Author: kannadanewsnow05

ಮೈಸೂರು : ಮುಡಾದಲ್ಲಿ ಅಕ್ರಮವಾಗಿ ಸೈಟ್ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅದೇ ಆರ್ ಟಿ ಐ ಕಾರ್ಯಕರ್ತರ ವಿರುದ್ಧ ಮೈಸೂರಿನ ಕಮಿಷನರ್ ಗೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಹೌದು ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದಿಂದ ಇದೀಗ ಕಮಿಷನರ್ ಗೆ ದೂರು ಸಲ್ಲಿಸಲಾಗಿದೆ. ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟಕರ್ ಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಮತ್ತು ಮೈಸೂರು ನಗರ ಅಧ್ಯಕ್ಷ ಆರ್ ಮೂರ್ತಿ ಹಾಗೂ ಗ್ರಾಮಾಂತರ ಅಧ್ಯಕ್ಷ ಡಾ ಬಿ.ಜೆ ವಿಜಯ್ ಕುಮಾರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಟಿಐ ಕಾರ್ಯಕರ್ತರಾದ ಗಂಗರಾಜು ಹಾಗೂ ಸ್ನೇಹಮಯಿಕೃಷ್ಣ ವಿರುದ್ಧ ದೂರು ಸಲ್ಲಿಸಿದ್ದಾರೆ. ಆರ್ಟಿಐ ಕಾರ್ಯಕರ್ತರು ವಿರುದ್ಧ ಕೆಸ್ ದಾಖಲಿಸಿ ಬಂಧಿಸುವಂತೆ ಕೂಡ ಇದೆ ವೇಳೆ ಮನವಿ ಮಾಡಿದ್ದಾರೆ. ಮೈಸೂರು…

Read More

ಬೆಂಗಳೂರು : ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದ್ದು, ಮಲೆನಾಡು ಕರಾವಳಿ ಭಾಗದ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಫೀಲ್ಡಿಗೆ ಇಳಿದು ಕೆಲಸ ಮಾಡಬೇಕು. ಸರ್ಕಾರ ನಮ್ಮ ಪರವಾಗಿದೆ ಎಂದು ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿ ತಾಕೀತು ಮಾಡಿದರು. ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರವಾಹ ಪೀಡಿತ ಜಿಲ್ಲೆಗಳಾದ ಉತ್ತರ ಕನ್ನಡ, ಕೊಡಗು, ಮಂಗಳೂರು, ಉಡುಪಿ, ಚಿಕ್ಕಮಗಳೂರು ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾಂ ಹಾಗೂ ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಸಿಇಓ ಗಳು ಹಾಗೂ ನೀರಾವರಿ, ಇಂಧನ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಅಲ್ಲದೆ, ಪ್ರವಾಹಕ್ಕೆ ಸಂಬಂಧಿಸಿದ ಪರಿಹಾರ ಕೆಲಸಗಳಿಗೆ ಸಮಯದ ಗಡುವು ನಿಗದಿಪಡಿಸಿದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನುನೀಡಿದ ಅವರು, “ ಈ…

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಈಗಾಗಲೇ ಡೆಂಗ್ಯೂ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೆ ಇದೀಗ ಡೆಂಘಿ ಜ್ವರಕ್ಕೆ ಚಿಕಿತ್ಸೆ ಲಭ್ಯವಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಉಚಿತ ಸಹಾಯವಾಣಿ ಆರಂಭಿಸಲಾಗಿದೆ. ಹೌದು ಈ ವರ್ಷ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗುತ್ತಿದ್ದು, ಎಲ್ಲೆಡೆ ನೀರು ನಿಂತುಕೊಂಡು ಅಪಾಯಕಾರಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರದ ಪ್ರಕರಣಗಳು 11 ಸಾವಿರಕ್ಕಿಂತ ಹೆಚ್ಚಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಹಾಗಾಗಿ ಆರೋಗ್ಯ ಇಲಾಖೆಯು ಡೆಂಗ್ಯೂ ಚಿಕಿತ್ಸೆಗೆ ಇದೀಗ ಉಚಿತವಾಗಿ ಸಹಾಯವಾಣಿ ಆರಂಭಿಸಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಯನ್ನು ಎದುರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಳೆಗೇರಿ ಪ್ರದೇಶಗಳು ಸೇರಿದಂತೆ ಕೆಲವೆಡೆ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ಆದರೆ, ಇನ್ನೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆ, ಜಯನಗರ ಆಸ್ಪತ್ರೆ,ಕೆಆರ್ ಪುರಂ ಜನರಲ್ ಆಸ್ಪತ್ರೆ ಹಾಗೂ ವಾಣಿವಿಲಾಸ…

Read More

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಾತನಾಡಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿರುವುದು ನಿಜ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಸಚಿವನಾಗಿದ್ದೇನೆ. ನಾಗೇಂದ್ರ ರಾಜೀನಾಮೆ ಕೊಟ್ಟ ಬಳಿಕ ನಾನೇ ಇಟ್ಟುಕೊಂಡಿದ್ದೇನೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು.ಆದ್ರೆ, ಇದು ಸರ್ಕಾರಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಬಸನಗೌಡ ದದ್ದಲ್ ನ ವಾಲ್ಮೀಕಿ ನಿಗಮದ ಅಧ್ಯಕ್ಷನಾಗಿ ಮಾಡಿದ್ದೇವೆ. ನಾಗೇಂದ್ರ ಇಲಾಖೆ ಮಂತ್ರಿಯಾಗಿದ್ದರು. ಯೂನಿಯನ್ ಬ್ಯಾಂಕ್ ನಲ್ಲಿ ಶೋಭನಾ ಎನ್ನುವರು ಎಂಡಿ ಇದ್ದಾರೆ. ಅದೇ ಬ್ಯಾಂಕ್ ಎಂಜಿ ರಸ್ತೆಯಲ್ಲಿದೆ.…

Read More

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವೈ. ಭರತ್ ಶೆಟ್ಟಿ ಅವರ ವಿರುದ್ದದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಶಾಸಕ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣದ ವಿಚಾರಣೆ ತಡೆ ನೀಡಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆ ಜುಲೈ 8ರ ಬೆಳಗ್ಗೆ ಕಾವೂರು ಜಂಕ್ಷನ್‌ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಬೇಕು, ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ. ಆಗ ಮಾತ್ರ ಆತನಿಗೆ ಬುದ್ದಿ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ನಟ ದರ್ಶನ್ ಅವರು ಜೈಲಿನಲ್ಲಿ ನನಗೆ ಊಟ ಸರಿಹೊಂದುತ್ತಿಲ್ಲ. ಹಾಗಾಗಿ ಮನೆಯಿಂದ ಊಟ, ಬಟ್ಟೆ ಪುಸ್ತಕ ಸೇರಿದಂತೆ ಇತರೆ ವಸ್ತುಗಳು ಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠವು ಜುಲೈ 29ಕ್ಕೆ ವಿಚಾರಣೆ ಮುಂದೂಡಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಮೂರ್ತಿಯವರು ಈ ಕೇಸಿನಲ್ಲಿ ನಾನು ಮಧ್ಯಂತರ ಆದೇಶ ನೀಡಲು ಬಯಸುವುದಿಲ್ಲ. ವಾದಮಂಡನೆ ಆಲಿಸಿದ ನಂತರವೇ ತೀರ್ಮಾನಿಸಬೇಕಾಗುತ್ತದೆ. ನೀವು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುವುದು ಸೂಕ್ತ. ಸರ್ಕಾರ ಎಸ್ಪಿಪಿ ಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿತು. ಮ್ಯಾರೇಜ್ ಸ್ಟ್ರೈಟ್ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೈದಿಗಳಿರುವ ಎಲ್ಲಾ ಮೂಲಭೂತ ಹಕ್ಕುಗಳು ದರ್ಶನಗೆ ಇದೆ ಸೇ. 30 ರಲ್ಲಿ ಮನೆ ಊಟ ಪಡೆಯಲು…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲಿನಲ್ಲಿ ನನಗೆ ಊಟ ಸರಿಹೊಂದುತ್ತಿಲ್ಲ. ಹಾಗಾಗಿ ಮನೆಯಿಂದ ಊಟ, ಬಟ್ಟೆ ಪುಸ್ತಕ ಸೇರಿದಂತೆ ಇತರೆ ವಸ್ತುಗಳು ಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠವು ಜುಲೈ 29ಕ್ಕೆ ವಿಚಾರಣೆ ಮುಂದೂಡಿತು. ದರ್ಶನ್ ಸಲ್ಲಿಸಿರುವ ರಿಟ್ ಅರ್ಜಿಯ ಕುರಿತು ಇಂದು ಹೈಕೋರ್ಟ್ ನಲ್ಲಿ ಎಸ್ ಆರ್ ಕೃಷ್ಣಕುಮಾರ್ ಅವರಿಂದ ವಿಚಾರಣೆ ನಡೆಯಿತು. ಜೈಲಿನಲ್ಲಿ 5 ಸಾವಿರ ಖೈದಿಗಳು ದಿನವೂ ಅಲ್ಲಿ ಊಟ ಮಾಡುತ್ತಿದ್ದಾರೆ.ಯಾರಿಗೂ ಫುಡ್ ಪಾಯಿಸನ್ ಆಗಿಲ್ಲ. ದರ್ಶನ್ ಕೂಡ ಫುಡ್ ಪಾಯಿಸನ್ ಬಗ್ಗೆ ವೈದ್ಯರಿಗೆ ಹೇಳಿಲ್ಲ ಎಂದು ಸರ್ಕಾರದ ಪರ ಎಎಪಿ ಭಾನುಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದರು. ವಿಚಾರಣೆಯ ಬಳಿಕ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯ ಪೀಠವು ದರ್ಶನ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಕುರಿತಂತೆ 29ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಜೈಲಿನ ಊಟದಿಂದ ದರ್ಶನವರು ದಿನದಿಂದ ದಿನಕ್ಕೆ ತೂಕ…

Read More

ಬಾಗಲಕೋಟೆ : ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐಡಿಬಿಐ ಬ್ಯಾಂಕ್‌ ಉದ್ಯೋಗಿಯನ್ನ ಪೊಲೀಸರು ಬಂಧಿಸಿದ್ದಾರೆ. ಹೌದು ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲ ಬೇಟೆಯಾಡಿದ್ದು ಐಡಿಬಿಐ ಬ್ಯಾಂಕ್‌ ಉದ್ಯೋಗಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬಂಧಿತನನ್ನು ಬ್ಯಾಂಕ್‌ನ ಸೇಲ್ಸ್ ಎಕ್ಸಿಕ್ಯೂಟಿವ್ ಸೂರಜ್ ಸಾಗರ್ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಅವರು ಮಾಹಿತಿ ನೀಡಿ ದೂರು ಆಧರಿಸಿ ಪೊಲೀಸ್ರು ತನಿಖೆ ಆರಂಭಿಸಿ, ಬ್ಯಾಂಕ್ ಸಿಬ್ಬಂದಿಯನ್ನ ವಿಚಾರಣೆ ನಡೆಸಿದ್ದರು. ಇವತ್ತು ಐಡಿಬಿಐ ಬ್ಯಾಂಕ್‌ನ ಸೇಲ್ಸ್ ಎಕ್ಸಕ್ಯೂಟಿವ್ ಸೂರಜ್ ಸಾಗರ್‌ನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಐಡಿಬಿಐ ಬ್ಯಾಂಕ್‌ನಲ್ಲಿನ 3 ಖಾತೆಗಳಿಂದ 2 ಕೋಟಿ 43 ಲಕ್ಷ ಹಣವನ್ನ ಇಲಾಖೆಯ ಡಿಡಿ, ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷರಿಗೆ ಗೊತ್ತಿಲ್ಲದಂತೆ ಬ್ಯಾಂಕ್ ಸಿಬ್ಬಂದಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದರು.…

Read More

ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳನ್ನು ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸದೆ ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಇಂದು ಗುಡುಗಿದರು. ವಿಧಾನಮಂಡಲ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ನಡುವೆ ತೀವ್ರ ಜಟಾಪಟಿ ನಡೆಯಿತು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿನ 21 ಹಗರಣಗಳನ್ನು ಪ್ರಸ್ತಾಪಿಸಿದರು. ವಿಧಾನಸಭೆಯಲ್ಲಿ ಬಿಜೆಪಿ ಅವಧಿಯ ಹಾರಣಗಳನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಎಪಿಎಂಸಿ ಹಗರಣ, ದೇವರಾಜು ಅರಸು ಟ್ರಕ್ ಟರ್ಮಿನಲ್ ಹಗರಣ, ಪ್ರವಾಸೋದ್ಯಮ ಇಲಾಖೆಯಲ್ಲಿ ಹಗರಣ, ಕೋವಿಡ್ ಸಂದರ್ಭದಲ್ಲಿ ಹಗರಣ, ಪಿಎಸ್ಐ ನೇಮಕಾತಿ ಹಗರಣ ಸೇರಿ ಒಟ್ಟು 21 ಹಗರಣಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ವಾಲ್ಮೀಕಿ ನಿಗಮದ ಹಗರಣ ಕುರಿತ ಚರ್ಚೆಗೆ 12 ಪುಟಗಳ ಉತ್ತರ ನೀಡಿದು, ವಿಧಾನಸಭೆಯಲ್ಲಿ 12 ಪುಟಗಳ ಲಿಖಿತ ಉತ್ತರ ನೀಡಿದರು. ನನ್ನ ಹೆಸರು ಹೇಳದಿದ್ದರೆ ಬಿಜೆಪಿಯವರಿಗೆ ತಿಂದಿದ್ದು ಜೀರ್ಣ ಆಗಲ್ಲ ಎಂದು ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಸಿಎಂ…

Read More

ಮೈಸೂರು : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಪಶ್ಚಿಮ ಘಟ್ಟಗಳಲ್ಲಿ ಗುಡ್ಡಕುಸಿದು ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮಳೆಗೆ ಮನೆಗೋಡೆ ಬಾಣಂತಿ ಸಾವನ್ನಪ್ಪಿದ್ದಾಳೆ. ಘಟನೆಯು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್​ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More