Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದರು. ಈ ಒಂದು ಆರೋಪದ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ಗಂಗರಾಜುಗೆ ನೋಟಿಸಿ ನೀಡಿದ್ದಾರೆ. ಹೌದು ಮುಡಾದಲ್ಲಿ ಸೈಟ್ ಹಂಚಿಕೆ ವಿಚಾರವಾಗಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ಆರೋಪಿಸಿದ್ದರು. ಹಾಗಾಗಿ ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ನೋಟಿಸ್ ನೀಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿಂದೆ ಅಕ್ಟೋಬರ್ 28 ರಂದು ಇಡಿ ಕಚೇರಿಗೆ ಗಂಗರಾಜು ವಿಚಾರಣೆಗೆ ತೆರಳಿದ್ದರು.ಇಂದು ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಸುಳಿವು ನೀಡಿದ್ದಾರೆ. ಪರೋಕ್ಷವಾಗಿ ಸಚಿವ ಸಂಪುಟದ ಪುನರ್ ರಚನೆ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಾಗೆ ಯಾರೂ ಕೂಡ ತಮ್ಮ ಹುದ್ದೆಯನ್ನು ತ್ಯಾಗ ಮಾಡುವುದಿಲ್ಲ. ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ. ಎರಡು ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ಹೇಳಿದ್ದೇವೆ. ಪರೋಕ್ಷವಾಗಿ ಸಂಪುಟ ಪುನಾರಚನೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸುಳಿವು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ…
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ, 5 ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬಗ್ಗೆ ಶಾಸಕ ಗವಿಯಪ್ಪ ಅಪಸ್ವರ ಎತ್ತುತ್ತಿರುವ ವಿಚಾರವಾಗಿ, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಚಿತ್ರದುರ್ಗದ ರೇಣುಕಾಶ್ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ದರ್ಶನ್ ಅವರು ಬೆನ್ನುನೋವಿನ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದು ವಿಚಾರಣೆ ನಡೆಸಿದ ನ್ಯಾ.ಎಸ್ ವಿಶ್ವಜಿತ್ ಅವರಿದ್ದ ಹೈಕೋರ್ಟ್ ಪೀಠವು ಜಾಮೀನು ಅರ್ಜಿ ವಿಚಾರಣೆ ಸಂಜೆ 4 ಗಂಟೆಗೆ ಮುಂದೂಡಿದರು. ವಿಚಾರಣೆ ವೇಳೆ ಹೈ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದರು. ಈ ವೇಳೆ ರೇಣುಕಾ ಸ್ವಾಮಿಯನ್ನು ಅಪಹರಿಸಿದ ದಿನದಿಂದ, ಕೊಲೆಯಾದ ಬಳಿಕ ಆರೋಪಿಗಳು ಶವ ಸ್ಥಳಾಂತರಿಸಿದರ ಬಗ್ಗೆ ಹಾಗೂ ದರ್ಶನ್ ಪಾತ್ರ ಇದರಲ್ಲಿ ಇಲ್ಲ ಎನ್ನುವುದರ ಕುರಿತಂತೆ ಸಿವಿ ನಾಗೇಶ್ ಅವರು ನ್ಯಾಯಾಧೀಶರಿಗೆ ಎಲ್ಲ ವಿಚಾರವನ್ನು ಮನವರಿಕೆ ಮಾಡಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆ ಸಂಜೆ 4 ಗಂಟೆಗೆ ಮುಂದೂಡಿದರು. ದರ್ಶನ್ ಪಾತ್ರ ಸಾಬೀತುಪಡಿಸುವ ಮತ್ತಷ್ಟು…
ಬೆಂಗಳೂರು : ಬೆಂಗಳೂರಲ್ಲಿ ಇಂದು ಮತ್ತೊಂದು ಭೀಕರವಾದಂತಹ ಕೊಲೆ ನಡೆದಿದ್ದು, ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾನಗರ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಯುವತಿಯ ಕೊಲೆಗೆ ಇದುವರೆಗೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಇಂದಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಕ್ಫ್ ವಿರುದ್ಧವಾಗಿ ಈಗಾಗಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಬೀದರ್ ನಿಂದ ಹೋರಾಟವನ್ನು ಆರಂಭಿಸಿದ್ದು, ಇದೇ ವಿಚಾರವಾಗಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ ಹೋರಾಡೋಣ. ಎಂದು ಬೆಂಗಳೂರಿನಲ್ಲಿ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದರು.
ಬೆಂಗಳೂರು : ಇಂದು ಭಾರತೀಯ ಸಂವಿಧಾನದ 75ನೇ ವರ್ಷದ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದಾದ್ಯಂತ ಇಂದು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಒಂದು ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಅಸ್ತ್ರದ ಮೂಲಕ ತಮಗೆ ಎದುರಾಗುವ ಎಲ್ಲಾ ಪ್ರತಿರೋಧಗಳನ್ನು ಎದುರಿಸಿ ಮುನ್ನಡೆಯಲಿದೆ ಎಂದು ತಿಳಿಸಿದ್ದಾರೆ. ಟ್ವಿಟ್ ನಲ್ಲಿ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ. ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ.ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ…
ಹೊಸಪೇಟೆ : ಇತ್ತೀಚಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಅವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದೆರಡನ್ನು ತೆಗೆದು ಹಾಕಿದರೆ ಅನುದಾನಕ್ಕೆ ಅನುಕೂಲವಾಗಲಿದೆ ಎಂದು ಗ್ಯಾರಂಟಿ ತೆರವಿಗೆ ಅವರು ಆಗ್ರಹಿಸಿದ್ದಾರೆ. ಹೊಸಪೇಟೆಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ಯಾರಂಟಿ ರದ್ದಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಆಗ್ರಹಿಸಿದ್ದು, ಗ್ಯಾರಂಟಿ ಯೋಜನೆಯಲ್ಲಿ ಒಂದು ಎರಡು ಯೋಜನೆ ರದ್ದು ಮಾಡಿದರೆ ಅನುಕೂಲವಾಗುತ್ತದೆ. ಯೋಜನೆ ರದ್ದು ಮಾಡುವುದರಿಂದ ಅನುದಾನಕ್ಕೆ ಅನುಕೂಲವಾಗಲಿದೆ. ಜಿಲ್ಲೆಯ ಜನರಿಗೆ ಆಶ್ರಯ ಮನೆಗಳು ಬರುತ್ತಿಲ್ಲ. ಗ್ಯಾರಂಟಿ ತೆಗೆಯಿರಿ ಎಂದು ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳುತ್ತೇನೆ ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದರು. ಗ್ಯಾರಂಟಿ ಗಳಿಂದ ಸ್ವಲ್ಪ ಆಶ್ರಯ ಮನೆಗಳನ್ನು ಕೊಳ್ಳುವುದು ಕಷ್ಟ ಆಗುತ್ತಿದೆ. ಇವಾಗ ಅದೇ ಹಿನ್ನೆಲೆ ನಾವು ಮುಖ್ಯಮಂತ್ರಿಗಳಿಗೆ ಕೇಳ್ತಾ ಇದ್ದೇವೆ. ಎರಡು-ಮೂರು ಈ ಗ್ಯಾರಂಟಿ ಯೋಜನೆಗಳನ್ನ ತೆಗೆದು ಬಿಟ್ಟು ಮನೆಗಳನ್ನು ಕೊಡಿರಿ ಎಂದು…
ಚಿಕ್ಕಮಗಳೂರು : ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ. ಕರಿಬಸವಯ್ಯ ಅವರ ಪತ್ನಿ ಲಲೀತಮ್ಮ ಎಂಬವರ ಕೊಲೆ ನ.21 ರಂದು ಆಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ. ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಅಭ್ಯಾಸ ಇತ್ತಂತೆ. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ. ಅದಕ್ಕೆ ಬೆಂಗಳೂರಿನಲ್ಲಿ ಯಾರು ಒಪ್ಪದ ಕಾರಣ…
ಬೆಂಗಳೂರು : ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತಲೆ ಇವೆ. ಇದೀಗ ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿ ಒಬ್ಬ ಅತ್ಯಾಚಾರ ಎಸಗಿದ್ದು, ಇಡೀ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದೆ. ಹೌದು ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘೋರ ಘಟನೆ ನಡೆದಿದೆ. ಸ್ಕ್ರಾಪ್ ಅಂಗಡಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬಾಲಕಿಗೆ ಚಾಕೊಲೇಟ್ ಹಾಗೂ ಐಸ್ ಕ್ರೀಮ್ ಕೊಡಿಸಿ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ನಿನ್ನೆ ಗೋದಾಮಿಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಿಗಿದ್ದಾನೆ.ಈ ವಿಚಾರ ಗೊತ್ತಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ…














