Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. “ಇನ್ನೆರಡು ಮೂರು ದಿನಗಳಲ್ಲಿ ಕೆಆರ್ ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ನಾವು ಮುಂಜಾಗೃತವಾಗಿ ರಂಗನತಿಟ್ಟು ಸೇರಿದಂತೆ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್…
ಉತ್ತರಕನ್ನಡ : ಇಂದು ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರಿಗೆ ಕುಮಾರಸ್ವಾಮಿ ಭೇಟಿ ನೀಡಿದನ್ನು ಸುದ್ದಿಯಾದಂತೆ ತಡೆಹಿಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾಡಿದರು. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯನ ಕೀಳುಮಟ್ಟದ ರಾಜಕೀಯ. ಕುಮಾರಸ್ವಾಮಿ ಭೇಟಿ ಸುದ್ದಿಯಾಗದಂತೆ ತಡೆ ಕೈ ಸರ್ಕಾರದ ಸಂವಿಧಾನ ವಿರೋಧಿ ನಡೆ! ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವರಾದ @hd_kumaraswamy ಅವರು ಭೇಟಿ ನೀಡುವುದು ಸುದ್ದಿಯಾಗದಂತೆ ತಡೆಯಲು ಯತ್ನಿಸಿರುವುದು @siddaramaiah ಅವರ ಅಂಜು ಬುರುಕುತನ ತೋರಿಸುತ್ತದೆ. ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ ೫ ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಾತ್ರವೇ ಇಲ್ಲ. ಬ್ಯಾಂಕ್ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು.…
ಬೆಂಗಳೂರು : ಕೆಎಎಸ್ ಪದವಿ ಎಂಬುದು ಉನ್ನತ ಅಧಿಕಾರವಾಗಿದ್ದು, ಅಧಿಕಾರಿ ವರ್ಗದ ಶ್ರಮ ಜನರ ಸೇವೆಗೆ ಮೀಸಲಾಗಬೇಕೆ ವಿನಃ ಸ್ವಾರ್ಥ ಸಾಧನೆಗೆ ಅಲ್ಲ. ನಿಮ್ಮಗಳ ಆತ್ಮಶಾಕ್ಷಿ ನಿಮಗೆ ದಾರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು. ಬೆಂಗಳೂರಿನ ಐಎಎಸ್ ಅಸೋಷಿಯೇಷನ್‌ನಲ್ಲಿ ಶನಿವಾರ ನಡೆದ 2020ನೇ ತಂಡದ ಕೆಎಎಸ್ ಅಧಿಕಾರಿಗಳ ತರಬೇತಿ ಶಿಬಿರದ ಕೊನೆಯ ದಿನದ ಉಪಾಂತ್ಯ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಅಧಿಕಾರ ಐದು ವರ್ಷಕ್ಕೊಮ್ಮೆ ಬದಲಾಗುತ್ತದೆ. ಹೀಗಾಗಿ ಎಲ್ಲಾ ಕಾಲದಲ್ಲೂ ಅಧಿಕಾರಿಗಳೇ ಶಾಶ್ವತ ಸರ್ಕಾರವಾಗಿದ್ದು, ಜನಪರವಾದ ಪ್ರಾಮಾಣಿಕ ಸೇವೆ ಸಲ್ಲಿಸುವುದೇ ಎಲ್ಲರ ಆದ್ಯತೆಯಾಗಲಿ. ನಿಮ್ಮೆಲ್ಲರ ಆತ್ಮಸಾಕ್ಷಿ ನಿಮಗೆ ದಾರಿ ದೀಪವಾಗಲಿ” ಎಂದು ಆಶಿಸಿದರು. ಇಂದಿನ ದಿನಗಳಲ್ಲಿ ವ್ಯವಸ್ಥೆ ಸರಿಯಿಲ್ಲ ಎಂಬುದು ಎಲ್ಲರ ಬಾಯಿಂದಲೂ ಕೇಳಿಬರುವ ಸಾಮಾನ್ಯ ಉವಾಚವಾಗಿದೆ. ಕೆಲವು ಪ್ರಾಮಾಣಿಕ ಅಧಿಕಾರಿಗಳೂ ಹೀಗೆ ಅಸಮಾಧಾನ ಹೊರಹಾಕಿದ್ದನ್ನು ನಾನು ನೋಡಿದ್ದೇನೆ. ವ್ಯವಸ್ಥೆ ಸರಿಯಿಲ್ಲ ಎಂಬುದು ಭಾಗಶಃ ಸತ್ಯವೇ ಆದರೂ, ಈ ವ್ಯವಸ್ಥೆಯನ್ನು ಬದಲಿಸುವವರು ಯಾರು, ಹೇಗೆ? ಎಂಬ ದೊಡ್ಡ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ ಅವರ ಗಮನಕ್ಕೆ ಬಾರದೆ ಹಣವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ದಿನ ಸಮೀಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಿಎಂ ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ. ಸಿಎಂ ಈ ಹಗರಣದಿಂದ ತಪ್ಪಿಸಿ ಕೊಂಡು ಹೋಗಲು ಸಾಧ್ಯವಿಲ್ಲ ಎಂಬುದು ಸತ್ಯ ಎಂದು ವಿಜಯೇಂದ್ರ ಎಚ್ಚರಿಸಿದರು. ಕೇವಲ ಮಾಜಿ ಸಚಿವ ನಾಗೇಂದ್ರ, ನಿಗಮದ ಅಧ್ಯಕ್ಷ ದದ್ದಲ್ ಅವರಷ್ಟೇ ಅಲ್ಲದೆ ಇನ್ನೂ…
ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಎನ್ ಆರ್ ರಮೇಶ್ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಭೂ ಹಗರಣ ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದು, ದಾಖಲೆಗಳ ಸಮೇತ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಮೇಶ್ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಸುವ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸುಮಾರು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಇದೆ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರನ್ನು ತನಿಖೆ ಮಾಡಿ ಎಂದು ಅವರ ವಿರುದ್ಧ ಕೂಡ ಲೋಕಾಯುಕ್ತ ತನಿಖೆಗೆ ಅವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ : ಶ್ರೀ ರಾಮ ಸೇನೆಯ ಪ್ರಮುಖ ಮುಖಂಡರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಬ್ಲಾಕ್ ಮಾಡಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ. ಕಮಿಷನರ್ ಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಲವ್ ಜಿಹಾದ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಹೆಲ್ಪ್ ಲೈನ್, ತ್ರಿಶೂಲ್ ದೀಕ್ಷೆ ಮಾಡಿದ್ದಕ್ಕೆ ರಾಜ್ಯಾದ್ಯಂತ ಪ್ರಚಾರ ಸಿಕ್ತು. ಇದರಿಂದ ಒಂದು ಸಮುದಾಯದವರು ಕೆರಳಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬ್ಲಾಕ್ ಮಾಡಿಸಿದ್ದಾರೆ ಎಂಬ ಸುದ್ದಿ ಇದೆ ಎಂದರು. ಕಳೆದ 15 ದಿನಗಳಿಂದ ನನ್ನ ಸೇರಿ ಶ್ರೀರಾಮ್ ಸೇನೆಯ 20ಕ್ಕೂ ಹೆಚ್ಚು ಪ್ರಮುಖರ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಖಾತೆಗಳನ್ನು ಬ್ಲಾಕ್ ಮಾಡಿದ್ದಾರೆ. ವಿಶೇಷವಾಗಿ ಭಟ್ಕಳ, ಮಂಗಳೂರು ಮತ್ತು ವಿದೇಶದಲ್ಲಿರುವ ಕೆಲವ ಪಾತ್ರ ಇದೆ ಎಂಬ ಅಂಶ ನಮ್ಮ ಗಮನಕ್ಕೆ ಬಂದಿದೆ. ಈ ಸಂಬಂಧ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ಗೆ ದೂರು ಕೊಟ್ಟಿದ್ದೇವೆ. ಕೊಡಲೇ ತನಿಖೆ ನಡೆಸಿ ಸಮಸ್ಯೆ…
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ ಮಾಡುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಳಿ ಇಂದು ನಡೆದಿದೆ. ನಿಪ್ಪಾಣಿ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಶಿವಪ್ಪ ಢವಳೇಶ್ವರ ಎಂಬುವವರ ಕಾರಲ್ಲಿ ಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಅಕ್ರಮವಾಗಿ ಬೆಳಗಾವಿಯಿಂದ ಬಾಗಲಕೋಟೆಗೆ ಸಾಗಿಸುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ದಾಖಲೆ ರಹಿತವಾಗಿ 1 ಕೋಟಿ 10 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ1 ಕೋಟಿ 10 ಲಕ್ಷ ಹಣವನ್ನ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಪೊಲೀಸರು ದಾಳಿ ನಡೆಸಿ ನಗದು ವಶಕ್ಕೆ ಪಡೆದಿದ್ದಾರೆ. ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ. ರಾಮದುರ್ಗ ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ…
ಯಾದಗಿರಿ : ಯಾದಗಿರಿಯಲ್ಲಿ ಘೋರ ದುರಂತವೊಂದು ನಡೆದಿದ್ದು. ಕಲುಷಿತ ನೀರು ಸೇವಿಸಿ ಸುಮಾರು 14 ಜನರು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮೂದನೂರು ಗ್ರಾಮದಲ್ಲಿ ನಡೆದಿದೆ. ವಾಂತಿ, ಭೇದಿಯಿಂದ ಜನರು ಅಸ್ವಸ್ಥಗೊಂಡಿದ್ದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿದ ಪರಿಣಾಮ 14 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಸ್ಪತ್ರೆಗೆ ಟಿಎಚ್ಓ ಡಾ.ಆರ್.ವಿ.ನಾಯಕ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ : ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ಹಾಸನದಲ್ಲೂ ಕೂಡ ಸಾವಿನ ಸಂಖ್ಯೆ ಏರಿಕೆ ಕಂಡಿದ್ದು, ಇದೀಗ ಡೆಂಗ್ಯೂ ಜ್ವರದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಗೋಹಳ್ಳಿ ಗ್ರಾಮದ ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ.ವಿಪರ‍್ಯಾಸವೆಂರೇ ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಸಹ ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.