Subscribe to Updates
Get the latest creative news from FooBar about art, design and business.
Author: kannadanewsnow05
Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಡಿ.11 ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 11ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಡಿಸೆಂಬರ್ 11 ರವರೆಗೆ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಡಿಸೆಂಬರ್ 3ರಿಂದ 11ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯು ಭಾರ ಕುಸಿತದ ಪರಿಣಾಮ, ಚೆನ್ನೈ, ನಾಗಪಟ್ಟಣ ಸೇರಿದಂತೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಆಂಧ್ರದಲ್ಲಿ ತೀವ್ರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ವೇಗವಾಗಿ ಬಂದಂತಹ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಚಲಿಸುತ್ತಿದ್ದ ಇಬ್ಬರೂ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿ ನೆರಗನಹಳ್ಳಿ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಹೌದು ದೇವನಹಳ್ಳಿ ಬಳಿಯ ನೇರಗನಹಳ್ಳಿ ಗೇಟ್ ಬಳಿ ಬೈಕ್ ಮೇಲೆ ವೆಂಕಟೇಶ್ ಮತ್ತು ಮಹೇಶ್ ಎನ್ನುವ ಸವಾರರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಂತಹ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಗುಜ್ಜಾಗಿದ್ದು ಸ್ಥಳದಲ್ಲೇ ಬೈಕ್ ಸವಾರರಾದ ವೆಂಕಟೇಶ ಹಾಗೂ ಮಹೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬೈಕ್ ಸಂಪೂರ್ಣವಾಗಿ ನುಜ್ಗುಜ್ಜಾಗಿದೆ. ಅಪಘಾತದ ನಂತರ ಕಾರನ್ನು ಅಲ್ಲಿಯೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ…
ಬೆಂಗಳೂರು : ಅನರ್ಹರು ಬಿಪಿಎಲ್ ಕಾರ್ಡುಗಳನ್ನು ಪಡೆದಿದ್ದರಿಂದ ರಾಜ್ಯ ಸರ್ಕಾರ ಈ ಒಂದು ಬಿಪಿಎಲ್ ಕಾರ್ಡ್ ಪರಿಷ್ಕರಣೆಯಲ್ಲಿ ಅರ್ಹ ಫಲಾನುಭವಿಗಳ ಕಾರ್ಡುಗಳನ್ನು ಕೂಡ ರದ್ದು ಮಾಡಿತ್ತು. ಇದೀಗ ಸರ್ಕಾರ ಒಂದು ವಾರದಲ್ಲಿ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸುವ ಕಾರ್ಯ ಭರದಿಂದ ಸಾಗಿದ್ದು, ಡಿಸೆಂಬರ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ ರೇಷನ್ ಸಿಗಲಿದೆ. ಇನ್ನು ಬಿಪಿಎಲ್ ಕಾರ್ಡ್ ಮರು ಸ್ಥಾಪನೆಗೆ ಈ ಹಿಂದೆ ನವೆಂಬರ್ 25 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ಎಪಿಎಲ್ ನಿಂದ ಬಿಪಿಎಲ್ಗೆ ಬದಲಾಯಿಸಲು ಅಧಿಕಾರಿಗಳಿಗೆ ಸಾಕಷ್ಟು ಕಾಲಾವಕಾಶ ಅಗತ್ಯವಿರುವ ಕಾರಣ ನವೆಂಬರ್ 28ರವರೆಗೆ ಅವಕಾಶ ನೀಡಲಾಗದೆ. ಈಗಾಗಲೇ ರಾಜ್ಯದಲ್ಲಿ ಶೇ 90 ರಷ್ಟು ಕಾರ್ಡ್ಗಳನ್ನು ಎಪಿಎಲ್ನಿಂದ ಬಿಪಿಎಲ್ ಮರುಸ್ಥಾಪನೆ ಮಾಡಲಾಗಿದೆ. ರಾಜಧಾನಿಯಲ್ಲಿ ಶೇ 95 ರಷ್ಟು ಬಿಪಿಎಲ್ ಕಾರ್ಡ್ ಮರುಸ್ಥಾಪನೆಯಾಗಿದೆ. ಉಳಿದ ಕಾರ್ಡ್ ಸರಿಪಡಿಸಲು ಇನ್ನೆರಡು ದಿನ ಕಾಲವಕಾಶ ಇದೆ. ರದ್ದಾದ ಎಲ್ಲ ಬಿಪಿಎಲ್ ಕಾರ್ಡ್ಗಳ ಮರು ಪರಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಅಮಾನತಿನಲ್ಲಿಟ್ಟಿರುವ ಪಡಿತರ ಚೀಟಿಗಳ ಮರುಸ್ಥಾಪನೆ…
ಕಲಬುರ್ಗಿ : ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ 1ದಿನದ ನವಜಾತ ಶಿಶು ಒಂದು ನಾವು ನರ್ಸ್ ಎಂದು ಹೇಳಿ ಖತರ್ನಾಕ್ ಕಳ್ಳಿಯರು ಮಗುವನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಬುರ್ಗಿ ನಗರದ ಪೊಲೀಸರು ಕೇವಲ 48 ಗಂಟೆಗಳಲ್ಲಿ ನವಜಾತ ಶಿಶುವನ್ನು ಪತ್ತೆ ಹಚ್ಚಿ ತಾಯಿಯ ಮಡಿಲಿಗೆ ಸೇರಿಸಿದ್ದಾರೆ. ಹೌದು ಕಿಡ್ನಾಪಾದ 48 ಗಂಟೆಗಳಲ್ಲಿ ಶಿಶುವನ್ನು ಪತ್ತೆಹಚ್ಚಿದ ಪೊಲೀಸರು ನವಜಾತ ಶಿಶುವನ್ನು ರಕ್ಷಿಸಿ ತಾಯಿಗೆ ಹಸ್ತಾಂತರಿಸಿದ್ದಾರೆ. ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪರಿಂದ ಇದೀಗ ನವಜಾತ ಶಿಶುವನ್ನು ತಾಯಿಗೆ ಹಸ್ತಾಂತರಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಚಿತ್ತಾಪುರ ಮೂಲದ ಕಸ್ತೂರಿ ಎನ್ನುವ ಮಹಿಳೆ ಜಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ನರ್ಸ್ ಅಂತ ಹೇಳಿ ಮಗುವಿಗೆ ಬ್ಲಡ್ ಚೆಕ್ ಅಪ್ ಮಾಡಬೇಕು ಎಂದು ಸಂಬಂಧಿಕರಿಂದ ಮಗುವನ್ನು ಪಡೆದು, ಬುರ್ಖಾ ಧರಿಸಿ ಮಗುವನ್ನು ಇಬ್ಬರು ಕಳ್ಳಿಯರು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಮಗುವನ್ನು ಖೈರಾನ್ ಎನ್ನುವವರಿಗೆ ಮಗುನು ಮಾರಾಟ ಮಾಡಿದ್ದರು. ಸಿಸಿಟಿವಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಇನ್ನೂ ಕೋರ್ಟ್ ನಲ್ಲಿದೆ. ಇದರ ಮಧ್ಯ ರಾಜ್ಯ ಭೋವಿ ನಿಗಮದಲ್ಲಿ ಕೂಡ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ನಿಗಮದಲ್ಲಿ ನಡೆದಂತಹ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗಳಿಸಿದ್ದು, ಇದೀಗ ಹಗರಣದ ಕಿಂಗ್ ಪಿನ್ ಗಳನ್ನು ಸಿಐಡಿ ಮತ್ತು ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಹೌದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ಮುಂದುವರೆಸಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ), ಆ ನಿಗಮದಿಂದ ಇತ್ತೀಚಿಗೆ ಆತ್ಮ ಹತ್ಯೆ ಮಾಡಿಕೊಂಡ ಉದ್ಯಮಿಗೆ ಸೇರಿದ್ದು ಎನ್ನಲಾದ ಕಂಪನಿ ಸೇರಿ ಒಟ್ಟು 5 ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂಪಾಯಿ ವರ್ಗಾವಣೆಯಾಗಿ ರುವುದನ್ನು ಪತ್ತೆ ಹಚ್ಚಿದೆ. ಇದೇ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, 5 ದಿನಗಳ…
ಹೈದ್ರಾಬಾದ್ : ಹೈದರಾಬಾದ್ ನ ಜಿಡಿಮೆಟ್ಲ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜೆಡಿಮೆಟ್ಲು ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಬ್ಯಾಗ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಸುತ್ತಮುತ್ತಲಿನ ನಿವಾಸಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಗ್ನಿ ಅವಘಡದಿಂದ ಕೋಟ್ಯಾಂತರ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕದಳ ದೌಡಾಯಿಸಿದ್ದು, ಸಿಬ್ಬಂದಿಯಿಂದ ಈಗ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಸುಮಾರು 10 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ತಂತಿಗಳ ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ. ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಈ ಒಂದು ಘಟನೆಗೆ ಕಾರಣ ಎನ್ನಲಾಗಿದೆ. ಮಾಹಿತಿ ನೀಡಿದರು ಕೂಡ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ವಿರುದ್ಧ ಜಿಡಿಮೆಟ್ಲ ಪ್ರದೇಶದ ನಿವಾಸಿಗಳು ಆರೋಪಿಸುತ್ತಿದ್ದಾರೆ.
ಬೆಂಗಳೂರು : ಅರಣ್ಯ ಹಕ್ಕು ಕಾಯ್ದೆ ಅಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳುಸಲ್ಲಿಸಿರುವ ಎಲ್ಲರೀತಿಯ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಂದ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಿ. 6,363 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಉಳಿದಂತೆ 558 ಅರ್ಜಿಗಳು ವಿಲೇವಾರಿ ಮಾಡಬೇಕಿದೆ. ಪಾರಂಪರಿಕ ಅರಣ್ಯವಾಸಿಗಳಿಂದ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಿ, 531 ಹಕ್ಕುಪತ್ರ ವಿತರಿಸಲಾಗಿದೆ. 104 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಉಳಿದ 1,095 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸಮುದಾಯದಹಕ್ಕುಪತ್ರಕ್ಕಾಗಿ 260 ಅರ್ಜಿ ಸಲ್ಲಿಕೆಯಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಅದಕ್ಕೆ…
ಬೆಂಗಳೂರು : ನಗರದಲ್ಲಿನ ಸಾರ್ವಜನಿಕ ಉದ್ಯಾನಗಳ ಸ್ವಚ್ಛತೆ ಕಾಯ್ದುಕೊಳ್ಳಲು ಹಲವು ಮಾರ್ಗ ಸೂಚಿ ರಚಿಸಿರುವ ಹೈಕೋರ್ಟ್, ಉದ್ಯಾನಗಳಲ್ಲಿ ನಾಯಿಗಳ ಮಲವಿಸರ್ಜನೆಗೆ ಕಾರಣವಾಗು ವವರಿಗೆ ಹೆಚ್ಚಿನ ದಂಡ ವಿಧಿಸಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ. ಹೌದು ನಗರದ ಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿಗಳಿಂದ ಉಂಟಾಗುತ್ತಿರುವ ಉಪದ್ರವ ಹಾಗೂ ನಾಯಿಗಳ ಮಲ ವಿಸರ್ಜನೆಗೆ ಕಡಿವಾಣ ಹಾಕಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸರ್ಕಾರೇತರ ಸಂಘ ‘ಮೆಸೆರ್ಸ್‌ಂಪ್ಯಾಷನ್ ಅನ್ಸಿಮಿಟೆಡ್ ಪ್ಲಸ್ ಅಕ್ಷನ್’ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಾರ್ಗಸೂಚಿ ರಚಿಸಿದೆ. ಬೇಜವಾಬ್ದಾರಿಯುತವಾಗಿ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡುತ್ತಿರು ವುದರಿಂದ ಸಾರ್ವಜನಿಕ ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ತೋಟ ಗಾರಿಕೆ ಇಲಾಖೆ, ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇರೀತಿ ಉಪದ್ರವ ಉಂಟಾಗದಂತೆ ನಿಷೇಧಿಸುವ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವ ಇಚ್ಛಾಶಕ್ತಿ…
ತುಮಕೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಅಷ್ಟಕ್ಕೂ ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ “ಅಲ್ಲಾ” ಸಹಾಯಕ್ಕೆ ಬರಲಿಲ್ಲ ಆದ್ದರಿಂದ ಜೀವ ಹೋಗಿದೆ ಅಷ್ಟೇ, ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ ಎಂದು ಪೋಸ್ಟ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಎಂ.ಜಿ.ರಸ್ತೆ, ಚರ್ಚರಸ್ತೆ, ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತೂರ್ಬಾ ರಸ್ತೆ, ವಾಲ್ಪನ್ ರಸ್ತೆ, ಡಿಕನ್ಸನ್ ರಸ್ತೆ, ಆಶೋಕ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರನಿಟಿ ಸರ್ಕಲ್, ಹಲಸೂರು ರಸ್ತೆ, ಮರ್ಫಿ ಪಟ್ಟಣ, ಹಲಸೂರು ಗೀತಾಂಜಲಿ ಲೇಔಟ್, ಎಚ್‌ಎಎಲ್ 3ನೇ ಹಂತ, ಹೊಸ ತಿಪ್ಪಸಂದ್ರ ಮುಖ್ಯ ರಸ್ತೆಯಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಏರ್ ರ್ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯ ರಸ್ತೆ, ಎಚ್‌ಎಎಲ್ 2ನೇ ಹಂತ, ಕಾಲ್ಪನ್ ಟವರ್ಸ್, ಎನ್‌ಎಎಲ್ ಕಾಂಪೌಂಡ್, ಕೋಡಿಹಳ್ಳಿ,…













