Author: kannadanewsnow05

ಬೆಂಗಳೂರು : ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ ರೀತಿಯಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನವು ಇಂದು ವಿಶೇಷ ವಿಸ್ಮಯಕ್ಕೆ ಕಾರಣವಾಗಲಿದೆ. ಏಕೆಂದರೆ ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಈ ಒಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಲಿವೆ. ವರ್ಷಕ್ಕೆ ಸಂಕ್ರಾಂತಿ ಹಬ್ಬದ ದಿನದಂದೇ ಈ ಒಂದು ವಿಸ್ಮಯ ಹಾಗೂ ಕೌತುಕ ಘಟನೆ ಜೋಳದಲ್ಲಿದ್ದು ಇದನ್ನು ಕಣ್ತುಂಬಿಕೊಳ್ಳಲು ಅಪಾರ ಪ್ರಮಾಣದ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಭವಿಷ್ಯ ಹೇಳಲಾಗುವುದು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿರಲಿದೆ. ನಂತರ…

Read More

ಬೆಂಗಳೂರು : ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಭಾರತ್ ಜೋಡು ನ್ಯಾಯಾತ್ರೆಗೆ ಚಾಲನೆ ನೀಡಿದರು ಈ ಒಂದು ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತೆರಳಿದ್ದು ಇಂದು ವಾಪಸ್ಸಾಗಲಿದ್ದಾರೆ. ಅವರು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಅಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯರಿಂದ ಹಾವೇರಿ ಜಿಲ್ಲಾ ಪ್ರವಾಸ ಅಂಬಿಗರ ಚೌಡಯ್ಯ ಜಯಂತಿ, ಶರಣ ಸಂಸ್ಕೃತಿ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.ಬೆಳಗ್ಗೆ 11:00 ಗಂಟೆಗೆ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಿಂದ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಿಂದ ನರಸೀಪುರಕ್ಕೆ ಹ್ಯಾಲಿ ಪ್ಯಾಡ್ ಗೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ನರಸೀಪುರ ಬಳಿ ಹ್ಯಾಲಿ ಪ್ಯಾಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನರಸೀಪುರದ ಅಂಬಿಗರ ಪೀಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಬಳಿಕ ಚಿಕ್ಕ ಬಾಸೂರಿನ ಶರಣ ಸಂಸ್ಕೃತಿ ಉತ್ಸವದಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ತೆರಳಲಿದ್ದಾರೆ. ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ…

Read More

ಬೆಂಗಳೂರು : ರಸ್ತೆ ವಿಭಜಕ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟಿರುವ ಘಟನೆ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಡುಗೋಡಿ ನಿವಾಸಿ ನರೇಂದ್ರ (47) ಮೃತ ವ್ಯಕ್ತಿ. ಬಿಬಿಎಂಪಿ ಕಸ ಸಂಗ್ರಹಿಸುವ ವಾಹನ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ನರೇಂದ್ರ, ಶುಕ್ರವಾರ ಕೆಲಸ ಮುಗಿಸಿ ಮಧ್ಯಾಹ್ನ 12.30ರ ಸುಮಾರಿಗೆ ಹೊಸೂರು ರಸ್ತೆಯ ಕಿದ್ವಾಯಿ ಆಸ್ಪತ್ರೆ ಬಳಿ ರಸ್ತೆ ವಿಭಜಕ ದಾಟುವಾಗ ಡೈರಿ ಸರ್ಕಲ್ ಕಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳೀಯರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ತೀವ್ರ ಪೆಟ್ಟುಬಿದ್ದು ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಸಂಜೆ 5.30ರ ಸುಮಾರಿಗೆ ಮೃತಪಟ್ಟಿದ್ದಾನೆ. ನರೇಂದ್ರ ಬಳ್ಳಾರಿ ಮೂಲದವನಾಗಿದ್ದು, ಆಡುಗೋಡಿಯಲ್ಲಿ ತಂಗಿ ಮನೆಯಲ್ಲಿ ನೆಲೆಸಿದ್ದ. ಬಿಬಿಎಂಪಿ ಕಸ ಸಂಗ್ರಹಿಸುವ ವಾಹನದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಖಾಸಗಿ ಬಸ್ ಜಪ್ತಿ ಮಾಡಿದ್ದು, ಅದರ…

Read More

ಹಾವೇರಿ : ಹಾನಗಲ್‌ ತಾಲೂಕಿನಲ್ಲಿ ಮಹಿಳೆ ಮೇಲೆ ನಡೆದ ಕೃತ್ಯ ಖಂಡನೀಯವಾಗಿದ್ದು, ನಾನೂ ತೀವ್ರವಾಗಿ ಖಂಡಿಸುತ್ತೇನೆ. ಪ್ರಕರಣ ದಲ್ಲಿ ಭಾಗಿಯಾದ ಐವರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆ ಮುಂದುವರಿದಿದೆ. ಪ್ರಕರಣದಲ್ಲಿ ಯಾವುದೇ ಆರೋಪಿ ಪಾರಾಗಲು ಅವಕಾಶ ನೀಡುವುದಿಲ್ಲ, ಎಂದು ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟನೆ ನಡೆದ ದಿನವೇ ದೂರು ದಾಖಲಾಗಿದ್ದರೆ ಆರೋಪಿಗಳನ್ನು ಇನ್ನೂ ಬೇಗ ಬಂಧಿಸಲು ಸಾಧ್ಯವಿತ್ತು. ಕೆಲವರು ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿ ರಲಿಲ್ಲ. ಸಂಪೂರ್ಣ ಮಾಹಿತಿ ಪಡೆಯಲಾಗಿದ್ದು, ಸೂಕ್ತ ತನಿಖೆಗೆ ನಿರ್ದೇಶನ ನೀಡಿದ್ದೇನೆ. ಜ.11ರಂದು ಹಾನಗಲ್ ತಾಲೂಕು ಅಕ್ಕಿಆಲೂರಿನ ಅಪ್ತಾಬ್ (24), ಮದರಸಾಬ್ (23) ಮತ್ತು ಹಾನಗಲ್ ತಾಲೂಕು ಹೀರೂರು ಗ್ರಾಮದ ಆಟೊ ಚಾಲಕ ಅಬ್ದುಲ್ ಖಾದರ್ (28) ಅವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅಕ್ಕಿಆಲೂರಿನ ಮಹ್ಮದ್ ಸೈಫ್ ಸಾವಿಕೇರಿ ಜ.9ರಂದು ಸ್ವಯಂ ಅಪಘಾತದಲ್ಲಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿ ಯಾಗಿ ದಾಖಲಾಗಿದ್ದು, ಚಿಕಿತ್ಸೆಮುಗಿದ ನಂತರ ಬಂಧಿಸಲಾಗು…

Read More

ದಾವಣಗೆರೆ : ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರಗೆ ಜೀವ ಬೆದರಿಕೆ ಇದ್ದು ನನಗೆ ಜೀವ ಬೆದರಿಕೆ ಇದೆ ಎಂದು ಸಂಸದ ಜಿಎಂ ಸಿದ್ದೇಶ್ವರ ಹೇಳಿದ್ದಾರೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ ಕಾಲು ತೆಗೆಯಬೇಕು ವಿಷ ಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದಾವಣಗೆರೆಯ ಸಂಸದ ರಾಗಿರುವ ಜಿಎಂ ಸಿದ್ದೇಶ್ವರ ರವರು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದು, ಹಾಗಾಗಿ ಎಲ್ಲೇ ಹೋದರು ನಾನು ಎಚ್ಚರದಿಂದ ಇರುತ್ತೇನೆ ನನಗೆ ಯಾರೇ ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ ಎಂದು ಅವರು ತಿಳಿಸಿದರು. ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ಫ್ರೆಂಡ್ಸ್ ಸರ್ಕಲ್ ನಲ್ಲಿ ನನ್ನ ತೆಗೆಯುವುದಕ್ಕೆ ಸಂಚುರೂಪಿಸಲಾಗಿದೆ ಎಂದು ಸ್ಪೋಟವಾದ ಅಂತ ಹೇಳಿಕೆ ನೀಡಿದ್ದಾರೆ.

Read More

ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಬರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಅವಾಚ್ಯ ಪದಗಳನ್ನು ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾತ್ ಅಂಗಡಿಗೆ ವಾಗ್ದಾಳಿ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವನೋ ಪಟಗೋಸಿ ಎಂದು ತಿವಿದಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಇದನ್ನು ಇಲ್ಲಿಗೆ ನಿಲ್ಲಿಸಿದರೆ ಒಳ್ಳೆಯದು ಇಲ್ಲ ಅಂದರೆ ನಮ್ಮ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆ ಹೇಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದ್ ಶಿವರಾಜ್ ತಂಗಡಗಿ ಕಿಡಿ ಕಾರಿದರು. ಸಿಎಂ ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲಿ ಬೆಂಬಲಿಗರನ್ನು ಹೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವ ಪುಟಗೋಸಿ? ಟೀಕೆ ಮಾಡಬೇಕು ನಾವು ಮಾಡ್ತೀವಿ ಆದರೆ ಈ ರೀತಿ ಭಾಷೆ ಬಳಸುವುದಿಲ್ಲ ಎಂದ್ ಶಿವರಾಜ್ ತಂಗಡಗಿ ಕಿಡಿ ಕಾರಿದರು.

Read More

ಹುಬ್ಬಳ್ಳಿ : ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರುವ ಯತ್ನ ನಡೆಯುತ್ತಿದೆ ಎಂಬ ಮಾಹಿತಿ ಬಂದಿದ್ದು ಇದಕ್ಕೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಣೆ ನೀಡಿದರು.ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರು ಒತ್ತಾಸೆ ಇದೆ. ನನಗೆ ಆಗಿರೋ ಅವಮಾನವನ್ನು ನಾನು ಇನ್ನೂ ಮರೆತಿಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸ್ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ನಾನು ಬಿಜೆಪಿ ತೊರೆದ ನಂತರ ಆದ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ.ಹೀಗಾಗಿ ಕೆಲವರು ನನ್ನ ಬಿಜೆಪಿಗೆ ವಾಪಸ್ ಕರೆ ತರಲು ಯತ್ನಿಸಿದ್ದಾರೆ.ವಾಪಸ್ ಕರೆಸಿಕೊಳ್ಳುವಂತೆ ಒತ್ತಡ ಹಾಕುತ್ತಿರುವ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಸ್ ಆಗುವುದಿಲ್ಲ…

Read More

ಬೆಂಗಳೂರು : ರಾಮಮಂದಿರದ ಬಗ್ಗೆ ಸಿಎಂ ನಿರಂತರ ದಾಳಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಸಂತೆ ಭಾಷಣ.ಎಲ್ಲಿ ಭಕ್ತಿ ಇರುತ್ತದೆಯೋ ಅಲ್ಲಿ ಹೋಗುತ್ತಾರೆ ರಾಮಮಂದಿರ ಪ್ರಶ್ನಿಸುವ ಅವರು ಮಸೀದಿಗೆ ಏಕೆ ಹೋಗುತ್ತಾರೆ? ಮನೆಯಲ್ಲಿ ನೀವು ಮಸೀದಿ ಪೂಜೆ ಮಾಡಬಹುದು ಅಲ್ವಾ?ಸಿಎಂ ಸಿದ್ದರಾಮಯ್ಯ ನಾನು ಹಿಂದು ಅಂತ ಹೇಳುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದರು. ಸಿಎಂ ಹಾಗೆ ಹೇಳುವುದರಲ್ಲಿ ಡೋಂಗಿತನ ಅಡಗಿದೆ.ರೈತರ ಕಣ್ಣಿಗೆ ಸುಣ್ಣ ಮೌಲ್ವಿಗಳ ಕಣ್ಣಿಗೆ ಬೆಣ್ಣೆ ಹಾಕುತ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ಬೆಣ್ಣೆ ಹಚ್ಚುವ ರಾಜಕಾರಣ ಬಿಡಬೇಕು. ಇಲ್ಲದಿದ್ದರೆ ಹಿಂದೂಗಳು ಸೂಕ್ತ ಸಮಯದಲ್ಲಿ ಕಣ್ಣಿಗೆ ಸುಣ್ಣ ಹಚ್ಚುತ್ತಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಅಶೋಕ ಕಿಡಿಕಾರಿದರು. ಹಾನಗಲ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್, ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದಲ್ಲಿ ದಾದಾ ಗಿರಿ ಶುರುವಾಗಿದೆ.ಬೆಳಗಾವಿಯಲ್ಲಿ ಬೆತ್ತಲೆ ಪ್ರಕರಣ ಆಯ್ತು. ಈ ಪ್ರಕರಣ ಯಾವಾಗ ಮುಚ್ಚಿ ಹಾಕುತ್ತೀರಾ ಹೇಳಿ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ…

Read More

ಬೆಂಗಳೂರು : ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರದಿಂದ ಭಾರತ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದು ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದು, ಇದು ಭಾರತ ಜೋಡೋ ನ್ಯಾಯ ಯಾತ್ರೆ ಅಲ್ಲ ಡೋಂಗಿ ಯಾತ್ರೆ ಎಂದು ವ್ಯಂಗ್ಯವಾಡಿದರು. ರಾಹುಲ್ ಗಾಂಧಿ ಯಾತ್ರೆ ಡೋಂಗಿ ಯಾತ್ರೆ ಎಂದು ಅಶೋಕ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಯಾತ್ರೆಗೆ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ. ಅವರಿಗೆ ನ್ಯಾಯ ಕೇಳುವುದಕ್ಕೆ ಯಾವುದೇ ನೈತಿಕತೆಯೇ ಇಲ್ಲ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವೈಯಕ್ತಿಕ ನಿಂದಲೇ ಸರಿಯಲ್ಲ ಇದನ್ನಷ್ಟೇ ನಾನು ಹೇಳುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು ಸಿಎಂ ನಡವಳಿಕೆ ಖಂಡಿಸುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಆದರೆ ವೈಯಕ್ತಿಕ ನಿಂದನೆಯನ್ನು…

Read More

ಕಲಬುರ್ಗಿ : ಕಲಬುರ್ಗಿ ಗ್ರಾಮೀಣ ಮತ ಕ್ಷೇತ್ರದ ಶಾಸಕರಾದ ಬಸವರಾಜ್ ಮತಿಮೂಡ್ ಅವರ ಕಾರು ಪಲ್ಟಿಯಾಗಿದ್ದು, ಕಲ್ಬುರ್ಗಿ ನಗರದ ಹೊರವಲಯದಲ್ಲಿರುವ ಪಾಳ ಗ್ರಾಮದಲ್ಲಿ ಕಾರು ಪಲ್ಟಿ ಆಗಿದ್ದು ಕಲ್ಬುರ್ಗಿ ನಗರದ ಹೊರವಲಯದ ಪಾಳಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಬಸವರಾಜ್ ಮತ್ತು ಮೂಡ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೊ ಕಾರು ಪಾಳ ಗ್ರಾಮದಲ್ಲಿ ಪಲ್ಟಿಯಾಗಿದೆ.ಬಸವರಾಜ್ ಮತ್ತಿಮೂಡ್ ಕಲಬುರ್ಗಿ ಗ್ರಾಮೀಣ ಮತ ಕ್ಷೇತ್ರದ ಶಾಸಕರಾಗಿದ್ದು, ಈ ಅಪಘಾತದಲ್ಲಿ ಮತ್ತಿಮೂಡಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಬಸವರಾಜ್ ಮತ್ತಿಮೂಡ ಅವರನ್ನು ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More