಿನದಂದು ಜನರು ಕೋಳಿ ಕುರಿಗಳನ್ನು ಖರೀದಿಸಿ ಮಾಂಸದ ಊಟ ತಯಾರಿಸಿ ಮನೆ ಮಂದಿಯೊಂದಿಗೆ ಸಂಭ್ರಮದಿಂದ್ ಹೊಸ ತೊಡಕು ಆಚರಿಸುತ್ತಾರೆ. *ಹೊಸ ತೊಡಕು ಆಚರಿಸುವುದು ಯಾಕೆ?* ಯುಗಾದಿ ಎಂದರೆ ಹೊಸ ವರ್ಷದ ಆರಂಭ. ವರ್ಷದ ಮೊದಲ ದಿನ ದೈವ ಕಾರ್ಯ, ಪೂಜೆ-ಪುನಸ್ಕಾರಗಳಿಗೆ ಮೀಸಲಿಟ್ಟರೆ, ಎರಡನೇ ದಿನವಾದ ‘ವರ್ಷ ತೊಡಕು’ ಅಥವಾ ‘ಹೊಸ ತೊಡಕು’ ದಿನವನ್ನು ಲೌಕಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿ ಆಚರಿಸಲಾಗುತ್ತದೆ. ಹಿಂದಿನ ವರ್ಷದ ಕಹಿ ನೆನಪುಗಳನ್ನು ಮರೆತು, ಹೊಸ ವರ್ಷದ ಸವಾಲುಗಳನ್ನು ಎದುರಿಸಲು ಸಿದ್ಧರಾಗುವ ಮತ್ತು ಬಂಧು-ಮಿತ್ರರೊಂದಿಗೆ ಬೆರೆಯುವ ದಿನವಿದು. *ಆಚರಣೆಯ ವಿಶೇಷತೆಗಳೇನು?* ಮಾಂಸಾಹಾರದ ಸಂಭ್ರಮ: ಈ ದಿನದ ಪ್ರಮುಖ ಆಕರ್ಷಣೆಯೇ ಮಾಂಸಾಹಾರ. ಹಬ್ಬದ ದಿನದಂದು ಸಂಪೂರ್ಣ ಸಸ್ಯಾಹಾರ ಸೇವಿಸಿದವರು, ಮರುದಿನ ಮನೆಯಲ್ಲಿ ವಿವಿಧ ಮಾಂಸದ ಅಡುಗೆಗಳನ್ನು ಮಾಡಿ ಸವಿಯುತ್ತಾರೆ. ಇದು ಕೃಷಿ ಸಂಸ್ಕೃತಿಯ ಒಂದು…

Read More

ಬೆಂಗಳೂರು : ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ಮಹಿಳೆಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಂದ್ರ ಲೇಔಟ್ ಪೊಲೀಸ್ ಸರು ಆರೋಪಿ ಹಫೀಜ್ ನನ್ನ ಅರೆಸ್ಟ್ ಮಾಡಿದ್ದಾರೆ. ನಿನ್ನೆ ಡ್ಯಾಗರ್ ನಿಂದ ಇರಿದು ಫಿರ್ದೋಸ್ ಬಾನು ಎಂಬ ಮಹಿಳೆಯನ್ನು ಹಫೀಜ್ ಕೊಲೆ ಮಾಡಿದ್ದ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಹಫೀಜ್ ನನ್ನು ಚಂದ್ರಾ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆ ಆರೋಪಿಯನ್ನು ದೂರ ಮಾಡಿದ್ದೆ ಕೊಲೆಗೆ ಕಾರಣವಾಗಿದೆ. ಫಿರ್ದೋಸ್ ಬಾನುಗೆ ಆರೋಪಿ ಆಫೀಸ್ ಜೊತೆ ಸಂಪರ್ಕ ಇತ್ತು. ಇಬ್ಬರು ಚೆನ್ನಾಗಿಯೇ ಇದ್ದರು.ಈ ವಿಚಾರ ಮಹಿಳೆ ಕುಟುಂಬಕ್ಕೂ ಗೊತ್ತಿತ್ತು. ಈ ನಡುವೆ ಫಿರ್ದೋಸ್ ಕುಟುಂಬದವರು ಬುದ್ಧಿವಾದ ಹೇಳಿದ್ದಾರೆ. ಫೆಬ್ರವರಿ 28ರಂದು ಆರೋಪಿ ಆಫೀಸ್ ಮಹಿಳೆಯ ಜೊತೆಗೆ ಗಲಾಟೆ ಮಾಡಿದ್ದಾನೆ.ಗಲಾಟೆ ವಿಕೋಪಕ್ಕೆ ತಿರುಗಿ ಡ್ಯಾಗರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

Read More

ನವದೆಹಲಿ : ಯುದ್ಧದ ನಡುವೆ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಡಾಲರ್ ಎದರು 93.19ಕ್ಕೆ ರೂಪಾಯಿ ಮೌಲ್ಯ ಕುಸಿತಿದೆ ಕಚ್ಚಾ ತೈಲ ಬೆಲೆ ಏರಿಕೆ ಬೆನ್ನೆಲೆ ರುಪಾಯಿ ಮೌಲ್ಯ ಕೂಸಿತ ಕೂಡ ಆಗಿದೆ ಇದು ಐತಿಹಾಸಿಕ ಕುಸಿತ ಎಂದು ಹೇಳಲಾಗುತ್ತಿದೆ. ಪ್ರಮುಖ ಅಂಶಗಳು ಮತ್ತು ಕಾರಣಗಳು ಜಾಗತಿಕ ಯುದ್ಧದ ಆತಂಕ: ಪ್ರಮುಖ ದೇಶಗಳ ನಡುವಿನ ಭೌಗೋಳಿಕ ರಾಜಕೀಯ ಸಂಘರ್ಷಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿವೆ. ಇದರಿಂದಾಗಿ ಸುರಕ್ಷಿತ ಹೂಡಿಕೆಯಾಗಿರುವ ಅಮೆರಿಕನ್ ಡಾಲರ್ ಮೇಲೆ ಎಲ್ಲರೂ ಅವಲಂಬಿತರಾಗುತ್ತಿದ್ದಾರೆ. ಕಚ್ಚಾ ತೈಲ ಬೆಲೆ ಏರಿಕೆ: ಯುದ್ಧದ ಸನ್ನಿವೇಶದಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಬೆಲೆ ಏರಿಕೆಯಾಗಿದೆ. ಭಾರತವು ತನ್ನ ಅಗತ್ಯದ ಬಹುಪಾಲು ತೈಲವನ್ನು ಆಮದು ಮಾಡಿಕೊಳ್ಳುವುದರಿಂದ, ಹೆಚ್ಚಿನ ಡಾಲರ್ ಪಾವತಿಸಬೇಕಾಗಿ ಬಂದಿದೆ. ಇದು ರೂಪಾಯಿ ಮೌಲ್ಯದ ಮೇಲೆ ಒತ್ತಡ ಹೇರುತ್ತದೆ. ವಿದೇಶಿ ಹೂಡಿಕೆ ಹಿಂತೆಗೆತ: ಮಾರುಕಟ್ಟೆಯಲ್ಲಿನ ಅಸ್ಥಿರತೆಯಿಂದಾಗಿ ವಿದೇಶಿ ಹೂಡಿಕೆದಾರರು (FPIs) ಭಾರತೀಯ ಶೇರು ಮಾರುಕಟ್ಟೆಯಿಂದ ತಮ್ಮ ಹಣವನ್ನು ಹಿಂಪಡೆದು ಡಾಲರ್‌ನಲ್ಲಿ ಹೂಡಿಕೆ…

Read More

ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ತನ್ನಿಂದ ದೂರವಿದ್ದ ಪತ್ನಿಯ ಮೇಲೆ ಕೋಪಗೊಂಡ ಪತಿಯೋರ್ವ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಮಾಳಪ್ಪನಹಟ್ಟಿಯಲ್ಲಿ ಗುರುವಾರ ನಡೆದಿದೆ.‌ ಮೊಹಮ್ಮದ್ ಸುಹೇಲ್ (44) ಎಂಬಾತನೇ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ. ಘಟನೆಯಲ್ಲಿ, ಆತನ ಪತ್ನಿ ತಾಸಿನಾಬಾನು, ಮಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಇವರಿಬ್ಬರೂ ಕಳೆದ 8 ತಿಂಗಳುಗಳಿಂದ ದೂರವಾಗಿ ವಾಸವಿದ್ದರು. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸುಹೇಲ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ತಾಸಿನಾ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರು ನಗರ ಸೇರಿದ್ದಳು. ಇದೀಗ ತಾಸಿನಾ ಹಬ್ಬಕ್ಕೆಂದು ಸಹೋದರಿ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ಬಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. ಬಳಿಕ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ ಮದುವೆಯಾಗಿದ್ದರು.…

Read More